Homeಕರ್ನಾಟಕಮೊಳಗಿದ ಕನ್ನಡ ಕಹಳೆ: ಪಠ್ಯ ಪುಸ್ತಕ ಕೇಸರೀಕರಣ ವಿರುದ್ಧ ಬೃಹತ್ ಪ್ರತಿಭಟನೆ

ಮೊಳಗಿದ ಕನ್ನಡ ಕಹಳೆ: ಪಠ್ಯ ಪುಸ್ತಕ ಕೇಸರೀಕರಣ ವಿರುದ್ಧ ಬೃಹತ್ ಪ್ರತಿಭಟನೆ

ವಿಶ್ವಮಾನವ, ಕ್ರಾಂತಿಕಾರಿ, ಮಹಾಕವಿ ಕುವೆಂಪು ಹೋರಾಟ ಸಮಿತಿ ಆಯೋಜಿಸಿರುವ ಪ್ರತಿಭಟನೆಗೆ ಭಾರೀ ಜನಸ್ಪಂದನೆ

- Advertisement -
- Advertisement -

ಬಲಪಂಥೀಯ ಬರಹಗಾರ ರೋಹಿತ್‌ ಚಕ್ರತೀರ್ಥ ಅಧ್ಯಕ್ಷತೆಯಲ್ಲಿ ನಡೆದ ಪಠ್ಯಪುಸ್ತಕದಲ್ಲಿ ಆಗಿರುವ ಸರಣಿ ತಪ್ಪುಗಳನ್ನು ವಿರೋಧಿಸಿ ಜನಾಕ್ರೋಶ ಭುಗಿಲೆದ್ದಿದೆ. ಬೆಂಗಳೂರಿನಲ್ಲಿ ಸೇರಿದ ಸಾವಿರಾರು ಜನರು ಸರ್ಕಾರದ ವಿರುದ್ಧ ರಣಕಹಳೆ ಮೊಳಗಿಸಿದ್ದಾರೆ.

ವಿಶ್ವಮಾನವ, ಕ್ರಾಂತಿಕಾರಿ, ಮಹಾಕವಿ ಕುವೆಂಪು ಹೋರಾಟ ಸಮಿತಿ ಆಯೋಜಿಸಿರುವ ಬೃಹತ್‌ ಪ್ರತಿಭಟನೆಗೆ ರಾಜ್ಯದ ಮೂಲೆಮೂಲೆಯಿಂದ ಸಾವಿರಾರು ಜನರು ಆಗಮಿಸಿದ್ದು, ಬೆಂಗಳೂರಿನ ಕೇಂದ್ರೀಯ ರೈಲು ನಿಲ್ದಾಣದಿಂದ ಪ್ರೀಂಡಂ ಪಾರ್ಕ್‌ವರೆಗೆ ಮೆರವಣಿಗೆ ನಡೆದಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ರಾಷ್ಟ್ರಕವಿ ಕುವೆಂಪು ಅವರು ಬರೆದ ನಾಡಗೀತೆಯನ್ನು ತಿರುಚಿದ ರೋಹಿತ್ ಚಕ್ರತೀರ್ಥ ಎಂಬ ವ್ಯಕ್ತಿಯ ನೇತೃತ್ವದಲ್ಲಿ ಪರಿಷ್ಕರಣೆಯಾದ ಪಠ್ಯಪುಸ್ತಕಗಳನ್ನು ಮಕ್ಕಳಿಗೆ ವಿತರಿಸಬಾರದು ಎಂದು ಕನ್ನಡಿಗರು ಆಗ್ರಹಿಸಿದ್ದಾರೆ.

ಮೆರವಣಿಗೆಯುದ್ದಕ್ಕೂ ಕನ್ನಡ ಬಾವುಟಗಳು ಹಾರಾಡಿದವು. ಪಠ್ಯಪುಸ್ತಕದಲ್ಲಿ ಕೈಬಿಡಲಾಗಿರುವ ಮಹನೀಯರ ಭಾವಚಿತ್ರಗಳನ್ನು ಹಿಡಿದು ಹೋರಾಟಗಾರರು ಸಾಗಿದರು. “ನಾಡದ್ರೋಹಿ ಚಕ್ರತೀರ್ಥನಿಗೆ ಧಿಕ್ಕಾರ, ಶಿಕ್ಷಣ ಸಚಿವರಿಗೆ ಧಿಕ್ಕಾರ, ತಪ್ಪಾಗಿರುವ ಪಠ್ಯಪುಸ್ತಕಗಳನ್ನು ಮಕ್ಕಳಿಗೆ ವಿಸ್ತರಿಸುತ್ತಿರುವ ಸರ್ಕಾರಕ್ಕೆ ಧಿಕ್ಕಾರ” ಎಂದು ಕೂಗಿದರು.

“ನಾಡಿಗೆ ಪ್ರಥಮ ಜ್ಞಾನಪೀಠ ಪ್ರಶಸ್ತಿ ತಂದುಕೊಟ್ಟ ಮಹಾನ್‌ ಶೂದ್ರಕವಿ ಕುವೆಂಪು ಅವರನ್ನು ಅವಮಾನಿಸಿದವರಿಗೆ, ನಾಡಗೀತೆಯನ್ನು ತಿರುಚಿ ಬರೆದವರಿಗೆ ಧಿಕ್ಕಾರ” ಎಂದು ಕನ್ನಡಿಗರು ಆಕ್ರೋಶ ವ್ಯಕ್ತಪಡಿಸಿದರು.

ಕನ್ನಡ ಭಾವುಟ ಹಾಗೂ ವಿವಿಧ ಪ್ಲೆಕ್ಸ್‌ಗಳನ್ನು ಹಿಡಿದ ವಿದ್ಯಾರ್ಥಿಗಳು, ಹೋರಾಟಗಾರರು, ನಾಗರಿಕರು ತಮ್ಮ ಅಸ್ಮಿತೆಯನ್ನು ಪ್ರದರ್ಶಿಸಿದರು.

ಮೆರವಣಿಗೆಯಲ್ಲಿ ಸಾಗುತ್ತಾ ‘ನಾನುಗೌರಿ.ಕಾಂ’ ಜೊತೆ ಮಾತನಾಡಿದ ಉರಿಲಿಂಗ ಪೆದ್ದಿಮಠದ ಜ್ಞಾನಪ್ರಕಾಶ ಸ್ವಾಮೀಜಿ, “ಚಕ್ರತೀರ್ಥನನ್ನು ಬಂಧಿಸಲು ಇಲ್ಲಿ ಪ್ರಜಾಪ್ರಭುತ್ವ ವ್ಯವಸ್ಥೆ ಗಟ್ಟಿಯಾಗಿಲ್ಲ. ಪ್ರಜಾಪ್ರಭುತ್ವ ಉಳ್ಳವರ ಕೈಗೆ ಸಿಕ್ಕಿಹಾಕಿಕೊಂಡಿದೆ” ಎಂದು ವಿವಾದಿಸಿದರು.

“ಶಾಸಕಾಂಗ, ಕಾರ್ಯಾಂಗ ಹಾಗೂ ನ್ಯಾಯಾಂಗ ನಿಷ್ಕ್ರಿಯವಾಗಿವೆ. ಸಂಸ್ಕೃತಿ ಬಗ್ಗೆ ಅವರ ಬಳಿ ಪಾಠ ಕೇಳುವ ಅವಶ್ಯಕತೆ ಇಲ್ಲ. ಸಂಸ್ಕೃತಿಯನ್ನು ಕೊಟ್ಟವರು ನಾವು. ಈ ದೇಶದ ಸಂಸ್ಕೃತಿಗೆ ಮೂಲಪುರುಷರು ನಾವು. ಅವರು ಹೊರಗಡೆಯಿಂದ ಬಂದವವರು. ಹೀಗಾಗಿ ಹೊರಗಡೆ ಮಾತನ್ನೇ ಆಡುತ್ತಾರೆ. ರೋಹಿತ್ ಚಕ್ರತೀರ್ಥನ ಬಂಧನವನ್ನು ಮಾಡಿಸದೆ ಬಿಡುವುದಿಲ್ಲ” ಎಂದರು.

ಕರ್ನಾಟಕ ರಾಜ್ಯ ಸಂಶೋಧಕರ ಸಂಘದ ರಾಜ್ಯಾಧ್ಯಕ್ಷರಾದ ಎಸ್.ಮರಿದೇವಯ್ಯ ಮಾತನಾಡಿ, “ರಾಜ್ಯದ ವಿವಿಧ ಭಾಗಗಳಿಂದ ಬಂದ ಜನರು ಇಲ್ಲಿ ಸೇರಿದ್ದೇವೆ. ರೋಹಿತ್ ಚಕ್ರತೀರ್ಥ ಎನ್ನುವ ವ್ಯಕ್ತಿ ಮಾಡಿರುವ ಪಠ್ಯ ಪರಿಷ್ಕರಣೆಯನ್ನು ಸರ್ಕಾರ ಕೂಡಲೇ ರದ್ದುಪಡಿಸಬೇಕು. ಇಲ್ಲವಾದರೆ ಮುಂದೆ ನಡೆಯುವ ಜಿಪಂ, ತಾಪಂ, ಎಂಎಲ್‌ಎ, ಎಂಪಿ ಚುನಾವಣೆಗಳಲ್ಲಿ ತಕ್ಕ ಪಾಠ ಕಲಿಸುತ್ತೇವೆ. ಕೂಡಲೇ ಚಕ್ರತೀರ್ಥನನ್ನು ಬಂಧಿಸಬೇಕು. ಮುಂದಿನ ದಿನಗಳಲ್ಲಿ ವಿಧಾನಸೌಧ ಮುತ್ತಿಗೆ ಹಾಕುತ್ತೇವೆ” ಎಂದು ಎಚ್ಚರಿಸಿದರು.

ಇದನ್ನೂ ಓದಿರಿ: ಮಾಜಿ ಸಚಿವ ಎಂ.ರಘುಪತಿ ನಿಧನ; ವರ್ಣ ರಂಜಿತ ಬದುಕಿಗೆ ತೆರೆ

ಅಲೆಮಾರಿ ಬುಡಕಟ್ಟು ಮಹಾಸಭಾದ ಹೋರಾಟಗಾರ ಮಂಜುನಾಥ್ ಮಾತನಾಡಿ, “ಜಗದ ಕವಿ, ರಾಷ್ಟ್ರಕವಿ ಕುವೆಂಪು ಅವರಿಗೆ ಆಗಿರುವ ಅನ್ಯಾಯವನ್ನು ಸರಿದೂಗಿಸಬೇಕು. ಹೊಸ ಪಠ್ಯಪುಸ್ತಕವು ಇಷ್ಟೊಂದು ಸಮಸ್ಯೆಗಳಿಂದ ಕೂಡಿರುವುದರಿಂದ ಪಠ್ಯ ಪರಿಷ್ಕರಣೆ ಅಗತ್ಯವಿಲ್ಲ. ಹಳೆಯ ಪಠ್ಯಪರಿಷ್ಕರಣೆಯನ್ನೇ ಮುಂದುವರಿಸಿ, ಮಕ್ಕಳಿಗೆ ಸತ್ಯವಾದ ಪಾಠಗಳನ್ನು ಕಲಿಸಬೇಕಾಗಿ ಕಳಕಳಿಯ ಮನವಿ” ಎಂದರು.

ಕರ್ನಾಟಕ ಭೀಮ ಸೇನೆ, ರಾಜ್ಯ ಒಕ್ಕಗಲಿಗರ ಸಂಘ, ಸಿಐಟಿಯು, ದಲಿತ ಹಕ್ಕುಗಳ ಸಮಿತಿ, ಅಲೆಮಾರಿ ಬುಡಕಟ್ಟು ಮಹಾಸಭಾ, ಕೆಆರ್‌ಎಸ್‌ ಪಕ್ಷ, ದಲಿತ ಸಂಘರ್ಷ ಸಮಿತಿ, ಭೀಮ್‌ ಆರ್ಮಿ, ಕಾಂಗ್ರೆಸ್ ಪಕ್ಷ, ಕರ್ನಾಟಕ ರಕ್ಷಣಾ ವೇದಿಕೆ ಸೇರಿದಂತೆ ಮೊದಲಾದ ಸಂಘಟನೆಗಳು ಈ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದವು.

ರಾಜಕೀಯ ನಾಯಕರಾದ ರಾಮಲಿಂಗ ರೆಡ್ಡಿ, ಡಿ.ಕೆ.ಶಿವಕುಮಾರ್‌, ಸಿ.ಎಂ. ಇಬ್ರಾಹಿಂ, ಮಖ್ಯಮಂತ್ರಿ ಚಂದ್ರು, ಅಕ್ಕೈ ಪದ್ಮಶಾಲಿ, ಶಾಸಕ ಕೃಷ್ಣಪ್ಪ, ಸಾಹಿತಿ ಬರಗೂರು ರಾಮಚಂದ್ರಪ್ಪ,  ಶಿವರಾಮೇಗೌಡ, ಪ್ರವೀಣ್‌ ಶೆಟ್ಟಿ, ಸಾ.ರಾ. ಗೋವಿಂದ್‌, ಸಂಗೀತ ನಿರ್ದೇಶಕ ಹಂಸಲೇಖ, ಜಸ್ಟೀಸ್ ನಾಗಮೋಹನ ದಾಸ್‌ ನಾಗಮೋಹನ್‌ ದಾಸ್‌, ಚಿಂತಕ ಎಸ್‌.ಜಿ.ಸಿದ್ದರಾಮಯ್ಯ ಸೇರಿದಂತೆ ಹಲವಾರು ಮುಖಂಡರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ವೆಟ್ಟುವಂ’ ಪಾ.ರಂಜಿತ್ ಅವರ ಅದ್ಭುತ ಅಪೋಕಲಿಪ್ಟಿಕ್ ಆಕ್ಷನ್ ಸಿನಿಮಾ: ರಂಗನಾಥ್ ಆರ್. ವಿ

ತಮಿಳಿನ ಖ್ಯಾತ ನಿರ್ದೇಶಕ ಪಾ.ರಂಜಿತ್ ಅವರ ನಿರ್ದೇಶನದಲ್ಲಿ ಮೂಡಿಬರುತ್ತಿರುವ 'ವೆಟ್ಟುವಂ' ಚಿತ್ರವನ್ನು 'ಲರ್ನ್ ಆಂಡ್ ಟೀಚ್ ಪ್ರೊಡಕ್ಷನ್' ಸಂಸ್ಥೆಯ ಸಹಯೋಗದೊಂದಿಗೆ, ಪಾ.ರಂಜಿತ್ ಅವರ 'ನೀಲಂ ಪ್ರೊಡಕ್ಷನ್ಸ್' ನಿರ್ಮಿಸಿದೆ. ಈ ಚಿತ್ರದ ಜಗತ್ತನ್ನು ಪರಿಚಯಿಸುವ...

SIR ಮೋಸ: ಅಗತ್ಯಬಿದ್ದರೆ ಕಾಂಗ್ರೆಸ್‌ನಿಂದ ಕಾನೂನು ಹೋರಾಟ ಬಿ.ಕೆ. ಹರಿಪ್ರಸಾದ್ ಎಚ್ಚರಿಕೆ

ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ 2026ರ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರಿ ಪ್ರಮಾಣದ ತಾಂತ್ರಿಕ ಲೋಪಗಳು, ಅಂಕಿಅಂಶಗಳ ವ್ಯತ್ಯಾಸ ಹಾಗೂ ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ಸ್ಪಷ್ಟತೆಯ ಕೊರತೆ ಎದ್ದುಕಾಣುತ್ತಿದೆ ಎಂದು...

ವಿಚಾರಣೆಯಿಲ್ಲದೆ ಆರು ವರ್ಷ ಜೈಲುವಾಸ: ಉಮರ್ ಖಾಲಿದ್ ಹೋರಾಟದ ಹಾದಿ

ಸೆಪ್ಟೆಂಬರ್ 13, 2020 ರಂದು, ಮಾನವ ಹಕ್ಕುಗಳ ಯುವ ಕಾರ್ಯಕರ್ತ ಉಮರ್ ಖಾಲಿದ್ ಅವರನ್ನು ದೇಶದ ರಾಜಧಾನಿಯಲ್ಲಿ ಗುರಿಯಾಗಿಸಿಕೊಳ್ಳಲಾಯಿತು. ವಿಚಾರಣೆಯೇ ಇಲ್ಲದೆ ಅವರು ಜೈಲಿನಲ್ಲಿ ಆರು ವರ್ಷಗಳನ್ನು ಪೂರೈಸಿದ್ದಾರೆ. ಸರ್ಕಾರದ ವಿರುದ್ಧದ ರಾಜಕೀಯ...

ಕನ್ವರ್ ಯಾತ್ರೆ ವೇಳೆ 18 ದ್ವೇಷ ಘಟನೆಗಳು: ಮುಸ್ಲಿಮರು, ಅವರ ವ್ಯಾಪಾರಗಳನ್ನು ಗುರಿಯಾಗಿಸಿಕೊಂಡ ಪ್ರಕರಣಗಳೇ ಹೆಚ್ಚು; APCR ವರದಿ

ನವದೆಹಲಿ: 2026ರ ಕನ್ವರ್ ಯಾತ್ರೆಯ 13 ದಿನಗಳ ಅವಧಿಯಲ್ಲಿ ಹಿಂಸಾಚಾರ, ಬಲವಂತ, ತಾರತಮ್ಯ, ಆರ್ಥಿಕ ಬಹಿಷ್ಕಾರ ಹಾಗೂ ಸಾರ್ವಜನಿಕ ಅಶ್ಲೀಲ ವರ್ತನೆಗೆ ಸಂಬಂಧಿಸಿದ ಕನಿಷ್ಠ 18 ಘಟನೆಗಳು ವರದಿಯಾಗಿವೆ ಎಂದು ನಾಗರಿಕ ಹಕ್ಕುಗಳ...

ಸಿಐಟಿಯು ಕಾನೂನು ಹೋರಾಟಕ್ಕೆ ಮೊದಲ ಜಯ: ಕನಿಷ್ಠ ವೇತನ ತಡೆಹಿಡಿದಿದ್ದ ಸರ್ಕಾರದ ಮೂರು ಸುತ್ತೋಲೆಗಳಿಗೆ ಹೈಕೋರ್ಟ್ ತಡೆ

ಸರ್ಕಾರಿ ಇಲಾಖೆಗಳು ಮತ್ತು ಸ್ಥಳೀಯ ಸಂಸ್ಥೆಗಳಲ್ಲಿ ಕೆಲಸ ಮಾಡುವ ಲಕ್ಷಾಂತರ ಕಾರ್ಮಿಕರ ಹೊಸ ಕನಿಷ್ಠ ವೇತನವನ್ನು ತಡೆಹಿಡಿದಿದ್ದ ಸರ್ಕಾರದ ನಿರ್ಧಾರಕ್ಕೆ ಹೈಕೋರ್ಟ್ ಬ್ರೇಕ್ ಹಾಕಿದೆ. ಹೊಸ ವೇತನ ನೀಡುವುದನ್ನು ಅಮಾನತಿನಲ್ಲಿಟ್ಟಿದ್ದ ಸರ್ಕಾರದ ಮೂರು...

ಟಿಎಂಸಿ ಹೆಸರು, ಚಿಹ್ನೆ ಫ್ರೀಜ್: ಮಮತಾ ಬ್ಯಾನರ್ಜಿಗೆ ‘ಫುಟ್‌ಬಾಲ್ ಪ್ಲೇಯರ್’, ಬಂಡಾಯ ಬಣಕ್ಕೆ ‘ಲಕೋಟೆ’ ಚಿಹ್ನೆ ನೀಡಿದ ಚುನಾವಣಾ ಆಯೋಗ

ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂಲ ಹೆಸರು ಮತ್ತು ಸಾಂಪ್ರದಾಯಿಕ 'ಹೂವು-ಹುಲ್ಲು' ಚಿಹ್ನೆಯನ್ನು ಮುಟ್ಟುಗೋಲು (ಫ್ರೀಜ್) ಹಾಕಿದ ನಂತರ, ಭಾರತೀಯ ಚುನಾವಣಾ ಆಯೋಗವು ಶುಕ್ರವಾರ ಎರಡೂ ಎದುರಾಳಿ ಬಣಗಳಿಗೆ ಪ್ರತ್ಯೇಕ ಮಧ್ಯಂತರ ಹೆಸರು...

‘ರೋಹಿತ್ ವೇಮುಲಾ ಸ್ಥಿತಿ ನನಗೆ ಬಾರದಿರಲಿ..’; ವಿದೇಶದಲ್ಲಿ ಕಷ್ಟಕ್ಕೆ ಸಿಲುಕಿದ ತಮಿಳುನಾಡಿನ ದಲಿತ ಸಂಶೋಧಕ

ಮಲೇಷ್ಯಾದಲ್ಲಿ ಪಿಎಚ್‌ಡಿ ವ್ಯಾಸಂಗ ಮಾಡುತ್ತಿರುವ ತಮಿಳುನಾಡಿನ ದಲಿತ ಸಂಶೋಧನಾ ವಿದ್ಯಾರ್ಥಿ ಭಾರತಿ ದಾಸನ್ ರಾಮನ್, ತಮಿಳುನಾಡು ಸರ್ಕಾರದ ಸಾಮಾಜಿಕ ನ್ಯಾಯ ಇಲಾಖೆಯು ನನ್ನನ್ನು ಗುರಿಯಾಗಿಸಿಕೊಂಡಿದೆ ಎಂದು ಆರೋಪಿಸಿದ್ದಾರೆ ಎಂದು 'ದಿ ನ್ಯೂಸ್‌ ಮಿನಿಟ್'...

DUSU ಚುನಾವಣೆ: ಮತದಾನ ಆರಂಭ; ವಿಜಯೋತ್ಸವ ಮೆರವಣಿಗೆಗೆ ದೆಹಲಿ ಹೈಕೋರ್ಟ್ ತಡೆ

ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿ ಸಂಘದ (DUSU) 2026-27ನೇ ಸಾಲಿನ ಚುನಾವಣೆಗೆ ಶುಕ್ರವಾರ (ಸೆ.18) ಮತದಾನ ಆರಂಭವಾಗಿದೆ. ಬೆಳಗಿನ ಅವಧಿಯ ಕಾಲೇಜುಗಳ ವಿದ್ಯಾರ್ಥಿಗಳಿಗೆ ಬೆಳಿಗ್ಗೆ 8:30ರಿಂದ ಮಧ್ಯಾಹ್ನ 1ರವರೆಗೆ ಹಾಗೂ ಸಂಜೆ ಕಾಲೇಜುಗಳ ವಿದ್ಯಾರ್ಥಿಗಳಿಗೆ...

ಕರಾವಳಿ ಇತಿಹಾಸದಲ್ಲೇ ಪ್ರಥಮ: ಮಂಗಳೂರಿನಲ್ಲಿ ಸಿಎಂ ‘ಡಿ.ಕೆ ಶಿವಕುಮಾರ್’ ನೇತೃತ್ವದಲ್ಲಿ ರಾಜ್ಯ ಸಚಿವ ಸಂಪುಟ ಸಭೆ

ಕರಾವಳಿ ಕರ್ನಾಟಕದ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ರಾಜ್ಯ ಸಚಿವ ಸಂಪುಟ (Cabinet) ಸಭೆಯು ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಪಡೀಲ್‌ನಲ್ಲಿರುವ ನೂತನ 'ಪ್ರಜಾ ಸೌಧ'ದಲ್ಲಿ (ಜಿಲ್ಲಾಡಳಿತ ಸೌಧ) ಶುಕ್ರವಾರ ವಿಜೃಂಭಣೆಯಿಂದ ಆರಂಭವಾಗಿದೆ....

ಟಿಎಂಸಿ ಹೆಸರು, ಚಿಹ್ನೆ ಬಳಕೆಗೆ ತಡೆ: ಚುನಾವಣಾ ಆಯೋಗದ ಆದೇಶ ‘ಕಾನೂನಿಗೆ ವಿರುದ್ಧ’ ಎಂದ ಮಮತಾ ಬಣ, ಆದೇಶ ಸ್ವಾಗತಿಸಿದ ಬಂಡಾಯ ಪಾಳಯ 

ಕೊಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತ ರಾಜಕಾರಣದಲ್ಲಿ ಪ್ರಮುಖ ಶಕ್ತಿಯಾಗಿರುವ ತೃಣಮೂಲ ಕಾಂಗ್ರೆಸ್‌ (ಟಿಎಂಸಿ)ಯ ಆಂತರಿಕ ಬಿಕ್ಕಟ್ಟು ಇದೀಗ ಪಕ್ಷದ ಹೆಸರು ಮತ್ತು ಚುನಾವಣಾ ಚಿಹ್ನೆಯ ಮೇಲಿನ ಹಕ್ಕಿನ ಸಂಘರ್ಷವಾಗಿ ತೀವ್ರಗೊಂಡಿದೆ. ಟಿಎಂಸಿಯ ಎರಡು...