ರಾಯಚೂರಿನಲ್ಲಿ ಕಲುಷಿತ ನೀರು ಸೇವಿಸಿ ಮೂವರು ಮೃತಪ್ಪಟ್ಟ ಪ್ರಕರಣದ ಬಗ್ಗೆ ಬೆಂಗಳೂರಿನಲ್ಲಿ ಮಾತನಾಡಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘಟನೆಯನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ ಎಂದಿದ್ದಾರೆ. ಮೃತರ ಕುಟುಂಬಗಳಿಗೆ ತಲಾ 5 ಲಕ್ಷ ಪರಿಹಾರ ಘೋಷಿಸಿದ್ದಾರೆ.
ರಾಯಚೂರಿನಲ್ಲಿ ಕಲುಷಿತ ನೀರು ಸೇವಿಸಿ ಮಲ್ಲಮ್ಮ, ಅಬ್ದುಲ್ ಗಫಾರ್ ಮತ್ತು ಮೊಹಮದ್ ನೂರ್ ಎಂಬ ಮೂವರು ಸಾವನ್ನಪ್ಪಿದ್ದರು. ಹಲವು ಮಂದಿ ಮೂತ್ರಪಿಂಡದ ಸಮಸ್ಯೆ ಸೇರಿದಂತೆ ಅಸ್ವಸ್ಥರಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ನಗರಸಭೆಯ ನಿರ್ಲಕ್ಷಕ್ಕೆ ರಾಯಚೂರು ನಾಗರಿಕ ವೇದಿಕೆಯು ರಾಯಚೂರು ಬಂದ್ ನಡೆಸಿದೆ.
ಇಂದು ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ, “ರಾಯಚೂರಿನಲ್ಲಿ ಕಲುಷಿತ ನೀರು ಸೇವಿಸಿ ಮೂವರು ತೀರಿಕೊಂಡಿರುವ ವಿಚಾರವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಇದನ್ನು ಸಂಪೂರ್ಣ ತನಿಖೆ ನಡೆಸಿ, ವರದಿ ನೀಡಲು ಅಧಿಕಾರಿಗಳಿಗೆ ತಿಳಿಸಲಾಗಿದೆ. ಮಳೆ ಬಂದು ಫೈಪ್ ಒಡೆದು ಹೀಗಾಗಿದೆ ಎಂದು ಕೆಲವರು ಹೇಳುತ್ತಿದ್ದಾರೆ. ಮತ್ತೆ ಕೆಲವರು ಬೇರೆ ಕಾರಣಯಿವೆ ಎನ್ನುತ್ತಾರೆ. ಹೀಗಾಗಿ ಟೆಕ್ನಿಕಲ್ ರಿಪೋರ್ಟ್ ತರಿಸುತ್ತೆವೆ” ಎಂದರು.
ಇದನ್ನೂ ಓದಿ: ‘ನಮ್ಮ ಹುಡುಗರು ಚಡ್ಡಿ ಸುಟ್ಟಿದ್ದಾರೆಯೇ ಹೊರತು ರಾಷ್ಟ್ರಧ್ವಜವನ್ನಲ್ಲ’ – ಡಿಕೆ ಶಿವಕುಮಾರ್
ರಾಯಚೂರಿನಲ್ಲಿ ಕಲುಷಿತ ನೀರು ಸೇವಿಸಿ ಮೂವರು ಅಸುನೀಗಿದ ಸುದ್ದಿ ತಿಳಿದು ಅತ್ಯಂತ ಬೇಸರವಾಯಿತು. ಈ ಪ್ರಕರಣವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ಈ ಬಗ್ಗೆ ಸಮಗ್ರ ತನಿಖೆ ನಡೆಸಿ, ವರದಿಯನ್ನು ನೀಡಲು ಸಂಬಂಧಪಟ್ಟಂತಹ ಅಧಿಕಾರಿಗಳಿಗೆ ಈಗಾಗಲೇ ಸೂಚನೆ ನೀಡಿದ್ದೇನೆ. pic.twitter.com/8XANvxnBJz
— Basavaraj S Bommai (@BSBommai) June 6, 2022
ಮುಂದುವರಿದು “ರಾಯಚೂರಿನ ಎಲ್ಲಾ ವಾರ್ಡ್‌ಗಳ ನೀರನ್ನು ಪರೀಕ್ಷೆ ಮಾಡಿಸಬೇಕು. ಕುಡಿಯುವ ನೀರಿನ ಸರ್ಟಿಫಿಕೇಷನ್ ಆಗಬೇಕು. ಇದರಲ್ಲಿ ಅಧಿಕಾರಿಗಳ ಲೋಪದೋಷ ಇದೆಯಾ ಎಂಬುದನ್ನು ಡಿವೈಎಸ್‌ಪಿ ನೇತೃತ್ವದಲ್ಲಿ ತನಿಖೆ ನಡೆಸಲಾಗುತ್ತದೆ. ತಪಿತಸ್ಥರು ಕಂಡುಬಂದರೆ ಅವರ ವಿರುದ್ಧ ಕ್ರಮ ಕೈಗೊಳ್ಳುತ್ತೆವೆ” ಎಂದರು.
ದುರಂತದಲ್ಲಿ ಮೃತಪಟ್ಟವರಿಗೆ ಮುಖ್ಯಮಂತ್ರಿ ನಿಧಿಯಿಂದ ತಲಾ 5 ಲಕ್ಷ ರೂಪಾಯಿ ಪರಿಹಾರ ನೀಡಲು ನಿರ್ಧಾರಿಸಲಾಗಿದೆ ಎಂದು ಮಾಹಿತಿ ನೀಡಿದರು.
ಈ ಜೊತೆಗೆ ರಾಯಚೂರು ನಗರಕ್ಕೆ ಕುಡಿಯುವ ನೀರಿನ ಸರಬರಾಜು ಮಾಡುವ ರಾಂಪುರದಲ್ಲಿರುವ ನೀರು ಶುದ್ಧಿಕರಣ ಘಟಕವನ್ನು ಕಳೆದ 16 ವರ್ಷಗಳಿಂದ ಸ್ವಚ್ಛಗೊಳಿಸಲಾಗಿಲ್ಲ ಎಂಬ ಗಂಭೀರ ಆರೋಪಗಳು ಕೇಳಿಬಂದಿವೆ.
ಇದನ್ನೂ ಓದಿ: ಬಲಪಂಥೀಯ ಟ್ರೋಲರ್ ಒಬ್ಬನ ಕೈಗೆ ಪಠ್ಯ ಪರಿಷ್ಕರಣೆ ಜವಾಬ್ದಾರಿ..: ರೋಹಿತ್ ಚಕ್ರತೀರ್ಥ ಮಾಡಿದ ಅಸಹ್ಯದ ಪೋಸ್ಟ್‌ಗಳಿವು


