Homeಮುಖಪುಟಕೊಲ್ಕತ್ತಾ: ಸರ್ಕಾರಿ ಹುದ್ದೆ ಪಡೆದ ಕಾರಣ ಹೆಂಡತಿಯ ಅಂಗೈ ಕತ್ತರಿಸಿದ ಪತಿ

ಕೊಲ್ಕತ್ತಾ: ಸರ್ಕಾರಿ ಹುದ್ದೆ ಪಡೆದ ಕಾರಣ ಹೆಂಡತಿಯ ಅಂಗೈ ಕತ್ತರಿಸಿದ ಪತಿ

- Advertisement -
- Advertisement -

ಕೊಲ್ಕತ್ತಾದ ಪೂರ್ವ ಬುರ್ದ್ವಾನ್‌ನ ಕೇತುಗ್ರಾಮ್‌ನಲ್ಲಿ ಪತ್ನಿಗೆ ಸರ್ಕಾರಿ ನೌಕರಿ ಸಿಕ್ಕಿದ್ದಕ್ಕೆ ಪತಿಯೇ ಆಕೆಯ ಬಲ ಅಂಗೈಯನ್ನು ಕತ್ತರಿಸಿರುವ ಅಮಾನವೀಯ ಘಟನೆ ನಡೆದಿದೆ.

ಸಂತ್ರಸ್ತೆ ರೇಣು ಖಾತುನ್ ಕಳೆದ ಮೂರು ವರ್ಷಗಳಿಂದ ಸರ್ಕಾರಿ ನೌಕರಿ ಪಡೆಯಲು ತಯಾರಿ ನಡೆಸುತ್ತಿದ್ದರು. ಇದಕ್ಕೆ ಆಕೆಯ ಆರೋಪಿ ಪತಿ ಮತ್ತು ಆತನ ಹೆತ್ತವರು ವಿರೋಧಿಸಿದ್ದರು. ಆದರೂ ಛಲ ಬಿಡದೆ ಸಂತ್ರಸ್ತೆ ಸರ್ಕಾರಿ ಸರ್ಕಾರಿ ಆಸ್ಪತ್ರೆಯಲ್ಲಿ ನರ್ಸ್‌ ಆಗಿ ಕೆಲಸ ಪಡೆದಿದ್ದರು. ಮುಂದಿನ ವಾರದಿಂದ ಕೆಲಸಕ್ಕೆ ತೆರಳಬೇಕಿದ್ದ ಆಕೆಯ ಬಲ ಅಂಗೈಯನ್ನು ಭಾನುವಾರ ಪತಿ ಕತ್ತರಿಸಿದ್ದಾರೆ.

“ಕಿರಾಣಿ ಅಂಗಡಿ ಮಾಲೀಕನಾಗಿರುವ ಆಕೆಯ ಪತಿ ಮೊಹಮ್ಮದ್ ಮತ್ತು ಆತನ ಮನೆಯವರು ಸರ್ಕಾರಿ ಉದ್ಯೋಗಿಯಾಗಿ ಕೆಲಸ ಮಾಡುವ ರೇಣು ಅವರ ಆಸೆಗೆ ವಿರೋಧ ವ್ಯಕ್ತಪಡಿಸುತ್ತಿದ್ದರು. ಮೊಹಮ್ಮದ್ ಮತ್ತು ಅವರ ಪೋಷಕರು ಪ್ರಸ್ತುತ ತಲೆಮರೆಸಿಕೊಂಡಿದ್ದಾರೆ” ಎಂದು ಸ್ಥಳೀಯ ಪೊಲೀಸ್ ಠಾಣೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಇದನ್ನೂ ಓದಿ: ಜನಪ್ರಿಯ ಸಿನಿಮಾಗಳ ಗುಣಮಟ್ಟದ ಜೊತೆಗೇ ಪಾತಾಳಕ್ಕೆ ಕುಸಿದ ಸಿನಿಮಾ ಬರೆಹಗಳು

ಮೊಹಮ್ಮದ್ ಮೊದಲು ರೇಣು ಅವರನ್ನು ದಿಂಬಿನಿಂದ ಉಸಿರುಗಟ್ಟುವಂತೆ ಮಾಡಿ ನಂತರ ಆಕೆಯ ಅಂಗೈ ಕತ್ತರಿಸಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. “ರೇಣು ಪ್ರಜ್ಞಾಹೀನರಾದ ನಂತರ, ಮೊಹಮ್ಮದ್ ಅವರನ್ನು ಸ್ಥಳೀಯ ಆಸ್ಪತ್ರೆಗೆ ಕರೆದೊಯ್ದರು, ಕತ್ತರಿಸಿದ ಅಂಗೈಯನ್ನು ಮನೆಯಲ್ಲಿ ಅಡಗಿಸಿಟ್ಟಿದ್ದರು. ಆಕೆಗೆ ಪ್ರಜ್ಞೆ ಬಂದು ತನ್ನ ಸ್ಥಿತಿಯನ್ನು ವಿವರಿಸಿದ ನಂತರ ಘಟನೆ ಬೆಳಕಿಗೆ ಬಂದಿದೆ” ಎಂದು ಪೊಲೀಸ್ ಅಧಿಕಾರಿ ಹೇಳಿದ್ದಾರೆ.

“ನಮ್ಮ ಮಗಳು ಮದುವೆಗೆ ಮೊದಲು ಖಾಸಗಿ ಆರೋಗ್ಯ ಘಟಕದಲ್ಲಿ ಕೆಲಸ ಮಾಡುತ್ತಿದ್ದಳು. ಆಕೆಯ ಕೆಲಸ ಮಾಡುವ ನಿರ್ಧಾರಕ್ಕೆ ಆಕೆಯ ಪತಿ ಮತ್ತು ಮನೆಯವರು ವಿರೋಧ ವ್ಯಕ್ತಪಡಿಸುತ್ತಿದ್ದರು. ಇತ್ತೀಚೆಗೆ ಆಕೆ ಸರ್ಕಾರಿ ಆಸ್ಪತ್ರೆಯಲ್ಲಿ ನರ್ಸ್ ಹುದ್ದೆಗೆ ಆಯ್ಕೆಯಾಗಿದ್ದರು. ಆದರೆ, ತನ್ನ ಗುರಿ ಸಾಧಿಸಲು ನಮ್ಮ ಮಗಳು ಇಂತಹ ಬೆಲೆ ತೆರಬೇಕಾಗುತ್ತದೆ ಎಂಬುದನ್ನು ನಾನು ಊಹಿಸಿರಲಿಲ್ಲ” ಎಂದು ರೇಣು ಅವರ ತಂದೆ ಅಜೀಜುಲ್ ಹಕ್ ನೋವು ಹೊರಹಾಕಿದ್ದಾರೆ.

ಸಂತ್ರಸ್ತೆ ರೇಣು ಸರ್ಕಾರಿ ಆಸ್ಪತ್ರೆಗೆ ಸೇರಿಸಿದ ನಂತರ ತನ್ನನ್ನು ಬಿಟ್ಟು ಹೋಗಬಹುದು ಎಂಬ ಅನುಮಾನವನ್ನು ಆರೋಪಿ ಮೊಹಮ್ಮದ್ ತನ್ನ ಸ್ನೇಹಿತರ ಬಳಿ ವ್ಯಕ್ತಪಡಿಸಿರುವುದು ತನಿಖೆಯ ವೇಳೆ ಪೊಲೀಸರಿಗೆ ತಿಳಿದು ಬಂದಿದೆ.


ಇದನ್ನೂ ಓದಿ: ಕಾರ್ಕಳ: ರಸ್ತೆಗೆ ಗೋಡ್ಸೆ ಹೆಸರು; ಬೋರ್ಡ್ ತೆರವು ಮಾಡಿಸಿದ ಕಾಂಗ್ರೆಸ್ ಮುಖಂಡರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...