Homeಚಳವಳಿವರವರ ರಾವ್ ಅವರ ಪುಸ್ತಕದಿಂದ, ‘ಹಿಂದುತ್ವ’, ‘ಸಂಘಪರಿವಾರ’ ಸೇರಿದಂತೆ ಹಲವು ಪದಗಳನ್ನು ಕೈಬಿಟ್ಟ ಪ್ರಕಾಶನ ಸಂಸ್ಥೆ!

ವರವರ ರಾವ್ ಅವರ ಪುಸ್ತಕದಿಂದ, ‘ಹಿಂದುತ್ವ’, ‘ಸಂಘಪರಿವಾರ’ ಸೇರಿದಂತೆ ಹಲವು ಪದಗಳನ್ನು ಕೈಬಿಟ್ಟ ಪ್ರಕಾಶನ ಸಂಸ್ಥೆ!

- Advertisement -
- Advertisement -

‘ಪೆಂಗ್ವಿನ್ ರಾಂಡಮ್ ಹೌಸ್ ಇಂಡಿಯಾ’ದ ಕಾನೂನು ತಂಡವು ತೆಲುಗು ಕ್ರಾಂತಿಕಾರಿ ಕವಿ ವರವರ ರಾವ್ ಅವರ ಇತ್ತೀಚಿನ ಪುಸ್ತಕ, ‘ವರವರ ರಾವ್: ಎ ರೆವಲ್ಯೂಷನರಿ ಪೊಯೆಟ್‌’ನಿಂದ, ‘ಹಿಂದುತ್ವ’, ‘ಸಂಘ ಪರಿವಾರ’ ಮತ್ತು ‘ಕೇಸರಿಕರಣ’ ಮುಂತಾದ ಪದಗಳನ್ನು ತೆಗೆದುಹಾಕಿದೆ ಎಂದು ಕ್ವಿಂಟ್ ವರದಿ ಮಾಡಿದೆ. ಇನ್ನಷ್ಟೆ ಬಿಡುಗಡೆಯಾಗಬೇಕಿರುವ ಪುಸ್ತಕವು ಭೀಮಾ ಕೋರೆಗಾಂವ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರಾಗಿರುವ 81 ವರ್ಷದ ವರವರ ರಾವ್ ಅವರ ಮೊದಲ ಇಂಗ್ಲಿಷ್ ಅನುವಾದಿತ ಕವನ ಸಂಕಲನವಾಗಲಿದೆ.

ವರವರ ರಾವ್ ಅವರು ಪ್ರಸ್ತುತ ವೈದ್ಯಕೀಯ ಜಾಮೀನಿನ ಮೇಲೆ ಬಿಡುಗಡೆಗೊಂಡಿದ್ದಾರೆ. ಅವರ ಆರು ದಶಕಗಳ ಸಾಹಿತ್ಯಿಕ ವೃತ್ತಿಜೀವನದ ಪ್ರತಿನಿಧಿಯಾಗಿದೆ ಈ ಪುಸ್ತಕ. ವರವರ ರಾವ್‌ ಅವರು 1960 ರ ದಶಕದಿಂದಲೂ ಹಲವು ಜನಪರ ಚಳುವಳಿಗಳೊಂದಿಗೆ ಗುರುತಿಸಿಕೊಂಡಿದ್ದಾರೆ. ಅವರನ್ನು ಎಲ್ಗರ್ ಪರಿಷತ್-ಭೀಮಾ ಕೋರೆಗಾಂವ್ ಪ್ರಕರಣದಲ್ಲಿ ಭಾಗಿಯಾಗಿದ್ದಕ್ಕಾಗಿ ಆಗಸ್ಟ್ 2018 ರಲ್ಲಿ ಬಂಧಿಸಲಾಗಿತ್ತು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

2014 ರಲ್ಲಿ, ಪೆಂಗ್ವಿನ್ ಪ್ರಕಾಶನವು ತನ್ನ ಸ್ವಂತ ಪುಸ್ತಕ, ವೆಂಡಿ ಡೋನಿಗರ್ ಬರೆದಿರುವ ‘ದಿ ಹಿಂದೂಸ್’ ಅನ್ನು ಹಿಂದಕ್ಕೆ ತೆಗೆದುಕೊಂಡಿತ್ತು. ಈ ಪುಸ್ತಕವು ಹಿಂದೂ ಧರ್ಮವನ್ನು ‘ಅವಹೇಳನ’ ಮಾಡುತ್ತದೆ ಎಂದು ಕೆಲವು ಗುಂಪುಗಳು ದೂರುಗಳನ್ನು ಸಲ್ಲಿಸಿತ್ತು.

ಇದನ್ನೂ ಓದಿ: ವರವರ ರಾವ್‌ ಕೃತಿ ಪ್ರಕಟಣೆ ವಿಳಂಬ: ಸರ್ಕಾರಕ್ಕೆ ಹೆದರಿತೇ ಪೆಂಗ್ವಿನ್‌ ಪ್ರಕಾಶನ ಸಂಸ್ಥೆ?

ಈ ವರ್ಷದ ಆರಂಭದಲ್ಲಿ, ಅಂಬೇಡ್ಕರ್ ಜಯಂತಿಯಂದು (ಏಪ್ರಿಲ್ 14), ಪೆಂಗ್ವಿನ್ ರಾಂಡಮ್ ಹೌಸ್, ‘ದಿ ದಲಿತ್‌ ಟ್ರುತ್‌’ ಪುಸ್ತಕವನ್ನು ಬಿಡುಗಡೆ ಮಾಡಿತ್ತು. ಅದು, ಪ್ರಸ್ತುತ ದಲಿತರ ಸ್ಥಿತಿಯನ್ನು, ಆರ್ಥಿಕವಾಗಿ, ಸಾಮಾಜಿಕವಾಗಿ ಮತ್ತು ರಾಜಕೀಯವಾಗಿ ಅಂಬೇಡ್ಕರ್ ಅವರ ಪ್ರಸ್ತುತತೆಯನ್ನು ವಿಶ್ಲೇಷಿಸಿ, ಸಬಲೀಕರಣದ ಹೊಸ ಮಾರ್ಗವನ್ನು ರೂಪಿಸುವ ಬಗ್ಗೆ ಮಾತನಾಡುತ್ತದೆ.

‘ದಿ ದಲಿತ್ ಟ್ರುತ್’ ಬಿಡುಗಡೆಯಾದ ಒಂದು ತಿಂಗಳೊಳಗೆ, ವರವರ ರಾವ್ ಅವರ ಇತ್ತೀಚಿನ ಕವನಗಳ ಸಂಗ್ರಹವು ಪೆಂಗ್ವಿನ್ ರಾಂಡಮ್ ಹೌಸ್‌ನ ಕಾನೂನು ತಂಡದ ಕೈಯಲ್ಲಿ ಸೆನ್ಸಾರ್‌ಶಿಪ್‌ಗೆ ಒಳಗಾಗಿದೆ ಎಂದು ದಿ ಕ್ವಿಂಟ್ ವರದಿ ಹೇಳಿದೆ. ವರವರ ರಾವ್ ಅವರ ಪುಸ್ತಕದ ಒಪ್ಪಂದಕ್ಕೆ 2020 ರಲ್ಲಿ ಸಹಿ ಹಾಕಲಾಯಿತು ಮತ್ತು ಪ್ರಕಾಶಕರು ಅದನ್ನು 2021 ರ ಮಧ್ಯದಲ್ಲಿ ಬಿಡುಗಡೆ ಮಾಡುವುದಾಗಿ ಹೇಳಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. Because of group of ppl like you guys Mogals and British ruled us….why you ppl called Kesari Bayotpaadane….it’s not Bayotpaadane….first understand Bayotpaadane meaning then spread your divide and rule agenda

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...