ಮುಂಬರುವ ರಾಷ್ಟ್ರಪತಿ ಚುನಾವಣೆಯಲ್ಲಿ ಸ್ಪರ್ಧಿಸುವ ವಿರೋಧ ಪಕ್ಷಗಳ ಮನವಿಯನ್ನು ಪಶ್ಚಿಮ ಬಂಗಾಳದ ಮಾಜಿ ರಾಜ್ಯಪಾಲ ಗೋಪಾಲಕೃಷ್ಣ ಗಾಂಧಿ ಸೋಮವಾರ ತಿರಸ್ಕರಿಸಿದ್ದಾರೆ. ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷದ ಮುಖ್ಯಸ್ಥ ಶರದ್ ಪವಾರ್ ಮತ್ತು ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಫಾರೂಕ್ ಅಬ್ದುಲ್ಲಾ ಅವರು ಕೂಡಾ ವಿರೋಧ ಪಕ್ಷಗಳ ಅಭ್ಯರ್ಥಿಯಾಗಿ ತಾವು ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ನಿರ್ಧಾರ ಪ್ರಕಟಿಸಿದ್ದರು.
ಪ್ರತಿಪಕ್ಷದ ಹಲವಾರು ಹಿರಿಯ ನಾಯಕರು ರಾಷ್ಟ್ರಪತಿ ಹುದ್ದೆಗೆ ಮುಂಬರುವ ಚುನಾವಣೆಯಲ್ಲಿ ವಿರೋಧ ಪಕ್ಷದ ಅಭ್ಯರ್ಥಿಯಾಗಲು ಅವರೊಂದಿಗೆ ಕೇಳಿಕೊಂಡಿದ್ದರು ಎಂದು ಗೋಪಾಲಕೃಷ್ಣ ಗಾಂಧಿ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others
“ವಿಷಯವನ್ನು ಗಂಭೀರವಾಗಿ ಪರಿಗಣಿಸಿದ ನಂತರ ವಿರೋಧ ಪಕ್ಷದ ಅಭ್ಯರ್ಥಿಯು ರಾಷ್ಟ್ರೀಯ ಒಮ್ಮತ ಮತ್ತು ರಾಷ್ಟ್ರೀಯ ವಾತಾವರಣವನ್ನು ಪ್ರತಿಪಕ್ಷದ ಏಕತೆಯ ಜೊತೆಗೆ ಸೃಷ್ಟಿಸುವವರಾಗಿರಬೇಕು ಎಂದು ನಾನು ಭಾವಿಸುತ್ತೇನೆ. ನನಗಿಂತ ಉತ್ತಮವಾಗಿ ಇದನ್ನು ಮಾಡಬಲ್ಲ ಇತರ ಜನರು ಇರುತ್ತಾರೆ ಎಂದು ನಾನು ಭಾವಿಸುತ್ತೇನೆ” ಎಂದು ಗೋಪಾಲಕೃಷ್ಣ ಗಾಂಧಿ ಹೇಳಿದ್ದಾರೆ.
ಇದನ್ನೂ ಓದಿ: Explained: ಭಾರತದ ರಾಷ್ಟ್ರಪತಿ ಆಯ್ಕೆಯನ್ನು ಹೇಗೆ ಮಾಡಲಾಗುತ್ತದೆ?
ರಾಷ್ಟ್ರಪತಿ ಚುನಾವಣೆಗೆ ತಮ್ಮ ಜಂಟಿ ಅಭ್ಯರ್ಥಿಯನ್ನು ಚರ್ಚಿಸಲು ಮುಂಬೈನಲ್ಲಿ ವಿರೋಧ ಪಕ್ಷಗಳ ನಿಗದಿತ ಸಭೆಗೆ ಮುಂಚಿತವಾಗಿ ಗೋಪಾಲಕೃಷ್ಣ ಗಾಂಧಿಯವರ ಹೇಳಿಕೆ ಹೊರಬಿದ್ದಿದೆ. ರಾಷ್ಟ್ರಪತಿ ಚುನಾವಣೆಗೆ ಅವರ ಹೆಸರನ್ನು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಸೂಚಿಸಿದ್ದರು.
77 ವರ್ಷದವರಾಗಿರುವ ಗೋಪಾಲಕೃಷ್ಣ ಗಾಂಧಿ ಅವರು ದಕ್ಷಿಣ ಆಫ್ರಿಕಾ ಮತ್ತು ಶ್ರೀಲಂಕಾಕ್ಕೆ ಭಾರತದ ಹೈಕಮಿಷನರ್ ಆಗಿಯೂ ಸೇವೆ ಸಲ್ಲಿಸಿದ್ದರು. ಅವರು ರಾಷ್ಟ್ರಪಿತ ಮಹಾತ್ಮಾ ಗಾಂಧಿ ಮತ್ತು ಸಿ. ರಾಜಗೋಪಾಲಾಚಾರಿಯವರ ಮೊಮ್ಮಗ.
ದೇಶದ ಹಾಲಿ ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ಅವರ ಅಧಿಕಾರಾವಧಿ ಜುಲೈ 24 ರಂದು ಕೊನೆಗೊಳ್ಳುತ್ತಿದೆ. ಈ ಹಿನ್ನೆಲೆಯಲ್ಲಿ ದೇಶದ 16ನೇ ರಾಷ್ಟ್ರಪತಿ ಆಯ್ಕೆ ಮಾಡುವ ‘ರಾಷ್ಟ್ರಪತಿ ಚುನಾವಣೆ’ ಜುಲೈ 18 ರಂದು ನಡೆಯಲಿದೆ.
ಇದನ್ನೂ ಓದಿ: ಜುಲೈ 18ಕ್ಕೆ ರಾಷ್ಟ್ರಪತಿ ಚುನಾವಣೆ, 21ರಂದು ಮತ ಎಣಿಕೆ: ಚುನಾವಣಾ ಆಯೋಗ
ಜೂನ್ 15 ರಂದು ನೂತನ ಅಧ್ಯಕ್ಷರ ಆಯ್ಕೆ ಪ್ರಕ್ರಿಯೆ ಆರಂಭಗೊಂಡಿದ್ದು, ನಾಮಪತ್ರ ಸಲ್ಲಿಕೆಗೆ ಜೂನ್ 29 ಕೊನೆಯ ದಿನವಾಗಿದೆ. ಜುಲೈ 21 ರಂದು ಈ ಚುನಾವಣೆಯ ಫಲಿತಾಂಶ ಪ್ರಕಟವಾಗಲಿದೆ.


