Homeಕರ್ನಾಟಕಪರಿಷ್ಕೃತ ಪಠ್ಯ ಪುಸ್ತಕ ವಿರೋಧಿಸಿ ‘ಜೂನ್‌ 18ರ ಶನಿವಾರ’ ಬೆಂಗಳೂರಿನಲ್ಲಿ ಬೃಹತ್‌ ಪ್ರತಿಭಟನೆ

ಪರಿಷ್ಕೃತ ಪಠ್ಯ ಪುಸ್ತಕ ವಿರೋಧಿಸಿ ‘ಜೂನ್‌ 18ರ ಶನಿವಾರ’ ಬೆಂಗಳೂರಿನಲ್ಲಿ ಬೃಹತ್‌ ಪ್ರತಿಭಟನೆ

ರೋಹಿತ್ ಚಕ್ರತೀರ್ಥ ಬಂಧನ ಮತ್ತು ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹಿಸಲಿರುವ ಪ್ರತಿಭಟನಾ ಮೆರವಣಿಗೆಯಲ್ಲಿ ರಾಜ್ಯ ಎಲ್ಲಾ ಧಾರ್ಮಿಕ, ಸಾಮಾಜಿಕ ಮತ್ತು ರಾಜಕೀಯ ಸಂಘಟನೆಗಳು ಭಾಗವಹಿಸಲಿವೆ

- Advertisement -
- Advertisement -

ಪರಿಷ್ಕೃತ ಪಠ್ಯಪುಸ್ತಗಳಲ್ಲಿ ನಾಡಿನ ಮಹನಿಯರಿಗೆ ಅವಮಾನ ಮಾಡಿ ರಾಜ್ಯದ ಜನತೆಯ ಭಾವನೆಗೆ ಧಕ್ಕೆ ತಂದು ಸಮಾಜದಲ್ಲಿ ಶಾಂತಿಭಂಗಪಡಿಸಲು ಯತ್ನಿಸಿರುವ ಚಕ್ರತೀರ್ಥನನ್ನು ತಕ್ಷಣವೇ ಬಂಧಿಸಿ ಕಾನೂನು ಕ್ರಮ ಜರುಗಿಸಬೇಕು ಹಾಗೂ ಅವರ ಬೆನ್ನಿಗೆ ನಿಂತ ಶಿಕ್ಷಣ ಸಚಿವರಾದ ಬಿ.ಸಿ.ನಾಗೇಶ್ ತಕ್ಷಣವೇ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ, ‘ವಿಶ್ವಮಾನವ ಕ್ರಾಂತಿಕಾರಿ ಮಹಾಕವಿ ಕುವೆಂಪು ಹೋರಾಟ ಸಮಿತಿ – ಕರ್ನಾಟಕ’ದ ವತಿಯಿಂದ ಜೂನ್ 18ರ ಶನಿವಾರದಂದು ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನಾ ಮೆರವಣಿಗೆಯನ್ನು ಆಯೋಜಿಸಿದೆ.

ಪ್ರತಿಭಟನಾ ಮೆರವಣಿಗೆ ಬೆಳಿಗ್ಗೆ 10 ಗಂಟೆಗೆ ಬೆಂಗಳೂರಿನ ಕೇಂದ್ರ ರೈಲ್ವೇ ನಿಲ್ದಾಣದಿಂದ ಪ್ರಾರಂಭವಾಗಲಿದ್ದು ಫ್ರೀಡಂ ಪಾರ್ಕ್‌‌ನಲ್ಲಿ ಸಮಾವೇಶಗೊಳ್ಳಲಿದೆ. ಬೃಹತ್‌ ಹೋರಾಟಕ್ಕೆ ರಾಜ್ಯದ ಎಲ್ಲಾ ಸಮುದಾಯದ ಮಠಗಳ ಸ್ವಾಮೀಜಿಗಳು, ಹಿಂದುಳಿದ ವರ್ಗಗಳ‌ ಸಂಘ ಸಂಸ್ಥೆಗಳು, ದಲಿತ ಸಮುದಾಯದ ಸಂಘಟನೆಗಳು, ಅಲ್ಪಸಂಖ್ಯಾತ ಸಮುದಾಯ ಸಂಘಟನೆಗಳು, ಕನ್ನಡಪರ ಸಂಘಟನೆಗಳು, ಮಹಿಳಾ ಸಂಘಟನೆಗಳು, ಕಾರ್ಮಿಕ ಸಂಘಟನೆಗಳು, ವಕೀಲರ ಒಕ್ಕೂಟಗಳು, ವಿದ್ಯಾರ್ಥಿ ಸಂಘಟನೆಗಳು ಹಾಗೂ ರೈತ ಸಂಘಟನೆಗಳು ಬೆಂಬಲ ವ್ಯಕ್ತಪಡಿಸಿವೆ ಎಂದು ಹೋರಾಟ ಸಮಿತಿಯ ಸಂಚಾಲಕರು ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಪಠ್ಯಪುಸ್ತಕ ಪರಿಷ್ಕರಣೆ ಹೆಸರಿನಲ್ಲಿ ನಾಡಿನ ಆರುವರೆಕೋಟಿ ಜನರನ್ನು ಅಪಮಾನಗೊಳಿಸುವ ಹಾಗು ನಾಡೇ ತಲೆತಗ್ಗಿಸುವ ಅನೇಕ ಅಸಹ್ಯ ಪ್ರಮಾದಗಳು ನಡೆದಿವೆ. ಶಾಲೆಯ ಮುಗ್ಧಮಕ್ಕಳಿಗೆ ‘ಬ್ರಾಹ್ಮಣ ಮಾತ್ರ ಶ್ರೇಷ್ಠ-ಮೇಲು, ಇನ್ನುಳಿದವರೆಲ್ಲರೂ ಕನಿಷ್ಟ-ಕೀಳು’ ಎಂಬ ಒಂದಂಶದ ವಿಷವುಣಿಸಲು ಪಠ್ಯ ಪರಿಷ್ಕರಣಾ ಸಮಿತಿ ಹೊರಟಿದೆ. ಈ ತಂತ್ರದ ಬಣ್ಣ ಬಯಲಾಗಿದ್ದು, ಸಮಿತಿಯು ರಾಜ್ಯದ ಜನತೆಯ ಮುಂದೆ ಬೆತ್ತಲಾಗಿ ತಲೆತಗ್ಗಿಸಿ ನಿಂತಿದೆ. ಜೊತೆಗೆ ಈ ಸಮಿತಿಯ ಪರವಹಿಸಿ ಮಾತಾಡುತ್ತಿದ್ದ ಸರ್ಕಾರವೂ ಈಗ ಒಂದೊಂದೇ ಸತ್ಯ ಹೊರಬಂದ ಮೇಲೆ ಮುಜುಗರ ಅನುಭವಿಸುತ್ತಾ ತಿಣುಕುತ್ತಿದೆ” ಎಂದು ಹೋರಾಟ ಸಮಿತಿಯು ಹೇಳಿದೆ.

ಇದನ್ನೂ ಓದಿ: ಹಳೆಯ ಪಠ್ಯಪುಸ್ತಕ ರದ್ದಿಗೆ ಹಾಕಿದರೆ ಜನರ ಕೈ ಸೇರುವ ಭಯ; ಪುಸ್ತಕಗಳನ್ನೇ ನಾಶಪಡಿಸಲು ಮುಂದಾದ ಸರ್ಕಾರ?

“ರಾಷ್ಟ್ರಕವಿ ಕುವೆಂಪು ವಿರಚಿತ ನಾಡಗೀತೆಯನ್ನು ಕಳೆದ ಐದು ವರ್ಷಗಳ‌ ಹಿಂದೆಯೇ ವಿರೂಪಗೊಳಿಸಿ ವಿಕೃತಿ ಮೆರೆದಿದ್ದ, ನಾಡಧ್ವಜವನ್ನು ತನ್ನ ಒಳ ಉಡುಪಿಗೆ ಹೋಲಿಸಿ ಬರೆದ ವ್ಯಕ್ತಿಯನ್ನು ಪಠ್ಯಪುಸ್ತಕ ಪರಿಷ್ಕರಣಾ ಸಮಿತಿಗೆ ಅಧ್ಯಕ್ಷನನ್ನಾಗಿ ಸರ್ಕಾರ ನೇಮಿಸಿದ್ದೇ ಈ ಎಲ್ಲಾ ರಾಧಾಂತಗಳಿಗೆ ಕಾರಣವಾಗಿದೆ.‌ ತನ್ನ ಜಾತಿ ಮಾತ್ರ ಶ್ರೇಷ್ಠ ಎಂದು ನಂಬಿಕೊಂಡಿರುವ ಈ ವ್ಯಕ್ತಿ ಮತ್ತು ಸಮಿತಿಯು ದುರುದ್ದೇಶಿತ ಪೂರ್ವಕವಾಗಿ ಹಿಂದಿನ ಪ್ರೊ.ಬರಗೂರು ರಾಮಚಂದ್ರಪ್ಪ ಸಮಿತಿಯ ಪಠ್ಯಗಳಲ್ಲಿದ್ದ ದಲಿತ, ಹಿಂದುಳಿದ ವರ್ಗ, ಅಲ್ಪಸಂಖ್ಯಾತ ಮತ್ತು ಮಹಿಳಾ ಲೇಖಕರ ಕವಿಗಳ ಪಾಠಗಳನ್ನು ತೆಗೆದು ಭಾಗಶಃ ಬ್ರಾಹ್ಮಣರ ಪಠ್ಯಗಳನ್ನೇ ಅಲ್ಲಿ ಹಾಕಲಾಗಿದೆ.

ಅಲ್ಲದೆ ಉಳಿಸಿಕೊಂಡಿರುವ ಅಧ್ಯಾಯಗಳಲ್ಲಿ ಅನೇಕ ಮಹನೀಯರಿಗೆ ಅವಮಾನವಾಗುವಂತೆ ಕೆಲವು ಸಾಲುಗಳನ್ನು ತೆಗೆದಿರುವುದು, ಸೇರಿಸಿರುವುದು ಮತ್ತು ತಿದ್ದಿರುವುದು ಸಾಬೀತಾಗಿದೆ‌‌. ಈ ದ್ವೇಷಯುಕ್ತ ಪಠ್ಯಗಳನ್ನು ಮಕ್ಕಳಿಗೆ ವಿತರಿಸಿ ಬೋಧಿಸಿದರೆ ರಾಜ್ಯದ ಇಡೀ ಶಾಲಾ ವಾತಾವರಣವೇ ಕೋಮುವಾದದ ಗೂಡಾಗುವ ಅಪಾಯವಿದೆ‌” ಎಂದು ಹೋರಾಟ ಸಮಿತಿ ಎಚ್ಚರಿಸಿದೆ.

“ಕುವೆಂಪು ಆದಿಯಾಗಿ ಬುದ್ಧ ಮಹಾವೀರ ಬಸವಣ್ಣ ವಾಲ್ಮೀಕಿ ಸಾವಿತ್ರಿಫುಲೆ ಪೆರಿಯಾರ್ ರಾಮಸ್ವಾಮಿ ನಾಯ್ಕರ್, ನಾರಾಯಣಗುರು, ಸಂಗೊಳ್ಳಿ ರಾಯಣ್ಣ, ಕನಕದಾಸರು, ಸುರಪುರ ನಾಯಕರು, ಅಕ್ಕಮಹಾದೇವಿ, ಟಿಪ್ಪುಸುಲ್ತಾನ್, ಬಾಬಾಸಾಹೇಬ್ ಅಂಬೇಡ್ಕರ್, ಸಿದ್ಧಗಂಗಾಸ್ವಾಮೀಜಿಗಳು, ಆದಿಚುಂಚನಗಿರಿ‌ ಬಾಲಗಂಗಾಧರ ಸ್ವಾಮೀಜಿಗಳಿಗೆ ಸಮಿತಿಯು ಪಠ್ಯಪರಿಷ್ಕರಣೆಯಲ್ಲಿ ಎಸಗಿರುವ ಅವಮಾನವನ್ನು ಖಂಡಿಸಬೇಕಾದದ್ದು ರಾಜ್ಯದ ಪ್ರತಿಯೊಬ್ಬ ಪ್ರಜ್ಞಾವಂತನ ಕರ್ತವ್ಯವಾಗಿದೆ” ಎಂದು ಹೋರಾಟ ಸಮಿತಿಯೂ ಪ್ರತಿಪಾದಿಸಿದೆ.

ಇದನ್ನೂ ಓದಿ: ಸಂವಿಧಾನ ಒಬ್ಬರೇ ಬರೆದಿದ್ದು ಎಂದು ಹೇಗೆ ಹೇಳುತ್ತೀರಿ?: ಪಠ್ಯದಿಂದ ‘ಸಂವಿಧಾನ ಶಿಲ್ಪಿ’ ಪದ ಕೈಬಿಟ್ಟಿದ್ದಕ್ಕೆ ಪಠ್ಯ ಪರಿಶೀಲನೆ ಸಮಿತಿ ಸದಸ್ಯನ ಸಮರ್ಥನೆ

“ರೋಹಿತ್ ಚಕ್ರತೀರ್ಥನ ಸಮಿತಿಯಿಂದಾದ ದೋಷಪೂರಿತ ಪರಿಷ್ಕರಣಾ ಪಠ್ಯಗಳನ್ನು ವಾಪಸ್ ಪಡೆದು ಹಿಂದಿನ ಪಠ್ಯಗಳನ್ನೇ ಮಕ್ಕಳಿಗೆ ಒದಗಿಸಬೇಕು. ನಾಡಗೀತೆಯನ್ನು ವಿರೂಪಗೊಳಿಸಿ, ನಾಡಧ್ವಜವನ್ನು ಅವಮಾನಿಸಿದ್ದಲ್ಲದೆ ಈಗಿನ ಪರಿಷ್ಕೃತ ಪಠ್ಯಪುಸ್ತಗಳಲ್ಲಿ ಅನೇಕ ಮಹನೀಯರಿಗೆ ಅವಮಾನ ಮಾಡಿ ರಾಜ್ಯದ ಜನತೆಯ ಭಾವನೆಗೆ ಧಕ್ಕೆ ತಂದು ಸಮಾಜದಲ್ಲಿ ಶಾಂತಿಭಂಗಪಡಿಸಲು ಯತ್ನಿಸಿರುವ ಚಕ್ರತೀರ್ಥನನ್ನು ತಕ್ಷಣವೇ ಬಂಧಿಸಿ ಕಾನೂನು ಕ್ರಮ ಜರುಗಿಸಬೇಕು. ವಿವಾದಿತ ವ್ಯಕ್ತಿಯನ್ನು ಸಮಿತಿಯ ಅಧ್ಯಕ್ಷನನ್ನಾಗಿ ನೇಮಿಸಿ ಆತನ ಬೆನ್ನಿಗೆ ನಿಂತು ಈ ಎಲ್ಲಾ ಕೆಟ್ಟಬೆಳವಣಿಗೆ ಅನಾಹುತ ಮತ್ತು ನಷ್ಟಗಳಿಗೆ ನೇರ ಕಾರಣವಾಗಿರುವ ಶಿಕ್ಷಣ ಸಚಿವರಾದ ಬಿ.ಸಿ.ನಾಗೇಶ್ ತಕ್ಷಣವೇ ರಾಜೀನಾಮೆ ನೀಡಬೇಕು” ಎಂದು ಹೋರಾಟ ಸಮಿತಿಯು ಆಗ್ರಹಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...