Homeಮುಖಪುಟಯುಪಿ ಪೊಲೀಸರಿಂದ ಅಮಾನವೀಯ ಹಲ್ಲೆ : ಮಾಹಿತಿಯಿಲ್ಲ ಎಂದ ಪೊಲೀಸರು, ದೂರು ನೀಡಲು ಹೆದರುತ್ತಿರುವ ಕುಟುಂಬಗಳು

ಯುಪಿ ಪೊಲೀಸರಿಂದ ಅಮಾನವೀಯ ಹಲ್ಲೆ : ಮಾಹಿತಿಯಿಲ್ಲ ಎಂದ ಪೊಲೀಸರು, ದೂರು ನೀಡಲು ಹೆದರುತ್ತಿರುವ ಕುಟುಂಬಗಳು

- Advertisement -
- Advertisement -

ಕಳೆದ ನಾಲ್ಕು ದಿನಗಳ ಹಿಂದೆ ಪೊಲೀಸ್‌ ಠಾಣೆಯೊಂದರಲ್ಲಿ ಇಬ್ಬರು ಪೊಲೀಸರು 9 ಮಂದಿಯನ್ನು ಅಮಾನವೀಯವಾಗಿ ಥಳಿಸುತ್ತಿರುವ ವಿಡಿಯೋವನ್ನು ಉತ್ತರ ಪ್ರದೇಶದ ಬಿಜೆಪಿ ಶಾಸಕ ಶಲಭ್ ಮಣಿ ತ್ರಿಪಾಠಿ ತಮ್ಮ ಟ್ವಿಟ್ಟರ್‌ನಲ್ಲಿ “ಗಲಭೆಕೋರರಿಗೆ ರಿಟರ್ನ್ ಗಿಫ್ಟ್” ಎಂದು ಹಂಚಿಕೊಂಡಿದ್ದರು. ಆದರೆ ಇದರ ಬಗ್ಗೆ ಯಾವುದೇ ಮಾಹಿತಿಯಿಲ್ಲ ಎಂದು ಪೊಲೀಸರು  ಹೇಳಿದ್ದಾರೆ.

ವರದಿಗಳ ಪ್ರಕಾರ, ಪ್ರವಾದಿ ಮುಹಮ್ಮದ್ ವಿರುದ್ಧ ವಿವಾದಾತ್ಮಕ ಹೇಳಿಕೆಗಳನ್ನು ನೀಡಿದ್ದ ಇಬ್ಬರು ಮಾಜಿ ಬಿಜೆಪಿ ವಕ್ತಾರರ ವಿರುದ್ಧ ಶುಕ್ರವಾರದ ಪ್ರಾರ್ಥನೆಯ ನಂತರ ಪ್ರತಿಭಟನೆಗಳು ಮತ್ತು ಘರ್ಷಣೆಗಳು ಭುಗಿಲೆದ್ದಿರುವ ಯುಪಿಯ ಸಹರಾನ್‌ಪುರದ ಪೊಲೀಸ್ ಠಾಣೆಯಲ್ಲಿ ಈ ಘಟನೆ ನಡೆದಿದೆ ಎನ್ನಲಾಗಿತ್ತು.

ಘಟನೆಯ ವಿಡಿಯೋ ವೈರಲ್ ಆಗಿ ನಾಲ್ಕು ದಿನಗಳಾದರೂ ಕೂಡ , ಘಟನೆ ನಡೆದಿರುವ ಸಹರಾನ್‌ಪುರದ ಪೊಲೀಸರು ತಮಗೆ ಈ ಬಗ್ಗೆ ಯಾವುದೇ ಮಾಹಿತಿ ಇಲ್ಲ. ಈ ಕುರಿತು ಯಾರೂ ದೂರು ನೀಡಿಲ್ಲ. ಹೀಗಾಗಿ ಪ್ರಕರಣದಲ್ಲಿ ಯಾವುದೇ ತನಿಖೆ ನಡೆಸುತ್ತಿಲ್ಲ ಎಂದು ಹೇಳಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದ ವಿಡಿಯೋದಲ್ಲಿ, ಇಬ್ಬರು ಪೊಲೀಸರು 9 ಜನರನ್ನು ಲಾಠಿಯಿಂದ ಅಮಾನವೀಯವಾಗಿ, ಮನಬಂದಂತೆ ಥಳಿಸುತ್ತಿದ್ದಾರೆ. ಒಂಬತ್ತು ಮಂದಿ ಕೈ ಮುಗಿದ್ದು ಬೇಡಿಕೊಂಡರು ಬಿಡದೆ ಲಾಠಿಯಿಂದ ಥಳಿಸಲಾಗುತ್ತಿದೆ. ಪೊಲೀಸರ ವರ್ತನೆಗೆ ಜನರು ಆಕ್ರೋಶ ಹೊರಹಾಕಿದ್ದರು.

ಇದನ್ನೂ ಓದಿ: ಯುಪಿ: 9 ಜನರ ಮೇಲೆ ಪೊಲೀಸರ ಅಮಾನವೀಯ ಹಲ್ಲೆ, ರಿಟರ್ನ್ ಗಿಫ್ಟ್ ಎಂದ ಬಿಜೆಪಿ ಶಾಸಕ

ವಿಡಿಯೋದಲ್ಲಿರುವ ಯುವಕರಲ್ಲಿ ಒಬ್ಬರಾದ ಮೊಹಮ್ಮದ್ ಅಲಿ ಸಹರಾನ್‌ಪುರದ ಪಿರ್ ಗಲಿಯಲ್ಲಿ ವಾಸಿಸುತ್ತಿದ್ದಾರೆ. ಕೈ ಮುರಿಯುತ್ತದೆ ಹೊಡೆಯಬೇಡಿ ಎಂದು ಬೇಡಿಕೊಳ್ಳುತ್ತಿರುವ ಮಗನ ವಿಡಿಯೋ ನೋಡಿ ಆತನ ತಾಯಿ ಅಸ್ಮಾ ಕಣ್ಣೀರಿಟ್ಟಿದ್ದಾರೆ. ಇನ್ನು ವಿಡಿಯೋದಲ್ಲಿ ಹಲ್ಲೆಗೊಳಗಾಗುತ್ತಿರುವ ಮೊಹಮ್ಮದ್ ಸೈಫ, ಮೊಹಮ್ಮದ್ ಸಫಾಜ್, ರಾಹತ್ ಅಲಿ ಮತ್ತು ಇಮ್ರಾನ್ ಕೂಡ ಸಹರಾನ್‌ಪುರದವರು ಎಂದು ಕುಟುಂಬದವರು ದೃಢಪಡಿಸಿದ್ದಾರೆ.
ಈ ವ್ಯಕ್ತಿಗಳನ್ನು ಥಳಿಸಿ ನಾಲ್ಕು ದಿನಗಳು ಕಳೆದರೂ ಸಹಾರನ್‌ಪುರದಲ್ಲಿ ಇನ್ನೂ ಯಾವುದೇ ತನಿಖೆ ನಡೆದಿಲ್ಲ, ಈ ವಿಡಿಯೋ ಮತ್ತು ಘಟನೆ ಎಲ್ಲಿ ನಡೆದಿದೆ ಎಂಬುದರ ಬಗ್ಗೆ ತಮಗೆ ತಿಳಿದಿಲ್ಲ ಎಂದು ಪೊಲೀಸರು ಹೇಳಿದ್ದಾರೆ. ಸಂತ್ರಸ್ತ ಕುಟುಂಬಗಳು ಪೊಲೀಸರನ್ನು ಎದುರಿಸಲು, ಲಿಖಿತ ದೂರು ದಾಖಲಿಸಲು ತುಂಬಾ ಹೆದರುತ್ತಿದ್ದಾರೆ. ಉತ್ತರ ಪ್ರದೇಶವು ದೇಶದಲ್ಲೇ ಅತಿ ಹೆಚ್ಚು ಲಾಕಪ್‌ ಡೆತ್‌ಗಳಲ್ಲಿ ಮೊದಲ ಸ್ಥಾನದಲ್ಲಿದೆ.


ಇದನ್ನೂ ಓದಿ: ಮಧ್ಯಪ್ರದೇಶ: ಪಿಜ್ಜಾ ಡೆಲಿವರಿ ಯುವತಿಯ ಮೇಲೆ ನಾಲ್ವರು ಯುವತಿಯರಿಂದ ಅಮಾನವೀಯ ಹಲ್ಲೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉಪಚುನಾವಣೆ : ಬಿಹಾರದ ಬಂಕಿಪುರದಲ್ಲಿ ಪ್ರಶಾಂತ್ ಕಿಶೋರ್‌ಗೆ ಐತಿಹಾಸಿಕ ಗೆಲುವು; ಇನ್ನೆರಡು ಕ್ಷೇತ್ರಗಳು ಕಾಂಗ್ರೆಸ್-ಬಿಜೆಪಿ ಪಾಲು

ಬಿಹಾರದ ಬಂಕಿಪುರ, ಗುಜರಾತ್‌ನ ಮಂಜಲ್‌ಪುರ ಮತ್ತು ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರಗಳಿಗೆ ಜುಲೈ 30ರಂದು ನಡೆದ ಉಪಚುನಾವಣೆಯ ಫಲಿತಾಂಶ ಸೋಮವಾರ (ಆ.3) ಹೊರಬಿದ್ದಿದ್ದಿದೆ. ಬಿಜೆಪಿಯ ಭದ್ರಕೋಟೆ ಎನಿಸಿಕೊಂಡಿದ್ದ, ಕಳೆದ 31 ವರ್ಷಗಳಿಂದ ಬಿಜೆಪಿಯೇ...

‘ಪಂಕ್ಚರ್-ತಲಾ ಬನಾನೆ ವಾಲೆಗಳೇ ಹೆಚ್ಚು’: ನೀಟ್ ಅಕ್ರಮಗಳ ವಿರುದ್ಧ ಪ್ರತಿಭಟಿಸಿದವರ ವಿರುದ್ಧ ನಾಲಿಗೆ ಹರಿಬಿಟ್ಟ ಬಿಜೆಪಿ ನಾಯಕ ರಮೇಶ್ ಬಿಧು

ದೆಹಲಿಯ ಜಂತರ್ ಮಂತರ್‌ನಲ್ಲಿ ‘ನೀಟ್’ (NEET) ಪರೀಕ್ಷೆಯ ಅಕ್ರಮಗಳ ವಿರುದ್ಧ ಧ್ವನಿಯೆತ್ತಿದ ಯುವಜನತೆ ಮತ್ತು ವಿದ್ಯಾರ್ಥಿಗಳ ಹೋರಾಟವನ್ನು ದಮನ ಮಾಡಲು ಯತ್ನಿಸುತ್ತಿರುವ ಬಿಜೆಪಿ, ಈಗ ಅವರ ವಿರುದ್ಧವೇ ಅತ್ಯಂತ ಕೀಳುಮಟ್ಟದ ಇಸ್ಲಾಮೋಫೋಬಿಕ್ ಮತ್ತು...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಖುಲಾಸೆ : ಇಡೀ ವ್ಯವಸ್ಥೆಯೇ ಬ್ರಿಜ್ ಭೂಷಣ್‌ರನ್ನು ರಕ್ಷಿಸಿತು ಎಂದ ವಿನೇಶ್ ಫೋಗಟ್; ಮೇಲ್ಮನವಿ ಸಲ್ಲಿಸಲು ಮಹಿಳಾ ಕುಸ್ತಿಪಟುಗಳ ನಿರ್ಧಾರ

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿದ್ದ ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಹಾಗೂ ಬಿಜೆಪಿ ಮಾಜಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರನ್ನು ದೆಹಲಿಯ ರೋಸ್...

ಕರ್ನಾಟಕದಲ್ಲಿ SIR ಬಿಹಾರ-ಬಂಗಾಳಕ್ಕಿಂತ ಭೀಕರ: ಆಗಸ್ಟ್ 4 ರಂದು ಜನಪರ ಸಂಘಟನೆಗಳಿಂದ ಮಹತ್ವದ ಮಾಧ್ಯಮಗೋಷ್ಠಿ

ಬೆಂಗಳೂರು: ಕರ್ನಾಟಕದಲ್ಲಿ ನಡೆಯುತ್ತಿರುವ ಎಸ್‌ಐಆರ್ (SIR) ಪ್ರಕ್ರಿಯೆಯು ಬಿಹಾರ ಮತ್ತು ಪಶ್ಚಿಮ ಬಂಗಾಳ ರಾಜ್ಯಗಳಿಗಿಂತಲೂ ಅತ್ಯಂತ ಭೀಕರ ರೂಪ ಪಡೆದುಕೊಳ್ಳುತ್ತಿದೆ ಎಂದು 'SIR ವಿರೋಧಿ ಜಾತ್ಯತೀತ ಪಕ್ಷಗಳು ಮತ್ತು ಜನಪರ ಸಂಘಟನೆಗಳ ಒಕ್ಕೂಟ'...

“ನೈರ್ಮಲ್ಯ ಕಾರ್ಮಿಕರು ಕೆಲಸ ಬಿಡಲು ಸಾಧ್ಯವಿಲ್ಲ”: ದೇಶಾದ್ಯಂತ ಪ್ರತಿಭಟನೆಗೆ DASAM ಬೆಂಬಲ, ಉದ್ಯೋಗ ಖಾಯಂಗೊಳಿಸಲು ತೀವ್ರ ಒತ್ತಾಯ

ನವದೆಹಲಿ: ಉದ್ಯೋಗ ಕ್ರಮಬದ್ಧಗೊಳಿಸುವಿಕೆ (ಖಾಯಂಗೊಳಿಸುವುದು), ನ್ಯಾಯಯುತ ವೇತನ, ಸಾಮಾಜಿಕ ಭದ್ರತೆ, ಸುರಕ್ಷಿತ ಕೆಲಸದ ವಾತಾವರಣ ಮತ್ತು ಕೆಲಸದ ಸ್ಥಳದಲ್ಲಿ ಮಾನವ ಘನತೆಯನ್ನು ಎತ್ತಿಹಿಡಿಯುವಂತೆ ಒತ್ತಾಯಿಸಿ ದೇಶದ ನಾನಾ ಭಾಗಗಳಲ್ಲಿ ನೈರ್ಮಲ್ಯ ಕಾರ್ಮಿಕರು ನಡೆಸುತ್ತಿರುವ...

ದ್ವೇಷ ಭಾಷಣ ಪ್ರಕರಣ: ಬಿಜೆಪಿ ನಾಯಕರಾದ ಅನುರಾಗ್‌ ಠಾಕೂರ್‌, ಪರ್ವೇಶ್‌ ವರ್ಮಾಗೆ ಕ್ಲೀನ್ ಚೀಟ್: ಪುನರ್ ಪರಿಶೀಲನಾ ಅರ್ಜಿ ವಜಾಗೊಳಿಸಿದ ಸುಪ್ರೀಂ

ನವದೆಹಲಿ: 2020ರ ದೆಹಲಿಯಲ್ಲಿ ನಡೆದ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರೋಧಿ ಪ್ರತಿಭಟನೆಗಳ ಸಂದರ್ಭದಲ್ಲಿ ಉದ್ರೇಕಕಾರಿ ಹಾಗೂ ದ್ವೇಷಪೂರಿತ ಭಾಷಣ ಮಾಡಿದ ಆರೋಪ ಹೊತ್ತಿದ್ದ ಬಿಜೆಪಿ ನಾಯಕರಾದ ಅನುರಾಗ್ ಠಾಕೂರ್ ಮತ್ತು ಪರ್ವೇಶ್‌...

ಕರ್ನಾಟಕ ಸಚಿವ ಸಂಪುಟ ವಿಸ್ತರಣೆ: ನೂತನ ಸಚಿವರ ಪಟ್ಟಿಗೆ ವರಿಷ್ಠರ ಅನುಮೋದನೆ: ಇಂದು ಸಂಜೆ 4:05 ಕ್ಕೆ ಪ್ರಮಾಣ ವಚನ

ಬಹುನಿರೀಕ್ಷಿತ ಕರ್ನಾಟಕ ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಕೊನೆಗೂ ಮುಹೂರ್ತ ನಿಗದಿಯಾಗಿದ್ದು, ಕಾಂಗ್ರೆಸ್ ಹೈಕಮಾಂಡ್ ನೂತನ ಸಚಿವರ ಪಟ್ಟಿಗೆ ಅಧಿಕೃತ ಅನುಮೋದನೆ ನೀಡಿದೆ. ಇದರೊಂದಿಗೆ ಕಳೆದ ಕೆಲವು ದಿನಗಳಿಂದ ರಾಜ್ಯ ರಾಜಕಾರಣದಲ್ಲಿ ತೀವ್ರ...

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ಪ್ರಕರಣ : WFI ಮಾಜಿ ಅಧ್ಯಕ್ಷ ಬ್ರಿಜ್ ಭೂಷಣ್‌ ಸಿಂಗ್‌ ಖುಲಾಸೆ

ದೆಹಲಿ ನ್ಯಾಯಾಲಯವು ಸೋಮವಾರ (ಆ.3) ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಮತ್ತು ಬಿಜೆಪಿ ನಾಯಕ ಬ್ರಿಜ್ ಭೂಷಣ್ ಸಿಂಗ್ ಅವರನ್ನು ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಪ್ರಕರಣದಿಂದ...

ಪ್ರಶ್ನೆ ಪತ್ರಿಕೆ ಸೋರಿಕೆ : ಫಾಸ್ಟ್‌ ಟ್ರ್ಯಾಕ್ ಕೋರ್ಟ್ ನ್ಯಾಯಾಧೀಶೆ ಒಂದೇ ವಾರದಲ್ಲಿ ವರ್ಗಾವಣೆ

ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳ ವಿಚಾರಣೆಗಾಗಿ ಸ್ಥಾಪಿಸಲಾದ ತ್ವರಿತಗತಿ (ಫಾಸ್ಟ್‌ ಟ್ರ್ಯಾಕ್) ನ್ಯಾಯಾಲಯದ ನೇತೃತ್ವ ವಹಿಸಲು ನೇಮಕಗೊಂಡ ಕೇವಲ ಒಂದು ವಾರದ ನಂತರ, ದೆಹಲಿ ಹೈಕೋರ್ಟ್ ಶನಿವಾರ (ಆಗಸ್ಟ್ 1) ವಿಶೇಷ ನ್ಯಾಯಾಧೀಶರಾದ...

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...