Homeಕರ್ನಾಟಕಕಾರ್ಕಳ: ರಸ್ತೆಗೆ ಗೋಡ್ಸೆ ಹೆಸರು; ಬೋರ್ಡ್ ತೆರವು ಮಾಡಿಸಿದ ಕಾಂಗ್ರೆಸ್ ಮುಖಂಡರು

ಕಾರ್ಕಳ: ರಸ್ತೆಗೆ ಗೋಡ್ಸೆ ಹೆಸರು; ಬೋರ್ಡ್ ತೆರವು ಮಾಡಿಸಿದ ಕಾಂಗ್ರೆಸ್ ಮುಖಂಡರು

- Advertisement -
- Advertisement -

ಉಡುಪಿ ಜಿಲ್ಲೆ, ಕಾರ್ಕಳ ತಾಲ್ಲೂಕಿನ ಬೋಳ ಗ್ರಾಮ ಪಂಚಾಯಿತಿಗೆ ಸೇರಿದ ರಸ್ತೆಯೊಂದಕ್ಕೆ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರನ್ನು ಹತ್ಯೆ ಮಾಡಿದ ‘ನಾಥೂರಾಮ್‌ ಗೋಡ್ಸೆ’ ಹೆಸರನ್ನು ಯಾರೋ ಕಿಡಿಗೇಡಿಗಳು ಇಟ್ಟಿದ್ದು ವಿವಾದ ಸ್ವರೂಪ ಪಡೆದ ಬೆನ್ನಲ್ಲೇ ಸ್ಥಳೀಯ ಮುಖಂಡರು ಕ್ರಮ ವಹಿಸಿದ್ದಾರೆ.

ಕಾರ್ಕಳ ವಿಧಾನಸಭಾ ಕ್ಷೇತ್ರವನ್ನು ರಾಜ್ಯದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸುನಿಲ್‌ಕುಮಾರ್‌ ಅವರು ಪ್ರತಿನಿಧಿಸುತ್ತಿರುವುದು ವಿವಾದದ ಕೇಂದ್ರ ಸ್ಥಾನ ಪಡೆದ ಬಳಿಕ ‘ಗೋಡ್ಸೆ ರಸ್ತೆ’ ಫಲಕ ತೆರವಾಗಿದೆ.

“ಬೋಳ ಗ್ರಾಮ ಪಂಚಾಯತ್‌- ಪಡುಗಿರಿ ನಾಥೂರಾಮ್‌ ಗೋಡ್ಸೆ ರಸ್ತೆ” ಎಂದು ಬರೆಯಲಾಗಿರುವ ಮಾರ್ಗಸೂಚಿ ಫಲಕ ಹಾಕಲಾಗಿತ್ತು. ಬೋಳ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಸುಧಾ ಎಸ್.ಪೂಜಾರಿ ಅವರೊಂದಿಗೆ ‘ನಾನುಗೌರಿ.ಕಾಂ’ ಪ್ರತಿನಿಧಿ ಮಾತನಾಡಿದಾಗ, “ಹೌದು ಈ ಫಲಕ ಇರುವುದು ನಿಜ. ಆದರೆ ಯಾರು ಇದನ್ನು ಹಾಕಿದ್ದಾರೆಂಬ ಮಾಹಿತಿ ಇಲ್ಲ. ಯಾರೋ ಖಾಸಗಿ ವ್ಯಕ್ತಿಗಳು ಈ ರೀತಿಯ ಫಲಕವನ್ನು ಪಡುಗಿರಿ ರಸ್ತೆಯಲ್ಲಿ ನೆಟ್ಟಿದ್ದಾರೆ. ಕ್ರಮ ವಹಿಸಲಾಗುವುದು” ಎಂದು ತಿಳಿಸಿದ್ದರು.

ಫಲಕ ಹಾಕಿದ್ದ ಘಟನೆ ಬಗ್ಗೆ ಸಚಿವ ಸುನೀಲ್‌ ಕುಮಾರ್ ಪ್ರತಿಕ್ರಿಯಿಸಿದ್ದು, “ಫಲಕ ಹಾಕುವುದು ಅಥವಾ ಗೋಡ್ಸೆ ಹೆಸರಿಡುವುದು ಪಂಚಾಯತ್‌ನ ನಿರ್ಧಾರವಲ್ಲ. ಫಲಕವನ್ನು ಪಂಚಾಯತ್‌ ಹಾಕಿಲ್ಲ, ಯಾರೋ ಖಾಸಗಿ ವ್ಯಕ್ತಿಗಳು ಹಾಕಿದ್ದಾರೆ. ತನಿಖೆ ನಡೆಸಿ, ವಸ್ತುಸ್ಥಿತಿಯನ್ನು ಮುಂದಿಡಲಾಗುತ್ತದೆ” ಎಂದು ಹೇಳಿದ್ದಾರೆ.

ಆ ನಂತರದಲ್ಲಿ ಪಂಚಾಯತ್‌ ಸದಸ್ಯರು, ಕಾಂಗ್ರೆಸ್ ಮುಖಂಡರು, ಅಧಿಕಾರಿಗಳ ನೇತೃತ್ವದಲ್ಲಿ ತೆರಳಿ ಫಲಕ ತೆರವಿಗೆ ಕ್ರಮ ವಹಿಸಿದ್ದಾರೆ.

“ನಾಥೂರಾಮ್‌ ಗೋಡ್ಸೆ ಫಲಕವನ್ನು ಇಂದು ಬೆಳಿಗ್ಗೆ ತೆರವು ಮಾಡಲಾಗಿದೆ” ಎಂದು ಬೋಳ ಗ್ರಾಪಂ ಉಪಾಧ್ಯಕ್ಷ ಕಿರಣ್‌ಕುಮಾರ್ ಶೆಟ್ಟಿಯವರು ‘ನಾನುಗೌರಿ.ಕಾಂ’ಗೆ ತಿಳಿಸಿದ್ದಾರೆ.

ಸ್ಥಳಕ್ಕೆ ಆಗಮಿಸಿದ ಯುವ ಕಾಂಗ್ರೆಸ್ ಮುಖಂಡರು ಪ್ರತಿಭಟನೆಯ ಎಚ್ಚರಿಕೆಯನ್ನು ನೀಡಿದ್ದರು.

ಯುವ ಕಾಂಗ್ರೆಸ್ ಮುಖಂಡ ದೀಪಕ್‌ ಕೋಟ್ಯಾನ್‌ ಮಾತನಾಡಿ, “ಯಾರೋ ಕಿಡಿಗೇಡಿಗಳು ದೇಶದ ಮೊದಲ ಭಯೋತ್ಪಾದಕ ನಾಥೂರಾಮ್‌ ಗೋಡ್ಸೆ ಹೆಸರನ್ನು ಯಾರೋ ಇಟ್ಟಿದ್ದರು. ಬ್ಲಾಕ್‌ ಕಾಂಗ್ರೆಸ್ ಮುಖಂಡರು ಪ್ರತಿಭಟನೆಯ ಎಚ್ಚರಿಕೆ ನೀಡಿದೆವು. ಇದರಿಂದ ಎಚ್ಚೆತ್ತ ಬೋಳ ಗ್ರಾಪಂ ಪಿಡಿಒ ಹಾಗೂ ಆಡಳಿತ ವರ್ಗ ಬೋರ್ಡ್ ತೆರವುಗೊಳಿಸಿದೆ” ಎಂದು ತಿಳಿಸಿದ್ದಾರೆ.

“ಬೋರ್ಡ್ ಹಾಕುವಂತಹ ಘಟನೆಗಳು ಖಂಡನೀಯ ಹಾಗೂ ಖೇದಕರ. ಬಿಜೆಪಿ ಸರ್ಕಾರದ ಅವಧಿಯಲ್ಲಿ ದೇಶ ಎತ್ತ ಸಾಗುತ್ತಿದೆ? ಯುವಕರಿಗೆ ಎಂತಹ ಸಂದೇಶವನ್ನು ನೀಡುತ್ತಿದ್ದಾರೆ ಎಂಬುದು ಕಳವಳಕಾರಿ ವಿಚಾರವಾಗಿದೆ. ಮುಂದೆ ಏನಾದರೂ ಇದು ಮರುಕಳುಸಿದರೆ ಉಡುಪಿ ಕಾಂಗ್ರೆಸ್‌ ಘಟಕವು ಉಗ್ರ ಹೋರಾಟವನ್ನು ಹಮ್ಮಿಕೊಳ್ಳಲಿದೆ” ಎಂದು ಎಚ್ಚರಿಕೆ ನೀಡಿದ್ದಾರೆ.

ಕಾಂಗ್ರೆಸ್ ನಾಯಕರಾದ ಬಿ.ಕೆ.ಹರಿಪ್ರಸಾದ್‌ ಪ್ರತಿಕ್ರಿಯೆ ನೀಡಿದ್ದು, “ಈ ನೆಲದಲ್ಲಿ ಗೋಡ್ಸೆ ಸಂತತಿಗಳನ್ನ ಬುಡ ಸಮೇತ ಕಿತ್ತು ಹಾಕಬೇಕು. ಅದು ಥೇಟ್ ಕಾರ್ಕಳದ ರಸ್ತೆಗೆ ಇಟ್ಟಿದ್ದ ಗೋಡ್ಸೆಯ ನಾಮಫಲಕವನ್ನ ಕಿತ್ತು ಹಾಕಿದಂತೆ. ನಾಮ ಫಲಕ ತೆರವುಗೊಳಿಸಿ ಅದೇ ಜಾಗದಲ್ಲಿ ಶ್ರೀ ನಾರಾಯಣ ಗುರುಗಳ ಹೆಸರಿಡಲು ಸ್ಥಳೀಯ ಆಡಳಿತಕ್ಕೆ ಮನವಿ ಮಾಡಿರುವ ಯುವ ಕಾಂಗ್ರೆಸ್ ಕಾರ್ಯಕರ್ತರ ಕೆಲಸಕ್ಕೆ ಸಲಾಂ” ಎಂದಿದ್ದಾರೆ.

ಘಟನೆ ಬೆಳಕಿಗೆ ಬಂದ ತಕ್ಷಣ ಟ್ವೀಟ್ ಮಾಡಿರುವ ಕಾಂಗ್ರೆಸ್ ನಾಯಕ ಪ್ರಕಾಶ್ ರಾಥೋಡ್‌, “ತಾಲಿಬಾನಿಗಳನ್ನು ಬಿಜೆಪಿ ಉಗ್ರಗಾಮಿಗಳು ಎಂದು ಕರೆಯುತ್ತಿತ್ತು. ಭಾರತದಲ್ಲಿ ತಾಲಿಬಾನ್ ನಿಷೇಧಿತ ಸಂಘಟನೆ. ಆದರೆ, ಕೇಂದ್ರ ಸರ್ಕಾರ ಗೋಧಿ, ಔಷಧ, ಹಣ ಮುಂತಾದ ನೆರವನ್ನು ಅಫ್ಘನ್ ಸರ್ಕಾರಕ್ಕೆ ರವಾನೆ ಮಾಡಿ ತಾಲಿಬಾನಿಗಳ ಜತೆ ಸ್ನೇಹ-ಪ್ರೀತಿಯ ಅಪ್ಪುಗೆ ಮಾಡುತ್ತಿದ್ದಂತೆ ಉಡುಪಿಯಲ್ಲಿ ದೇಶದ್ರೋಹಿ ಗೋಡ್ಸೆ ರಸ್ತೆ ತಲೆ ಎತ್ತಿದೆ” ಎಂದಿದ್ದಾರೆ.

ಇದನ್ನೂ ಓದಿರಿ: ಪಠ್ಯ ಪುಸ್ತಕದಲ್ಲಿ ‘ಆಡಿಸಿ ನೋಡು ಬೀಳಿಸಿ ನೋಡು’ ಹಾಡು: ಬರೆದವರ ಹೆಸರನ್ನೇ ಬದಲಿಸಿದ ಚಕ್ರತೀರ್ಥ ಸಮಿತಿ!

“ಮಹಾತ್ಮಗಾಂಧಿಯನ್ನು ಕೊಲ್ಲುವ ಮೂಲಕ ಸ್ವತಂತ್ರ ಭಾರತದಲ್ಲಿ ಭಯೋತ್ಪಾದನೆ ಉದ್ಘಾಟಿಸಿದ ಉಗ್ರ ನಾಥೂ ಗೋಡ್ಸೆ. ಭಾರತೀಯರ ಪಾಲಿಗೆ ಈತ ತಾಲಿಬಾನಿಗಳಿಗಿಂತ ಅತ್ಯುಗ್ರ ಪಾಪಿ. ತಾಲಿಬಾನಿಗಳ ಸ್ನೇಹಕ್ಕೆ ಕೈ ಚಾಚಿದ ಬಳಿಕ ಬಿಜೆಪಿಗೆ ಉಗ್ರರ ಬಗ್ಗೆ ಪ್ರೀತಿ ಹೆಚ್ಚಾಗುತ್ತಿದೆಯೇ?” ಎಂದು ಪ್ರಶ್ನಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ತಕ್ಷಣ ಎಚ್ಚೆತ್ತು ಫಲಕ ಕಿತ್ತೆಸೆದ ಎಲ್ಲರೂ ಅಭಿನಂದನಾರ್ಹರು! ಹೀಗೆ ಬಿಟ್ಟರೆ ಒಂದು ದಿನ, ನರಹಂತಕ ವೀರಪ್ಪನ್ ನಿಂದ ಹಿಡಿದು ನರಭಕ್ಷಕ ಇದೀ ಅಮೀನ್ ವರೆಗೆ ಎಲ್ಲಾ ಜನದ್ರೋಹಿಗಳೂ ನಾಗರೀಕ ಸಮಾಜದಲ್ಲಿ ಸ್ಮರಣೆಯ ಸ್ಥಾನ ಪಡೆಯುತ್ತಾರೆ – ‘ಚಕ್ರ’ದಿಂದ ‘ತೀರ್ಥ’ ಬಂದಂತೆ!

LEAVE A REPLY

Please enter your comment!
Please enter your name here

- Advertisment -

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....