ಆರೆಸ್ಸೆಸ್ಸಿನ ಉನ್ನತ ಪದಾಧಿಕಾರಿಗಳಲ್ಲಿ ದಲಿತರು ಮತ್ತು ಹಿಂದುಳಿದ ಜಾತಿಗಳು ಯಾಕೆ ಇಲ್ಲ ಎಂಬುವುದಕ್ಕೆ ಸಂಘವು ಬಿಜೆಪಿ ಶಾಸಕ ಛಲವಾದಿ ನಾರಾಯಣ ಸ್ವಾಮಿಯವರ ಮೂಲಕ ಉತ್ತರ ನೀಡಿದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯು ಅವರು, ‘ಒಳವಸ್ತ್ರಗಳ ಕಟ್ಟನ್ನು’ ಹೊತ್ತುಕೊಂಡಿರುವ ನಾರಾಯಣ ಸ್ವಾಮಿ ಅವರ ಚಿತ್ರವನ್ನು ಉಲ್ಲೇಖಿಸಿ ಹೇಳಿದ್ದಾರೆ.
ಸಿದ್ದರಾಮಯ್ಯ ಅವರು ಇತ್ತೀಚೆಗೆ ಆರೆಸ್ಸೆಸ್ ಅನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಳ್ಳುತ್ತಿದ್ದು, ಅದರ ಉನ್ನತ ನಾಯಕರಲ್ಲಿ ದಲಿತರು ಮತ್ತು ಹಿಂದುಳಿದ ಜಾತಿಗಳ ಜನರು ಯಾಕೆ ಇಲ್ಲ ಎಂದು ಪ್ರಶ್ನಿಸಿದ್ದರು. ಜೊತೆಗೆ ಕಾಂಗ್ರೆಸ್ ಕಾರ್ಯಕರ್ತರು ಪಠ್ಯಪುಸ್ತಕದ ಕೇಸರೀಕರಣವನ್ನು ವಿರೋಧಿಸಿ ಆರೆಸ್ಸೆಸ್ಸಿನ ಚಡ್ಡಿಗಳನ್ನು ಸುಟ್ಟಿದ್ದರು. ಇದರ ವಿರುದ್ಧ ಬಿಜೆಪಿ ಒಳವಸ್ತ್ರವನ್ನು ಸಂಗ್ರಹಿಸಿ ಕಾಂಗ್ರೆಸ್ ಕಚೇರಿಗೆ ಕಳುಹಿಸುವ ಅಭಿಯಾನ ಪ್ರಾರಂಭಿಸಿದ್ದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others
ಈ ಅಭಿಯಾನವನ್ನು ರಾಜ್ಯದ ಎಸ್ಸಿ ಮೋರ್ಚಾದ ಅಧ್ಯಕ್ಷರಾಗಿರುವ ನಾರಾಯಣ ಸ್ವಾಮಿ ಅವರು ವಹಿಸಿಕೊಂಡಿದ್ದು, ಅವರು ಒಳವಸ್ತ್ರಗಳನ್ನು ಹೊತ್ತುಕೊಂಡಿರುವ ಚಿತ್ರ ವೈರಲ್ ಆಗಿದೆ.
ಇದನ್ನೂ ಓದಿ: ಪ್ರವಾದಿ ನಿಂದನೆ ಮಾಡಿದವನಿಂದ ಪಠ್ಯಪರಿಷ್ಕರಣೆ; ರೋಹಿತ್ ಚಕ್ರತೀರ್ಥರ ಹಳೆಯ ಪೋಸ್ಟ್‌ಗಳು ವೈರಲ್
ಈ ಬಗ್ಗೆ ಸಾಮಾಜಿಕ ಮಾಧ್ಯಮಗಳಲ್ಲಿ ಪ್ರಶ್ನಿಸಿರುವ ಸಿದ್ದರಾಮಯ್ಯ ಅವರು,“ನಿಮ್ಮ ‘ಸಂಘದ ಉನ್ನತ ಪದಾಧಿಕಾರಿಗಳಲ್ಲಿ ದಲಿತರು ಮತ್ತು ಹಿಂದುಳಿದ ಜಾತಿಗಳು ಯಾಕೆ ಇಲ್ಲ’ ಎನ್ನುವ ನನ್ನ ಪ್ರಶ್ನೆಗೆ ಆರ್.ಎಸ್.ಎಸ್‌ನವರು ಬಿಜೆಪಿ ಶಾಸಕ ಛಲವಾದಿ ನಾರಾಯಣ ಸ್ವಾಮಿಯವರ ಮೂಲಕ ಉತ್ತರ ನೀಡಿದ್ದಾರೆ” ಎಂದು ಹೇಳಿದ್ದಾರೆ.
“ಈ ಸಂದೇಶವನ್ನು ಬಿಜೆಪಿಯಲ್ಲಿರುವ ದಲಿತ ಬಂಧುಗಳು ಅರ್ಥಮಾಡಿಕೊಳ್ಳಲಿ ಎಂದು ಹಾರೈಸುತ್ತೇನೆ” ಎಂದು ಅವರು ಹೇಳಿದ್ದಾರೆ.
“ಆರ್.ಎಸ್.ಎಸ್ ಗೆ ಬೆಂಬಲ ನೀಡಲು ಹಳೆ ಚಡ್ಡಿ ಹೊತ್ತು ಕೊಂಡು ಮೆರವಣಿಗೆ ಮಾಡಿದ ನಾರಾಯಣಸ್ವಾಮಿಯವರೇ, ನಿಮ್ಮ ಸ್ಥಾನಮಾನ ಏನಿದ್ದರೂ ಇಷ್ಟಕ್ಕೆ ಸೀಮಿತ. ಆ ಸಂಘದ ಉನ್ನತ ಪದಾಧಿಕಾರಕ್ಕೆ ನೀವು ಸದಾ ಅಸ್ಪೃಶ್ಯ ನೆನಪಿರಲಿ. ಯಾರ್ಯಾರದೋ ಹಳೆ ಚಡ್ಡಿ ಹೊತ್ತುಕೊಂಡ ನಿಮ್ಮನ್ನು ಕಂಡು ಮನಸ್ಸಿಗೆ ನೋವಾಯಿತು” ಎಂದು ಸಿದ್ದರಾಮಯ್ಯ ಅವರು ಹೇಳಿದ್ದಾರೆ.
“ನಿಮ್ಮನ್ನು ‘ಪಠ್ಯಪುಸ್ತಕ ಪರಿಷ್ಕರಣ ಸಮಿತಿಯ ಅಧ್ಯಕ್ಷತೆ’ಯಂತಹ ಸ್ಥಾನದಲ್ಲಿ ಕಾಣುವ ಆಸೆ ನನಗೆ. ನಿಮ್ಮ ಪ್ರತಿಭಟನೆಯ ಹಕ್ಕನ್ನು ನಾನು ಗೌರವಿಸುತ್ತೇನೆ. ಆದರೆ ಕೇವಲ ರಾಜಕೀಯ ಜಿದ್ದಾಜಿದ್ದಿಗಾಗಿ ಹಳೆಚಡ್ಡಿ ಹೊತ್ತುಕೊಳ್ಳಲೂ ಸಿದ್ಧರಾದ ನಿಮ್ಮ ಗುಲಾಮಿ ಮನಸ್ಥಿತಿಗೆ ನನ್ನ ಧಿಕ್ಕಾರ” ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಇದನ್ನೂ ಓದಿ: ಪ್ರವಾದಿ ನಿಂದನೆ ವಿವಾದ ಹಿನ್ನಲೆ: ಪಕ್ಷದ ಪರವಾಗಿ ಚರ್ಚೆಗಳಲ್ಲಿ ಭಾಗವಹಿಸುವವರಿಗೆ ಹೊಸ ನಿಯಮ ಹೇರಿದ ಬಿಜೆಪಿ
“ಸ್ವಾಭಿಮಾನವನ್ನು ಉಸಿರಾಗಿಸಿಕೊಂಡು ಬದುಕಿದ ಬಾಬಾಸಾಹೇಬ್ ಅಂಬೇಡ್ಕರ್ ಅವರನ್ನು ಸ್ವಲ್ಪ ಓದಿ. ಸ್ವಾಭಿಮಾನದ ಪಾಠ ಕಲಿಯಬೇಕು” ಎಂದು ಸಿದ್ದರಾಮಯ್ಯ ಅವರು ನಾರಾಯಣ ಸ್ವಾಮಿ ಅವರಿಗೆ ಸಲಹೆ ನೀಡಿದ್ದಾರೆ.



Siddu excellent,
Chalwadi Narayanaswami is an opportunitist. People like Chalwadi Narayanaswami required for RSS to carry such things. ಚಲುವಾದಿ ನಾರಾಯಣಸ್ವಾಮಿ ಗೆ ದಿಕ್ಕಾರ ವಿರಲಿ
RSS never be given any higher post to the SC/ST members…. They only using such members for sweeping, carrying, … etc… That means untouchablity works…. SC/ST people please understand such partiality activities inside the RSS……My appeal to my community….don’t loose your SWABHIMAANA.