Homeಮುಖಪುಟವಿದ್ಯಾರ್ಥಿಗಳಿಗೆ ಭಗವದ್ಗೀತೆ ಕಲಿಸಲು ಮುಂದಾದ ಮಧ್ಯಪ್ರದೇಶ ಸರ್ಕಾರ

ವಿದ್ಯಾರ್ಥಿಗಳಿಗೆ ಭಗವದ್ಗೀತೆ ಕಲಿಸಲು ಮುಂದಾದ ಮಧ್ಯಪ್ರದೇಶ ಸರ್ಕಾರ

- Advertisement -
- Advertisement -

ಮುಂದಿನ ಶೈಕ್ಷಣಿಕ ವರ್ಷದಿಂದ ದ್ವಿತೀಯ ವರ್ಷದ ಪದವಿ ವಿದ್ಯಾರ್ಥಿಗಳಿಗೆ ಭಗವದ್ಗೀತೆಯನ್ನು ಎಲೆಕ್ಟಿವ್ ಸಬ್ಜೆಕ್ಟ್ ಆಗಿ ಪರಿಚಯಿಸಲು ಮಧ್ಯಪ್ರದೇಶ ಸರ್ಕಾರ ಯೋಜಿಸುತ್ತಿದೆ ಎಂದು ಅಧಿಕಾರಿಗಳು ತಿಳಿಸಿರುವುದಾಗಿ ಹಿಂದೂಸ್ತಾನ್‌ ಟೈಮ್ಸ್ ವರದಿ ಮಾಡಿದೆ. ರಾಜ್ಯದ 1,360 ಕಾಲೇಜುಗಳಲ್ಲಿ ಈ ಕ್ರಮ ಕೈಗೊಳ್ಳಲಾಗುತ್ತಿದೆ.

“ಹೊಸ ಶಿಕ್ಷಣ ನೀತಿಯ ಅಡಿಯಲ್ಲಿ, ವಿದ್ಯಾರ್ಥಿಗಳು ಆಧುನಿಕ ಶಿಕ್ಷಣವನ್ನು ಪಡೆಯಬೇಕು ಮತ್ತು ಶ್ರೀಮಂತ ಭಾರತೀಯ ಇತಿಹಾಸವನ್ನು ಕಲಿಯಬೇಕು. ಗೀತೆ ಮತ್ತು ರಾಮಾಯಣಗಳು ಕೇವಲ ಧಾರ್ಮಿಕ ಪುಸ್ತಕಗಳಲ್ಲ ಬದಲಾಗಿ ನಮಗೆ ಜೀವನ ಮೌಲ್ಯಗಳನ್ನು ಕಲಿಸುತ್ತವೆ. ಹೀಗಾಗಿ ವಿದ್ಯಾರ್ಥಿಗಳಲ್ಲಿ ಜೀವನದ ಮೌಲ್ಯಗಳನ್ನು ಬೆಳೆಸಲು ಇದನ್ನು ಮಾಡಲಾಗುತ್ತಿದೆ” ಎಂದು ರಾಜ್ಯ ಉನ್ನತ ಶಿಕ್ಷಣ ಸಚಿವ ಮೋಹನ್ ಯಾದವ್ ತಿಳಿಸಿದ್ದಾರೆ.

ಇದನ್ನೂ ಓದಿ: ಪಠ್ಯಪರಿಷ್ಕರಣೆಯ ಬೇರಡಗಿರುವುದು ’ರಾಷ್ಟ್ರೀಯ ಶಿಕ್ಷಣ ನೀತಿ 2020’ರಲ್ಲಿ

ಮಧ್ಯಪ್ರದೇಶದ ಉನ್ನತ ಶಿಕ್ಷಣ ಇಲಾಖೆಯ ಪಠ್ಯಕ್ರಮ ಸಮಿತಿಯ ಅಧಿಕಾರಿಯೊಬ್ಬರು, “ಭಗವದ್ಗೀತೆಯ ಬೋಧನೆಗಳನ್ನು ಅನುಸರಿಸುತ್ತಾ ಅದನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಂಡ ಪ್ರಸಿದ್ಧ ವ್ಯಕ್ತಿಗಳಾದ ಅನ್ನಿ ಬೆಸೆಂಟ್ ಅವರ ಉದಾಹರಣೆಗಳನ್ನು ಸಹ ಈ ಎಲೆಕ್ಟಿವ್ ಕೋರ್ಸ್‌ನಲ್ಲಿ ಸೇರಿಸಲಾಗುವುದು” ಎಂದಿದ್ದಾರೆ.

ಜೊತೆಗೆ, “ಇದರಲ್ಲಿ ಕೇವಲ ಶ್ಲೋಕಗಳು ಮತ್ತು ಅವುಗಳ ಅನುವಾದಗಳು ಮಾತ್ರವಲ್ಲ, ವಿದ್ಯಾರ್ಥಿಗಳನ್ನು ಮಾನಸಿಕವಾಗಿ ಸದೃಢರನ್ನಾಗಿಸಲು ಇದನ್ನು ವಿನ್ಯಾಸಗೊಳಿಸಲಾಗಿದೆ” ಎಂದು ಮಾಹಿತಿ ನೀಡಿದ್ದಾರೆ.

ರಾಜ್ಯ ಸರ್ಕಾರವು ಮೂರನೇ ವರ್ಷದ ವಿದ್ಯಾರ್ಥಿಗಳಿಗೆ ಚಾಣಕ್ಯನ ಕೃತಿಗಳನ್ನು ಐಚ್ಛಿಕ ವಿಷಯವಾಗಿ ಪರಿಚಯಿಸಲು ಯೋಜಿಸುತ್ತಿದೆ ಎಂದು ತಿಳಿಸಿದ್ದಾರೆ.

ಭಾರತೀಯ ಜನತಾ ಪಕ್ಷ (ಬಿಜೆಪಿ) ಆಡಳಿತದ ರಾಜ್ಯಗಳಾದ ಗುಜರಾತ್ ಮತ್ತು ಕರ್ನಾಟಕದಲ್ಲಿ ಈಗಾಗಲೇ ಭಗವದ್ಗೀತೆಯನ್ನು ಪಠ್ಯಕ್ರಮದ ಭಾಗವಾಗಿ ಪರಿಚಯಿಸುವ ಯೋಜನೆಗಳನ್ನು ಘೋಷಿಸಲಾಗಿದೆ.

ಇತ್ತ ರಾಜ್ಯದಲ್ಲಿ ಈಗಾಗಲೇ ಪಠ್ಯ ಪುಸ್ತಕ ಪರಿಷ್ಕರಣೆ ಭಾರಿ ವಿವಾದಕ್ಕೆ ಒಳಗಾಗಿದೆ. ಹುಡುಕಿದಷ್ಟು ಮತ್ತಷ್ಟೂ ತಪ್ಪುಗಳು, ಹುಳುಕುಗಳು ಕಾಣಿಸುತ್ತಲೇ ಇವೆ. ಹೀಗಾಗಿ ಹಳೆಯ ಪಠ್ಯ ಪುಸ್ತಕಗಳನ್ನೆ ಮಕ್ಕಳಿಗೆ ನೀಡಬೇಕು ಎಂದು ಚಿಂತಕರು, ಸಾಮಾಜಿಕ ಹೋರಾಟಗಾರರು ಸರ್ಕಾರವನ್ನು ತರಾಟೆಗೆ ತೆಗೆದುಕೊಳ್ಳುತ್ತಿದ್ದಾರೆ.


ಇದನ್ನೂ ಓದಿ: ಪಠ್ಯ ಪುಸ್ತಕದಲ್ಲಿ ‘ಆಡಿಸಿ ನೋಡು ಬೀಳಿಸಿ ನೋಡು’ ಹಾಡು: ಬರೆದವರ ಹೆಸರನ್ನೇ ಬದಲಿಸಿದ ಚಕ್ರತೀರ್ಥ ಸಮಿತಿ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಾಂಗ್ರೆಸ್ ಜೊತೆ ವಿಲೀನ? ಅದೆಲ್ಲ ಬರೀ ಸುಳ್ಳು ಎಂದ ಟಿಎಂಸಿ

ಕಾಂಗ್ರೆಸ್ ಪಕ್ಷದೊಂದಿಗೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ವಿಲೀನವಾಗಬಹುದು ಎಂಬ ವರದಿಗಳನ್ನು ಟಿಎಂಸಿ ಉನ್ನತ ಮೂಲಗಳು ಬುಧವಾರ (ಇಂದು) ಸಂಪೂರ್ಣವಾಗಿ ತಳ್ಳಿಹಾಕಿವೆ. "ನಮ್ಮ ಪಕ್ಷಕ್ಕೆ ಈ ಬಗ್ಗೆ ಯಾವುದೇ ಮಾಹಿತಿ ಇಲ್ಲ ಮತ್ತು ವಿಲೀನಕ್ಕೆ...

ಮೀನಾಕ್ಷಿ ನಟರಾಜನ್ ನಾಮಪತ್ರ ತಿರಸ್ಕಾರ : ಬಿಜೆಪಿಯ ಸೀಟ್ ಚೋರಿ?

ರಾಜ್ಯಸಭಾ ಚುನಾವಣೆಗೆ ಮಧ್ಯಪ್ರದೇಶದಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿದ್ದ ಮೀನಾಕ್ಷಿ ನಟರಾಜನ್ ಅವರ ನಾಮಪತ್ರವನ್ನು ಚುನಾವಣಾ ಆಯೋಗ ತಿರಸ್ಕರಿಸಿರುವುದು ದೇಶದಲ್ಲಿ ದೊಡ್ಡ ರಾಜಕೀಯ ಜಟಾಪಟಿಗೆ ಕಾರಣವಾಗಿದೆ. ಕಾಂಗ್ರೆಸ್ ಈ ವಿಚಾರವನ್ನು ಬಹಳ ಗಂಭೀರವಾಗಿ ಪರಿಗಣಿಸಿ ಬುಧವಾರ (ಜೂ. 10)...

ಒಳಮೀಸಲಾತಿ ನಾಡು ಕಂಡ ಸುದೀರ್ಘ ಹೋರಾಟದ ಕಥೆ

ಇದು ಬೆವರು ನಿಟ್ಟುಸಿರುಗಳ ಚಳವಳಿ. ತಮ್ಮ ಅನ್ನದ ಬಟ್ಟಲಿಗಾಗಿ ದಶಕಗಳ ಕಾಲ ಹಸಿವು, ಬಾಯಾರಿಕೆ, ನಿದ್ರೆ ಎಲ್ಲವನ್ನೂ ಬಿಟ್ಟು ನಡೆಸಿದ ಅಭೂತಪೂರ್ವ ಚಳವಳಿ. ರಾಜಕೀಯ ಚಕ್ರವ್ಯೂಹಗಳನ್ನು ಬೇಧಿಸಿ, ಸಾಂವಿಧಾನಿಕ ಹಕ್ಕನ್ನು ತಮ್ಮದಾಗಿಸಿಕೊಂಡ ಚಳವಳಿ....

‘ಗೋಮಾಂಸ’ ತಂದ ನೆಪ: ಅಸ್ಸಾಂನಲ್ಲಿ ಐವರು ಮುಸ್ಲಿಂ ವಿದ್ಯಾರ್ಥಿಗಳ ವಿರುದ್ಧ ಕ್ರಮ; ಸುಳ್ಳು ಪ್ರಕರಣದಡಿ ಒಂಟಿ ತಾಯಿ ಮತ್ತು ಅಪ್ರಾಪ್ತ ಮಗನ ಬಂಧನ

ಧಾರ್ಮಿಕ ಭಾವನೆಗೆ ಧಕ್ಕೆ ಎಂಬ ಹೆಸರಿನಲ್ಲಿ ಶಾಲಾ ಆವರಣಗಳೂ ಸಹ ಕೋಮು ರಾಜಕಾರಣದ ಪ್ರಯೋಗಶಾಲೆಗಳಾಗುತ್ತಿರುವುದಕ್ಕೆ ಅಸ್ಸಾಂನಿಂದ ಮತ್ತೊಂದು ಆಘಾತಕಾರಿ ಘಟನೆ ವರದಿಯಾಗಿದೆ. ಅಸ್ಸಾಂನ ಗೋಲ್‌ಪಾರ ಜಿಲ್ಲೆಯ ಸರ್ಕಾರಿ ಹೈಯರ್ ಸೆಕೆಂಡರಿ ಶಾಲೆಯೊಂದರಲ್ಲಿ ಮುಸ್ಲಿಂ...

ಪ್ರಧಾನಿ ನರೇಂದ್ರ ಮೋದಿಯ 12 ವರ್ಷದ ಸಾಧನೆ ಏನು? ಅವರು ಮುರಿದ ದಾಖಲೆಯಾದರೂ ಯಾವುದು?

ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು 2014ರಿಂದ ಸತತ 12ವರ್ಷಗಳು (4,399 ದಿನಗಳು) ಪ್ರಧಾನಿ ಹುದ್ದೆ ಅಲಂಕರಿಸುವ ಮೂಲಕ ದಾಖಲೆ ನಿರ್ಮಿಸಿದ್ದಾರೆ. ಮೋದಿ ನೇತೃತ್ವದ ಸರ್ಕಾರಕ್ಕೆ 12 ವರ್ಷ ತುಂಬಿದ ಹಿನ್ನೆಲೆ ಬಿಜೆಪಿ...

ಉತ್ತರಾಖಂಡ: ಮೇಲ್ಜಾತಿ ಯುವತಿ ಜೊತೆ ಸ್ನೇಹ ಬೆಳೆಸಿದ 18 ವರ್ಷದ ದಲಿತ ಯುವಕನ ಹತ್ಯೆ, ಸ್ನೇಹಿತನ ಮೇಲೂ ಮಾರಣಾಂತಿಕ ಹಲ್ಲೆ 

ದೇಶದಲ್ಲಿ ಜಾತಿ ವ್ಯವಸ್ಥೆಯ ಕರಾಳ ಮುಖ ಮತ್ತೊಮ್ಮೆ ಅನಾವರಣಗೊಂಡಿದೆ. ಉತ್ತರಾಖಂಡದ ನ್ಯೂ ತೆಹ್ರಿ ಜಿಲ್ಲೆಯ ಪ್ರತಾಪ್ ನಗರ ಬ್ಲಾಕ್ ವ್ಯಾಪ್ತಿಯಲ್ಲಿ ಮೇಲ್ಜಾತಿಯ ಅಪ್ರಾಪ್ತ ಯುವತಿಯೊಂದಿಗೆ ಸ್ನೇಹ ಬೆಳೆಸಿದ್ದಕ್ಕಾಗಿ 18 ವರ್ಷದ ದಲಿತ ಹದಿಹರೆಯದ...

ಟಿಎಂಸಿ ಬಂಡಾಯ : 20 ಸಂಸದರು ಪಕ್ಷ ತೊರೆದರೂ ಅನರ್ಹತೆ ತಪ್ಪಿದ್ದಲ್ಲ

ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಸುಮಾರು 20 ಲೋಕಸಭಾ ಸಂಸದರು ಪಕ್ಷದಿಂದ ಬೇರ್ಪಟ್ಟು ಪ್ರತ್ಯೇಕ ಗುಂಪು ರಚಿಸಲು ಸಜ್ಜಾಗಿದ್ದಾರೆ ಎಂಬ ವರದಿಗಳ ನಡುವೆ, ಕೇವಲ ಮೂರನೇ ಎರಡರಷ್ಟು ಸಂಸದರ ಬೆಂಬಲ ಹೊಂದಿರುವುದರಿಂದ ಮಾತ್ರ...

ಕಚ್ಚಿದ ಸೇಬನ್ನು ಅಭಿಮಾನಿಗಳತ್ತ ಎಸೆದ ಸಿಎಂ ಡಿ.ಕೆ. ಶಿವಕುಮಾರ್: ವಿಡಿಯೋ ವೈರಲ್

ರಾಜಕೀಯ ನಾಯಕರು ತಮಗೆ ಸಿಕ್ಕ ಹಾರ, ತುರಾಯಿ ಅಥವಾ ಹಣ್ಣುಗಳನ್ನು ಅಭಿಮಾನಿಗಳಿಗೆ ಹಂಚುವುದು ಹೊಸದೇನಲ್ಲ. ಆದರೆ, ತಾನು ಕಚ್ಚಿದ ಹಣ್ಣನ್ನು ಸಾರ್ವಜನಿಕವಾಗಿ ಜನರತ್ತ ಎಸೆಯುವುದು ಯಾವ ರೀತಿಯ ಸಂಸ್ಕೃತಿ ಎಂಬ ಪ್ರಶ್ನೆ ಮೂಡುತ್ತದೆ....

ವೈಜಾಗ್ ಸ್ಟೀಲ್ ಅಪಘಾತಕ್ಕೆ 8 ಮಂದಿ ಬಲಿ: ಸಿಬ್ಬಂದಿ ಕೊರತೆಯ ಬಗ್ಗೆ ಕಾರ್ಮಿಕ ಸಂಘಗಳ ಆರೋಪ: ಸಾವಿನ ಅಂಚಿನಲ್ಲೂ ಕುಟುಂಬಕ್ಕಾಗಿ ಮಿಡಿದ ಕಾರ್ಮಿಕ

ಆಂಧ್ರಪ್ರದೇಶದ ವಿಶಾಖಪಟ್ಟಣದಲ್ಲಿರುವ ಪ್ರಸಿದ್ಧ ರಾಷ್ಟ್ರೀಯ ಇಸ್ಪತ್ ನಿಗಮ್ ಲಿಮಿಟೆಡ್ (RINL) ಉಕ್ಕು ಸ್ಥಾವರದಲ್ಲಿ ಸೋಮವಾರ (ಜೂನ್ 8, 2026) ಸಂಜೆ ಭೀಕರ ಕೈಗಾರಿಕಾ ದುರಂತವೊಂದು ಸಂಭವಿಸಿದೆ. ಸ್ಥಾವರದ ಸ್ಟೀಲ್ ಮೆಲ್ಟ್ ಶಾಪ್-1 (SMS-1)...

ಅಂದು ಪಿಣರಾಯಿ ಮನೆ ಮೇಲೆ ದಾಳಿ; ಈಗ ವೀಣಾ ವಿಜಯನ್‌ಗೆ ಸಮನ್ಸ್‌: ಹಿರಿಯ ಕಮ್ಯುನಿಸ್ಟ್‌ ನಾಯಕನ ಕುಟುಂಬದ ಮೇಲೆ ಇಡಿ ಕಣ್ಣು

ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಕೇರಳದ ಮಾಜಿ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರ ಮನೆ ಮೇಲೆ ಕಳೆದ ತಿಂಗಳು ಜಾರಿ ನಿರ್ದೇಶನಾಲಯ ದಾಳಿ ಮಾಡಿತ್ತು. ಕೊನೆಗೆ ಅಲ್ಲಿ ಏನೂ ಸಿಗದೆ ಬರಿಗೈನಲ್ಲಿ ಅಧಿಕಾರಿಗಳು...