Homeಕರ್ನಾಟಕಪಠ್ಯ ಪುಸ್ತಕ ಅದ್ವಾನ: ‘#ನಾಡದ್ರೋಹಿBJPಸರ್ಕಾರ’ ಟ್ವಿಟರ್‌ನಲ್ಲಿ ಟ್ರೆಂಡಿಂಗ್‌

ಪಠ್ಯ ಪುಸ್ತಕ ಅದ್ವಾನ: ‘#ನಾಡದ್ರೋಹಿBJPಸರ್ಕಾರ’ ಟ್ವಿಟರ್‌ನಲ್ಲಿ ಟ್ರೆಂಡಿಂಗ್‌

- Advertisement -
- Advertisement -

ರಾಜ್ಯ ಸರ್ಕಾರ ನಡೆಸಿರುವ ‘ಪಠ್ಯಪುಸ್ತಕ ಹಗರಣ’ವನ್ನು ವಿರೋಧಿಸಿ ಜೂನ್‌ 18ರ ಶನಿವಾರದಂದು ಬೆಂಗಳೂರಿನಲ್ಲಿ ನಡೆಯಲಿರುವ ಬೃಹತ್‌ ಪ್ರತಿಭಟನಾ ರ್‍ಯಾಲಿಯ ಮುನ್ನವಾಗಿ ‘#ನಾಡದ್ರೋಹಿBJPಸರ್ಕಾರ’, ‘#BoycottRSStextbooks’ ಹ್ಯಾಷ್‌ಟ್ಯಾಗ್‌ಗಳು ಟ್ವಿಟರ್‌ನಲ್ಲಿ ಟ್ರೆಂಡ್ ಆಗಿವೆ.

ಈ ಹ್ಯಾಷ್‌ಟ್ಯಾಗ್‌ನಲ್ಲಿ ಸಾವಿರಾರು ಟ್ವೀಟ್‌ಗಳನ್ನು ಮಾಡಲಾಗಿದೆ.

ಈ ಕುರಿತು ಕರವೇ ರಾಜ್ಯಾಧ್ಯಕ್ಷರಾದ ಟಿ.ಎ.ನಾರಾಯಣಗೌಡ ಸರಣಿ ಟ್ವೀಟ್‌ಗಳನ್ನು ಮಾಡಿದ್ದು, “ಒಂದು ವೇಳೆ ಸರ್ಕಾರ ಕೂಡಲೇ ಪರಿಷ್ಕೃತ ಪಠ್ಯಗಳನ್ನು ಹಿಂದಕ್ಕೆ ಪಡೆಯದಿದ್ದರೆ ಪರಿಸ್ಥಿತಿ ಕೈಮೀರಿ ಹೋಗುವುದು ಖಚಿತ. ಇಡೀ ರಾಜ್ಯದ ಶಾಂತಿ ಕದಡಿ ಹೋಗುತ್ತದೆ. ಅದರ ಹೊಣೆಯನ್ನು ಸರ್ಕಾರವೇ ಹೊರಬೇಕಾಗುತ್ತದೆ. ಜನರನ್ನು ಎದುರುಹಾಕಿಕೊಂಡ ಸರ್ಕಾರಗಳು ಉಳಿಯುವುದಿಲ್ಲ. ಇದನ್ನು ಮರೆಯಬೇಡಿ” ಎಂದು ಎಚ್ಚರಿಸಿದ್ದಾರೆ.

“ಬಸವಣ್ಣ, ಅಲ್ಲಮಪ್ರಭು, ವಾಲ್ಮೀಕಿ, ಕನಕದಾಸ, ಪುರಂದರದಾಸ, ಶಂಕರಾಚಾರ್ಯ, ಶಿಶುನಾಳ ಶರೀಫ, ಕುವೆಂಪು ಮೊದಲುಗೊಂಡು ಕರ್ನಾಟಕದ ದಾರ್ಶನಿಕರು, ಸಂತರಿಗೆ ಪರಿಷ್ಕೃತ ಪಠ್ಯದಲ್ಲಿ ಅಪಮಾನಿಸಲಾಗಿದೆ. ಕನ್ನಡತನ, ಕನ್ನಡಾಭಿಮಾನಕ್ಕೆ ಕುತ್ತು ತರಲಾಗಿದೆ. ಇದನ್ನು ಒಪ್ಪಿಕೊಳ್ಳುವುದು ಸಾಧ್ಯವೇ ಇಲ್ಲ” ಎಂದಿದ್ದಾರೆ.

 

“ನಾಡ ದ್ರೋಹಿ ಕಪಟಿಗಳ ವಿರುದ್ಧ ನಡೆಯಲಿರುವ ನಾಳಿನ ಹೋರಾಟ ಪಕ್ಷಾತೀತವಾದದ್ದು. ಸರ್ವ ಜಾತಿ ಜನಾಂಗಗಳ ಹೋರಾಟ. ಬನ್ನಿ ಕೈ ಜೋಡಿಸಿ. ನಾಡ ರಕ್ಷಣೆಗೆ ಮುಂದಾಗಿ” ಎಂದು ಕಾಂಗ್ರೆಸ್ ನಾಯಕ ಪ್ರಕಾಶ್ ರಾಥೋಡ್ ಮನವಿ ಮಾಡಿದ್ದಾರೆ.

“ಬಸವಣ್ಣ ಅವರ ಬಗ್ಗೆ ಪರಿಷ್ಕೃತ ಪಠ್ಯದಲ್ಲಿ ಬರೆದಿರುವ ಮಾಹಿತಿ ತಪ್ಪು ಗ್ರಹಿಕೆಯಿಂದ ಕೂಡಿವೆ. ಸಂಸ್ಕೃತ ತೊರೆದು ಕನ್ನಡದ ಮೂಲಕ ದೇವರನ್ನು ಪೂಜಿಸುವ ಬಗೆ ತೋರಿದ್ದು ಬಸವಣ್ಣ. ವೀರಶೈವ ಮತ ಅಭಿವೃದ್ದಿ ಪಡಿಸಲಿಲ್ಲ ಬದಲಾಗಿ ವೈದಿಕ ಧರ್ಮಕ್ಕೆ ವಿರುದ್ಧವಾಗಿ ಲಿಂಗಾಯತ ಧರ್ಮ ಸ್ಥಾಪನೆ ಮಾಡಿದರು” ಎಂದು ಹಿರಿಯ ಪತ್ರಕರ್ತ ಬಸವರಾಜು ತಿಳಿಸಿದ್ದಾರೆ.

“ಬಿಟ್ಟಿ ಉಪದೇಶ ಹೇಳುವುದು, ಹಿಂದೂ ನಾವೆಲ್ಲ ಒಂದು. 10 ಜನ ಪಠ್ಯಪುಸ್ತಕ ಸಮಿತಿ ಸದಸ್ಯರಲ್ಲಿ 9 ಜನ ಬ್ರಾಹ್ಮಣರು. ಬೇರೆ ಜಾತಿಯಲ್ಲಿ ಶಿಕ್ಷಣ ತಜ್ಞರು ಇಲ್ಲವೇ!? ಬೇರೆ ಜಾತಿಯವರೆಲ್ಲಾ ದಡ್ಡರೂ ಅನ್ನುವ ಭಾವನೆ ಬಿಜೆಪಿಗರದ್ದೇ!?” ಎಂದು ‘ಬೆಳಗಾವಿ ರಾಯಣ್ಣ’ ಹೆಸರಿನ ಟ್ವಿಟರ್‌ ಖಾತೆಯಲ್ಲಿ ಟ್ವೀಟ್ ಮಾಡಲಾಗಿದೆ.

“ಟಿಪ್ಪು ಚರಿತ್ರೆ ತಿರುಚಿದ್ರು, ಸಂತ ಶರೀಫರನ್ನು ಆಚೆ ಇಟ್ರು, ಆಗ ಇದು ಸಾಬರ ವಿಷಯ ಅಂತ ಸುಮ್ನಾದ್ರು. ಈಗ ನಾರಾಯಣ ಗುರುಗಳ ವಿಷಯ ಬಂದಾಗ ಒಕ್ಕಲಿಗರು ಸುಮ್ನಾದ್ರೆ ನಾಳೆ ಕೆಂಪೇಗೌಡ ಬೆಂಗಳೂರು ಕಟ್ಟೆ ಇಲ್ಲ ಅಂತಾರೆ” ಎಂದು ಕನ್ನಡ ಕುಡಿ ಟ್ವಿಟರ್‌ ಖಾತೆ ಅಭಿಪ್ರಾಯಪಟ್ಟಿದೆ.

“ಸಾವಿತ್ರಿಬಾಯಿಫುಲೆ ಸೇರಿ ಮಹಿಳಾ ಸಮಾಜ ಸುಧಾರಕಿಯರ ಪಠ್ಯ ಕೈಬಿಟ್ಟ ಮಹಿಳಾ ವಿರೋಧಿ ಸರ್ಕಾರಕ್ಕೆ ಧಿಕ್ಕಾರ” ಎಂದು ಜೆ.ಎಸ್.ಪಾಟೀಲ್ ಟ್ವೀಟ್ ಮಾಡಿದ್ದಾರೆ.

“ಪದೇ ಪದೇ ನಾರಾಯಣಗುರುಗಳಿಗೆ ಅವಮಾನ ಮಾಡುವ ಮೂಲಕ ಬಿಜೆಪಿ ಸರ್ಕಾರ ಜನರ ತಾಳ್ಮೆ ಪರೀಕ್ಷೆ ಮಾಡುತ್ತಿದೆ. ಜನಾಕ್ರೋಶದ ಕಟ್ಟೆಯೊಡೆದರೆ ಬಿಜೆಪಿಗೆ ಉಳಿಗಾಲವಿಲ್ಲ ಎನ್ನುವುದನ್ನು ಜೂನ್ 18ರ ಪ್ರತಿಭಟನೆಯಲ್ಲಿ ತೋರಿಸೋಣ” ಎಂದು ಉಮ್ಮರ್‌ ಬ್ಯಾರಿ ಸಾಲೆತ್ತೂರು ಹೇಳಿದ್ದಾರೆ.

“ತ್ಯಾಗ ಬಲಿದಾನಗಳಿಂದ ಕಟ್ಟಿದ ಈ ದೇಶವನ್ನು ಕೋಮುವಾದದಿಂದ ಉಳಿಸೋಣ..ನಾಳೆ ಜತೆಯಾಗಿ ನಡೆಯೋಣ.ನಮ್ಮ‌ವಿರೋಧವನ್ನು ದಾಖಲಿಸೋಣ” ಎಂದು ಗುಲಾಬಿ ಬಿಳಿಮಲೆಯವರು ತಿಳಿಸಿದ್ದಾರೆ.

“ದಕ್ಷಿಣ ಕನ್ನಡ ಜಿಲ್ಲೆಯ ಮೂಡಬಿದಿರೆ ಸಾವಿರ ಕಂಬಗಳ ಬಸದಿ, ಧರ್ಮಸ್ಥಳ ಮಂಜುನಾಥ ದೇವಾಲಯ, ಉಲ್ಲಾಳ ಜುಮ್ಮಾ ಮಸೀದಿ, ಸಂತ ಅಲೋಸಿಯಸ್ ಚರ್ಚ್ ಕುರಿತ ಮಾಹಿತಿ ಕೈಬಿಟ್ಟ ಬಿಜೆಪಿ ಸರ್ಕಾರಕ್ಕೆ ಧಿಕ್ಕಾರ” ಮಧು ಕರೆಡೇವು ಕರವೇ ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ಇಂಥ ಕನ್ನಡ ದ್ರೋಹಿಯನ್ನು ಪೋಷಿಸುತ್ತಿರುವ ಬಿಜೆಪಿ ಅಧಿಕಾರಕ್ಕೆ ಮತ್ತೆ ಬರದಿರಲಿ” ಎಂದು ಮನು ಟ್ವೀಟ್ ಎಚ್ಚರಿಸಿದ್ದಾರೆ.

“ಬುದ್ದ, ಕುವೆಂಪು, ಬಸವಣ್ಣ, ಅಂಬೇಡ್ಕರ್, ಕನ್ನಡ ನಾಡು, ನುಡಿ, ಬಾವುಟ, ಪ್ರಾದೇಶಿಕತೆಯ ಬಗ್ಗೆ ಕೀಳಾಗಿ ಮಾತನಾಡಿದ ಚಕ್ರತಿರ್ಥನ ಬಂಧನವಾಗಲಿ” ಎಂದು ದಿನೇಶ್ ದೊಡ್ಡಮನೆ ಆಗ್ರಹಿಸಿದ್ದಾರೆ.

“ಪದೇ ಪದೇ ನಾರಾಯಣಗುರುಗಳಿಗೆ ಅವಮಾನ ಮಾಡುವ ಮೂಲಕ ಬಿಜೆಪಿ ಸರ್ಕಾರ ಜನರ ತಾಳ್ಮೆ ಪರೀಕ್ಷೆ ಮಾಡುತ್ತಿದೆ. ಜನಾಕ್ರೋಶದ ಕಟ್ಟೆಯೊಡೆದರೆ ಬಿಜೆಪಿಗೆ ಉಳಿಗಾಲವಿಲ್ಲ ಎನ್ನುವುದನ್ನು ಜೂನ್ 18ರ ಪ್ರತಿಭಟನೆಯಲ್ಲಿ ತೋರಿಸೋಣ” ಎಂದು ‘ಕೋಮುವಾದಿಗಳ ವಿರುದ್ಧ’ ಟ್ವಿಟರ್‌ ಖಾತೆಯಲ್ಲಿ ಟ್ವೀಟ್ ಮಾಡಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

3 COMMENTS

  1. ಕಳ್ಳ ದೋಚಿಕೊಂಡು ಹೋದ ಮ್ಯಾಲೆ ದಿಡ್ಡಿ ಬಾಗಿಲು ಹಾಕಿದರಂತೆ . ಹಂಗಾಯ್ತು ಇವರ ಬಾಳು…. ಪರಿಷ್ಕ್ರುತ ಪಠ್ಯಪುಸ್ತಕ ಈಗಾಗಲೇ ಮಕ್ಕಳ ಕೈ ಸೇರಿ ಆಗಿದೆ… ಭಾಜಪದವರು ಒಳಗೊಳಗೆ ಎಲ್ಲಾ ಶಾಲೆಗಳಿಗೆ ಕಳುಹಿಸಿಕೊಟ್ಟಿದ್ದಾರೆ… ಇವರು ಇವತ್ತು ಒಂದು ದಿನ ಹೋರಾಟ ಮಾಡಿ ಸುಮ್ಮನಾಗ್ತಾರೆ. ಎಲ್ಲಾರೂ ಒಂದೇ ಬಿಡಿ. ನಾ ಹೊಡದಂಗ ಮಾಡ್ತೀನಿ… ನೀ ಅತ್ತಂಗ ಮಾಡು ಹಾಗಯ್ತು ಇವರ ಬಾಳು

  2. You are all opposing the revision of text book because the members of the committe are Brahmin. So your purpose is to oppose what ever Brahmins are doing. If you are really concerned then you must show before and after corrections and tell governament to reconsider it next year.
    Nanu gauri as a responsible media must be fair to all caste and community.

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...