Homeರಾಷ್ಟ್ರೀಯಶೋಭಾ ಕರಂದ್ಲಾಜೆ, ಪ್ರತಾಪ್ ಸಿಂಹ ಮತ್ತು ಅನಂತ್ ಕುಮಾರ್‌ ಹೆಗಡೆ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿರುವ...

ಶೋಭಾ ಕರಂದ್ಲಾಜೆ, ಪ್ರತಾಪ್ ಸಿಂಹ ಮತ್ತು ಅನಂತ್ ಕುಮಾರ್‌ ಹೆಗಡೆ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿರುವ ನಾಯಕರೆಂದು ಗುರುತಿಸಿದ ಬಿಜೆಪಿ!

ತನ್ನ 38 ನಾಯಕರನ್ನು ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿರುವವರೆಂದು ಬಿಜೆಪಿ ಗುರುತಿಸಿದೆ

- Advertisement -
- Advertisement -

ಶೋಭಾ ಕರಂದ್ಲಾಜೆ, ಪ್ರತಾಪ್ ಸಿಂಹ ಮತ್ತು ಅನಂತ್ ಕುಮಾರ್ ಹೆಗಡೆ ಸೇರಿದಂತೆ ತನ್ನ 38 ನಾಯಕರನ್ನು ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿರುವವರೆಂದು ಬಿಜೆಪಿ ಗುರುತಿಸಿದೆ ಎಂದು ದೈನಿಕ್ ಭಾಸ್ಕರ್‌ ವರದಿ ಮಾಡಿವೆ. ಈ ಪೈಕಿ 27 ಚುನಾಯಿತ ನಾಯಕರಿಗೆ ಇಂತಹ ಹೇಳಿಕೆ ನೀಡದಂತೆ ಸೂಚನೆ ನೀಡಲಾಗಿದ್ದು, ಧಾರ್ಮಿಕ ವಿಚಾರಗಳ ಕುರಿತು ಹೇಳಿಕೆ ನೀಡುವ ಮುನ್ನ ಪಕ್ಷದಿಂದ ಅನುಮತಿ ಪಡೆಯುವಂತೆ ಸೂಚಿಸಲಾಗಿದೆ.

ಪ್ರವಾದಿ ಮೊಹಮ್ಮದ್ ಅವರ ಬಗ್ಗೆ ವಿವಾದಾತ್ಮಕ ಹೇಳಿಕೆಗಳನ್ನು ನೀಡಿದ್ದ ಬಿಜೆಪಿ ರಾಷ್ಟ್ರೀಯ ವಕ್ತಾರೆ ನೂಪುರ್ ಶರ್ಮಾ ಮತ್ತು ದೆಹಲಿ ಬಿಜೆಪಿ ಮಾಧ್ಯಮ ಮುಖ್ಯಸ್ಥ ನವೀನ್ ಕುಮಾರ್ ಅವರ ವಿರುದ್ಧ ಕ್ರಮ ಕೈಗೊಂಡ ನಂತರ ಪಕ್ಷವು ಈ ಬಗ್ಗೆ ಕಾರ್ಯಪ್ರವೃತ್ತವಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಕಳೆದ 8 ವರ್ಷಗಳಿಂದ (ಸೆಪ್ಟೆಂಬರ್ 2014 ರಿಂದ ಮೇ 3, 2022 ರವರೆಗೆ) ನಾಯಕರ ಹೇಳಿಕೆಗಳನ್ನು ಐಟಿ ತಜ್ಞರ ಸಹಾಯದಿಂದ ಕೂಲಂಕಷವಾಗಿ ಪರಿಶೀಲಿಸಲಾಗಿದ್ದು, ಸುಮಾರು 5,200 ಹೇಳಿಕೆಗಳು ಅನಗತ್ಯವೆಂದು ಕಂಡುಬಂದಿದೆ. 2,700 ಹೇಳಿಕೆಗಳ ಪದಗಳು ಸೂಕ್ಷ್ಮವಾಗಿರುವುದು ಕಂಡುಬಂದಿದೆ. 38 ನಾಯಕರ ಹೇಳಿಕೆಗಳನ್ನು ಧಾರ್ಮಿಕ ನಂಬಿಕೆಗಳಿಗೆ ನೋವುಂಟು ಮಾಡುವ ವರ್ಗದಲ್ಲಿ ಇರಿಸಲಾಗಿದೆ.

ಇದನ್ನೂ ಓದಿ: ಕಾನ್ಪುರ ಘರ್ಷಣೆಯ 4 ದಿನಗಳ ನಂತರ ಪ್ರವಾದಿ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದ ಬಿಜೆಪಿ ನಾಯಕನ ಬಂಧನ

ಅನಂತ್ ಕುಮಾರ್ ಹೆಗಡೆ, ಶೋಭಾ ಕರಂದ್ಲಾಜೆ, ಗಿರಿರಾಜ್ ಸಿಂಗ್, ತಥಾಗತ ರೈ, ಪ್ರತಾಪ್ ಸಿಂಹ, ವಿನಯ್ ಕಟಿಯಾರ್, ಮಹೇಶ್ ಶರ್ಮಾ, ಟಿ.ರಾಜ ಸಿಂಗ್, ವಿಕ್ರಮ್ ಸಿಂಗ್ ಸೈನಿ, ಸಾಕ್ಷಿ ಮಹಾರಾಜ್, ಸಂಗೀತ್ ಸೋಮ್ ಸೇರಿದಂತೆ ಹಲವು ಬಿಜೆಪಿ ನಾಯಕರು ದ್ವೇಷದ ಭಾಷಣ ಮಾಡುತ್ತಾರೆ ಎಂದು ಪಕ್ಷವು ನಿರ್ಧರಿಸಿದೆ ಎಂದು ದೈನಿಕ್ ಬಾಸ್ಕರ್‌ ವರದಿ ಮಾಡಿದೆ.

ಕುವೈತ್: ಭಾರತದಲ್ಲಿ ತಯಾರಾದ ವಸ್ತುಗಳ ಮಾರಾಟ ಸ್ಥಗಿತ

ಪ್ರವಾದಿ ಮುಹಮ್ಮದ್ ಅವರ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿದ ನಂತರ ಅರಬ್ ರಾಷ್ಟ್ರಗಳಲ್ಲಿ ಭಾರತವನ್ನು ಬಹಿಷ್ಕರಿಸುವಂತೆ ಸಾಮಾಜಿಕ ಮಾಧ್ಯಮದಲ್ಲಿ ಟ್ರೆಂಡ್‌ ಆಗಿದೆ. ಈ ಮಧ್ಯೆ, ಕುವೈತ್‌ನ ಕೆಲವು ಸೂಪರ್‌ ಮಾರ್ಕೆಟ್‌ಗಳಲ್ಲಿ ಭಾರತದಲ್ಲಿ ತಯಾರಾದ ಉತ್ಪನ್ನಗಳ ಮಾರಾಟವನ್ನು ನಿಲ್ಲಿಸಿವೆ.

ದೇಶದ ಆಡಳಿತ ಪಕ್ಷದ ನಾಯಕರು ಮುಸ್ಲಿಮರ ಭಾವನೆಗಳಿಗೆ ಧಕ್ಕೆ ತಂದಿದ್ದು, ಇದಕ್ಕಾಗಿ ನೀವು ಕ್ಷಮೆಯಾಚಿಸಬೇಕು ಎಂದು ಕುವೈತ್ ಸರ್ಕಾರ ಆಗ್ರಹಿಸಿದೆ. ಯುಎಇ, ಜೋರ್ಡಾನ್ ಮತ್ತು ಇಂಡೋನೇಷ್ಯಾ ಸೇರಿದಂತೆ ವಿಶ್ವದ 17 ರಾಷ್ಟ್ರಗಳು ನೂಪುರ್ ಶರ್ಮಾ ಮತ್ತು ನವೀನ್ ಕುಮಾರ್ ಹೇಳಿಕೆಗೆ ಆಕ್ಷೇಪ ವ್ಯಕ್ತಪಡಿಸಿವೆ.

ಇದನ್ನೂ ಓದಿ: ಪ್ರವಾದಿ ನಿಂದನೆ ಮಾಡಿದವನಿಂದ ಪಠ್ಯಪರಿಷ್ಕರಣೆ; ರೋಹಿತ್‌ ಚಕ್ರತೀರ್ಥರ ಹಳೆಯ ಪೋಸ್ಟ್‌ಗಳು ವೈರಲ್‌

OIC ಹೇಳಿಕೆ ಅನಗತ್ಯ: ಭಾರತ

ಮುಸ್ಲಿಮರ ಹಕ್ಕುಗಳ ರಕ್ಷಣೆಯನ್ನು ಖಾತ್ರಿಪಡಿಸುವಂತೆ ‘ಇಸ್ಲಾಮಿಕ್ ಸಹಕಾರ ಸಂಘಟನೆ’ (OIC)  ವಿಶ್ವಸಂಸ್ಥೆಗೆ ಒತ್ತಾಯಿಸಿದೆ. ಒಐಸಿ ಹೇಳಿಕೆಗೆ ಭಾರತ ಆಕ್ಷೇಪ ವ್ಯಕ್ತಪಡಿಸಿದ್ದು, ಅದನ್ನು ‘ಸಂಕುಚಿತ’ ಎಂದು ಬಣ್ಣಿಸಿದೆ. ವಿದೇಶಾಂಗ ಸಚಿವಾಲಯದ ವಕ್ತಾರ ಅರಿಂದಮ್ ಬಾಗ್ಚಿ, “ಕೆಲವು ಜನರ ಅಸಭ್ಯ ಹೇಳಿಕೆಗಳು ಭಾರತ ಸರ್ಕಾರವನ್ನು ಪ್ರತಿಬಿಂಬಿಸುವುದಿಲ್ಲ” ಎಂದು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. The argument which put forward is confusing. Ruling patty leaders statement is government’s statement and it’s impact is fatal. Govt.has take actions against them control them.

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...