Homeಮುಖಪುಟದೆಹಲಿ: ಕಾಂಗ್ರೆಸ್ ಕಚೇರಿಗೆ ನುಗ್ಗಿ ಮುಖಂಡರು, ಕಾರ್ಯಕರ್ತರ ಮೇಲೆ ಪೊಲೀಸರ ಹಲ್ಲೆ- ಆರೋಪ

ದೆಹಲಿ: ಕಾಂಗ್ರೆಸ್ ಕಚೇರಿಗೆ ನುಗ್ಗಿ ಮುಖಂಡರು, ಕಾರ್ಯಕರ್ತರ ಮೇಲೆ ಪೊಲೀಸರ ಹಲ್ಲೆ- ಆರೋಪ

- Advertisement -
- Advertisement -

ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಅಕ್ರಮ ಹಣ ವರ್ಗಾವಣೆ ಆರೋಪದ ಮೇಲೆ ಕಳೆದ ಮೂರು ದಿನಗಳಿಂದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಜಾರಿ ನಿರ್ದೇಶನಾಲಯದ ಮುಂದೆ ವಿಚಾರಣೆಗೆ ಹಾಜರಾಗುತ್ತಿದ್ದಾರೆ. ಮೂರನೇ ದಿನವಾದ ಬುಧವಾರ ದೆಹಲಿ ಕಾಂಗ್ರೆಸ್‌ನಿಂದ ಭಾರಿ ಪ್ರತಿಭಟನೆ ನಡೆದಿದೆ.

ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ಜಾರಿ ನಿರ್ದೇಶನಾಲಯದ ಹೊರಗಡೆ ಪ್ರತಿಭಟನೆ ನಡೆಸಿದ್ದಾರೆ. ಈ ನಡುವೆ ಪೊಲೀಸರು ದೆಹಲಿಯ ಕಾಂಗ್ರೆಸ್ ಪ್ರಧಾನ ಕಚೇರಿಗೆ ನುಗ್ಗಿ ಕಾರ್ಯಕರ್ತರ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಕಾಂಗ್ರೆಸ್ ಮುಖ್ಯ ಕಾರ್ಯದರ್ಶಿ ರಣದೀಪ್  ಸಿಂಗ್ ಸುರ್ಜೇವಾಲ ಆರೋಪಿಸಿದ್ದಾರೆ.

ಕಾಂಗ್ರೆಸ್ ತನ್ನ ಅಧೀಕೃತ ಟ್ವಿಟರ್‌ ಖಾತೆಯಲ್ಲಿ ಪೊಲೀಸರು ಮತ್ತು ಭದ್ರತಾ ಪಡೆ ಕಾಂಗ್ರೆಸ್ ಕಚೇರಿಗೆ ಗೇಟು ತಳ್ಳಿಕೊಂಡು ನುಗ್ಗುತ್ತಿರುವ ವಿಡಿಯೋವನ್ನು ಹಂಚಿಕೊಂಡು, ಬಿಜೆಪಿ ಸರ್ಕಾರವನ್ನು ಸರ್ವಾಧಿಕಾರಿ ಎಂದು ಟೀಕಿಸಿದೆ.

ಇದನ್ನೂ ಓದಿ: ಕಾಂಗ್ರೆಸ್ ಪ್ರತಿಭಟನೆ: ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್‌ರನ್ನು ಎಳೆದೊಯ್ದ ಪೊಲೀಸರು

ಘಟನೆ ಕುರಿತು ಮಾಧ್ಯಮದವರ ಜೊತೆಗೆ ಮಾತನಾಡಿರುವ ರಣದೀಪ್ ಸಿಂಗ್ ಸುರ್ಜೇವಾಲ, “ಇಂದು ದೆಹಲಿ ಪೊಲೀಸರು ಬಿಜೆಪಿ ಸರ್ಕಾರದ ಬೆಂಬಲದೊಂದಿಗೆ ಬಲವಂತವಾಗಿ ಕಾಂಗ್ರೆಸ್ ಪ್ರಧಾನ ಕಚೇರಿಗೆ ನುಗ್ಗಿ ಕಾಂಗ್ರೆಸ್ ನಾಯಕರು ಮತ್ತು ಕಾರ್ಯಕತ ಮೇಲೆ ಹಲ್ಲೆ ನಡೆಸಿದ್ದಾರೆ. ನಾವು ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿದ್ದರೂ ಬಿಜೆಪಿ ಸರ್ಕರ ಮನತ್ತು ದೆಹಲಿ ಪೊಲೀಸರ ಈ ಗೂಂಡಾ ವರ್ತನೆ ಸಹಿಸಲು ಸಾಧ್ಯವಿಲ್ಲ” ಎಂದಿದ್ದಾರೆ.

“ಮೋದಿ ಸರ್ಕಾರದ ಸಾಕು ಪ್ರಾಣಿಗಳಂತೆ ವರ್ತಿಸುತ್ತಿರವ ದೆಹಲಿ ಪೊಲೀಸ್ ಅಧಿಕಾರಿಗಳ ವರ್ತನೆಯನ್ನು ಸಹಿಸಿಕೊಳ್ಳಲು ಸಾಧ್ಯವಿಲ್ಲ. ಅವರ ಮೇಲೆ ಕಠಿಣ ಕ್ರಮ ಕೈಗೊಳ್ಳಬೇಕು. ಬಲವಂತವಾಗಿ ಕಚೇರಿಗೆ ನುಗ್ಗಿ ಹಲ್ಲೆ ಮಾಡಿದ ಎಲ್ಲಾ ಪೊಲೀಸ್ ಅಧಿಕಾರಿಗಳ ವಿರುದ್ಧ ಎಫ್‌ಐಆರ್‌ ದಾಖಲಿಸಲು ನಾವು ಒತ್ತಾಯಿಸುತ್ತೇವೆ. ಜೊತೆಗೆ ಅವರನ್ನು ಅಮಾನತ್ತು ಮಾಡಿ ವಿಚಾರಣೆ ನಡೆಸಬೇಕು” ಎಂದು ಒತ್ತಾಯಿಸಿದ್ದಾರೆ.

ಇದರ ಜೊತೆಗೆ ನಾಳೆ ದೇಶದ ಎಲ್ಲಾ ರಾಜಭವನಗಳಿಗೆ ಘೇರಾವ್ ಹಾಕಲಾಗುತ್ತದೆ. ಪೊಲೀಸರ ಹಲ್ಲೆ ವಿರೋಧಿಸುವುದರ ಜೊತೆಗೆ ರಾಹುಲ್ ಗಾಂಧಿ ಅವರ ಮೇಲಿನ ನಕಲಿ ಪ್ರಕರಣವನ್ನು ವಿರೋಧಿಸುತ್ತೇವೆ ಎಂದು ಹೇಳಿದ್ದಾರೆ.

ಇನ್ನು ಪ್ರತಿಭಟನಾ ನಿರತ ರಾಜ್ಯಸಭಾ ಸಂಸದೆ ಜೆಬಿ ಮಾಥೂರ್ ಅವರನ್ನು ದೆಹಲಿ ಪೊಲೀಸರು ಅಮಾನುಷವಾಗಿ ರಸ್ತೆಯಲ್ಲಿ ಎಳೆದುಕೊಂಡು ಹೋಗುತ್ತಿರುವ ವಿಡಿಯೋಗಳು ವೈರಲ್ ಆಗಿವೆ.


ಇದನ್ನೂ ಓದಿ: ನ್ಯಾಷನಲ್ ಹೆರಾಲ್ಡ್ ಪ್ರಕರಣ: ಸತತ ಮೂರನೇ ದಿನವು ರಾಹುಲ್ ಗಾಂಧಿ ವಿಚಾರಣೆಗೆ ಸಮನ್ಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. Police were not allowed to maintain law and order by Gundas peoples, rowdy sheeters ,funds provided by share holders of the herald money laundring cheating case ..to protect the accused against charges of cheating still to be proven by ED ..accused are in court bail.
    So police are stopped from doing duties by above Gundas for questioning their political leaders…above law and constitution.
    Trying to protect and flee from guilt and charges blaming ruling parties to gain sympathy..as usual.

LEAVE A REPLY

Please enter your comment!
Please enter your name here

- Advertisment -

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...

ಬರೇಲಿ: ಮುಸ್ಲಿಂ ಯುವಕರ ಮೇಲೆ ಹಲ್ಲೆ, ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಬಲವಂತ; ಪ್ರಮುಖ ಆರೋಪಿ ಬಂಧನ

ಉತ್ತರ ಪ್ರದೇಶದ ಬರೇಲಿಯಲ್ಲಿ ಮುಸ್ಲಿಂ ಯುವಕನ ಮೇಲೆ ಹಲ್ಲೆ, ಅವಮಾನ ಮತ್ತು ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು ಆರೋಪಿಸಲಾಗಿದೆ. ಪ್ರಮುಖ ಆರೋಪಿ ರಿಷಭ್ ಠಾಕೂರ್ ನನ್ನು ಪೊಲೀಸರು ಬಂಧಿಸಿದ್ದು, ಮತ್ತಷ್ಟು ಬಂಧನಗಳು ನಡೆಯುವ...