Homeಮುಖಪುಟಯಾವುದೇ ಧರ್ಮ ನಿರಾಕರಿಸಿ ದೇಶ ಮುನ್ನಡೆಯಲು ಸಾಧ್ಯವಿಲ್ಲ: ಮುಸ್ಲಿಂ ಸಮಾವೇಶದಲ್ಲಿ ಶಾಸಕ ಕೆ.ಟಿ. ಜಲೀಲ್ ಅಭಿಮತ

ಯಾವುದೇ ಧರ್ಮ ನಿರಾಕರಿಸಿ ದೇಶ ಮುನ್ನಡೆಯಲು ಸಾಧ್ಯವಿಲ್ಲ: ಮುಸ್ಲಿಂ ಸಮಾವೇಶದಲ್ಲಿ ಶಾಸಕ ಕೆ.ಟಿ. ಜಲೀಲ್ ಅಭಿಮತ

ವಿಶ್ವದಾದ್ಯಂತ ಭಾರತವು ತನ್ನ ಬಹುತ್ವ ಗುಣದಿಂದ ಗುರುತಿಸಲ್ಪಟ್ಟಿದೆ. ಆದರೆ ಈ ಬಹುತ್ವದ ಬಗ್ಗೆ ಏನೂ ತಿಳಿದಿಲ್ಲದ ಜನರು ಆಡಳಿತ ನಡೆಸುತ್ತಿರುವುದು ವಿಷಾದನೀಯ.

- Advertisement -
- Advertisement -

ಇತಿಹಾಸದಲ್ಲಿ ಯಾವುದೇ ಜನಾಂಗ, ಯಾವುದೇ ಧರ್ಮವನ್ನು ನಿರಾಕರಿಸಿ ಅಭಿವೃದ್ದಿಹೊಂದಿದ ದೇಶಗಳು ಕಾಣುವುದಿಲ್ಲ. ಅದೇ ರೀತಿ ಭಾರತವು ಸಹ ಯಾವುದೇ ಧರ್ಮ ನಿರಾಕರಿಸಿ ಮುನ್ನಡೆಯಲು ಸಾಧ್ಯವಿಲ್ಲ ಎಂದು ಕೇರಳದ ಶಾಸಕ ಕೆ.ಟಿ. ಜಲೀಲ್ ಅಭಿಪ್ರಾಯಪಟ್ಟರು.

ಮಂಗಳೂರಿನಲ್ಲಿ ಭಾರತ ಕಮ್ಯುನಿಸ್ಟ್ ಪಕ್ಷ(ಮಾರ್ಕ್ಸ್‌ವಾದಿ) ಕರ್ನಾಟಕ ರಾಜ್ಯ ಸಮಿತಿ ಆಯೋಜಿಸಿರುವ ಮುಸ್ಲಿಂ ಸಮಾವೇಶ ಉದ್ಘಾಟಿಸಿ ಮಾತನಾಡಿದ ಅವರು, “ನಮ್ಮ ದೇಶ ಜಾತ್ಯಾತೀತ ರಾಷ್ಟ್ರವಾಗಿದೆ. ಯಾವುದನ್ನೂ ಭಾರತ ನಿರಾಕರಿಸುವುದಿಲ್ಲ ಎಂಬ ನಿಟ್ಟಿನಲ್ಲಿ ವಿಶ್ವದಾದ್ಯಂತ ಹೆಸರು ಹೊಂದಿದೆ. ಎಲ್ಲವನ್ನು ಭಾರತ ಒಳಗೊಳ್ಳುತ್ತಿದೆ. ಈ ಜಾತ್ಯಾತೀತತೆಯ ಸಂಪ್ರದಾಯವೇ ಪ್ರಜಾಪ್ರಭುತ್ವವನ್ನು ಕಾಯುತ್ತಿರುವುದು. ನಮ್ಮ ದೇಶವು ಯಾವುದೇ ಧರ್ಮವನ್ನು ಯಾವುದೇ ಕಾಲದಲ್ಲಿ ನಿರಾಕರಿಸಿಲ್ಲ” ಎಂದರು.

“ಹಿಂದೂ ಧರ್ಮದ ಅಶೋಕ ಚಕ್ರವರ್ತಿ ಕಳಿಂಗ ಯುದ್ದದ ನಂತರ ಬೌಧ್ಧ ಧರ್ಮ ಪಾಲಿಸಿದರು. ಅವರು ಬೌದ್ಧ ಧರ್ಮ ಸ್ವೀಕರಿಸಿದ ನಂತರ ಅವರನ್ನು ಯಾರೂ ಪ್ರಶ್ನಿಸಿಲ್ಲ. ಅದೇ ರೀತಿ ಮುಸ್ಲಿಂ ರಾಜರು 900 ವರ್ಷಗಳ ಕಾಲ ಆಡಳಿತ ನಡೆಸಿದರು. ಒಂದು ವೇಳೆ ಅವರು ಧರ್ಮವನ್ನು ಆಡಳಿತದಲ್ಲಿ ಜೊತೆಯಾಗಿಸಿದ್ದರೆ ಇಷ್ಟೊಂದು ಧೀರ್ಘ ಕಾಲ ಆಡಳಿತ ನಡೆಸಲು ಸಾಧ್ಯವಾಗುತ್ತಿರಲಿಲ್ಲ. ದೇಶದ ಮೊದಲ ಸ್ವಾತಂತ್ರ್ಯ ಸಂಗ್ರಾಮದ ಸಂದರ್ಭಯಲ್ಲಿ ಮೊಘಲ್ ಸಾಮ್ರಾಜ್ಯದ ಚಕ್ರವರ್ತಿ ಬಹದ್ದೂರೂ ಶಾ ಜಫಾರ್‌ರನ್ನು ದೇಶದ ಬಹಸಂಖ್ಯಾತ ಹಿಂದೂಗಳು ತಮ್ಮ ನಾಯಕರಾಗಿ ಆಯ್ಕೆ ಮಾಡಿದ್ದರು” ಎಂಬದನ್ನು ಅವರು ಸ್ಮರಿಸಿದರು.

ಮೊಘಲರ ಆಡಳಿತ ಕೊನೆಗೊಂಡಿದ್ದು ಧರ್ಮದ ಕಾರಣಕ್ಕೆ ಅಲ್ಲ. ಬದಲಾಗಿ ಬ್ರಿಟೀಷರ ಕಾರಣದಿಂದಾಗಿದೆ. ಯಾವುದೇ ಧರ್ಮ ಆಚರಿಸದ ಜವಾಹರಲಾಲ್ ನೆಹರೂ ದೇಶವನ್ನು 16 ವರ್ಷ ಆಡಳಿತ ನಡೆಸಿದ್ದಾರೆ. ಅವರನ್ನು ಯಾರೂ ಪ್ರಶ್ನಿಸಲಿಲ್ಲ. ವಿಶ್ವದಾದ್ಯಂತ ಭಾರತವು ತನ್ನ ಬಹುತ್ವ ಗುಣದಿಂದ ಗುರುತಿಸಲ್ಪಟ್ಟಿದೆ. ಆದರೆ ಈ ಬಹುತ್ವದ ಬಗ್ಗೆ ಏನೂ ತಿಳಿದಿಲ್ಲದ ಜನರು ಆಡಳಿತ ನಡೆಸುತ್ತಿರುವುದು ವಿಷಾದನೀಯ ಎಂದರು.

ಅಟಲ್ ಬಿಹಾರಿ ವಾಜಪೇಯಿಯವರು ಆಡಳಿತ ಮಾಡಬೇಕಾದರೆ ಭಾರತ ಇಷ್ಟು ಕೋಮು ದ್ರುವೀಕರಣಗೊಂಡಿರಲಿಲ್ಲ. ವಾಜಪೇಯಿ ನಂತರ ಬಂದ ನರೇಂದ್ರ ಮೋದಿ ಸರ್ಕಾರವು ನಿರಂತರವಾಗಿ ಒಂದು ಸಮುದಾಯವನ್ನು ತಿರಸ್ಕಾರ ಮಾಡುತ್ತಾ ಬಂದಿದೆ. ಇದು ಒಳ್ಳೆಯ ಬೆಳವಣಿಗೆಯಲ್ಲ ಎಂದರು.

“ಅಲ್ಪಸಂಖ್ಯಾತರನ್ನು ತಮ್ಮ ದೇಶದಿಂದ ದೂರ ಮಾಡಿದ ಎಲ್ಲಾ ದೇಶಗಳು ಕೂಡಾ ನಾಶವಾಗಿದೆ. ಇದಕ್ಕೆ ಜರ್ಮನ್ ಒಂದು ಉದಾಹರಣೆ. ಜರ್ಮನ್‌ನಲ್ಲಿ ಯಹೂದಿಗಳನ್ನು ಓಡಿಸದಿದ್ದರೆ ಜರ್ಮನ್ ಇಂದು ವಿಶ್ವದ ಶಕ್ತಿಶಾಲಿ ದೇಶವಾಗಿರುತ್ತಿತ್ತು. ಪ್ರಾನ್ಸ್, ಸ್ಪೇನ್‌ನಲ್ಲಿ ಕೂಡಾ ಇದೆ ನಡೆದಿದೆ. ಈ ದೇಶ ತೊರೆದುಹೋದ ಜನರು ತಾವು ನೆಲೆ ನಿಂತ ದೇಶಗಳನ್ನು ಅಭಿವೃದ್ಧಿ ಮಾಡಿದರು. ಹಾಗೆಯೇ ಭಾರತವು ಯಾವುದೇ ಜನಾಂಗ, ಧರ್ಮವನ್ನು ನಿರಾಕರಿಸಿ ದೇಶ ಮುನ್ನಡೆಸಲು ಸಾಧ್ಯವಿಲ್ಲ. ದೇಶದ ಅಭಿವೃದ್ದಿಗೆ ಎಲ್ಲಾ ಜನಾಂಗಗಳೂ ಕೊಡುಗೆ ನೀಡಿದೆ. ಉದ್ಯಾನದಲ್ಲಿ ಹಲವು ಬಗೆಯ ಹೂವುಗಳಿದ್ದರೆ ಅದು ನೋಡಲು ಸುಂದರ. ಹಾಗೆಯೇ ಭಾರತದಲ್ಲಿ ಹಲವಾರು ಸಂಸ್ಕೃತಿ ಇದ್ದರೆ ಅದು ನೋಡಲು ಸುಂದರ” ಎಂದು ಜಲೀಲ್ ಅಭಿಪ್ರಾಯಪಟ್ಟರು.

ವಿಭಜನೆ ನಂತರ ಧರ್ಮದ ಆಧಾರದಲ್ಲಿ ನಿರ್ಮಾಣವಾದ ಪಾಕಿಸ್ತಾನ ರಾಷ್ಟ್ರವು ಎಂದಿಗೂ ನೆಮ್ಮದಿಯಿಂದ ಇರುವ ದೇಶವಾಗಿಲ್ಲ. ಅಲ್ಲಿ ಹಿಂಸೆ, ದಾಳಿ ತೀವ್ರ ಮಟ್ಟಕ್ಕೆ ಏರಿದೆ. ಇದನ್ನು ಭಾರತ ಪಾಠವನ್ನಾಗಿ ತೆಗೆದುಕೊಳ್ಳಬೇಕು. ನಮ್ಮ ದೇಶದಲ್ಲಿ ಜಾತ್ಯಾತೀತಯೇ ನಮ್ಮ ಜೀವವಾಯು. ಜಾತ್ಯಾತೀತತೆ ಇಲ್ಲವಾದರೆ ಭಾರತ ಇಲ್ಲವಾಗುತ್ತದೆ. ಆದರೆ ಜಾತ್ಯಾತೀತತೆ ಮೇಲೆ ದಾಳಿ ನಡೆಯುತ್ತಿದೆ. ಆ ದಾಳಿಯನ್ನು ಹಿಮ್ಮೆಟ್ಟಿಸುವ ಮೂಲಕ ಭಾರತವನ್ನು ಪಾಕಿಸ್ತಾನದಂತಹ ರಾಷ್ಟ್ರವನ್ನಾಗಿಸಲು ನಾವು ಅವಕಾಶ ನೀಡಬಾರದು ಎಂದರು.

ಕಾರ್ಯಕ್ರಮದಲ್ಲಿ ಪತ್ರಕರ್ತ ನವೀನ್ ಸೂರಿಂಜೆ ಯವರ “ನೇತ್ರಾವತಿಯಲ್ಲಿ ನೆತ್ತರು” ಕರಾವಳಿಯ ಕೋಮು ಹಿಂಸೆಯ ನೈಜ ಪ್ರಕರಣಗಳು ಪುಸ್ತಕವನ್ನು ದಲಿತ ಮುಖಂಡರಾದ ಮಾವಳ್ಳಿ ಶಂಕರ್ ಬಿಡುಗಡೆ ಮಾಡಿದರು. ಬಿ.ಎಂ.ಹನೀಫ್ ರವರ ಸೆಕ್ಯುಲರ್ ಸೇನಾನಿ ಸುಭಾಷ್ ಚಂದ್ರ ಬೋಸ್ ಪುಸ್ತಕವನ್ನು ಸಾಹಿತಿಗಳಾದ ಕೆ.ಶರೀಫಾರವರು ಬಿಡುಗಡೆ ಮಾಡಿದರು.

ಸಿಪಿಐಎಂ ಪಕ್ಷವು `ಜಾತ್ಯಾತೀತತೆ, ಸಬಲೀಕರಣ ಮತ್ತು ಮುನ್ನಡೆ’ ಎಂಬ ಘೋಷಣೆಯಡಿ ಕರ್ನಾಟಕದ ಮುಸ್ಲಿಮರ ನೋವು ನಲಿವುಗಳ ಅನಾವರಣ ಎಂಬ ವಿಷಯದ ಕುರಿತು ಎರಡು ದಿನಗಳ ರಾಜ್ಯ ಮಟ್ಟದ ಎರಡು ದಿನಗಳ ಸಮಾವೇಶದಲ್ಲಿ ನಿವೃತ್ತ ಪ್ರಾಧ್ಯಾಪಕರಾದ ಡಾ.ಚಂದ್ರಪೂಜಾರಿ, ಡಾ.ಕೆ.ಪ್ರಕಾಶ್, ಮುನೀರ್ ಕಾಟಿಪಳ್ಳ, ಸುನೀಲ್ ಕುಮಾರ್ ಬಜಾಲ್ ಮುಂತಾದವರು ಭಾಗವಹಿಸಿದ್ದಾರೆ.

ಇದನ್ನೂ ಓದಿ: ಪಠ್ಯದ ಮೂಲಕ ಮಕ್ಕಳಿಗೆ ವಿಷಪ್ರಾಸನ: ಮಾಜಿ ಸ್ಪೀಕರ್ ರಮೇಶ್ ಕುಮಾರ್ ಕಿಡಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಾಳಿ ಮುಂದುವರಿಸುವ ಸೂಚನೆ ನೀಡಿದ ಟ್ರಂಪ್ : ಇರಾನ್‌ನಿಂದ ತೀವ್ರ ಪ್ರತಿದಾಳಿಯ ಎಚ್ಚರಿಕೆ

ಅಮೆರಿಕದ ಸಹಯೋಗದೊಂದಿಗೆ ಇಸ್ರೇಲ್ ಶನಿವಾರ (ಫೆ.28) ಇರಾನ್‌ ಮೇಲೆ ಕ್ಷಿಪಣಿ ದಾಳಿ ನಡೆಸಿದೆ. ಇದರಿಂದ ಮಧ್ಯಪ್ರಾಚ್ಯದಲ್ಲಿ ಯುದ್ಧ ಪ್ರಾರಂಭವಾಗುವಾಗ ಎಲ್ಲಾ ಲಕ್ಷಣಗಳು ಗೋಚರಿಸುತ್ತಿವೆ. ಇಸ್ರೇಲ್‌ ಇರಾನ್‌ನ ರಾಜಧಾನಿ ಟೆಹ್ರಾನ್‌ ಸೇರಿದಂತೆ ದೇಶದ ಹಲವು ಸ್ಥಳಗಳ...

ಅಮೆರಿಕ ಅಣತಿಯಂತೆ ಇರಾನ್ ಮೇಲೆ ಇಸ್ರೇಲ್ ದಾಳಿ : ಟೆಹ್ರಾನ್‌ನ ಹಲವೆಡೆ ಭಾರೀ ಸ್ಪೋಟ

ಇರಾನ್ ಮೇಲೆ ಇಸ್ರೇಲ್ ಶನಿವಾರ (ಫೆ.28) ವೈಮಾನಿಕ ದಾಳಿ ನಡೆಸಿರುವುದಾಗಿ ಅಂತಾರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ. ಈ ದಾಳಿಯನ್ನು ಇಸ್ರೇಲ್ 'ಪೂರ್ವಭಾವಿ ದಾಳಿ' ಎಂದು ಕರೆದಿದೆ. ಇಂದು ಬೆಳಿಗ್ಗಿನ ಹೇಳಿಕೆಯೊಂದರಲ್ಲಿ, ಇಸ್ರೇಲ್ ರಕ್ಷಣಾ ಸಚಿವ...

ನಟಿಯ ಅಪಹರಣ, ಅತ್ಯಾಚಾರ ಪ್ರಕರಣ : ನಟ ದಿಲೀಪ್, ಇತರರ ಖುಲಾಸೆ ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಿದ ಕೇರಳ ಸರ್ಕಾರ

ನಟಿಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದಲ್ಲಿ (2017ರ ಪ್ರಕರಣ) ಮಲಯಾಳಂನ ಪ್ರಮುಖ ನಟ ದಿಲೀಪ್ ಅವರನ್ನು ಎಲ್ಲಾ ಆರೋಪಗಳಿಂದ ಮುಕ್ತಗೊಳಿಸಿದ ಸೆಷನ್ಸ್ ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಿ ಕೇರಳ ಸರ್ಕಾರ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದೆ. ಪ್ರಕರಣದ...

‘ದಿ ಕೇರಳ ಸ್ಟೋರಿ-2’ ಬಿಡುಗಡೆಗೆ ವಿಧಿಸಿದ್ದ ತಡೆಯಾಜ್ಞೆ ತೆರವು

'ದಿ ಕೇರಳ ಸ್ಟೋರಿ-2 : ಗೋಸ್ ಬಿಯಾಂಡ್' ಚಿತ್ರದ ಬಿಡುಗಡೆಗೆ ವಿಧಿಸಲಾಗಿದ್ದ ಮಧ್ಯಂತರ ತಡೆಯಾಜ್ಞೆಯನ್ನು ಕೇರಳ ಹೈಕೋರ್ಟ್ ವಿಭಾಗೀಯ ಪೀಠ ಶುಕ್ರವಾರ (ಫೆ.27) ತೆರವುಗೊಳಿಸಿದೆ. 'ಕೋಮು ಸಾಮರಸ್ಯ ಕದಡುವ ಸಾಧ್ಯತೆ'ಯನ್ನು ಉಲ್ಲೇಖಿಸಿ ನ್ಯಾಯಮೂರ್ತಿ ಬೆಚು...

‘ದೆಹಲಿಯಲ್ಲಿ ಮತ್ತೆ ಚುನಾವಣೆ ನಡೆಸಿ; ಬಿಜೆಪಿ 10ಕ್ಕಿಂತ ಹೆಚ್ಚು ಸ್ಥಾನ ಗೆದ್ದರೆ ರಾಜಕೀಯ ತ್ಯಜಿಸುತ್ತೇನೆ’: ಕೇಜ್ರಿವಾಲ್ ಸವಾಲು

"ದೆಹಲಿಯಲ್ಲಿ ಮತ್ತೆ ಚುನಾವಣೆ ನಡೆಸಿ, ಬಿಜೆಪಿ ಹತ್ತಕ್ಕಿಂತ ಹೆಚ್ಚು ಸ್ಥಾನಗಳನ್ನು ಗೆದ್ದರೆ ನಾನು ರಾಜಕೀಯ ತ್ಯಜಿಸುತ್ತೇನೆ" ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಆಮ್‌ ಆದ್ಮಿ ಪಕ್ಷದ (ಎಎಪಿ) ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ....

ಚನ್ನರಾಯಪಟ್ಟಣ| ಭೂಸ್ವಾಧೀನ ವಿರುದ್ಧ ಗೆದ್ದ ರೈತರಿಂದ ‘ಭೂಮಿ ಹಬ್ಬ’ ಸಂಭ್ರಮ: ಹೋರಾಟದ ಒಡನಾಡಿಗಳಿಗೆ ಗೌರವ ಸಮರ್ಪಣೆ

ದೇವನಹಳ್ಳಿಯ ಚನ್ನರಾಯಪಟ್ಟಣದ ಹೋಬಳಿಯ 13 ಹಳ್ಳಿಗಳ 1,777 ಎಕರೆ ಕೃಷಿ ಭೂಮಿಯನ್ನು ಉಳಿಸಿಕೊಳ್ಳಲು ರೈತರು ನಡೆಸಿದ ಸುದೀರ್ಘ ನಾಲ್ಕು ವರ್ಷಗಳ ಸತ್ಯಾಗ್ರಹಕ್ಕೆ ಐತಿಹಾಸಿಕ ಜಯ ಲಭಿಸಿದ ಹಿನ್ನಲೆಯಲ್ಲಿ, ಭೂಸ್ವಾದೀನ ವಿರೋಧಿ ಹೋರಾಟ ಸಮಿತಿಯು...

ಅಬಕಾರಿ ಹಗರಣದಲ್ಲಿ ಕೇಜ್ರಿವಾಲ್ ಮತ್ತು ಇತರರು ಖುಲಾಸೆ: ದೆಹಲಿ ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ ಸಿಬಿಐ

ಮದ್ಯ ನೀತಿ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮತ್ತು ಇತರರನ್ನು ಖುಲಾಸೆಗೊಳಿಸಿದ ವಿಶೇಷ ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಿ ಸಿಬಿಐ ದೆಹಲಿ ಹೈಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಿದೆ ಎಂದು...

ಕಾಂಗ್ರೆಸ್ ಶಾಸಕ ಸುಬ್ಬಾರೆಡ್ಡಿ ಚುನಾವಣೆ ರದ್ದುಗೊಳಿಸಿದ ಕರ್ನಾಟಕ ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆ

ನವದೆಹಲಿ: 2023ರ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ಕ್ಷೇತ್ರದಿಂದ ಕಾಂಗ್ರೆಸ್ ಶಾಸಕ ಎಸ್.ಎನ್. ಸುಬ್ಬಾರೆಡ್ಡಿ ಅವರ ಆಯ್ಕೆಯನ್ನು ರದ್ದುಗೊಳಿಸಿದ ಕರ್ನಾಟಕ ಹೈಕೋರ್ಟ್‌ನ ತೀರ್ಪನ್ನು ಸುಪ್ರೀಂ ಕೋರ್ಟ್ ಶುಕ್ರವಾರ ತಡೆಹಿಡಿದಿದೆ. ಭಾರತದ ಮುಖ್ಯ...

ಹಾಜರಾತಿ ಆಧಾರದ ಮೇಲೆ ಪರೀಕ್ಷಾ ನಿಷೇಧ ವಿರೋಧಿಸಿ ಎಎಂಯು ಎಂಜಿನಿಯರಿಂಗ್ ವಿದ್ಯಾರ್ಥಿಗಳಿಂದ ಪ್ರತಿಭಟನೆ; ಬಂಧನ, ಹಲ್ಲೆ ಆರೋಪ 

ಕಡಿಮೆ ಹಾಜರಾತಿ ಕಾರಣ ಸೆಮಿಸ್ಟರ್ ಪರೀಕ್ಷೆಗಳಿಂದ ನಿಷೇಧಿಸಲ್ಪಟ್ಟಿದ್ದನ್ನು ವಿರೋಧಿಸಿ ನಡೆದ ಪ್ರತಿಭಟನೆಗಳ ನಂತರ, ವಿಶ್ವವಿದ್ಯಾಲಯದ ಪ್ರೊಕ್ಟೋರಿಯಲ್ ತಂಡವು ಹಲವಾರು ಅಂತಿಮ ವರ್ಷದ ವಿದ್ಯಾರ್ಥಿಗಳನ್ನು ವಶಕ್ಕೆ ಪಡೆದಿದೆ ಎಂದು ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯದ (AMU)...

ವಿಧಾನಸಭಾ ಚುನಾವಣೆಗೂ ಮುನ್ನ ಎಐಎಡಿಎಂಕೆಯಿಂದ ಉಚ್ಚಾಟನೆಗೊಂಡ ಮಾಜಿ ಸಿಎಂ ಪನ್ನೀರ್‌ಸೆಲ್ವಂ, ಪ್ರತಿಸ್ಪರ್ಧಿ ಡಿಎಂಕೆ ಪಕ್ಷಕ್ಕೆ ಸೇರ್ಪಡೆ

ಮೂರು ಬಾರಿ ತಮಿಳುನಾಡು ಮುಖ್ಯಮಂತ್ರಿ ಮತ್ತು ಜೆ ಜಯಲಲಿತಾ ಅವರ ದೀರ್ಘಕಾಲದ ಸಹಾಯಕರಾಗಿದ್ದ ಪನ್ನೀರ್‌ಸೆಲ್ವಂ ಅವರನ್ನು ಎಡಪ್ಪಾಡಿ ಕೆ ಪಳನಿಸ್ವಾಮಿ (ಇಪಿಎಸ್) ಅವರೊಂದಿಗಿನ ತೀವ್ರ ಅಧಿಕಾರ ಹೋರಾಟದ ನಂತರ 2022 ರಲ್ಲಿ ಎಐಎಡಿಎಂಕೆಯಿಂದ...