Homeಕರ್ನಾಟಕಬಿಜೆಪಿ ನಾಯಕರಿಂದ ಪ್ರವಾದಿ ನಿಂದನೆ ಪ್ರಕರಣ: ಕತಾರ್‌, ಕುವೈತ್‌, ಇರಾನ್‌ ದೇಶಗಳಿಂದ ಭಾರತ ರಾಯಭಾರಿಗೆ ಸಮನ್ಸ್‌

ಬಿಜೆಪಿ ನಾಯಕರಿಂದ ಪ್ರವಾದಿ ನಿಂದನೆ ಪ್ರಕರಣ: ಕತಾರ್‌, ಕುವೈತ್‌, ಇರಾನ್‌ ದೇಶಗಳಿಂದ ಭಾರತ ರಾಯಭಾರಿಗೆ ಸಮನ್ಸ್‌

- Advertisement -
- Advertisement -

ಪ್ರವಾದಿ ಮುಹಮ್ಮದ್ ಕುರಿತು ಇಬ್ಬರು ಬಿಜೆಪಿ ನಾಯಕರು ನೀಡಿರುವ ಹೇಳಿಕೆಗಳಿಂದಾಗಿ ಇಸ್ಲಾಮಿಕ್ ರಾಷ್ಟ್ರಗಳಲ್ಲಿ ತೀವ್ರ ಹಿನ್ನಡೆ ಉಂಟಾಗುತ್ತಿದೆ. ಭಾರತೀಯ ಉತ್ಪನ್ನಗಳನ್ನು ಬಹಿಷ್ಕರಿಸಬೇಕೆಂಬ ಕೂಗು ಹೆಚ್ಚಾದ ಹಿನ್ನೆಲೆಯಲ್ಲಿ ಕತಾರ್, ಕುವೈತ್ ಮತ್ತು ಇರಾನ್ ದೇಶಗಳು ಭಾರತೀಯ ರಾಯಭಾರಿಗೆ ಸಮನ್ಸ್‌ ನೀಡಿವೆ.

ಕತಾರ್‌ನಲ್ಲಿರುವ ಭಾರತದ ರಾಯಭಾರಿ ದೀಪಕ್ ಮಿತ್ತಲ್ ಸಮನ್ಸ್ ನೀಡಿರುವ ಕತಾರ್‌, “ಇಂತಹ ಇಸ್ಲಾಮೋಫೋಬಿಕ್ ಹೇಳಿಕೆಗಳನ್ನು ಶಿಕ್ಷೆಯಿಲ್ಲದೆ ಮುಂದುವರಿಸಲು ಅವಕಾಶ ನೀಡುವುದು ಮಾನವ ಹಕ್ಕುಗಳ ರಕ್ಷಣೆಗೆ ಗಂಭೀರ ಅಪಾಯವನ್ನುಂಟುಮಾಡುತ್ತದೆ. ಇದು ಮತ್ತಷ್ಟು ಪೂರ್ವಾಗ್ರಹಗಳಿಗೆ ಕಾರಣವಾಗಬಹುದು. ಹಿಂಸೆ ಮತ್ತು ದ್ವೇಷವನ್ನು ಸೃಷ್ಟಿಸಬಹುದು” ಎಂದು ತಿಳಿಸಿದೆ.

“ಈ ಪ್ರತಿಕೂಲ ಹೇಳಿಕೆಗಳಿಗೆ ಸಾರ್ವಜನಿಕವಾಗಿ ಕ್ಷಮೆಯಾಚಿಸಬೇಕು” ಎಂದು ಕುವೈತ್‌ ಒತ್ತಾಯಿಸಿದೆ. “ಇದರ ಮುಂದುವರಿಕೆಯು ದ್ವೇಷವನ್ನು ಹೆಚ್ಚಿಸುತ್ತದೆ” ಎಂದು ಕುವೈತ್‌ ಆತಂಕ ವ್ಯಕ್ತಪಡಿಸಿದೆ.

“ಭಾರತೀಯ ಟಿವಿ ಶೋನಲ್ಲಿ ಪ್ರವಾದಿ ಮುಹಮ್ಮದ್ ವಿರುದ್ಧ ಅವಮಾನ” ಎಂಬ ಸುದ್ದಿಯನ್ನು ಇರಾನ್ ಇಂಟರ್ನ್ಯಾಷನಲ್ ಇಂಗ್ಲಿಷ್ ವರದಿ ಮಾಡಿದ್ದು, ಇರಾನ್‌ನ ವಿದೇಶಾಂಗ ವ್ಯವಹಾರಗಳ ಸಚಿವಾಲಯವು ಟೆಹ್ರಾನ್‌ನಲ್ಲಿರುವ ಭಾರತೀಯ ರಾಯಭಾರಿಗೆ ಸಮನ್ಸ್‌ ನೀಡಿದೆ.

ಈ ಹೇಳಿಕೆ ಸರ್ಕಾರದ ಅಭಿಪ್ರಾಯ ಆಗಿರುವುದಿಲ್ಲ ಎಂದು ಭಾರತ ಸ್ಪಷ್ಟಪಡಿಸಿದ್ದು, “ಆಡಳಿತಾರೂಢ ಬಿಜೆಪಿ, ತನ್ನ ನಾಯಕರ ವಿರುದ್ಧ ಕ್ರಮ ಕೈಗೊಂಡಿದೆ” ಎಂಬ ವಿಷಯವನ್ನು ತಿಳಿಸಿದೆ.

ಕತಾರ್‌ ಪ್ರಧಾನಿ ಶೇಖ್ ಖಾಲಿದ್ ಬಿನ್ ಖಲೀಫಾ ಬಿನ್ ಅಬ್ದುಲಜೀಜ್ ಅಲ್ ಥಾನಿ ಅವರನ್ನು ಭಾರತದ ಉಪರಾಷ್ಟ್ರಪತಿ ಎಂ ವೆಂಕಯ್ಯ ನಾಯ್ಡು ಅವರು ಭೇಟಿ ಮಾಡುವ ನಡುವೆ ಕತಾರ್ ಖಂಡನೆ ಹೊರಬಿದ್ದಿದೆ.

ಕಳೆದ ವಾರ ದೇಶಾದ್ಯಂತ ನಡೆದ ಸರಣಿ ಕೋಮು ಘಟನೆಗಳ ಹಿನ್ನಲೆಯಲ್ಲಿ, ಬಿಜೆಪಿ ರಾಷ್ಟ್ರೀಯ ವಕ್ತಾರರಾದ ನೂಪುರ್ ಶರ್ಮಾ ಅವರು ಟಿವಿ ಡಿಬೇಟ್‌ ಸಂದರ್ಭದಲ್ಲಿ ಪ್ರವಾದಿಯನ್ನು ಅವಮಾನಿಸುವ ಹೇಳಿಕೆ ನೀಡಿದ್ದರು. ನವೀನ್ ಜಿಂದಾಲ್ ಅವರು ಪ್ರವಾದಿ ಕುರಿತು ಟ್ವೀಟ್ ಮಾಡಿ, ನಂತರ ಡಿಲೀಟ್‌ ಮಾಡಿದ್ದರು.

ಬಿಜೆಪಿ ಕ್ರಮ ವಹಿಸಿದ ನಂತರ ತಮ್ಮ ಹೇಳಿಕೆಗಳನ್ನು ನೂಪುರ್‌ ಶರ್ಮಾ, ನವೀನ್ ಜಿಂದಾಲ್ ವಾಪಸ್‌ ಪಡೆದಿದ್ದಾರೆ. ಬಿಜೆಪಿ ಈ ಇಬ್ಬರು ನಾಯಕರನ್ನು ಪಕ್ಷದಿಂದ ಉಚ್ಚಾಟಿಸಿದೆ. ಬಿಜೆಪಿ ಆಡಳಿತವಿರುವ ಉತ್ತರ ಪ್ರದೇಶದಲ್ಲಿ ಸಮಸ್ಯೆ ಉಲ್ಬಣಿಸಿದೆ. ಶುಕ್ರವಾರದ ಪ್ರಾರ್ಥನೆಯ ನಂತರ ಎರಡು ಗುಂಪುಗಳ ಘರ್ಷಣೆಯಲ್ಲಿ ಕಾನ್ಪುರದಲ್ಲಿ 40 ಜನರು ಗಾಯಗೊಂಡಿದ್ದಾರೆ.

“ಯಾವುದೇ ಪಂಥ ಅಥವಾ ಧರ್ಮವನ್ನು ಅವಮಾನಿಸುವ ಯಾವುದೇ ಸಿದ್ಧಾಂತದ ವಿರುದ್ಧವಿದ್ದೇವೆ” ಎಂದು ಬಿಜೆಪಿ ಹೇಳಿದೆ. “ಅಂತಹ ಜನರನ್ನು ಅಥವಾ ವಿಚಾರಧಾರೆಗಳನ್ನು ನಾವು ಪ್ರೊತ್ಸಾಹಿಸುವುದಿಲ್ಲ” ಎಂದು ಬಿಜೆಪಿ ಸ್ಪಷ್ಟಪಡಿಸಿದೆ.

ಬಿಜೆಪಿ ಹೇಳಿಕೆಯನ್ನು ಕಸದಬುಟ್ಟಿಗೆ ತಳ್ಳಿದ ಕಾಂಗ್ರೆಸ್, “ಇದು ಸ್ಪಷ್ಟವಾದ ನಕಲಿ ನೆಪವಲ್ಲದೆ ಬೇರೇನೂ ಅಲ್ಲ, ಇದು ಸ್ಪಷ್ಟವಾಗಿ ಪ್ರಹಸನವಷ್ಟೇ. ಆಗಿರುವ ಹಾನಿಯ ನಿಯಂತ್ರಣದ ಮತ್ತೊಂದು ಪ್ರಯತ್ನವಷ್ಟೇ” ಎಂದಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಜು ಪಟ್ನಾಯಕ್ ವಿರುದ್ಧ ಹೇಳಿಕೆ : ಬೇಷರತ್ ಕ್ಷಮೆಯಾಚಿಸಿದ ಬಿಜೆಪಿ ಸಂಸದ ನಿಶಿಕಾಂತ್ ದುಬೆ

ಒಡಿಶಾದ ಮಾಜಿ ಮುಖ್ಯಮಂತ್ರಿ ಬಿಜು ಪಟ್ನಾಯಕ್ ಅವರ ಕುರಿತು ನೀಡಿದ ಹೇಳಿಕೆ ವಿರುದ್ದ ದೇಶದಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾದ ಹಿನ್ನೆಲೆ, ಬಿಜೆಪಿ ಸಂಸದ ನಿಶಿಕಾಂತ್ ದುಬೆ ಬುಧವಾರ (ಏ.1) ಬೇಷರತ್ ಕ್ಷಮೆಯಾಚಿಸಿದ್ದಾರೆ. "ಬಿಜು ಬಾಬು...

ಮಹಾರಾಷ್ಟ್ರ: ‘ನಿನ್ನ ಮಗಳನ್ನು ನನ್ನ ಬಳಿ ಕಳುಹಿಸು’; ಬಂಧಿತ ಮಹಿಳಾ ಆರೋಪಿಗೆ ಲೈಂಗಿಕ ಕಿರುಕುಳ ನೀಡಿದ್ದ ಪೊಲೀಸ್ ಅಮಾನತು 

ಮಹಾರಾಷ್ಟ್ರ: ಅಕೋಲಾದಲ್ಲಿ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಕಸ್ಟಡಿಯಲ್ಲಿರುವ ಮಹಿಳೆಯೊಬ್ಬರಿಂದ ಲೈಂಗಿಕ ಕಿರುಕುಳಕ್ಕೆ ಬೇಡಿಕೆ ಇಟ್ಟಿದ್ದ ಮತ್ತು ಆಕೆಯ ಮಗಳನ್ನು ತನ್ನ ಬಳಿಗೆ ಕಳುಹಿಸುವಂತೆ ಕೇಳಿದ್ದಕ್ಕಾಗಿ ಸಹಾಯಕ ಪೊಲೀಸ್ ಸಬ್-ಇನ್ಸ್‌ಪೆಕ್ಟರ್ (ಎಎಸ್‌ಐ) ಒಬ್ಬರನ್ನು ಅಮಾನತುಗೊಳಿಸಲಾಗಿದೆ.  80...

ನಾಗ್ಪುರ-ಮುಂಬೈ ಎಕ್ಸ್‌ಪ್ರೆಸ್‌ವೇಯಲ್ಲಿ ಅಪಘಾತ : 8 ಮಹಿಳಾ ಕಾರ್ಮಿಕರು ಸಾವು

ವೇಗವಾಗಿ ಬಂದ ಟ್ರಕ್ ಟೆಂಪೋಗೆ ಡಿಕ್ಕಿ ಹೊಡೆದ ಪರಿಣಾಮ ಎಂಟು ಮಹಿಳಾ ಕಾರ್ಮಿಕರು ಸಾವನ್ನಪ್ಪಿ, ಮೂವರು ಗಾಯಗೊಂಡ ಘಟನೆ ಮಹಾರಾಷ್ಟ್ರದ ಜಲ್ನಾ ಜಿಲ್ಲೆಯ ನಾಗ್ಪುರ-ಮುಂಬೈ ಎಕ್ಸ್‌ಪ್ರೆಸ್‌ವೇಯಲ್ಲಿ ಬುಧವಾರ (ಏ.1) ಸಂಜೆ ನಡೆದಿದೆ. ಎಕ್ಸ್‌ಪ್ರೆಸ್‌ವೇಯ...

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...