Homeಚಳವಳಿ’ಅಗ್ನಿಪಥ್’ ಯೋಜನೆ ವಿರೋಧಿಸಿ ಭಾರಿ ಪ್ರತಿಭಟನೆ: 200 ರೈಲುಗಳ ಮೇಲೆ ಪರಿಣಾಮ- ರೈಲ್ವೆ ಇಲಾಖೆ

’ಅಗ್ನಿಪಥ್’ ಯೋಜನೆ ವಿರೋಧಿಸಿ ಭಾರಿ ಪ್ರತಿಭಟನೆ: 200 ರೈಲುಗಳ ಮೇಲೆ ಪರಿಣಾಮ- ರೈಲ್ವೆ ಇಲಾಖೆ

- Advertisement -
- Advertisement -

ಸಶಸ್ತ್ರ ಪಡೆಗಳಲ್ಲಿ ನೇಮಕಾತಿಗಾಗಿ ಒಕ್ಕೂಟ ಸರ್ಕಾರ ಘೋಷಿಸಿರುವ ’ಅಗ್ನಿಪಥ್’ ಯೋಜನೆ ವಿರುದ್ಧ ಉದ್ಯೋಗಾಕಾಂಕ್ಷಿಗಳು ದೇಶವ್ಯಾಪಿ ನಡೆಸುತ್ತಿರುವ ಪ್ರತಿಭಟನೆಯಿಂದಾಗಿ ಇದುವರೆಗೆ 200 ಕ್ಕೂ ಹೆಚ್ಚು ರೈಲುಗಳ ಮೇಲೆ ಪರಿಣಾಮ ಬೀರಿದೆ ಎಂದು ರೈಲ್ವೆ ಇಲಾಖೆ ಶುಕ್ರವಾರ ತಿಳಿಸಿದೆ.

ಬುಧವಾರ (ಜೂನ್ 16) ಪ್ರತಿಭಟನೆಗಳು ಭುಗಿಲೆದ್ದ ನಂತರ ಸುಮಾರು 35 ರೈಲುಗಳನ್ನು ರದ್ದುಗೊಳಿಸಲಾಗಿದೆ. ಮತ್ತು 13 ರೈಲುಗಳನ್ನು ಅಲ್ಪಾವಧಿಗೆ ರದ್ದುಗೊಳಿಸಲಾಗಿದೆ ಎಂದು ರೈಲ್ವೆ ತಿಳಿಸಿದೆ.

ಬಿಹಾರ, ಜಾರ್ಖಂಡ್ ಮತ್ತು ಉತ್ತರ ಪ್ರದೇಶದ ಕೆಲವು ಭಾಗಗಳಲ್ಲಿ ವ್ಯಾಪಕ ಪ್ರತಿಭಟನೆಗಳು ನಡೆದಿದೆ. ರೈಲುಗಳ ಚಲನವಲನದ ಮೇಲೆ ನಾವು ನಿಗಾ ಇರಿಸಿದ್ದೇವೆ. ಪರಿಸ್ಥಿತಿ ನೋಡಿಕೊಂಡು ಅವುಗಳ ಕಾರ್ಯಾಚರಣೆಯ ಬಗ್ಗೆ ನಿರ್ಧಾರ ತೆಗೆದುಕೊಳ್ಳುತ್ತೇವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇದನ್ನೂ ಓದಿ: ಅಗ್ನಿಪಥ್ ಯೋಜನೆ: ಮಧ್ಯಪ್ರದೇಶದಲ್ಲಿ ತೀವ್ರಗೊಂಡ ಪ್ರತಿಭಟನೆ, ಕಲ್ಲು ತೂರಾಟ, ಹಳಿಗಳ ಮೇಲೆ ಧರಣಿ

ಬಿಹಾರದಲ್ಲಿ ಉದ್ರಿಕ್ತ ಪ್ರತಿಭಟನಾಕಾರರು ಕಲ್ಲು ತೂರಾಟ ನಡೆಸಿ ರೈಲು, ರಸ್ತೆ ತಡೆಯನ್ನು ನಡೆಸಿದ್ದಾರೆ. ಪ್ರತಿಭಟನಾಕಾರರು ಸರನ್ ಜಿಲ್ಲೆಯ ಛಾಪ್ರಾದಲ್ಲಿ ಪ್ಯಾಸೆಂಜರ್ ರೈಲಿಗೆ ಬೆಂಕಿ ಹಚ್ಚಿದ್ದರು. ಪೊಲೀಸರು ಜನರನ್ನು ಚದುರಿಸಲು ಲಾಠಿ ಚಾರ್ಜ್‌ ಮಾಡಿದ್ದು, ಆಶ್ರುವಾಯು ಹಾಗೂ ಗಾಳಿಯಲ್ಲಿ ಗುಂಡು ಹಾರಿಸಿದ್ದಾರೆ. 

ಬಿಹಾರದ ಭಬುವಾ ನಗರದಲ್ಲಿಯೂ ಅಗ್ನಿಪಥ್‌ ಯೋಜನೆ ವಿರೋಧಿಸಿ ಮತ್ತು ಉದ್ಯೋಗಕ್ಕಾಗಿ ನಡೆಯುತ್ತಿರುವ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದ್ದು, ಪ್ರತಿಭಟನಾಕಾರರು ರೈಲಿಗೆ ಬೆಂಕಿ ಹಚ್ಚಿದ್ದರು.

ಬಲಿಯಾದಲ್ಲಿ ‘ಭಾರತ್ ಮಾತಾ ಕಿ ಜೈ’ ಮತ್ತು ‘ಅಗ್ನಿಪಥ್ ವಾಪಾಸ್ ಲೋ (ಅಗ್ನಿಪಥ್ ಯೋಜನೆ ಹಿಂಪಡೆಯಿರಿ) ಘೋಷಣೆಗಳನ್ನು ಕೂಗುತ್ತಾ ಪ್ರತಿಭಟನಾಕಾರರು ಖಾಲಿ ರೈಲಿಗೆ ಬೆಂಕಿ ಹಚ್ಚಿದರು. ಇತರ ಕೆಲವು ರೈಲುಗಳನ್ನು ಧ್ವಂಸಗೊಳಿಸಿದರು.

7 ರಾಜ್ಯಗಳಲ್ಲಿ ಭಾರೀ ಪ್ರತಿಭಟನೆ ನಡೆಯುತ್ತಿದ್ದು, ಪ್ರತಿಭಟನೆ ತಡೆಯಲು ಪೊಲೀಸರು ಲಾಠೀ ಚಾರ್ಜ್ ಮಾಡಿದ್ದರಿಂದ ಪ್ರತಿಭಟನೆ ಹಿಂಸಾರೂಪ ಪಡೆದಿದೆ. ಇದುವರೆಗೂ ದೇಶಾದ್ಯಂತ ಒಂದು ಸಾವು ಸಂಭವಿಸಿದ್ದು, 8 ಜನರ ಗಾಯಗೊಂಡಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ.


ಇದನ್ನೂ ಓದಿ: ಅಗ್ನಿಪಥ್ ವಿರುದ್ಧ ಸಿಡಿದೆದ್ದ ಯುವಜನತೆ: ಒಂದು ಸಾವು, 8 ಜನರಿಗೆ ಗಾಯ – ವಯಸ್ಸಿನ ಮಿತಿ ಹೆಚ್ಚಳಕ್ಕೆ ಮುಂದಾದ ಕೇಂದ್ರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...

ಬಂಗಾಳ ಎಸ್ಐಆರ್ ಪ್ರಕ್ರಿಯೆ: ಚುನಾವಣಾ ಆಯೋಗದ ಸಹಾಯಕ್ಕೆ ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ಕಲ್ಕತ್ತಾ ಹೈಕೋರ್ಟ್‌ಗೆ ಸುಪ್ರೀಂ ಸೂಚನೆ

ನವದೆಹಲಿ: ಪಶ್ಚಿಮ ಬಂಗಾಳ ಸರ್ಕಾರ ಮತ್ತು ಚುನಾವಣಾ ಆಯೋಗದ ನಡುವೆ ಮತದಾರರ ಪಟ್ಟಿ ಶುದ್ಧೀಕರಣ ಅಭಿಯಾನಕ್ಕೆ ಸಂಬಂಧಿಸಿದಂತೆ ದುರದೃಷ್ಟಕರ ಆರೋಪದ ಆಟ ನಡೆಯುತ್ತಿದೆ ಎಂದು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ವಿಶೇಷ ತೀವ್ರ ಪರಿಷ್ಕರಣೆ...

ಬಾಲಿವುಡ್ ನಟ ರಣವೀರ್ ಸಿಂಗ್ ಗೆ ಬಿಷ್ಣೋಯಿ ಗ್ಯಾಂಗ್ ನಿಂದ ಜೀವಬೆದರಿಕೆ: ಅಮೆರಿಕಾ ನಂಬರ್ ನಿಂದ 10ಕೋಟಿ ರೂ. ಬೇಡಿಕೆ 

ಬಿಷ್ಣೋಯ್ ಗ್ಯಾಂಗ್ ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಂದ 10 ಕೋಟಿ ರೂ.ಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಅಮೆರಿಕದ ಸಂಖ್ಯೆಯಿಂದ ಬಂದ ವಾಯ್ಸ್ ನೋಟ್ ಮೂಲಕ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. ಮುಂಬೈ ಪೊಲೀಸ್...

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...

‘ದಿ ಕೇರಳ ಸ್ಟೋರಿ 2’ ಚಿತ್ರ ನಿರ್ಮಾಪಕರು, ಸಿಬಿಎಫ್‌ಸಿ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಕೇರಳ ಹೈಕೋರ್ಟ್

ಕೊಚ್ಚಿ: 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಮಾರ್ಪಾಡುಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ ಅರ್ಜಿಯ...

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...