Homeಮುಖಪುಟಹೈದರಾಬಾದ್: ಮತ್ತಿಬ್ಬರು ಬಾಲಕಿಯರ ಮೇಲಿನ ಅತ್ಯಾಚಾರ ಪ್ರಕರಣ ಬೆಳಕಿಗೆ

ಹೈದರಾಬಾದ್: ಮತ್ತಿಬ್ಬರು ಬಾಲಕಿಯರ ಮೇಲಿನ ಅತ್ಯಾಚಾರ ಪ್ರಕರಣ ಬೆಳಕಿಗೆ

- Advertisement -
- Advertisement -

ಇತ್ತೀಚೆಗೆ ಜುಬ್ಲಿ ಹಿಲ್ಸ್‌ನಲ್ಲಿ ಅಪ್ರಾಪ್ತ ಬಾಲಕಿ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದ ಆಘಾತದಿಂದ ಚೇತರಿಸಿಕೊಳ್ಳುತ್ತಿರುವ ಹೈದರಾಬಾದ್‌ ನಗರದಲ್ಲಿ ಮತ್ತೆ ಎರಡು ಅತ್ಯಾಚಾರ ಪ್ರಕರಣಗಳು ಬೆಳಕಿಗೆ ಬಂದಿವೆ.

ಕಳೆದ ಮೇ 31 ರಂದು ಇಬ್ಬರು ಬಾಲಕಿಯರ ಮೇಲೆ ಅತ್ಯಾಚಾರ ಎಸಗಲಾಗಿದೆ. ಭಾನುವಾರ (ಜೂನ್ 5) ಈ ಎರಡೂ ಪ್ರಕರಣಗಳು ಬೆಳಕಿಗೆ ಬಂದಿವೆ. ಮೊದಲ ಘಟನೆಯಲ್ಲಿ ಇಬ್ಬರು ಆರೋಪಿಗಳನ್ನು ಬಂಧಿಸಿದ್ದೇವೆ. ಎರಡನೇ ಪ್ರಕರಣದ ಆರೋಪಿಯನ್ನು ಹುಡುಕಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಘಟನೆ ಕುರಿತು ಮಾಹಿತಿ ನೀಡಿರುವ ಡೆಪ್ಯುಟಿ ಪೊಲೀಸ್ ಕಮಿಷನರ್ (ದಕ್ಷಿಣ ವಲಯ) ಪಿ.ಸಾಯಿ ಚೈತನ್ಯ, “ಮೇ 31 ರಂದು 12 ವರ್ಷದ ಬಾಲಕಿ ಕಾಣೆಯಾಗಿದ್ದಾರೆ ಎಂದು ವರದಿಯಾಗಿರತ್ತು. ಜೂನ್ 1 ರಂದು ಪೊಲೀಸರು ಗಸ್ತು ಹಾಕುವಾಗ ಸುಲ್ತಾನ್‌ಶಾಹಿ ಪ್ರದೇಶದಲ್ಲಿ ಬಾಲಕಿಯನ್ನು ಕಂಡು ಸ್ಥಳೀಯ ಪೊಲೀಸ್ ಠಾಣೆಗೆ ಕರೆತಂದಿದ್ದಾರೆ. ಆಕೆಯ ಹೇಳಿಕೆಯನ್ನು ದಾಖಲಿಸಿಕೊಂಡು ವೈದ್ಯಕೀಯ ಪರೀಕ್ಷೆಗೆ ಕಳುಹಿಸಲಾಗಿದೆ” ಎಂದಿದ್ದಾರೆ.

ಇದನ್ನೂ ಓದಿ: ಆಂಧ್ರಪ್ರದೇಶ: ದಲಿತ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ; ತಿಂಗಳುಗಳ ಬಳಿಕ ಪ್ರಕರಣ ಬಯಲು

ಮುಂದುವರೆದು, “ಬಾಲಕಿಯ ಹೇಳಿಕೆ ಪ್ರಕಾರ, ಆಕೆ ತನ್ನ ಅಜ್ಜಿಯ ಮನೆಯಿಂದ ತಮ್ಮ ಮನೆಗೆ ಹೋಗುತ್ತಿದ್ದಾಗ ಕ್ಯಾಬ್ ಡ್ರೈವರ್ ಆಕೆಯನ್ನು ಕೊಂಡೂರ್ಗ್ ಗ್ರಾಮದಲ್ಲಿರುವ ತನ್ನ ಸ್ನೇಹಿತನ ಮನೆಗೆ ಕರೆದೊಯ್ದ, ಅಲ್ಲಿ ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ. ಜೂನ್ 1 ರ ಮುಂಜಾನೆ ಕ್ಯಾಬ್ ಡ್ರೈವರ್ ಬಾಲಕಿಯನ್ನು ಸುಲ್ತಾನ್‌ಶಾಹಿಯಲ್ಲಿ ಬಿಟ್ಟು ಹೋಗಿದ್ದಾರೆ.”

“ಆರೋಪಿಗಳ ಪತ್ತೆಗೆ ಎರಡು ಪೊಲೀಸ್ ತಂಡಗಳನ್ನು ರಚಿಸಲಾಗಿದೆ. ಜೂನ್ 3 ರಂದು ಪೊಲೀಸರು ಇಬ್ಬರು ಆರೋಪಿಗಳಾದ ಕ್ಯಾಬ್ ಚಾಲಕ ಶೇಕ್ ಕಲೀಮ್ ಅಲಿ (36) ಮತ್ತು ಮೊಹಮ್ಮದ್ ಲುಕ್ಮಾನ್ ಅಹ್ಮದ್ (36) ಅವರನ್ನು ಬಂಧಿಸಿದ್ದಾರೆ. ಇಬ್ಬರು ಆರೋಪಿಗಳನ್ನು ಎರಡು ವಾರಗಳ ನ್ಯಾಯಾಂಗ ಬಂಧನಕ್ಕೆ ಕಳುಹಿಸಲಾಗಿದೆ” ಎಂದು ಡೆಪ್ಯುಟಿ ಪೊಲೀಸ್ ಕಮಿಷನರ್ ಹೇಳಿದ್ದಾರೆ.

ಆರೋಪಿಗಳ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 366 (ಎ) (ಅಪಹರಣ), 376 (ಅತ್ಯಾಚಾರ) ಜೊತೆಗೆ ಆರೋಪಿಗಳ ವಿರುದ್ಧ ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ.

ಮತ್ತೊಂದು ಪ್ರಕರಣದಲ್ಲಿ ಈವೆಂಟ್ ಮ್ಯಾನೇಜ್‌ಮೆಂಟ್ ಕಂಪನಿ ಉದ್ಯೋಗಿಯಾಗಿರುವ ಸೂಫಿಯಾನ್ (21) ಎಂಬಾತ ಚಾರ್ಮಿನಾರ್‌ನ ಜವಳಿ ಅಂಗಡಿಯೊಂದರಲ್ಲಿ ಕೆಲಸ ಮಾಡುವ ಬಾಲಕಿಗೆ ಆಮಿಷ ಒಡ್ಡಿ ಮನೆಗೆ ಕರೆದೊಯ್ದು ಅತ್ಯಾಚಾರ ಎಸಗಿದ್ದಾನೆ ಎಂದು ಪೊಲೀಸ್ ಇನ್ಸ್‌ಪೆಕ್ಟರ್ ಎಸ್.ಸುದರ್ಶನ್ ಹೇಳಿದ್ದಾರೆ.

“ಮರುದಿನ ಬೆಳಿಗ್ಗೆ ಆಕೆಯನ್ನು ಮತ್ತೆ ಅಂಗಡಿ ಬಳಿ ಇಳಿಸಿ, ತನ್ನ ಮೊಬೈಲ್ ನಂಬರ್ ಕೂಡ ಕೊಟ್ಟು ಹೋಗಿದ್ದಾನೆ. ಭಾನುವಾರ ಬೆಳಗ್ಗೆ ಬಾಲಕಿ ತೀವ್ರ ನೋವಿನಿಂದ ಬಳಲುತ್ತಿರುವುದಾಗಿ ತಾಯಿಗೆ ತಿಳಿಸಿದ್ದು, ತಾಯಿ ವಿಚಾರಿಸಿದಾಗ ಘಟನೆ ಬಗ್ಗೆ ವಿವರಿಸಿದ್ದಾರೆ. ತಾಯಿ ಪೊಲೀಸರಿಗೆ ದೂರು ನೀಡಿದ್ದು, ಆರೋಪಿಯ ವಿರುದ್ಧ ಅತ್ಯಾಚಾರ ಮತ್ತು ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ. ಆರೋಪಿಯನ್ನು ಪತ್ತೆ ಹಚ್ಚಲಾಗುತ್ತಿದೆ” ಎಂದು ಇನ್ಸ್‌ಪೆಕ್ಟರ್ ತಿಳಿಸಿದ್ದಾರೆ.

ಇತ್ತೀಚೆಗೆ ಪಬ್‌ಗೆ ತೆರಳಿದ್ದ ಬಾಲಕಿಗೆ ಡ್ರಾಪ್ ಕೊಡುವ ನೆಪದಲ್ಲಿ ಐವರು ಅಪ್ರಾಪ್ತ ಶಾಲಾ ಬಾಲಕರು ಕಾರಿನೊಳಗೆ ಕೂಡಿಹಾಕಿ ಸಾಮೂಹಿಕ ಅತ್ಯಾಚಾರವೆಸಗಿದ್ದರು.

ಅತ್ಯಾಚಾರವೆಂಬದು ಹೀನ ಕುಕೃತ್ಯ. ವಿಕೃತ ಮನಸ್ಸಗಳು ಮಾಡುವ ಘೋರ ಅಪರಾಧ. ಇಂತಹ ಹೀನ ಕೃತ್ಯಕ್ಕೆ ಹೈದರಾಬಾದ್‌ನಲ್ಲಿ ಶಾಲಾ ಬಾಲಕರೂ ಇಳಿದಿರುವುದು ದುರಂತವಾಗಿದೆ. ಈ ಕುರಿತು ಸರ್ಕಾರಗಳು ಗಂಭೀರವಾಗಿ ಚಿಂತಿಸಿ ಮಕ್ಕಳಿಗೆ ಚಿಕ್ಕಂದಿನಲ್ಲಿಯೇ ಅರಿವು ಮೂಡಿಸಬೇಕಿದೆ. ಅತ್ಯಾಚಾರಗಳನ್ನು ತಡೆಯಲು ಗಂಭೀರ ಪ್ರಯತ್ನ ಹಾಕಬೇಕಿದೆ. ಅದು ಘೋರ ಅಪರಾಧ ಎಂದು ಎಲ್ಲರ ಮನಸ್ಸಿನಲ್ಲಿ ಮೂಡುವಂತೆ ಒತ್ತಡ ಹಾಕಬೇಕಿದೆ.


ಇದನ್ನೂ ಓದಿ: ಹೈದರಾಬಾದ್‌ನಲ್ಲಿ ಬಾಲಕಿ ಮೇಲೆ ಅಪ್ರಾಪ್ತ ಬಾಲಕರಿಂದ ಸಾಮೂಹಿಕ ಅತ್ಯಾಚಾರ: ಪ್ರಕರಣ ದಾಖಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...

ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ : ಮೊದಲ ಬೀದಿ ಹೋರಾಟಕ್ಕೆ ಸಜ್ಜಾದ ಕಾಕ್ರೋಚ್ ಜನತಾ ಪಾರ್ಟಿ

ಸಾಮಾಜಿಕ ಜಾಲತಾಣಗಳಲ್ಲಿ ಹೊಸ ಅಲೆಯನ್ನು ಸೃಷ್ಟಿಸಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ತನ್ನ ಮೊದಲ ಬೀದಿ ಹೋರಾಟಕ್ಕೆ ಸಜ್ಜಾಗಿದೆ. ಜೂನ್ 6, 2026ರಂದು ನವದೆಹಲಿಯ ಜಂತರ್ ಮಂತರ್‌ನಲ್ಲಿ ಸಿಜೆಪಿ ಪ್ರತಿಭಟನೆ ಆಯೋಜಿಸಿದ್ದು, ಇದರ...

ದೆಹಲಿ: ‘ಮಾಳವೀಯ ನಗರ’ ಅಗ್ನಿ ದುರಂತಕ್ಕೆ 21 ಜನರು ಬಲಿ: ವ್ಯವಸ್ಥೆಯ ವೈಫಲ್ಯದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿರುವ ನಾಗರೀಕರು 

ದೆಹಲಿಯ ಅತ್ಯಂತ ಜನನಿಬಿಡ ಮತ್ತು ವಾಣಿಜ್ಯ ಪ್ರದೇಶವಾದ ಮಾಳವೀಯ ನಗರದಲ್ಲಿ 2026 ಜೂನ್ 3, ಬುಧವಾರ ನಸುಕಿನ ಜಾವ ಸಂಭವಿಸಿದ ಭೀಕರ ಅಗ್ನಿ ದುರಂತವು ಇಡೀ ದೇಶವನ್ನು ಬೆಚ್ಚಿಬೀಳಿಸಿದೆ. 'ಫ್ಲೋರಿಶ್ ಸ್ಟೇ ಬಿ...

“ವಿಷ ಕಾರದೆ ಮಾತನಾಡಿ”: ಕಲ್ಲಡ್ಕ ಪ್ರಭಾಕರ ಭಟ್‌ಗೆ ಹೈಕೋರ್ಟ್ ತಾಕೀತು

ಹೆಚ್ಚು ಮಕ್ಕಳನ್ನು ಹೆರುವ ಮುಸ್ಲಿಂ ಮಹಿಳೆಯರನ್ನು ಲೇವಡಿ ಮಾಡುವ ಮೂಲಕ ಕೋಮು ದ್ವೇಷ ಹರಡಿದ್ದಾರೆ ಎಂಬ ಆರೋಪ ಎದುರಿಸುತ್ತಿರುವ ಹಿಂದುತ್ವ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಕಲ್ಲಡ್ಕ ಅವರಿಗೆ ತಮ್ಮ ಮುಂದಿನ ಭಾಷಣಗಳಲ್ಲಿ...

ಪತ್ರಕರ್ತ- ಚಿತ್ರ ನಿರ್ಮಾಪಕ ಸೇರಿದಂತೆ ಹಲವು ಕ್ಷೇತ್ರಗಳ ಪ್ರಮುಖರನ್ನು ವಕ್ತಾರರನ್ನಾಗಿ ನೇಮಿಸಿದ ಸಿಜೆಪಿ

ಆನ್‌ಲೈನ್ ಸೆನ್ಸೇಷನ್ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ)ಯು ಶಿಕ್ಷಣ ವ್ಯವಸ್ಥೆಯಲ್ಲಿನ ವೈಫಲ್ಯಗಳ ವಿರುದ್ಧ ಪ್ರಸ್ತಾಪಿಸಿದ ಪ್ರತಿಭಟನೆಗೆ ಮುಂಚಿತವಾಗಿ ತನ್ನ ವ್ಯಾಪ್ತಿಯನ್ನು ವಿಸ್ತರಿಸುವ ಸಲುವಾಗಿ ಮೂವರು ವಕ್ತಾರರ ಹೆಸರನ್ನು ಘೋಷಿಸಿದೆ. ಎಕ್ಸ್‌ನಲ್ಲಿನ ಪೋಸ್ಟ್‌ ಮಾಡಿರುವ ಅಭಿಜೀತ್...

CBSE ಪರೀಕ್ಷೆಯಲ್ಲಿ OSM ವಿವಾದ | ಸಂಸದೀಯ ಸಮಿತಿಯ ಮುಂದೆ ಹಾಜರಾದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್

ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (ಸಿಬಿಎಸ್‌ಸಿ) ಆನ್-ಸ್ಕ್ರೀನ್ ಮಾರ್ಕಿಂಗ್ (ಒಎಸ್‌ಎಂ) ಮೌಲ್ಯಮಾಪನ ವ್ಯವಸ್ಥೆಯಲ್ಲಿನ ಗಂಭೀರ ಲೋಪಗಳ ಕುರಿತು ವಿವಾದ ಭುಗಿಲೆದ್ದಿರುವ ನಡುವೆ, 17 ವರ್ಷದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್ ನವದೆಹಲಿಯ ಸಂಸತ್ ಭವನದಲ್ಲಿ...