ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಕಳೆದ ಮೂರು ದಿನಗಳಿಂದ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ವಿಚಾರಣೆ ನಡೆಸುತ್ತಿರುವುದರ ಕುರಿತು ಪ್ರತಿಕ್ರಿಯೆ ನೀಡಿರುವ ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್, ’ಸರ್ಕಾರ ವಿಫಲವಾದಾಗ ಪ್ರತಿಪಕ್ಷಗಳು ಇಡಿ ಪರೀಕ್ಷೆ ಎದುರಿಸಬೇಕು” ಎಂದಿದ್ದಾರೆ.
ಬುಧವಾರ ಈ ಬಗ್ಗೆ ತಮ್ಮ ಅಧಿಕೃತ ಟ್ವಿಟರ್ ಖಾತೆಯಲ್ಲಿ ಬರೆದುಕೊಂಡಿರುವ ಅವರು, ಜಾರಿ ನಿರ್ದೇಶನಾಲಯವನ್ನು “ಪ್ರಜಾಪ್ರಭುತ್ವದಲ್ಲಿ ಪರೀಕ್ಷೆ” (Examination in Democracy) ಎಂದು ಕರೆದಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others
ಮುಂದುವರೆದು ರಾಜಕೀಯದಲ್ಲಿ ಸರ್ಕಾರ ವಿಫಲವಾದಾಗ ಪ್ರತಿಪಕ್ಷಗಳು ಈ ಪರೀಕ್ಷೆಯಲ್ಲಿ ತೇರ್ಗಡೆಯಾಗಬೇಕಾಗುತ್ತದೆ ಎಂದು ಹೇಳಿದ್ದಾರೆ.
ಇದನ್ನೂ ಓದಿ: ತಮಿಳುನಾಡಿನಲ್ಲಿ ಮರ್ಯಾದೆಗೇಡು ಹತ್ಯೆ: ತಂಗಿ-ಬಾವನನ್ನು ಊಟಕ್ಕೆ ಕರೆದು ಕೊಲೆ ಮಾಡಿದ ಅಣ್ಣ
ED का मतलब अब ‘Examination in Democracy’ बन गया है। राजनीति में विपक्ष को ये परीक्षा पास करनी होती है। जब सरकार स्वयं फ़ेल हो जाती है तब वो इस परीक्षा की घोषणा करती है। जिनकी तैयारी अच्छी होती है वो न तो लिखा-पढ़ी की परीक्षा से डरते हैं, न मौखिक से… और कभी डरना भी नहीं चाहिए।
— Akhilesh Yadav (@yadavakhilesh) June 15, 2022
“ಇಡಿ ಎಂದರೆ ‘ಎಕ್ಸಾಮಿನೇಷನ್ ಇನ್ ಡೆಮಾಕ್ರಸಿ’. ರಾಜಕೀಯದಲ್ಲಿ ಪ್ರತಿಪಕ್ಷಗಳು ಈ ಪರೀಕ್ಷೆಯಲ್ಲಿ ಉತ್ತೀರ್ಣರಾಗಬೇಕು. ಸರ್ಕಾರವೇ ವಿಫಲವಾದಾಗ ಈ ಪರೀಕ್ಷೆಯನ್ನು ಘೋಷಿಸುತ್ತದೆ. ಯಾರ ತಯಾರಿ ಉತ್ತಮವಾಗಿರುತ್ತದೋ ಅವರು ಲಿಖಿತ – ಓದುವ ಪರೀಕ್ಷೆ ಅಥವಾ ಮೌಖಿಕ ಪರೀಕ್ಷಗೆ ಹೆದರುವುದಿಲ್ಲ ಮತ್ತು ಯಾವತ್ತಿಗೂ ಭಯಪಡಬಾರದು” ಎಂದು ಹಿಂದಿಯಲ್ಲಿ ಟ್ವೀಟ್ ಮಾಡಿದ್ದಾರೆ.
ನ್ಯಾಷನಲ್ ಹೆರಾಲ್ಡ್ ಪ್ರಕರಣದ ಅಕ್ರಮ ಹಣ ವರ್ಗಾವಣೆ ಆರೋಪದ ಮೇಲೆ ಕಳೆದ ಮೂರು ದಿನಗಳಿಂದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಜಾರಿ ನಿರ್ದೇಶನಾಲಯದ ಮುಂದೆ ವಿಚಾರಣೆಗೆ ಹಾಜರಾಗುತ್ತಿದ್ದಾರೆ. ಮೂರನೇ ದಿನವಾದ ಬುಧವಾರ ದೆಹಲಿ ಕಾಂಗ್ರೆಸ್‌ನಿಂದ ಭಾರಿ ಪ್ರತಿಭಟನೆ ನಡೆದಿದೆ.
ನ್ಯಾಷನಲ್ ಹೆರಾಲ್ಡ್ ಪತ್ರಿಕೆಯ ಮಾಲೀಕತ್ವವನ್ನು ಹೊಂದಿರುವ ಯಂಗ್ ಇಂಡಿಯನ್‌ನಲ್ಲಿ ಹಣಕಾಸಿನ ಅಕ್ರಮಗಳು ನಡೆದಿವೆ ಎಂದು ತನಿಖೆ ನಡೆಸಲಾಗುತ್ತಿದೆ. 2013ರಲ್ಲಿ ಬಿಜೆಪಿ ಸಂಸದ ಸುಬ್ರಮಣಿಯನ್ ಸ್ವಾಮಿ ಅವರು ಸಲ್ಲಿಸಿದ್ದ ಖಾಸಗಿ ಕ್ರಿಮಿನಲ್ ದೂರಿನ ವಿಚಾರಣೆಯನ್ನು ದೆಹಲಿ ನ್ಯಾಯಾಲಯವು ಪರಿಗಣಿಸಿದ ನಂತರ ಇ.ಡಿ.ಯು ಹಣ ವರ್ಗಾವಣೆ ತಡೆ ಕಾಯ್ದೆಯ (ಪಿಎಂಎಲ್‌ಎ) ಕ್ರಿಮಿನಲ್ ನಿಬಂಧನೆಗಳ ಅಡಿಯಲ್ಲಿ ಹೊಸ ಪ್ರಕರಣವನ್ನು ದಾಖಲಿಸಿದೆ.
ಇದನ್ನೂ ಓದಿ: ದೆಹಲಿ: ಕಾಂಗ್ರೆಸ್ ಕಚೇರಿಗೆ ನುಗ್ಗಿ ಮುಖಂಡರು, ಕಾರ್ಯಕರ್ತರ ಮೇಲೆ ಪೊಲೀಸರ ಹಲ್ಲೆ- ಆರೋಪ


