ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯವು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರಿಗೆ ಸಮನ್ಸ್ ನೀಡಿ ಪ್ರಶ್ನಿಸಿದ್ದನ್ನು ವಿರೋಧಿಸಿ ಪ್ರತಿಭಟನೆ ನಡೆಸುತ್ತಿದ್ದ ವೇಳೆ ಕಾಂಗ್ರೆಸ್ ಕಾರ್ಯಕರ್ತರ ಮೇಲೆ ಪೊಲೀಸರು ಹಲ್ಲೆ ನಡೆಸಿದ್ದಾರೆ. ಭಾರತೀಯ ಯುವ ಕಾಂಗ್ರೆಸ್ ಅಧ್ಯಕ್ಷ ಬಿ.ವಿ.ಶ್ರೀನಿವಾಸ್ ಮೇಲೆ ದೆಹಲಿ ಪೊಲೀಸರು ಬೂಟು ಕಾಲಿನಿಂದ ಹೊಡೆದ ದೃಶ್ಯಗಳು ವೈರಲ್ ಆಗಿವೆ.
ಸಾಮಾಜಿಕ ಮಾಧ್ಯಮಗಳು, ಸುದ್ದಿ ಮಾಧ್ಯಮಗಳಲ್ಲಿ ವೈರಲ್ ಆಗಿರುವ ವೀಡಿಯೊದಲ್ಲಿ ಬಿ.ವಿ.ಶ್ರೀನಿವಾಸ್ ಅವರನ್ನು ಹಲವಾರು ಪೊಲೀಸ್ ಅಧಿಕಾರಿಗಳು ಎಳೆದೊಯ್ಯುತ್ತಿರುವುದು ಮತ್ತು ದಾರಿಯಲ್ಲಿ ಒಬ್ಬ ಅಧಿಕಾರಿಯಿಂದ ಓಡಿ ಬಂದು ತನ್ನ ಬೂಟು ಕಾಲಿನಿಂದ ಒದೆಯುವುದನ್ನು ಕಾಣಬಹುದಾಗಿದೆ.
ಇನ್ನು ಸೋಮವಾರದಿಂದ ಸುಮಾರು 800 ಕಾಂಗ್ರೆಸ್ ಕಾರ್ಯಕರ್ತರನ್ನು ಪ್ರತಿಭಟನೆ ನಡೆಸಿದ್ದಕ್ಕಾಗಿ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಜಾರಿ ನಿರ್ದೇಶನಾಲಯವು ಸತತ ಮೂರು ದಿನಗಳ ಕಾಲ, 30 ಗಂಟೆಗೂ ಹೆಚ್ಚು ಕಾಲ ರಾಹುಲ್ ಗಾಂಧಿಯನ್ನು ವಿಚಾರಣೆ ನಡೆಸಿರುವುದನ್ನು ಆಡಳಿತಾರೂಢ ಭಾರತೀಯ ಜನತಾ ಪಕ್ಷದ “ಸೇಡಿನ ರಾಜಕಾರಣ” ಎಂದು ಕಾಂಗ್ರೆಸ್ ನಾಯಕರು ಹೇಳಿದ್ದಾರೆ.
ಇದನ್ನೂ ಓದಿ: ಬಿಜೆಪಿ ದ್ವೇಷ ರಾಜಕಾರಣವನ್ನು ಎಲ್ಲಾ ವಿಪಕ್ಷಗಳು ಒಟ್ಟಾಗಿ ಖಂಡಿಸಬೇಕು: ಸಿದ್ದರಾಮಯ್ಯ
दिल्ली पुलिस से एक विनम्र अनुरोध… pic.twitter.com/BW78NYprIu
— Srinivas BV (@srinivasiyc) June 15, 2022
ಕಾಂಗ್ರೆಸ್ ನಾಯಕರ ವಿರುದ್ಧ ಪೊಲೀಸರು ನಡೆದುಕೊಂಡ ರೀತಿಗೆ ಸಾಮಾಜಿಕ ಜಾಲತಾಣ ಬಳಕೆದಾರರು ಟೀಕಿಸಿದ್ದಾರೆ. ಕಳೆದ ವರ್ಷ ದೇಶದಲ್ಲಿ ಕೊರೋನಾ ವೈರಸ್ ಸಾಂಕ್ರಾಮಿಕದ ಎರಡನೇ ಅಲೆಯ ಸಮಯದಲ್ಲಿ ಕೊರೊನಾ ಸೋಂಕಿತರಿಗೆ ಆಕ್ಸಿಜನ್ ಸಹಾಯ ಮಾಡಿ ಬಿ.ವಿ.ಶ್ರೀನಿವಾಸ್ ಜನಮನ್ನಣೆ ಗಳಿಸಿದ್ದರು.
Service Reward pic.twitter.com/UqrxyrGQRW
— Manu Jain (@ManuJain_MJ) June 15, 2022
ಬುಧವಾರ, ಕಾಂಗ್ರೆಸ್ ನಾಯಕ ಶಶಿ ತರೂರ್ ಅವರು ಪಕ್ಷದ ಸಂಸದೆ ಜೋತಿಮಣಿ ಅವರ ವೀಡಿಯೊವನ್ನು ತಮ್ಮ ಟ್ವಿಟರ್‌ನಲ್ಲಿ ಹಂಚಿಕೊಂಡಿದ್ದಾರೆ, ಅದರಲ್ಲಿ ಅವರು ದೆಹಲಿ ಪೊಲೀಸರು ಸಂಸದೆ ಮೇಲೆ “ಕ್ರೂರವಾಗಿ ಹಲ್ಲೆ ನಡೆಸಿದ್ದಾರೆ” ಎಂದು ಆರೋಪಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others
’ಪೊಲೀಸರು ಕೂಡ ನೀರು ಕೊಡಲು ನಿರಾಕರಿಸಿದ್ದಾರೆ ಎಂದು ಜೋತಿಮಣಿ ವಿಡಿಯೋದಲ್ಲಿ ಹೇಳಿದ್ದಾರೆ. “ನಾವು ಹೊರಗಿನಿಂದ ನೀರು ಖರೀದಿಸಲು ಪ್ರಯತ್ನಿಸುತ್ತಿರುವಾಗ, ಅವರು ನಮಗೆ ನೀರು ಕೊಡಬೇಡಿ ಎಂದು ಮಾರಾಟಗಾರರಿಗೆ ಹೇಳುತ್ತಿದ್ದಾರೆ” ಎಂದು ಆರೋಪಿಸಿದ್ದಾರೆ.
This is outrageous in any democracy. To deal with a woman protestor like this violates every Indian standard of decency, but to do it to a LokSabha MP is a new low. I condemn the conduct of the @DelhiPolice & demand accountability. Speaker @ombirlakota please act! pic.twitter.com/qp7zyipn85
— Shashi Tharoor (@ShashiTharoor) June 15, 2022
ಇದಲ್ಲದೆ, ದೆಹಲಿ ಪೊಲೀಸ್ ಸಿಬ್ಬಂದಿ ಅಕ್ಬರ್ ರಸ್ತೆಯಲ್ಲಿರುವ ಕಾಂಗ್ರೆಸ್ ಪ್ರಧಾನ ಕಚೇರಿಗೆ ಬಲವಂತವಾಗಿ ಪ್ರವೇಶಿಸಿ ಪಕ್ಷದ ಕಾರ್ಯಕರ್ತರು ಮತ್ತು ಮುಖಂಡರನ್ನು ಥಳಿಸಿದ್ದಾರೆ ಎಂದು ಕಾಂಗ್ರೆಸ್ ಬುಧವಾರ ಆರೋಪಿಸಿದ್ದು, ಪಕ್ಷದ ಆವರಣಕ್ಕೆ ನುಗ್ಗಿ ಯಾವುದೇ ಪ್ರಚೋದನೆಯಿಲ್ಲದೆ ಕಾರ್ಯಕರ್ತರನ್ನು ಥಳಿಸಿದ ಎಲ್ಲಾ ದೆಹಲಿ ಪೊಲೀಸ್ ಅಧಿಕಾರಿಗಳ ವಿರುದ್ಧ ಎಫ್‌ಐಆರ್ ದಾಖಲಿಸುವಂತೆ ಒತ್ತಾಯಿಸಿದೆ. ಜೊತೆಗೆ ತುಘಲಕ್ ರಸ್ತೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದೆ.
ಮಹಿಳಾ ಕಾರ್ಯಕರ್ತೆಯರ ಮೇಲೆ ಪೊಲೀಸರು ಮತ್ತು ಭದ್ರತಾ ಸಿಬ್ಬಂದಿ ಹಲ್ಲೆ ನಡೆಸುತ್ತಿರುವ ಪೋಟೋ, ವಿಡಿಯೋಗಳು ಟೀಕೆಗೆ ಗುರಿಯಾಗಿವೆ.
Hang Your Head In Shame Amit Shah ji! pic.twitter.com/HtxxtqfvFl
— Srinivas BV (@srinivasiyc) June 16, 2022
ಇದನ್ನೂ ಓದಿ: ಸರ್ಕಾರ ವಿಫಲವಾದಾಗ ಪ್ರತಿಪಕ್ಷಗಳು ’ಇಡಿ’ ಪರೀಕ್ಷೆ ಎದುರಿಸಬೇಕು- ಅಖಿಲೇಶ್ ಯಾದವ್


