Homeಚಳವಳಿಪಠ್ಯ ವಿವಾದ: ದಬ್ಬಾಳಿಕೆ ಬಿಡಿ, ಇದು ಮುಂದುವರಿಯಬಾರದು- ದೇವನೂರ ಮಹಾದೇವರ ಮತ್ತೊಂದು ಪತ್ರ

ಪಠ್ಯ ವಿವಾದ: ದಬ್ಬಾಳಿಕೆ ಬಿಡಿ, ಇದು ಮುಂದುವರಿಯಬಾರದು- ದೇವನೂರ ಮಹಾದೇವರ ಮತ್ತೊಂದು ಪತ್ರ

ಹಿಂದಿನ ಪಠ್ಯಪುಸ್ತಕವನ್ನೇ ಮುಂದುವರಿಸಿ ಎಂದು ಕೇಳಿಕೊಂಡರೂ ತಾವು ಅದನ್ನು ಕಾಲುಕಸ ಮಾಡಿ, ಲೆಕ್ಕಿಸದಿರುವುದನ್ನು ನೋಡಿದಾಗ ಇದು ನಾಡಿಗೆ ಕೇಡಿನ ಲಕ್ಷಣಗಳು ಎಂದೆನ್ನಿಸುತ್ತದೆ

- Advertisement -
- Advertisement -

ಬಿಜೆಪಿ ಸರ್ಕಾರದ ನೂತನ ಪಠ್ಯ ಪರಿಷ್ಕರಣೆಗೆ ತೀವ್ರ ವಿರೋಧ ವ್ಯಕ್ತಪಡಿಸಿ ತಮ್ಮ ಪಠ್ಯ ಸೇರ್ಪಡೆಗೆ ಅನುಮತಿ ನಿರಾಕರಿಸಿದ್ದ ನಾಡಿನ ಹಿರಿಯ ಸಾಹಿತಿಗಳಾದ ದೇವನೂರ ಮಹಾದೇವರವರು ಶಿಕ್ಷಣ ಸಚಿವರಿಗೆ ಮತ್ತೊಂದು ಪತ್ರ ಬರೆದು ದಬ್ಬಾಳಿಕೆ ಬಿಡಿ, ಇದು ಮುಂದುವರಿಯಬಾರದು ಎಂದು ಮನವಿ ಮಾಡಿದ್ದಾರೆ.

“ಈ ಹಿಂದೆ, ಹತ್ತನೇ ತರಗತಿಯ ಪಠ್ಯ ಪುಸ್ತಕದಲ್ಲಿರುವ ನನ್ನ ಪಠ್ಯವನ್ನು ಕೈ ಬಿಡಬೇಕೆಂದು ತಮಗೆ ವಿನಂತಿಸಿ ದಿನಾಂಕ 26.05.2022ರಂದು ಪತ್ರ ಬರೆದು ಕೊರಿಯರ್ ಮುಖಾಂತರ ರವಾನಿಸಿದ್ದೆ. ಅದನ್ನು ಪ್ರಾಥಮಿಕ ಮತ್ತು ಪ್ರೌಢಶಾಲೆ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿಯವರಿಗೂ, ಸಾರ್ವಜನಿಕ ಶಿಕ್ಷಣ ಇಲಾಖೆಯ ಆಯುಕ್ತರವರಿಗೂ ಕಳಿಸಿದ್ದೆ. ಆ ಪತ್ರದಲ್ಲಿ ನಾನು ಒಪ್ಪಿಗೆ ಇಲ್ಲದಿರುವುದಕ್ಕೆ ಸ್ಪಷ್ಟನೆ ನೀಡಿದ್ದೇನೆ. ಹೀಗಿದ್ದೂ ನನ್ನ ಮನವಿಯನ್ನು ತಾವು ಪರಿಗಣಿಸದೆ, ಇತ್ತೀಚಿನ ತಮ್ಮ ಹೇಳಿಕೆಯಲ್ಲಿ “ಪರಿಷ್ಕೃತ ಮುದ್ರಣವೇ ಜಾರಿಗೆ ಬರುತ್ತದೆ” ಎಂದಿದ್ದೀರಿ. ಕ್ಷಮಿಸಿ, ನಿಮ್ಮ ಈ ಧೋರಣೆ ನನಗೆ ದಬ್ಬಾಳಿಕೆ ಅನ್ನಿಸಿಬಿಟ್ಟಿತು” ಎಂದು ದೇವನೂರು ಬರೆದಿದ್ದಾರೆ.

ಚತುರ್ವರ್ಣ ವಿರೋಧಿ ಬಸವಣ್ಣನವರ ಪಾಠವನ್ನು ಪಠ್ಯ ಪುಸ್ತಕ ಪರಿಷ್ಕರಣಾ ಸಮಿತಿ ಕತ್ತು ಹಿಚುಕಿರುವುದು, ಕುವೆಂಪು, ಅಂಬೇಡ್ಕರ್ ಅವರನ್ನು ಗೇಲಿ ಮಾಡುವ ಮನಸ್ಥಿತಿಯ ವ್ಯಕ್ತಿಯನ್ನೇ ಪಠ್ಯಮಸ್ತಕ ಪರಿಷ್ಕರಣೆಗೆ ಅಧ್ಯಕ್ಷನನ್ನಾಗಿಸಿರುವುದು ಹಾಗೂ ಒಂದು ಒಕ್ಕೂಟ ಸರ್ಕಾರದಲ್ಲಿ ಆ ಒಕ್ಕೂಟದ ಅಂಗವಾಗಿರುವ ಕರ್ನಾಟಕ ರಾಜ್ಯವು ತನಗೂ ಒಂದು ಧ್ವಜವೂ ಬೇಕು ಎಂದು ದನಿ ಎತ್ತಿದ ಸಂದರ್ಭದಲ್ಲಿ ಆ ಪರಿಕಲ್ಪನೆಯನ್ನು ತನ್ನ ಲಂಗೋಟಿಗೆ ಹೋಲಿಕೆ ಮಾಡಿದ ಹೀನ ಅಭಿರುಚಿಯ ವ್ಯಕ್ತಿಯನ್ನು ಮಕ್ಕಳ ಪಠ್ಯ ಪರಿಷ್ಕರಣೆ ಮಾಡಲು ಅಧ್ಯಕ್ಷನನ್ನಾಗಿಸಿರುವುದು ಮತ್ತು ಸಮರ್ಥಿಸುತ್ತಿರುವುದು, ಭಿನ್ನಾಭಿಪ್ರಾಯಗಳನ್ನು ಟೂಲ್‌ಕಿಟ್ ಎಂದು ರಾಜಕೀಯಗೊಳಿಸಿ ಪರಾರಿಯಾಗಲು ನೋಡುವುದು ಇವೆಲ್ಲ ಹಾಗೂ ನಾಡಿನ ಗಣ್ಯರು, ಮಠಾಧಿಪತಿಗಳು, ಲೇಖಕರು, ಪ್ರಜ್ಞಾವಂತರು ತಮ್ಮ ನೋವನ್ನು ವ್ಯಕ್ತಪಡಿಸಿ ಹಿಂದಿನ ಪಠ್ಯಪುಸ್ತಕವನ್ನೇ ಮುಂದುವರಿಸಿ ಎಂದು ಕೇಳಿಕೊಂಡರೂ ತಾವು ಅದನ್ನು ಕಾಲುಕಸ ಮಾಡಿ, ಲೆಕ್ಕಿಸದಿರುವುದನ್ನು ನೋಡಿದಾಗ ಇದು ನಾಡಿಗೆ ಕೇಡಿನ ಲಕ್ಷಣಗಳು ಎಂದೆನ್ನಿಸುತ್ತದೆ ಎಂದು ದೇವನೂರುರವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಕೊನೆಯದಾಗಿ ತಮ್ಮಲ್ಲಿ ಒಂದು ವಿನಂತಿ. ಇದು ಮುಂದುವರಿಯಬಾರದು. ದಯವಿಟ್ಟು ಮುಂದುವರಿಯಬಾರದು ಎಂದು ಮನವಿ ಮಾಡಿರುವ ಅವರು ಹಿಂದೆ ಶಿಕ್ಷಣ ಸಚಿವರಿಗೆ ಕಳಿಸಿದ್ದ ಪತ್ರವನ್ನು ಲಗತ್ತಿಸಿದ್ದಾರೆ.

ಇದನ್ನೂ ಓದಿ ; RSS, ಬಿಜೆಪಿಯ ಪಠ್ಯ ಪರಿಷ್ಕರಣೆಗೆ ವಿರೋಧ: ತನ್ನ ಪಠ್ಯ ಕೈಬಿಡಲು ದೇವನೂರ ಮಹಾದೇವ ಪತ್ರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...