Homeರಾಷ್ಟ್ರೀಯಪಿಎಫ್‌ಐ ರ‍್ಯಾಲಿಯಲ್ಲಿ ‘ದ್ವೇಷ ಘೋಷಣೆ’ ಕೂಗಿದ ಅಪ್ರಾಪ್ತ ಬಾಲಕನ ತಂದೆ ವಶಕ್ಕೆ

ಪಿಎಫ್‌ಐ ರ‍್ಯಾಲಿಯಲ್ಲಿ ‘ದ್ವೇಷ ಘೋಷಣೆ’ ಕೂಗಿದ ಅಪ್ರಾಪ್ತ ಬಾಲಕನ ತಂದೆ ವಶಕ್ಕೆ

ಅಕ್ಕಿ ಮತ್ತು ಕರ್ಪೂರಗಳನ್ನು ಮನೆಯಲ್ಲಿ ತಯಾರಾಗಿಟ್ಟುಕೊಳ್ಳಿ, ನಿಮ್ಮ ‘ಯಮದೂತ’ರು ಬರುತ್ತಿದ್ದು, ನಮ್ಮ ನಾಡಿನಲ್ಲಿ ಮರ್ಯಾದೆಯಿಂದ ಇದ್ದರೆ ಜೀವಿಸಬಹುದು ಎಂದು ಬಾಲಕ ರ್‍ಯಾಲಿಯಲ್ಲಿ ಕೂಗಿದ್ದರು

- Advertisement -
- Advertisement -

ಕೇರಳದ ಆಲಫುಝದಲ್ಲಿ ಬಲಪಂಥೀಯ ಸಂಘಟನೆಯಾದ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ(ಪಿಎಫ್‌ಐ)ದ ರ್‍ಯಾಲಿಯಲ್ಲಿ, ‘ಸಂಘ ಪರಿವಾರದವರನ್ನು ಕೊಲೆ ಮಾಡುತ್ತೇವೆ’ ಎಂದು ‘ದ್ವೇಷ’ ಘೋಷಣೆಗಳನ್ನು ಕೂಗಿದ ‘ಅಪ್ರಾಪ್ತ ಬಾಲಕ’ನ ತಂದೆಯನ್ನು ಶನಿವಾರ ಬಂಧಿಸಲಾಗಿದೆ. ಪ್ರಕರಣದಲ್ಲಿ ಇದುವರೆಗೆ 20 ಮಂದಿಯನ್ನು ಬಂಧಿಸಲಾಗಿದೆ.

ಮೇ 21 ರಂದು ಬಲಪಂಥೀಯ ಸಂಘಟನೆ ಪಿಎಫ್‌ಐ ಸಂಘಟಿಸಿದ್ದ ರ್‍ಯಾಲಿಯಲ್ಲಿ 11 ವರ್ಷದ ಬಾಲಕ ವ್ಯಕ್ತಿಯೊಬ್ಬನ ಭುಜದ ಮೇಲೆ ಕುಳಿತು, “ಅಕ್ಕಿ, ಹೂವು ಮತ್ತು ಕರ್ಪೂರಗಳನ್ನು ಮನೆಯಲ್ಲಿ ತಯಾರಾಗಿಟ್ಟುಕೊಳ್ಳಿ. ನಿಮ್ಮ ‘ಯಮದೂತ’ರು ಬರುತ್ತಿದ್ದೇವೆ. ನಮ್ಮ ನಾಡಿನಲ್ಲಿ ಮರ್ಯಾದೆಯಿಂದ ಇದ್ದರೆ ಜೀವಿಸಬಹುದು” ಎಂದು ಸಂಘಪರಿವಾರದ ವಿರುದ್ಧ ಘೋಷಣೆ ಕೂಗಿದ್ದರು. ಈ ವೀಡಿಯೊವನ್ನು ಸಾಮಾಜಿಕ ಮಾಧ್ಯಮದಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ವಿವಾದದ ಹಿನ್ನೆಲೆಯಲ್ಲಿ ಬಾಲಕನ ಕುಟುಂಬ ಕೇರಳದ ಕೊಚ್ಚಿಯಲ್ಲಿ ತಲೆಮರೆಸಿಕೊಂಡಿದೆ ಎಂದು ಪೊಲೀಸರು ತಿಳಿಸಿದ್ದಾರೆ. ರ್‍ಯಾಲಿ ನಡೆದ ಎರಡು ದಿನಗಳ ನಂತರ ಪೊಲೀಸರು ಬಾಲಕನನ್ನು ಪತ್ತೆ ಹಚ್ಚಿದ್ದು, ಆತನ ತಂದೆ ಇಂದು ಅಲಪ್ಪುಝಕ್ಕೆ ಮನೆಗೆ ಮರಳುತ್ತಿದ್ದಾಗ ಬಂಧಿಸಲಾಗಿದೆ.

ಇದನ್ನೂ ಓದಿ: ಉಪ್ಪಿನಂಗಡಿ ಅಶಾಂತಿ ಪ್ರಕರಣಕ್ಕೆ ಪಿಎಫ್‌ಐ, ಸಂಘ ಪರಿವಾರ, ಪೊಲೀಸರು ಸಮಾನ ಹೊಣೆಗಾರರು- ಸಿಪಿಐ(ಎಂ)

ಬಾಲಕನನ್ನು ಒಳಗೊಂಡ ವರದಿಯನ್ನು ಕೇರಳ ಸರ್ಕಾರ ಮಕ್ಕಳ ಕಲ್ಯಾಣ ಸಮಿತಿಗೆ ಸಲ್ಲಿಸುವ ಸಾಧ್ಯತೆ ಇದೆ.

ಈ ಮಧ್ಯೆ ಬಾಲಕನ ತಂದೆ ತನ್ನ ಮಗನ ಘೋಷಣೆಯನ್ನು ಸಮರ್ಥಿಸಿಕೊಂಡಿದ್ದಾರೆ. ಎನ್‌ಆರ್‌ಸಿ, ಸಿಎಎ ವಿರುದ್ಧದ ಪ್ರತಿಭಟನೆಗಳಲ್ಲಿ ಕೂಡಾ ಅವರು ಈ ಹಿಂದೆ ಅದೇ ಘೋಷಣೆಗಳನ್ನು ಕೂಗಿದ್ದರು ಎಂದು ಬಾಲಕನ ತಂದೆ ಹೇಳಿದ್ದಾರೆ.

“ನಾವು ಈ ಹಿಂದೆಯೂ ಇದೇ ಘೋಷಣೆಗಳನ್ನು ಕೂಗಿದ್ದೇವೆ. ನಾವು ಯಾವುದೇ ಧರ್ಮವನ್ನು ಗುರಿಯಾಗಿಸುವ ಉದ್ದೇಶವನ್ನು ಹೊಂದಿಲ್ಲ. ಇದು ನಮ್ಮ ಪಕ್ಷದ ಚಟುವಟಿಕೆಯ ಭಾಗವಾಗಿದೆ” ಎಂದು ಬಾಲಕನ ತಂದೆ ಹೇಳಿದ್ದಾಗಿ ಎನ್‌ಡಿಟಿವಿ ವರದಿ ಮಾಡಿದೆ.

ಇದನ್ನೂ ಓದಿ: ಮುಸ್ಲಿಮರ ಹತ್ಯಾಕಾಂಡ ಪ್ರಚೋದನೆ: ಫೆಡರಲ್ ಬ್ಯಾಂಕ್ ಅಧಿಕಾರಿ ವಿರುದ್ಧ FIR

ಈ ಘೋಷವಾಕ್ಯವನ್ನು ನಿಮಗೆ ಯಾರು ಹೇಳಿಕೊಟ್ಟರು ಎಂದು ಪತ್ರಕರ್ತರು ಬಾಲಕನ್ನು ಪ್ರಶ್ನಿಸಿದಾ, “ನಾನು ಎನ್‌ಆರ್‌ಸಿ ಕಾರ್ಯಕ್ರಮಕ್ಕೆ ಹೋದಾಗ ಇದೇ ಘೋಷಣೆಯನ್ನು ಹೇಳಿದ್ದೆ. ಅದನ್ನೆ ಮತ್ತೆ ಇಲ್ಲಿ ಹೇಳಿದ್ದೇನೆ. ಅದನ್ನು ನಾನಾಗೆ ಕಲಿತಿದ್ದೇನೆ” ಎಂದು ಹೇಳಿದ್ದಾರೆ.

ಬಾಲಕನ ತಂದೆ ಬಲಪಂಥೀಯ ಸಂಘಟನೆಯಾದ ಪಿಎಫ್‌ಐ ಸದಸ್ಯ ಎಂದು ಎನ್‌ಡಿಟಿವಿ ಉಲ್ಲೇಖಿಸಿದೆ. “ಘೋಷವಾಕ್ಯವು ಸಂಘ ಪರಿವಾರದ ವಿರುದ್ಧ ಮಾತ್ರವೇ ಹೊರತು ಹಿಂದೂ ಅಥವಾ ಕ್ರಿಶ್ಚಿಯನ್ನರ ವಿರುದ್ಧ ಅಲ್ಲ. ಎನ್‌ಆರ್‌ಸಿ ಮತ್ತು ಸಿಎಎ ಪ್ರತಿಭಟನೆಯ ಸಂದರ್ಭದಲ್ಲೂ ಈ ಘೋಷಣೆಯನ್ನು ಕೂಗಲಾಯಿತು” ಎಂದು ಹೇಳಿದ್ದಾರೆ.

ದ್ವೇಷ ಘೋಷಣೆಗಳನ್ನು ಕೂಗಿದ ಮಗುವಿಗೆ ಸಮಾಲೋಚನೆ ನೀಡುವಂತೆ ಮಕ್ಕಳ ಕಲ್ಯಾಣ ಅಧಿಕಾರಿಗಳಿಗೆ ತಿಳಿಸಲಾಗಿದೆ ಎಂದು ಮಟ್ಟಂಚೇರಿ ಸಹಾಯಕ ಪೊಲೀಸ್ ಕಮಿಷನರ್ ವಿಜಿ ರವೀಂದ್ರನಾಥ್ ಹೇಳಿದ್ದಾರೆ.

ಇದನ್ನೂ ಓದಿ: ಹಿಂದುತ್ವ ಮತ್ತು ಕಾರ್ಪೋರೇಟ್‌ ಮೈತ್ರಿಯಿಂದಾಗಿ ದೇಶದಲ್ಲಿ ನಿರುದ್ಯೋಗ, ಹಸಿವು, ಬಡತನ ಹೆಚ್ಚುತ್ತಿದೆ: ಸಿಪಿಐ(ಎಂ) ಪಾಲಿಟ್‌‌ಬ್ಯೂರೊ ಸದಸ್ಯ ಪ್ರಕಾಶ್‌ ಕಾರಟ್‌‌

ಮೇ 21 ರಂದು ಪಿಎಫ್‌ಐ ರ್‍ಯಾಲಿಗೆ ಗಂಟೆಗಳ ಮೊದಲು, ಬಿಜೆಪಿ ಬೆಂಬಲಿತ ಬಲಪಂಥೀಯ ಸಂಘಟನೆಯಾದ ಬಜರಂಗದಳ ಕಾರ್ಯಕರ್ತರು ಅಲಪ್ಪುಝದಲ್ಲಿ ‘ಶೌರ್ಯ ರ್‍ಯಾಲಿ’ ನಡೆಸಿದ್ದರು. “ದೇಶವನ್ನು ದೇಶ ವಿರೋಧಿಗಳು ಮತ್ತು ಕೋಮುವಾದಿಗಳಿಗೆ ಒಪ್ಪಿಸಲು ಸಾಧ್ಯವಿಲ್ಲ” ಎಂಬ ಘೋಷಣೆಗಳನ್ನು ಕೂಗಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಕಮ್ಯುನಿಸ್ಟ್ ರು ಸಾಕಿ ಸಲುಹಿದ ಕೂಸುಗಳು ಈಗ ಅಕ್ಕಿ ,ಕರ್ಪೂರ ರೆಡಿ ಇಟ್ಕೊಳ್ಳಿ ಅನ್ನುವ ಮಟ್ಟಕ್ಕೆ ಹೆಳೆ ಮಕ್ಕಳನ್ನು ತರಬೇತಿ ಮಾಡಿದೆ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...