Homeಕರ್ನಾಟಕರಾಮಕೃಷ್ಣ ಹೆಗಡೆ ಜೊತೆಗಿನ ಸಂಬಂಧ ಕುರಿತ ಮಾತಿಗೆ ಕತ್ತರಿ: ಕನ್ನಡ & ಸಂಸ್ಕೃತಿ ಇಲಾಖೆ ನಡೆಗೆ...

ರಾಮಕೃಷ್ಣ ಹೆಗಡೆ ಜೊತೆಗಿನ ಸಂಬಂಧ ಕುರಿತ ಮಾತಿಗೆ ಕತ್ತರಿ: ಕನ್ನಡ & ಸಂಸ್ಕೃತಿ ಇಲಾಖೆ ನಡೆಗೆ ಪ್ರತಿಭಾ ಬೇಸರ

- Advertisement -
- Advertisement -

ಕನ್ನಡ ಸಂಸ್ಕೃತಿ ಇಲಾಖೆಯು ಇತ್ತೀಚೆಗೆ ನಡೆಸಿದ ಸಂವಾದ ಸರಣಿಯಲ್ಲಿ ಮಾತನಾಡಿದ್ದ ಖ್ಯಾತ ಶಾಸ್ತ್ರೀಯ ನೃತ್ಯಗಾರ್ತಿ ಪ್ರತಿಭಾ ಪ್ರಹ್ಲಾದ್ ಅವರ ಕೆಲವು ಮಾತುಗಳಿಗೆ ಕತ್ತರಿ ಪ್ರಯೋಗ ಮಾಡಿ, ಬಳಿಕ ಇಲಾಖೆಯು ಯೂಟ್ಯೂಬ್‌ನಲ್ಲಿ ವಿಡಿಯೊ ಅಪ್‌ಲೋಡ್ ಮಾಡಿದ್ದು, ಪ್ರತಿಭಾ ಅವರು ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಮಾಜಿ ಮುಖ್ಯಮಂತ್ರಿ ರಾಮಕೃಷ್ಣ ಹೆಗಡೆ ಅವರೊಂದಿಗಿನ ಸಂಬಂಧ ಮತ್ತು ಒಂಟಿ ತಾಯಿಯಾಗಿ ತಾವು ಕಂಡ ಅನುಭವಗಳನ್ನು ಅವರು ಹಂಚಿಕೊಂಡಿದ್ದನ್ನು ತೆಗೆದು ಹಾಕಲಾಗಿದೆ. ಎಡಿಟ್ ಮಾಡಿದ ವಿಡಿಯೊ ಪ್ರತಿಯನ್ನೇ ಪ್ರತಿಭಾ ಅವರಿಗೂ ನೀಡಲಾಗಿದೆ ಎಂದು ವರದಿಯಾಗಿದೆ.

“ಸರ್ಕಾರ ಬಯಸಿದರೆ ನಾನು ಮಾತನಾಡಿರುವುದನ್ನು ಸೆನ್ಸಾರ್ ಮಾಡಲಿ, ಆದರೆ ಮುಖ್ಯ ಅತಿಥಿಯಾಗಿ ಭಾಗವಹಿಸಿ ನನ್ನ ಭಾಷಣದ ಸಂಪೂರ್ಣ ಧ್ವನಿಮುದ್ರಣ ಪಡೆಯಲು ನಾನು ಅರ್ಹಳಾಗಿದ್ದೇನೆ” ಎಂದಿದ್ದಾರೆ.

ಕನ್ನಡ ಸಂಸ್ಕೃತಿ ಇಲಾಖೆಯು ಆಯೋಜಿಸುತ್ತಿರುವ ‘ಮನೆಯಂಗಳದಲ್ಲಿ ಮಾತುಕಥೆ’ ಎಂಬ ಸಂವಾದ ಸರಣಿಯಲ್ಲಿ ಪ್ರತಿಭಾ ಅವರು ಇತ್ತೀಚೆಗೆ ಮಾತನಾಡಿದ್ದರು. ಈ ಸರಣಿಯಲ್ಲಿ ಸಾಧಕ ಕನ್ನಡಿಗರ ಜೀವನ ಕಥೆಗಳನ್ನು ದಾಖಲಿಸಲಾಗುತ್ತಿದೆ. ಪದ್ಮಶ್ರೀ ಪುರಸ್ಕೃತೆ ಪ್ರತಿಭಾ ಅವರನ್ನು ಮೇ 21ರಂದು ಹಿರಿಯ ಪತ್ರಕರ್ತ ರಾಮಕೃಷ್ಣ ಉಪಾಧ್ಯ ಅವರು ಸಂದರ್ಶಿಸಿ ಕಾರ್ಯಕ್ರಮ ನಡೆಸಿಕೊಟ್ಟಿದ್ದರು. ಪ್ರತಿಭಾ ಅವರು ತಮ್ಮ ನೃತ್ಯ ಬದುಕು, ಕಲಾ ನಿರ್ವಹಣೆ, ಮಾಜಿ ಮುಖ್ಯಮಂತ್ರಿ ರಾಮಕೃಷ್ಣ ಹೆಗಡೆ ಅವರೊಂದಿಗಿನ ಸಂಬಂಧ ಮತ್ತು ಅವಳಿ ಮಕ್ಕಳಿಗೆ ಒಂಟಿ ತಾಯಿಯಾಗಿ ಇರಲು ನಿರ್ಧರಿಸಿದ್ದು ಸೇರಿದಂತೆ ಹಲವಾರು ಸಂಗತಿಗಳನ್ನು ಹಂಚಿಕೊಂಡಿದ್ದರು.

“ವೈಯಕ್ತಿಕವಾಗಿ, ಮಕ್ಕಳನ್ನು ಹೊಂದಲು ಮದುವೆಯ ಅವಶ್ಯಕತೆಯಿದೆ ಎಂದು ನಾನು ನಂಬುವುದಿಲ್ಲ. ಕುಟುಂಬದ ಹೊರತಾಗಿ ಸಂತೋಷ ಮತ್ತು ದುಃಖಗಳನ್ನು ಹಂಚಿಕೊಳ್ಳಲು ಸಂಗಾತಿಯೂ ಮುಖ್ಯ…. ಆದರೆ, ಇದನ್ನು ಲೆಕ್ಕಿಸದೆ, ಸಮಾಜವು ಪ್ರಗತಿ ಹೊಂದಬೇಕು. ವಿವಿಧ ಮಾದರಿಗಳ ಬಗ್ಗೆ ಯೋಚಿಸಬೇಕು. ಅಂತಹ ಒಂದು ಮಾದರಿಯಲ್ಲಿ ನನ್ನ ಅವಳಿ ಮಕ್ಕಳು ಬೆಳೆದರು. ನಾನು ಒಂಟಿ ತಾಯಿಯಾಗಲು ನಿರ್ಧರಿಸಿದೆ. ಅದಕ್ಕಾಗಿ ನಾನು ಎಂದಿಗೂ ವಿಷಾದಿಸಲಿಲ್ಲ” ಎಂದು ಪ್ರತಿಭಾ ಹೇಳಿರುವುದಾಗಿ ಡೆಕ್ಕನ್‌ ಹೆರಾಲ್ಡ್ ವರದಿ ಮಾಡಿದೆ.

“ರಾಮಕೃಷ್ಣ ಹೆಗಡೆಯವರು ಅನಾರೋಗ್ಯಕ್ಕೆ ತುತ್ತಾದಾಗ ಅವರೊಂದಿಗಿನ ಸಂಬಂಧವು ಹದಗೆಟ್ಟಿತು. ರಾಮಕೃಷ್ಣ ಹೆಗಡೆಯವರಿಂದ ಪ್ರತಿಭಾ ಅವರನ್ನು ದೂರವಿರಿಸಲು ಹೆಗಡೆಯವರ ಕುಟುಂಬ ಪ್ರಯತ್ನಿಸಿತು. ಹೆಗಡೆಯವರ ಅಂತಿಮ ದಿನಗಳಲ್ಲಿ ಪ್ರತಿಭಾ ಮತ್ತು ಅವರ ಮಕ್ಕಳು ಹೆಗಡೆಯವನ್ನು ಭೇಟಿಯಾಗದಂತೆ ಹೇಗೆ ತಡಲಾಯಿತು ಎಂಬುದರ ಕುರಿತೂ ಸಂದರ್ಶನದಲ್ಲಿ ಮಾತನಾಡಿದ್ದರು” ಎಂದು ‘ದಿ ಹಿಂದೂ’ ವರದಿ ಮಾಡಿದೆ.

ಪ್ರತಿಭಾ ಅವರನ್ನು ಸಂದರ್ಶಿಸಿದ ರಾಮಕೃಷ್ಣ ಉಪಾಧ್ಯ ಅವರು ‘ದಿ ಹಿಂದೂ’ಗೆ ಪ್ರತಿಕ್ರಿಯೆ ನೀಡಿದ್ದು, “ಆರಂಭದಲ್ಲಿ ಪೂರ್ಣ ಸಂದರ್ಶನವನ್ನು ಮೇ 22 ರಂದು ಯೂಟ್ಯೂಬ್‌ನಲ್ಲಿ ಅಪ್‌ಲೋಡ್ ಮಾಡಲಾಗಿತ್ತು. ಆದರೆ ನಂತರದಲ್ಲಿ ಎಡಿಟ್ ಮಾಡಿ ಪ್ರಕಟಿಸಲಾಯಿತು. ಕನ್ನಡ ಸಂಸ್ಕೃತಿ ಇಲಾಖೆಯಿಂದ ಸಂದರ್ಶನದ ಪ್ರತಿಯನ್ನು ತರಿಸಿಕೊಳ್ಳಲಿದ್ದೇನೆ” ಎಂದಿದ್ದಾರೆ.

ತನಗಿಂತ 35 ವರ್ಷ ದೊಡ್ಡವರಾಗಿದ್ದ ರಾಮಕೃಷ್ಣ ಹೆಗಡೆ ಅವರೊಂದಿಗಿನ ಸಂಬಂಧದ ಬಗ್ಗೆ ಈ ಹಿಂದೆ ಕೆಲವು ಸಂದರ್ಭಗಳಲ್ಲಿ ಪ್ರತಿಭಾ ಅವರು ಮಾಧ್ಯಮಗಳೊಂದಿಗೆ ಮಾತನಾಡಿದ್ದಾರೆ. ತನ್ನ ಭಾಷಣವನ್ನು ಸೆನ್ಸಾರ್ ಮಾಡಲಾಗಿದೆ ಎಂಬ ವರದಿಗಳಿಗೆ ಪ್ರತಿಕ್ರಿಯಿಸಿರುವ ಅವರು, “ನನ್ನ ಜೀವನದ ಆಯ್ಕೆಗಳು ಮತ್ತು ಸವಾಲುಗಳ ಬಗ್ಗೆ ನಾನು ಹೇಳಿದ್ದಕ್ಕೆ ಸಂಸ್ಕೃತಿ ಇಲಾಖೆಯು ಆಕ್ಷೇಪಣೆಯನ್ನು ತೋರಿರುವುದು ವಿಚಿತ್ರವಾಗಿದೆ” ಎಂದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...