Homeಮುಖಪುಟಇತಿಹಾಸವನ್ನು ಯಾರಾದರೂ ಹೇಗೆ ಬದಲಾಯಿಸಬಹುದು?: ಅಮಿತ್ ಶಾ ಹೇಳಿಕೆ ನಿತೀಶ್ ಕುಮಾರ್‌ ಟಾಂಗ್

ಇತಿಹಾಸವನ್ನು ಯಾರಾದರೂ ಹೇಗೆ ಬದಲಾಯಿಸಬಹುದು?: ಅಮಿತ್ ಶಾ ಹೇಳಿಕೆ ನಿತೀಶ್ ಕುಮಾರ್‌ ಟಾಂಗ್

’ನಾವೀಗ ಸ್ವತಂತ್ರರಾಗಿದ್ದು, ನಮ್ಮ ಇತಿಹಾಸವನ್ನು ನಾವೇ ಬರೆಯಬಹುದು’ ಎಂದು ಗೃಹ ಸಚಿವ ಅಮಿತ್ ಶಾ ಹೇಳಿದ್ದರು.

- Advertisement -
- Advertisement -

“ನಾವೀಗ ಸ್ವತಂತ್ರರಾಗಿದ್ದು, ಸತ್ಯವನ್ನು ಬರೆಯುವುದನ್ನು ಯಾರೂ ತಡೆಯಲಾರರು. ನಮ್ಮ ಇತಿಹಾಸವನ್ನು ನಾವೇ ಬರೆಯಬಹುದು” ಎಂದು ಗೃಹ ಸಚಿವ ಅಮಿತ್ ಶಾ ಹೇಳಿಕೆಗೆ ಟಾಂಗ್ ನೀಡಿರುವ ಮಿತ್ರ ಪಕ್ಷದ ಮುಖ್ಯಮಂತ್ರಿ ನಿತೀಶ್ ಕುಮಾರ್‌, ’ಇತಿಹಾಸವನ್ನು ಯಾರಾದರೂ ಹೇಗೆ ಬದಲಾಯಿಸಬಹುದು?’ ಎಂದು ಪ್ರಶ್ನಿಸಿದ್ದಾರೆ.

ಪಾಟ್ನಾದಲ್ಲಿ ಮಾಧ್ಯಮದವರು ಅಮಿತ್ ಶಾ ಅವರ ಹೇಳಿಕೆಗೆ ನಿಮ್ಮ ಅಭಿಪ್ರಾಯವೇನು ಎಂಬ ಪ್ರಶ್ನೆಗೆ ಉತ್ತರಿಸಿರುವ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್‌, “ನೀವು ಇತಿಹಾಸವನ್ನು ಬದಲಾಯಿಸುತ್ತೀರಾ? ಅದನ್ನು ಹೇಗೆ ಬದಲಾಯಿಸಬಹುದು ಎಂದು ನನಗೆ ಅರ್ಥವಾಗುತ್ತಿಲ್ಲ. ಇತಿಹಾಸವು ಇತಿಹಾಸವಾಗಿದೆ” ಎಂದಿದ್ದಾರೆ.

ಪತ್ರಕರ್ತರ ಪ್ರಶ್ನೆಗಳಿಗೆ ಉತ್ತರಿಸಿರುವ ಅವರು, ’ಭಾಷೆ ವಿಷಯ ಬೇರೆ. ಆದರೆ, ನೀವು ಮೂಲಭೂತ ಇತಿಹಾಸವನ್ನು ಬದಲಾಯಿಸಲು ಸಾಧ್ಯವಿಲ್ಲ’ ಎಂದಿದ್ದಾರೆ. ಇತಿಹಾಸದ ಪುಸ್ತಕಗಳಲ್ಲಿ ಮೊಘಲರಿಗೆ ಅಸಮಾನವಾಗಿ ಹೆಚ್ಚಿನ ಪ್ರಾಮುಖ್ಯತೆ ನೀಡಲಾಗಿದೆ ಎಂದು ಗೃಹ ಸಚಿವ ಅಮಿತ್ ಶಾ ಹೇಳಿದ್ದರು.

ಇದನ್ನೂ ಓದಿ: ‘ಸ್ವಚ್ಛ ಭಾರತ ಅಭಿಯಾನ’ದ ನಡುವೆಯೂ, ವಿಶ್ವದ ಅತ್ಯಂತ ಕೆಟ್ಟ ಪರಿಸರ ಆರೋಗ್ಯ ಹೊಂದಿರುವ ದೇಶವಾಗಿ ಭಾರತ!

ಭಾರತದ ಹೆಚ್ಚಿನ ಇತಿಹಾಸಕಾರರು ಪಾಂಡ್ಯರು ಮತ್ತು ಚೋಳರಂತಹ ಅನೇಕ ಸಾಮ್ರಾಜ್ಯಗಳ ವೈಭವದ ಆಡಳಿತಗಳನ್ನು ನಿರ್ಲಕ್ಷಿಸಿ ಮೊಘಲರ ಇತಿಹಾಸವನ್ನು ಮಾತ್ರ ದಾಖಲಿಸಲು ಪ್ರಾಮುಖ್ಯತೆ ನೀಡಿದ್ದಾರೆ ಎಂದು ಒಕ್ಕೂಟ ಸರ್ಕಾರದ ಗೃಹ ಸಚಿವ ಅಮಿತ್ ಶಾ ಶುಕ್ರವಾರ (ಜೂನ್.10) ಆರೋಪಿಸಿ, “ಈಗ ನಾವು ಸ್ವತಂತ್ರರಾಗಿರುವುದರಿಂದ, ಇತಿಹಾಸ ಬರೆಯುವುದನ್ನು ಯಾರೂ ತಡೆಯಲು ಸಾಧ್ಯವಿಲ್ಲ” ಎಂದು ಹೇಳಿದ್ದರು.

“ನಾನು ಇತಿಹಾಸಕಾರರಿಗೆ ಹೇಳಲು ಬಯಸುವುದೇನೆಂದರೆ, ನಾವು ಅನೇಕ ಸಾಮ್ರಾಜ್ಯಗಳನ್ನು ಹೊಂದಿದ್ದೆವು. ಆದರೆ ಇತಿಹಾಸಕಾರರು ಮೊಘಲರ ಮೇಲೆ ಮಾತ್ರ ಕೇಂದ್ರೀಕರಿಸಿದ್ದಾರೆ ಮತ್ತು ಅವರ ಬಗ್ಗೆ ಹೆಚ್ಚಾಗಿ ಬರೆದಿದ್ದಾರೆ. ಪಾಂಡ್ಯ ಸಾಮ್ರಾಜ್ಯವು 800 ವರ್ಷಗಳ ಕಾಲ ಆಳಿತು. ಅಹೋಮ್ ಸಾಮ್ರಾಜ್ಯವು ಅಸ್ಸಾಂ ಅನ್ನು 650 ವರ್ಷಗಳ ಕಾಲ ಆಳಿತು. ಅಹೋಮರು ಭಕ್ತಿಯಾರ್ ಖಿಲ್ಜಿ, ಔರಂಗಜೇಬ್ ಅವರನ್ನು ಸೋಲಿಸಿ ಅಸ್ಸಾಂನ ಸಾರ್ವಭೌಮತ್ವವನ್ನು ಉಳಿಸಿಕೊಂಡಿದ್ದರು. ಪಲ್ಲವ ಸಾಮ್ರಾಜ್ಯವು 600 ವರ್ಷಗಳ ಕಾಲ ಆಳಿತು. ಚೋಳರು 600 ವರ್ಷಗಳ ಕಾಲ ಆಳಿದರು”

“ಮೌರ್ಯರು ಇಡೀ ದೇಶವನ್ನು – ಅಫ್ಘಾನಿಸ್ತಾನದಿಂದ ಲಂಕಾದವರೆಗೆ 550 ವರ್ಷಗಳ ಕಾಲ ಆಳಿದರು. ಸಾತವಾಹನರು 500 ವರ್ಷಗಳ ಕಾಲ ಆಳಿದರು. ಗುಪ್ತರು 400 ವರ್ಷಗಳ ಕಾಲ ಆಳಿದರು ಮತ್ತು ಗುಪ್ತ ಚಕ್ರವರ್ತಿ ಸಮುದ್ರ ಗುಪ್ತನು ಮೊದಲ ಬಾರಿಗೆ ಅಖಂಡ ಭಾರತವನ್ನು ಒಟ್ಟುಗೂಡಿಸಿ ಇಡೀ ದೇಶದೊಂದಿಗೆ ಸಾಮ್ರಾಜ್ಯವನ್ನು ಸ್ಥಾಪಿಸಿದನು. ಆದರೆ ಅವರ ಬಗ್ಗೆ ಯಾವುದೇ ಉಲ್ಲೇಖವಿರುವ ಪುಸ್ತಕ ಇಲ್ಲ. ನಾವೀಗ ಸ್ವತಂತ್ರರಾಗಿದ್ದು, ಸತ್ಯವನ್ನು ಬರೆಯುವುದನ್ನು ಯಾರೂ ತಡೆಯಲಾರರು. ನಮ್ಮ ಇತಿಹಾಸವನ್ನು ನಾವೇ ಬರೆಯಬಹುದು” ಎಂದು ಹೇಳಿದ್ದರು.

ಬಿಹಾರ ಮುಖ್ಯಮಂತ್ರಿ ನಿತೀಶ್‌ ಕುಮಾರ್‌ ಇತ್ತೀಚೆಗೆ ರಾಜ್ಯದಲ್ಲಿ ಮತಾಂತರ ವಿರೋಧಿ ಕಾನೂಣಿನ ಅಗತ್ಯವಿಲ್ಲ ಎಂದು ಹೇಳಿ ಬಿಜೆಪಿಗೆ ತಿರುಗೇಟು ನೀಡಿದ್ದರು.


ಇದನ್ನೂ ಓದಿ: ನಾವೀಗ ಸ್ವತಂತ್ರರಾಗಿದ್ದು, ನಮ್ಮ ಇತಿಹಾಸ ಬರೆಯುವ ಸಮಯ ಬಂದಿದೆ: ಅಮಿತ್ ಶಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಂದೇ ಮಾತರಂ ಗೀತೆಯ 6 ಚರಣಕ್ಕೆ ಕರ್ನಾಟಕ ಸರ್ಕಾರದ ಬ್ರೇಕ್

ವಂದೇ ಮಾತರಂ ಗೀತೆಯ ಗಾಯನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿರ್ಧಾರ ಮತ್ತು ಕಡ್ಡಾಯ ನೀತಿಗೆ ಕರ್ನಾಟಕ ಸರ್ಕಾರ ನೇರವಾಗಿ ಸೆಡ್ಡು ಹೊಡೆದಿದೆ. ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಸಂಪೂರ್ಣ...

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...

SIR: ಪಂಜಾಬ್‌ ಮತದಾರರ ಪಟ್ಟಿಯಿಂದ ಡಿಲೀಟ್ ಆಗಿದ್ದ ರಾಘವ್ ಚಡ್ಡಾ ಹೆಸರು ದೆಹಲಿಯಲ್ಲಿ ಎಂಟ್ರಿ!

ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರು ಪಂಜಾಬ್‌ನ ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ಕೆಲವೇ ದಿನಗಳಲ್ಲಿ, ದೆಹಲಿಯ ಮತದಾರರ ಪಟ್ಟಿಯಲ್ಲಿ ದಿಢೀರನೆ ಪ್ರತ್ಯಕ್ಷವಾಗಿರುವುದು ದೇಶಾದ್ಯಂತ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ...

ರಾಜ್ಯ ಕಾಂಗ್ರೆಸ್‌ಗೆ 35 ನೂತನ ಜಿಲ್ಲಾಧ್ಯಕ್ಷರ ನೇಮಕ; ಹೈಕಮಾಂಡ್ ಪಟ್ಟಿಯಲ್ಲಿ ಮಹಿಳೆಯರಿಗಿಲ್ಲ ಪ್ರಾತಿನಿಧ್ಯ!

ಕರ್ನಾಟಕ ಕಾಂಗ್ರೆಸ್‌ನ ಬಹುನಿರೀಕ್ಷಿತ ಜಿಲ್ಲಾ ಪುನರ್‌ರಚನೆಗೆ ಕೊನೆಗೂ ಚಾಲನೆ ದೊರೆತಿದ್ದು, ರಾಜ್ಯದ 35 ಸಾಂಸ್ಥಿಕ ಜಿಲ್ಲಾ ಕಾಂಗ್ರೆಸ್ ಸಮಿತಿಗಳಿಗೆ (DCC) ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ....

ತ್ರಿಪುರ| ಬಿಜೆಪಿ ಬೇಡಿಕೆಗೆ ಸ್ಪಂದಿಸಿದ ಇಸಿಐ; ಗ್ರಾಮ ಸಮಿತಿ ಚುನಾವಣೆ ಹಿನ್ನೆಲೆಯಲ್ಲಿ ಎಸ್‌ಐಆರ್ ಪ್ರಕ್ರಿಯೆ ಮುಂದೂಡಿಕೆ

ಆಡಳಿತರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಬೇಡಿಕೆಗೆ ಸ್ಪಂದಿಸಿರುವ ಭಾರತೀಯ ಚುನಾವಣಾ ಆಯೋಗ (ಇಸಿಐ), ರಾಜ್ಯದ ಬುಡಕಟ್ಟು ಪ್ರದೇಶಗಳಲ್ಲಿ ಸೆಪ್ಟೆಂಬರ್ 28 ರಂದು ನಡೆಯಲಿರುವ ಗ್ರಾಮ ಸಮಿತಿ...

SIR: ಸ್ವತಃ BLO ಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ತಾಂತ್ರಿಕ ಎಡವಟ್ಟುಗಳು ಮತ್ತು ಗೊಂದಲಗಳು ಪ್ರತಿದಿನವೂ ಒಂದಲ್ಲ ಒಂದು ವಿಲಕ್ಷಣ ಘಟನೆಗಳಿಗೆ ಕಾರಣವಾಗುತ್ತಿದ್ದು, ಇದೀಗ ಸ್ವತಃ ಮತದಾರರ ಪಟ್ಟಿ ಪರಿಷ್ಕರಣೆ...

‘ಎಸ್‌ಐಆರ್ ಪ್ರಜಾಪ್ರಭುತ್ವಕ್ಕೆ ವಂಚನೆ’: 2025ಕ್ಕೆ ಹೋಲಿಸಿದರೆ ದೆಹಲಿಯ 58.60 ಲಕ್ಷ ಮತದಾರರ ಹೆಸರುಗಳು ಮಾಯ: ನಾಗರೀಕ ಸಂಘಟನೆಗಳ ಆಕ್ರೋಶ

ನವದೆಹಲಿ: ದೆಹಲಿಯಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಮತದಾರರ ಪಟ್ಟಿಯ ಶುದ್ಧೀಕರಣದ ಸಾಮಾನ್ಯ ಆಡಳಿತಾತ್ಮಕ ಕ್ರಮವಲ್ಲ, ಬದಲಾಗಿ ನಾಗರಿಕರ ಮತದಾನದ ಹಕ್ಕಿನ ಮೇಲೆ ಗಂಭೀರ ಪರಿಣಾಮ ಬೀರುವ...