Homeಕರ್ನಾಟಕಬೆಂಗಳೂರು: ಮದುವೆಯಾಗಲು ನಿರಾಕರಿಸಿದ ಮಹಿಳೆ ಮೇಲೆ ಆಸಿಡ್ ದಾಳಿ, ಆರೋಪಿ ಬಂಧನ

ಬೆಂಗಳೂರು: ಮದುವೆಯಾಗಲು ನಿರಾಕರಿಸಿದ ಮಹಿಳೆ ಮೇಲೆ ಆಸಿಡ್ ದಾಳಿ, ಆರೋಪಿ ಬಂಧನ

- Advertisement -
- Advertisement -

ಬೆಂಗಳೂರಿನಲ್ಲಿ ಮತ್ತೊಂದು ಆಸಿಡ್ ದಾಳಿ ಪ್ರಕರಣ ವರದಿಯಾಗಿದೆ. ಮದುವೆಯಾಗಲು ನಿರಾಕರಿಸಿದ ಕಾರಣ ಕುಮಾರಸ್ವಾಮಿ ಲೇಔಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 32 ವರ್ಷದ ವಿಚ್ಛೇದಿತ ಮಹಿಳೆ ಮೇಲೆ 36 ವರ್ಷದ ವ್ಯಕ್ತಿ ಆಸಿಡ್ ಎರಚಿ ವಿಕೃತಿ ಮೆರೆದಿದ್ದಾನೆ.

36 ವರ್ಷದ ಆರೋಪಿ ಅಹ್ಮದ್ ಎಂಬಾತ ಕುಮಾರಸ್ವಾಮಿ ಲೇಔಟ್ ಪೊಲೀಸ್ ಠಾಣೆ ಬಳಿಯ ಜನನಿಬಿಡ ಸಾರಕ್ಕಿ ಜಂಕ್ಷನ್‌ನಲ್ಲಿ ಕೃತ್ಯ ಎಸಗಿದ್ದಾನೆ. ಶುಕ್ರವಾರ ಬೆಳಗ್ಗೆ 9.30ರ ಸುಮಾರಿಗೆ ಈ ಘಟನೆ ನಡೆದಿದ್ದು, ಮಹಿಳೆ ಅಪಾಯದಿಂದ ಪಾರಾಗಿದ್ದಾರೆ. ಆರೋಪಿಯನ್ನು ಬಂಧಿಸಲಾಗಿದೆ.

ಬೆಂಗಳೂರು ನಿವಾಸಿ ಅಹ್ಮದ್ ಮತ್ತು ಇಲ್ಯಾಸ್ ನಗರದ ನಿವಾಸಿಯಾಗಿರುವ ಮಹಿಳೆ ಒಂದೇ ಅಗರಬತ್ತಿ ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದ ಕಾರಣ ಮೂರು ವರ್ಷಗಳಿಂದ ಪರಸ್ಪರ ಪರಿಚಯವಿದ್ದರು. ಮಹಿಳೆ ವಿಚ್ಛೇದಿತರಾಗಿದ್ದು, ಮೂರು ಮಕ್ಕಳನ್ನು ಹೊಂದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿ: ಆ್ಯಸಿಡ್ ದಾಳಿ: ಆರೋಪಿ ಬಂಧನಕ್ಕೆ ಆಗ್ರಹಿಸಿ ಎಎಪಿ ಪ್ರತಿಭಟನೆ

ಅಹ್ಮದ್ ಮತ್ತು ಮಹಿಳೆ ಒಂದೂವರೆ ವರ್ಷಗಳಿಂದ ಸಂಬಂಧ ಹೊಂದಿದ್ದರು. ಅಹ್ಮದ್‌ಗೂ ಮದುವೆಯಾಗಿ ಮಕ್ಕಳಿದ್ದಾರೆ. ಈತ ಎರಡನೇ ಮದುವೆಯಾಗಲು ಬಯಸಿ, ಮಹಿಳೆಯನ್ನು ಒತ್ತಾಯಿಸಿದ್ದಾರೆ. ಆಕೆ ಮದುವೆಗೆ ನಿರಾಕರಿಸಿದ್ದಾರೆ. ಈ ವಿಷಯವಾಗಿ ಇಬ್ಬರ ನಡುವೆ ಹಲವಾರು ಬಾರಿ ಜಗಳವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

“ಶುಕ್ರವಾರ ಬೆಳಿಗ್ಗೆ, ಇಬ್ಬರು ಇದೇ ವಿಷಯದ ಬಗ್ಗೆ ಜಗಳವಾಡಿದ್ದರು. ಆಕೆ ತನ್ನ ಮದುವೆಯ ಪ್ರಸ್ತಾಪವನ್ನು ನಿರಾಕರಿಸಿದಾಗ ಮಹಿಳೆಯ ಮುಖದ ಮೇಲೆ ಆಸಿಡ್ ಎಸೆದಿದ್ದಾನೆ. ಮಹಿಳೆ ಪಾರಾಗುವಲ್ಲಿ ಯಶಸ್ವಿಯಾಗಿದ್ದಾರೆ, ಆದರೆ ಆಕೆಯ ಬಲಗಣ್ಣಿಗೆ ಗಾಯಗಳಾಗಿವೆ. ದಾರಿಹೋಕರು ಆಕೆಯನ್ನು ಹತ್ತಿರದ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಅಲ್ಲಿ ಆಕೆಯ ಕಣ್ಣುಗಳನ್ನು ಸ್ವಚ್ಛಗೊಳಿಸಲಾಗಿದ್ದು, ಆಕೆಯ ಕಣ್ಣಿನ ಮೇಲೆ ಯಾವುದೇ ಅಡ್ಡಪರಿಣಾಮ ಬೀರಲಿಲ್ಲ ಎಂದು ತಿಳಿದುಬಂದಿದೆ. ಮಹಿಳೆ ಪ್ರಾಣಾಪಾಯದಿಂದ ಪಾರಾಗಿದ್ದು, ಶೀಘ್ರದಲ್ಲೇ ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗುವುದು” ಎಂದು ಪೊಲೀಸ್ ಉಪ ಆಯುಕ್ತ (ದಕ್ಷಿಣ) ಹರೀಶ್ ಪಾಂಡೆ ಹೇಳಿದ್ದಾರೆ.

ನಗರದಲ್ಲಿ ಏಪ್ರಿಲ್ 28 ರಂದು ಮಾಗಡಿ ರಸ್ತೆಯ ಸುಂಕದಕಟ್ಟೆಯಲ್ಲಿ ಕೆಲಸಕ್ಕೆ ಹೋಗುತ್ತಿದ್ದ 24 ವರ್ಷದ ಯುವತಿ ಮೇಲೆ ನಾಗೇಶ್ ಬಾಬು ಎಂಬಾತ ಆಸಿಡ್ ದಾಳಿ ನಡೆಸಿದ್ದ.


ಇದನ್ನೂ ಓದಿ: ಭಿಕ್ಷೆಗೆ ಬಂದ ಫಕೀರರ ಮೇಲೆ ಹಲ್ಲೆ ನಡೆಸಿ ‘ಜೈಶ್ರೀರಾಮ್’ ಹೇಳಿಸಿದ ದುಷ್ಕರ್ಮಿಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...