Homeಮುಖಪುಟಪ್ರವಾದಿ ನಿಂದನೆ: ಅಮಾನತುಗೊಂಡ ಬಿಜೆಪಿ ವಕ್ತಾರೆ ನೂಪುರ್‌ ಶರ್ಮಾಗೆ ಕೋಲ್ಕತ್ತಾ ಪೊಲೀಸರ ಸಮನ್ಸ್

ಪ್ರವಾದಿ ನಿಂದನೆ: ಅಮಾನತುಗೊಂಡ ಬಿಜೆಪಿ ವಕ್ತಾರೆ ನೂಪುರ್‌ ಶರ್ಮಾಗೆ ಕೋಲ್ಕತ್ತಾ ಪೊಲೀಸರ ಸಮನ್ಸ್

- Advertisement -
- Advertisement -

ಪ್ರವಾದಿ ಮುಹಮ್ಮದ್ ಕುರಿತ ಅವಹೇಳನಾಕಾರಿ ಹೇಳಿಕೆಗೆ ಸಂಬಂಧಿಸಿದಂತೆ ಅಮಾನತುಗೊಂಡಿರುವ ಬಿಜೆಪಿ ವಕ್ತಾರೆ ನೂಪುರ್ ಶರ್ಮಾ ಅವರನ್ನು ಕೋಲ್ಕತ್ತಾ ಪೊಲೀಸರು ಮುಂದಿನ ಸೋಮವಾರ (ಜೂನ್ 20) ವಿಚಾರಣೆಗೆ ಕರೆದಿದ್ದಾರೆ.

ಪ್ರಕರಣ ಕುರಿತಂತೆ ಅವರ ಹೇಳಿಕೆಯನ್ನು ದಾಖಲಿಸಿಕೊಳ್ಳಲು ಜೂನ್ 20 ರಂದು ನರ್ಕೆಲ್ದಂಗ ಪೊಲೀಸ್ ಠಾಣೆಗೆ ಹಾಜರಾಗುವಂತೆ ತಿಳಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ತೃಣಮೂಲ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ಪ್ರಧಾನ ಕಾರ್ಯದರ್ಶಿ ಅಬುಲ್ ಸೊಹೈಲ್, ನೂಪುರ್‌ ಶರ್ಮಾ ಅವರ ಹೇಳಿಕೆಗಳ ಮೇಲೆ ಕೊಂಟೈ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಿದ್ದಾರೆ. ಟಿವಿ ಚರ್ಚೆಯ ಸಂದರ್ಭದಲ್ಲಿ ನೂಪುರ್‌ ಶರ್ಮಾ, ಪ್ರವಾದಿ ಮುಹಮ್ಮದ್ ಕುರಿತು ಅವಹೇಳನಾಕರಿ ಹೇಳಿಕೆ ವಿರೋಧಿಸಿ ದೇಶದ ಹಲವಾರು ಭಾಗಗಳಲ್ಲಿ ಹಿಂಸಾತ್ಮಕ ಪ್ರತಿಭಟನೆ ನಡೆದಿದೆ.

ಇದನ್ನೂ ಓದಿ: ರಾಜಸ್ಥಾನ: ಮದ್ಯಪಾನ ಮಾಡಲು ನಿರಾಕರಿಸಿದ ಬುಡಕಟ್ಟು ಯುವಕನ ಮೇಲೆ ಅಮಾನುಷ ಹಲ್ಲೆ

ಇದರ ಜೊತೆಗೆ ಮಹಾರಾಷ್ಟ್ರದ ಭಿವಂಡಿ ಪೊಲೀಸರಿಂದ ಸಮನ್ಸ್ ಪಡೆದಿರುವ ನೂಪುರ್ ಶರ್ಮಾ, ತಮ್ಮ ಹೇಳಿಕೆಯನ್ನು ದಾಖಲಿಸಲು ಪೊಲೀಸರ ಮುಂದೆ ಹಾಜರಾಗಲು ಸಮಯ ಕೋರಿದ್ದಾರೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ನೂಪುರ್ ಶರ್ಮಾ ಅವರಿಗೆ ಸಮಯಾವಕಾಶ ನೀಡಲಾಗಿದ್ದು, ಸೋಮವಾರ (ಜೂನ್.13) ಭಿವಂಡಿ ಪೊಲೀಸರ ಮುಂದೆ ಹಾಜರಾಗುವುದಿಲ್ಲ ಎಂದು ತಿಳಿಸಿದ್ದಾರೆ. ಆದರೆ, ಆಕೆಗೆ ಎಷ್ಟು ಸಮಯವನ್ನು ನೀಡಲಾಗಿದೆ ಎಂಬುದನ್ನು ಅಧಿಕಾರಿ ನಿರ್ದಿಷ್ಟಪಡಿಸಿಲ್ಲ.

ಮೇ 30 ರಂದು ರಾಝಾ ಅಕಾಡೆಮಿಯ ಪ್ರತಿನಿಧಿಯೊಬ್ಬರು ನೀಡಿದ ದೂರಿನ ಮೇರೆಗೆ ಥಾಣೆ ಜಿಲ್ಲೆಯ ಭಿವಂಡಿ ಪೊಲೀಸರು ಟಿವಿ ಚರ್ಚೆಯ ಸಂದರ್ಭದಲ್ಲಿ ಪ್ರವಾದಿಯವರ ಬಗ್ಗೆ ಮಾಡಿದ ಹೇಳಿಕೆಗಳ ಮೇಲೆ ನೂಪುರ್ ಶರ್ಮಾ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಜೊತೆಗೆ ಪ್ರವಾದಿ ವಿರುದ್ಧ ವಿವಾದಾತ್ಮಕ ಟ್ವೀಟ್‌ಗಳನ್ನು ಮಾಡಿದ ಆರೋಪದ ಮೇಲೆ ಉಚ್ಛಾಟಿತ ಬಿಜೆಪಿ ಕಾರ್ಯಾಧ್ಯಕ್ಷ ನವೀನ್ ಕುಮಾರ್ ಜಿಂದಾಲ್ ವಿರುದ್ಧವೂ ಅವರು ಪ್ರಕರಣ ದಾಖಲಿಸಿದ್ದಾರೆ.


ಇದನ್ನೂ ಓದಿ: ಉತ್ತರ ಪ್ರದೇಶ: ಪ್ರತಿಭಟನಾಕಾರರ ಮನೆ ಮೇಲೆ 2ನೇ ದಿನವೂ ಮುಂದುವರೆದ ಬುಲ್ಡೋಜರ್‌ ದಾಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...