ಸಹನೆ-ಸಜ್ಜನಿಕೆಗೆ ಹೆಸರಾದ ಕರ್ನಾಟಕವನ್ನು ಬಿಜೆಪಿ ಪಕ್ಷವು ಗೂಂಡಾ ರಾಜ್ಯವನ್ನಾಗಿಸುತ್ತಿದೆ ಎಂದಿರುವ ವಿಪಕ್ಷ ನಾಯಕ ಸಿದ್ದರಾಮಯ್ಯನವರು, ರೈತ ಮುಖಂಡ ರಾಕೇಶ್ ಟಿಕಾಯತ್ ಮೇಲಿನ ಹಲ್ಲೆಯನ್ನು ಖಂಡಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಅವರು,” ರೈತ ನಾಯಕ ರಾಕೇಶ್ ಟಿಕಾಯತ್ ಅವರ ಮೇಲಿನ ದೈಹಿಕ ಹಲ್ಲೆಯು ಭಿನ್ನಾಭಿಪ್ರಾಯವನ್ನು ಸಿದ್ದಾಂತದ ಮೂಲಕ ಎದುರಿಸಲಾಗದ ಬಿಜೆಪಿ ಮತ್ತು ಬೆಂಬಲಿಗರ ಬೌದ್ದಿಕ ದಿವಾಳಿತನಕ್ಕೆ ಸಾಕ್ಷಿಯಾಗಿದೆ. ಸಹನೆ-ಸಜ್ಜನಿಕೆಗೆ ಹೆಸರಾದ ನಾಡನ್ನು ಗೂಂಡಾ ರಾಜ್ಯವನ್ನಾಗಿ ಮಾಡಿದ ಕುಖ್ಯಾತಿ ರಾಜ್ಯ ಬಿಜೆಪಿ ಸರ್ಕಾರಕ್ಕೆ ಸಲ್ಲುತ್ತದೆ” ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ರೈತ ನಾಯಕ ರಾಕೇಶ್ ಟಿಕಾಯತ್ ಅವರ ಮೇಲೆ ನಡೆದಿರುವ ಹಲ್ಲೆ ಅತ್ಯಂತ ಖಂಡನೀಯ ದುಷ್ಕೃತ್ಯ. ಮುಖ್ಯಮಂತ್ರಿಗಳೆ ನೆನಪಿರಲಿ, ಈ ಗೂಂಡಾಗಳು ಮಸಿ ಬಳಿದಿರುವುದು ರಾಜ್ಯ ಸರ್ಕಾರದ ಮುಖಕ್ಕೆ. ಈ ದುಷ್ಕರ್ಮಿಗಳನ್ನು ತಕ್ಷಣ ಬಂಧಿಸಿ ಜೈಲಿಗೆ ಅಟ್ಟದಿದ್ದರೆ ಮುಖ್ಯಮಂತ್ರಿಗಳ ಕುರ್ಚಿಯಲ್ಲಿ ಕೂರುವ ನೈತಿಕತೆ ನಿಮಗಿಲ್ಲ ಎಂದು ಆಕ್ರೋಶ ಹೊರ ಹಾಕಿದ್ದಾರೆ.
ರೈತ ನಾಯಕ #rakeshtikait
ಅವರ ಮೇಲೆ ನಡೆದಿರುವ ಹಲ್ಲೆ ಅತ್ಯಂತ ಖಂಡನೀಯ ದುಷ್ಕೃತ್ಯ.@CMofKarnataka ಅವರೇ,
ನೆನಪಿರಲಿ,
ಈ ಗೂಂಡಾಗಳು ಮಸಿ ಬಳಿದಿರುವುದು ರಾಜ್ಯ ಸರ್ಕಾರದ ಮುಖಕ್ಕೆ.ಈ ದುಷ್ಕರ್ಮಿಗಳನ್ನು ತಕ್ಷಣ ಬಂಧಿಸಿ ಜೈಲಿಗೆ ಅಟ್ಟದಿದ್ದರೆ ಮುಖ್ಯಮಂತ್ರಿಗಳ ಕುರ್ಚಿಯಲ್ಲಿ ಕೂರುವ ನೈತಿಕತೆ ನಿಮಗಿಲ್ಲ.
1/2— Siddaramaiah (@siddaramaiah) May 30, 2022
ಬೆಂಗಳೂರಿನ ಗಾಂಧಿ ಭವನದಲ್ಲಿ ನಡೆಯುತ್ತಿದ್ದ ರೈತ ಸಂಘದ ಸಮಾಲೋಚನಾ ಸಭೆಗೆ ನುಗ್ಗಿದ ಬಿಜೆಪಿ ಕಾರ್ಯಕರ್ತರು ಮೋದಿ ಮೋದಿ ಎಂದು ಘೋಷಣೆ ಕೂಗುತ್ತಾ, ರೈತ ಹೋರಾಟಗಾರರಾದ ರಾಕೇಶ್ ಟಿಕಾಯತ್, ಅನಸೂಯಮ್ಮ, ಚುಕ್ಕಿ ನಂಜುಂಡಸ್ವಾಮಿಯವರ ಮೇಲೆ ಹಲ್ಲೆ ನಡೆಸಿ ಮಸಿ ಬಳಿದಿರುವ ಘಟನೆ ಜರುಗಿದೆ.
ಕವಿತಾ ಕುರುಗಂಟಿಯವರು ಮಾತನಾಡುತ್ತಿದ್ದಾಗ ಕೆಲವರು ತೆಲುಗಿನಲ್ಲಿ ಮಾತನಾಡುವುದಕ್ಕೆ ಆಕ್ಷೇಪಣೆ ಮಾಡಿ ಜಗಳ ಶುರು ಮಾಡಿದರು. ನಂತರ ಮೋದಿಗೆ ಜೈಕಾರ ಹಾಕುತ್ತ ಏಕಾಏಕಿ ನುಗ್ಗಿದ ಹಿಂದುತ್ವ ಗೂಂಡಾಗಳು ಸಿಕ್ಕ ಸಿಕ್ಕವರ ಮೇಲೆ ಮಸಿ ಎರಚಿದರು. ವೇದಿಕೆಯ ಮೇಲಿದ್ದ ಮುಖಂಡರಿಗೆ ಹಲ್ಲೆ ನಡೆಸಿದರು. ಕುರ್ಚಿ ಎಸೆದು ದಾಂಧಲೆ ನಡೆಸಿದರು ಎಂದು ಸಭೆಯಲ್ಲಿ ಭಾಗವಹಿಸಿದ್ದವರು ಮಾಹಿತಿ ನೀಡಿದ್ದಾರೆ.
ಇದನ್ನೂ ಓದಿ: ರಾಕೇಶ್ ಟಿಕಾಯತ್ ಮೇಲೆ ಹಲ್ಲೆ: ಮೂವರು ಬಿಜೆಪಿ ಕಾರ್ಯಕರ್ತರ ಬಂಧನ



Country is going to the dogs.
Karnataka is ruling by third rate goondas.