Homeಮುಖಪುಟಎಲ್ಲ ಸದಭಿರುಚಿ ಸಿನಿಮಾಗಳಿಗೆ ತೆರಿಗೆ ವಿನಾಯಿತಿ ಅಗತ್ಯ: ಫಿಲ್ಮ್‌ ಛೇಂಬರ್‌ ಅಧ್ಯಕ್ಷ ಭಾ.ಮ.ಹರೀಶ್‌ ಪ್ರತಿಕ್ರಿಯೆ

ಎಲ್ಲ ಸದಭಿರುಚಿ ಸಿನಿಮಾಗಳಿಗೆ ತೆರಿಗೆ ವಿನಾಯಿತಿ ಅಗತ್ಯ: ಫಿಲ್ಮ್‌ ಛೇಂಬರ್‌ ಅಧ್ಯಕ್ಷ ಭಾ.ಮ.ಹರೀಶ್‌ ಪ್ರತಿಕ್ರಿಯೆ

ಚಾರ್ಲಿ ಸಿನಿಮಾಕ್ಕೆ ತೆರಿಗೆ ವಿನಾಯಿತಿ ಘೋಷಿಸಿದ ಹಿನ್ನೆಲೆಯಲ್ಲಿ ಭಾ.ಮ.ಹರೀಶ್‌ ಪ್ರತಿಕ್ರಿಯೆ ನೀಡಿದ್ದಾರೆ.

- Advertisement -
- Advertisement -

“ಸದಭಿರುಚಿಯ ಸಿನಿಮಾಗಳಿಗೆ ತೆರಿಗೆ ವಿನಾಯಿತಿಯನ್ನು ಸರ್ಕಾರ ನೀಡಬೇಕು. ಈ ಕುರಿತು ಮುಖ್ಯಮಂತ್ರಿಯವರೊಂದಿಗೆ ಮಾತನಾಡುವೆ” ಎಂದು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷರಾದ ಭಾ.ಮ.ಹರೀಶ್‌ ತಿಳಿಸಿದ್ದಾರೆ.

ರಕ್ಷಿತ್ ಶೆಟ್ಟಿ ಅಭಿನಯಿಸಿ ನಿರ್ಮಾಣ ಮಾಡಿರುವ ‘ಚಾರ್ಲಿ 777’ ಸಿನಿಮಾಕ್ಕೆ ರಾಜ್ಯ ಸರ್ಕಾರ ಎಸ್‌ಜಿಎಸ್‌ಟಿ (ರಾಜ್ಯ ಸರಕು ಮತ್ತು ಸೇವಾ ತೆರಿಗೆ) ವಿನಾಯಿತಿ ನೀಡಿದೆ. ಸರ್ಕಾರದ ನಿರ್ಧಾರವನ್ನು ತೆರೆದ ಹೃದಯದಿಂದ ಸ್ವಾಗತಿಸಿರುವ ಕನ್ನಡ ಚಿತ್ರಕರ್ಮಿಗಳು ಆಶಾಭಾವನೆಯನ್ನು ವ್ಯಕ್ತಪಡಿಸಿದ್ದಾರೆ. ನಿರ್ದೇಶಕ ಮಂಸೋರೆಯವರು ಈ ಕುರಿತು ಫೇಸ್‌ಬುಕ್‌ನಲ್ಲಿ ಬರೆಯುತ್ತಾ ಇತರ ಚಿತ್ರಗಳಿಗೂ ತೆರಿಗೆ ವಿನಾಯಿತಿಯನ್ನು ಸರ್ಕಾರ ನೀಡಬೇಕು ಎಂದು ಮುಖ್ಯಮಂತ್ರಿಯವರಲ್ಲಿ ವಿನಂತಿ ಮಾಡಿದ ಬಳಿಕ ಚಿತ್ರರಂಗದ ಅನೇಕರು ಈ ಬೇಡಿಕೆಗೆ ದನಿಗೂಡಿಸಿದ್ದಾರೆ.

‘ನಾನುಗೌರಿ.ಕಾಂ’ ಜೊತೆ ಮಾತನಾಡಿದ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷರಾದ ಭಾ.ಮ.ಹರೀಶ್‌, “ಈ ವಿಚಾರವಾಗಿ ವಾರ್ತಾ ಇಲಾಖೆಯ ಆಯುಕ್ತರು ಹಾಗೂ ಮುಖ್ಯಮಂತ್ರಿಯವರ ಜೊತೆ ಚರ್ಚೆ ಮಾಡುತ್ತೇನೆ. ಕನ್ನಡದಲ್ಲಿ ಒಳ್ಳೆಯ ಸಿನಿಮಾಗಳು ಬರುತ್ತಿವೆ. ಮಂಸೋರೆಯಂಥವರು ಒಳ್ಳೆಯ ಸಿನಿಮಾಗಳನ್ನು ಮಾಡುತ್ತಿದ್ದಾರೆ. ಚಾರ್ಲಿಗೆ ತೆರಿಗೆ ವಿನಾಯಿತಿ ನೀಡಿದಂತೆಯೇ ಒಳ್ಳೆಯ ಸಿನಿಮಾಗಳಿಗೆ ಸರ್ಕಾರ ತೆರಿಗೆ ವಿನಾಯಿತಿ ನೀಡಬೇಕು” ಎಂದಿದ್ದಾರೆ.

“ಕೊರೊನಾ ಬಿಕ್ಕಟ್ಟಿನ ನಂತರದಲ್ಲಿ ಚಿತ್ರರಂಗ ಸವಾಲುಗಳನ್ನು ಎದುರಿಸುತ್ತಿದೆ. ತೆರಿಗೆ ವಿನಾಯಿತಿ ನೀಡಿದರೆ ಇಡೀ ಚಿತ್ರರಂಗಕ್ಕೆ ಒಳ್ಳೆಯದಾಗುತ್ತದೆ. ಹಿರಿಯರೊಂದಿಗೆ ಚರ್ಚಿಸುವೆ” ಎಂದು ಹೇಳಿದ್ದಾರೆ.

‘ಹರಿವು’, ‘ನಾತಿಚರಾಮಿ’, ‘ಆಕ್ಟ್‌ 1978’ ಸಿನಿಮಾಗಳನ್ನು ನಿರ್ದೇಶಿಸಿರುವ ಮಂಸೋರೆಯವರು ಸರ್ಕಾರದ ನಿರ್ಧಾರವನ್ನು ಸ್ವಾಗತಿಸಿ ತಮ್ಮ ಅಭಿಪ್ರಾಯ ದಾಖಲಿಸಿದ್ದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಮಂಸೋರೆಯವರ ಪತ್ರದ ಹಿನ್ನಲೆಯಲ್ಲಿ ‘ನಾನುಗೌರಿ.ಕಾಂ’ ಜೊತೆ ಮಾತನಾಡಿದ ಚಿತ್ರಕರ್ಮಿಗಳು ಸರ್ಕಾರದ ಮುಂದೆ ಇದೇ ಬೇಡಿಕೆಯನ್ನು ಇಟ್ಟರು. ಸದಭಿರುಚಿಯ ಸಿನಿಮಾಗಳು ಹೆಚ್ಚಾಗಬೇಕಾದರೆ ಸರ್ಕಾರ ತೆರಿಗೆ ವಿನಾಯಿತಿ ನಿರ್ಧಾರವನ್ನು ವಿಸ್ತರಿಸಬೇಕು ಎಂದು ಆಗ್ರಹಿಸಿದರು.

ಇದನ್ನೂ ಓದಿರಿ: ‘ಚಾರ್ಲಿ 777’ ಭಾವುಕತೆಯಾಚೆಗೆ ತೆರೆದುಕೊಳ್ಳದ ಸರಳರೇಖೆಯ ಸಿನಿಮಾ

ಸಮಿತಿ ರಚಿಸಿ ತೆರಿಗೆ ವಿನಾಯಿತಿಗೆ ನಿರ್ಧಾರ ಮಾಡಲಿ: ಜಯತೀರ್ಥ

‘ಒಲವೇ ಮಂದಾರ’, ‘ಬ್ಯೂಟಿಫುಲ್‌ ಮನಸುಗಳು’, ‘ಬೆಲ್‌ಬಾಟಂ’ ಸಿನಿಮಾಗಳ ನಿರ್ದೇಶಕ ಜಯತೀರ್ಥ ಅವರು ಮಾತನಾಡಿ, “ಸರ್ಕಾರ ಒಳ್ಳೆಯ ಹೆಜ್ಜೆಯನ್ನಿಟ್ಟಿದೆ. ಸದಭಿರುಚಿಯ ಸಿನಿಮಾಕ್ಕೆ ತೆರಿಗೆ ನೀಡಿದೆ. ಇದೇ ರೀತಿಯ ಒಳ್ಳೆಯ ಆಶಯ ಇರುವ ಸಿನಿಮಾಗಳಿಗೂ ಪ್ರೋತ್ಸಾಹ ನೀಡಿದರೆ ಬಹಳ ಒಳ್ಳೆಯದಾಗುತ್ತದೆ. ಅದಕ್ಕೆ ನನ್ನ ಬೆಂಬಲವೂ ಇದೆ” ಎಂದರು.

ನಿರ್ದೇಶಕ ಜಯತೀರ್ಥ

“ಒಳ್ಳೆಯ ಸಿನಿಮಾ ಯಾವುದೆಂದು ನಿರ್ಧಾರ ಮಾಡಲು ಎಲ್ಲ ಸಿನಿಮಾಗಳನ್ನು ನೋಡಲು ಮುಖ್ಯಮಂತ್ರಿಯವರಿಗೆ ಸಾಧ್ಯವಾಗುವುದಿಲ್ಲ. ಮುಖ್ಯಮಂತ್ರಿಯವರಿಗೆ ಸಂಪರ್ಕದಲ್ಲಿರುವವರು ಅವರನ್ನು ಕರೆದು ಸಿನಿಮಾ ತೋರಿಸಬಹುದಷ್ಟೇ. ಆದರೆ ಯಾವುದೇ ಪ್ರಭಾವ ಇರದೇ ಇರುವ ಸಾಮಾನ್ಯ ಕಲಾವಿದರಿಗೆ, ನಿರ್ದೇಶಕರಿಗೆ, ನಿರ್ಮಾಪಕರಿಗೆ ಇದು ಸಾಧ್ಯವಾಗದು. ಅದಕ್ಕಾಗಿ ಒಂದು ಸಮಿತಿ ಮಾಡಬಹುದು. ಗುಣಾತ್ಮಕ ಸಿನಿಮಾಗಳಿಗೆ ಸಬ್ಸಿಡಿ ನೀಡಲು ವ್ಯವಸ್ಥೆ ಮಾಡಿದ್ದಾರೆ. ಆದರೆ ಈ ಸಬ್ಸಿಡಿ ಸಿನಿಮಾ ಬಿಡುಗಡೆಯಾಗಿ ವರ್ಷಗಳು ಕಳೆದ ಮೇಲೆ ಕೈಗೆ ಸಿಗುತ್ತದೆ. ಈ ರೀತಿ ಆಗಬಾರದು. ಸೆನ್ಸಾರ್‌ ಮಂಡಳಿ ಹೇಗೆ ಸಿನಿಮಾ ನೋಡುತ್ತದೆಯೇ ಹಾಗೆಯೇ ಸಿನಿಮಾ ನೋಡುವ ಸಮಿತಿಯನ್ನು ಸರ್ಕಾರ ಮಾಡಬಹುದು. ತೆರಿಗೆ ವಿನಾಯಿತಿ ನೀಡಬೇಕು ಎಂಬುದು ನಮ್ಮ ಆಶಯ” ಎಂದು ತಿಳಿಸಿದರು.

“ಪ್ರತಿಯೊಂದು ಹಂತದಲ್ಲೂ ನಿರ್ಮಾಪಕರು ಸವಾಲನ್ನು ಎದುರಿಸುತ್ತಿದ್ದಾರೆ. ದೊಡ್ಡ ದೊಡ್ಡ ಸ್ಟಾರ್‌ ನಟರ ಸಿನಿಮಾಗಳನ್ನು ಮಾಡಿದವರು ಹೇಗೋ ಸಹಿಸಿಕೊಳ್ಳಬಹುದು. ಆದರೆ ಎಲ್ಲರಿಗೂ ಇದು ಸಾಧ್ಯವಾಗದು. ಹೀಗಾದಾಗ ಸಿನಿಮಾಗಳು ಒಟಿಟಿಗೆ ಸೀಮಿತವಾಗಿಬಿಡುತ್ತದೆ. ಸಿನಿಮಾ ಸಂಸ್ಕೃತಿ ಹೊರಟು ಹೋಗುತ್ತದೆ. ಈ ಎಲ್ಲ ದೃಷ್ಟಿಕೋನದಿಂದ ಕನ್ನಡ ಸಿನಿಮಾಗಳಿಗೆ ಪ್ರೋತ್ಸಾಹ ದೊರಕಬೇಕಿದೆ” ಎಂದು ಒತ್ತಾಯಿಸಿದರು.

ಇದನ್ನೂ ಓದಿರಿ: Film Review| ಜನ ಗಣ ಮನ: ಸಮೂಹ ಸನ್ನಿಗೊಂದು ಮದ್ದು

“ಕಲಾವಿದರು ಕೊಡುವ ಅನೇಕ ತೆರಿಗೆಯಿಂದ ಸರ್ಕಾರಕ್ಕೆ ಅನುಕೂಲವಾಗುತ್ತಿದೆ. ಒಂದು ಸಿನಿಮಾ ನೋಡಲು ಬರುವ ಪ್ರೇಕ್ಷಕ ಸಾಕಷ್ಟು ಹಣ ವ್ಯಯಿಸುತ್ತಾನೆ. ಪಾರ್ಕಿಂಗ್‌ ಶುಲ್ಕ ಕಟ್ಟುತ್ತಾನೆ, ಪೆಟ್ರೋಲ್ ಹಾಕಿಸಿಕೊಳ್ಳುತ್ತಾನೆ, ಮನರಂಜನಾ ತೆರಿಗೆ ಕಟ್ಟುತ್ತಾನೆ. ಹೀಗೆ ಇಷ್ಟೆಲ್ಲ ವೆಚ್ಚದ ನಡುವೆಯೂ ಫೈರಸಿ ಹಾವಳಿಯೂ ಇದೆ. ಈ ಪೈರಸಿ ಹಾವಳಿಯೂ ತಪ್ಪುತ್ತಿಲ್ಲ. ಸರ್ಕಾರದಿಂದಲೂ ಬೆಂಬಲ ಸಿಗುತ್ತಿಲ್ಲ” ಎಂದು ವಿಷಾದಿಸಿದರು.

ರಾಜನ ಭಾವನೆಗೆ ತಕ್ಕಂತೆ ಸಿನಿಮಾ ಮಾಡಬೇಕೆ: ಬಿ.ಎಂ.ಗಿರಿರಾಜ್‌

‘ಜಟ್ಟ’, ‘ನವಿಲಾದವರು’, ‘ಮೈತ್ರಿ’, ‘ಅಮರಾವತಿ’, ‘ಕನ್ನಡಿಗ’ ಸಿನಿಮಾಗಳ ನಿರ್ದೇಶಕ ಬಿ.ಎಂ.ಗಿರಿರಾಜ್‌ ಮಾತನಾಡಿ, “ನಾವು ಕಷ್ಟಪಟ್ಟು ಸಿನಿಮಾ ಮಾಡಿರುತ್ತೇವೆ. ನಿಮಗೆ ಇಷ್ಟವಾಗಲು ಅಥವಾ ಆಗದಿರಲು ನಿಮ್ಮದೇ ಆದ ಕಾರಣಗಳಿರುತ್ತವೆ. ಮುಖ್ಯಮಂತ್ರಿಯವರ ನಾಯಿ ತೀರಿಕೊಂಡಿದ್ದರಿಂದ ‘ಚಾರ್ಲಿ’ ಸಿನಿಮಾ ಅವರಿಗೆ ಹೆಚ್ಚು ಕನೆಕ್ಟ್ ಆಯಿತು. ಟ್ಯಾಕ್ಸ್‌ ಫ್ರೀ ಎಂದರು. ಯಾವುದೇ ಸಿನಿಮಾಕ್ಕೆ ತೆರಿಗೆ ವಿನಾಯಿತಿ ನೀಡುವುದು ಒಳ್ಳೆಯದು. ಆದರೆ ಈ ಪ್ರಕರಣ ಹೇಗಿದೆ ಎಂದರೆ, ಒಬ್ಬ ರಾಜ ಅಥವಾ ಒಡೆಯನ ಮನವೊಲಿಸಿ, ಆತನ ಮನಸ್ಸಿನ ಭಾವಕ್ಕೆ ತಕ್ಕಂತೆ ಸಿನಿಮಾ ಮಾಡಿದರೆ ಮಾತ್ರ ಉಳಿಗಾಲ ಎಂಬಂತಿದೆ” ಎಂದು ವಿವರಿಸಿದರು.

ನಿರ್ದೇಶಕ ಬಿ.ಎಂ.ಗಿರಿರಾಜ್‌

“ಕನ್ನಡ ಸಿನಿಮಾಗಳಿಗೆ ಮೊದಲು ತೆರಿಗೆ ವಿನಾಯಿತಿ ಇತ್ತು. ಇಲ್ಲಿನ ತಂತ್ರಜ್ಞರು, ಕಾರ್ಮಿಕರನ್ನು ಬಳಸಿಕೊಂಡು ಸಿನಿಮಾ ಮಾಡಬೇಕು ಎಂಬ ನಿಯಮಗಳಿದ್ದವು. ಆದರೆ ಜಿಎಸ್‌ಟಿ ಜಾರಿ ಬಳಿಕ ಬದಲಾಯಿತು. ಕೇಂದ್ರದ ವ್ಯಾಪ್ತಿಗೆ ಹೋದ ಮೇಲೆ ತೆರಿಗೆ ವಿನಾಯಿತಿ ಕಳೆದುಕೊಂಡೆವು” ಎಂದು ಹೇಳಿದರು.

“ಒಬ್ಬ ನಿರ್ಮಾಪಕ ಕಷ್ಟಪಟ್ಟು 10 ಕೋಟಿ ರೂ. ವೆಚ್ಚದಲ್ಲಿ ಒಂದು ಸಿನಿಮಾ ಮಾಡುತ್ತಾನೆ ಎಂದುಕೊಳ್ಳೋಣ. ಅದರಲ್ಲಿ 18 % ಜಿಎಸ್‌ಟಿ ಎಂದರೆ 1 ಕೋಟಿ 80 ಲಕ್ಷ ರೂ.ಗಳಾಗುತ್ತದೆ. ಬಡ್ಡಿ ಮೇಲೆ ಹಣ ತಂದಿರುತ್ತಾರೆ. ಹೀಗಿರುವಾಗ 1 ಕೋಟಿ 80 ಲಕ್ಷ ರೂ. ಮೊದಲೇ ಕಟ್ಟಿ ಎನ್ನುವುದು ಬಹಳ ಭಾರವಾಗುತ್ತದೆ” ಎಂದು ಬೇಸರ ವ್ಯಕ್ತಪಡಿಸಿದರು.

“ಅತಿ ಹೆಚ್ಚು ಸಿನಿಮಾ ಬಿಡುಗಡೆ ಮಾಡಿದ ರಾಜ್ಯ ನಮ್ಮದು. ಒಂದು ರಾಜ್ಯಕ್ಕೆ ತೆರಿಗೆ ವಿನಾಯಿತಿ ನೀಡಿದರೆ ಮತ್ತೊಂದು ರಾಜ್ಯವೂ ಕೇಳುತ್ತದೆ ಎಂಬ ವಾದವನ್ನು ಮಂಡಿಸುತ್ತಾರೆ. ಆದರೆ ರಾಜ್ಯ ಸರ್ಕಾರ ದಿಟ್ಟ ನಿರ್ಧಾರ ತೆಗೆದುಕೊಳ್ಳಬೇಕು” ಎಂದು ಆಗ್ರಹಿಸಿದರು.

ಇದನ್ನೂ ಓದಿರಿ: ಪೊಲೀಸ್ ವ್ಯವಸ್ಥೆಯ ವಾಸ್ತವಗಳತ್ತ ತಮಿಳು, ಮಲಯಾಳಂ ಚಿತ್ರರಂಗ

ವಿನಾಯಿತಿ ನೀಡಿದರೆ ಪ್ರೇಕ್ಷಕರು ಹೆಚ್ಚುತ್ತಾರೆ: ಕಿಶೋರ್‌‌ ಪತ್ತಿಕೊಂಡ

ಪುನೀತ್‌ ರಾಜ್‌ಕುಮಾರ್‌ ಅವರ ಕೊನೆಯ ಸಿನಿಮಾ ‘ಜೇಮ್ಸ್‌’ನ ನಿರ್ಮಾಪಕ ಹಾಗೂ ಹಂಚಿಕೆದಾರರೂ ಆಗಿರುವ ಕಿಶೋರ್ ಪತ್ತಿಕೊಂಡ ಮಾತನಾಡಿ, “ಕನ್ನಡ ಚಿತ್ರರಂಗ ಬೆಳೆಯುತ್ತಿದೆ. ಸರ್ಕಾರ ತೆರಿಗೆ ವಿನಾಯಿತಿ ನೀಡಿದರೆ ಬಹಳ ಅನುಕೂಲವಾಗುತ್ತದೆ. ಮೊದಲೆಲ್ಲ ತೆರಿಗೆ ಇರಲಿಲ್ಲ. ಆದರೆ ಈಗ ಪ್ರೇಕ್ಷಕರಿಗೂ ಭಾರವಾಗುತ್ತಿದೆ. ತೆರಿಗೆ ವಿನಾಯಿತಿ ನೀಡಿದರೆ ಪ್ರೇಕ್ಷಕರ ಸಂಖ್ಯೆ ಹೆಚ್ಚಾಗುತ್ತದೆ” ಎಂದು ಅಭಿಪ್ರಾಯಪಟ್ಟರು.

ನಿರ್ಮಾಪಕ ಕಿಶೋರ್‌ ಪತ್ತಿಕೊಂಡ

“ಚಿತ್ರಮಂದಿರಗಳಿಂದ ಬರುವ ಆದಾಯ ಹೆಚ್ಚಾದರೆ, ಮೂವತ್ತು ದಿನಕ್ಕೆ ಓಟಿಟಿಗೆ ಹೋಗುವ ಸಿನಿಮಾ ಐವತ್ತು ದಿನಕ್ಕೆ ಹೋಗುತ್ತದೆ. ದುರಾದೃಷ್ಟವಶಾತ್‌ ಬಹಳಷ್ಟು ಚಿತ್ರಮಂದಿರಗಳು ಮುಚ್ಚಿಹೋಗುತ್ತಿವೆ. ಚಿತ್ರಮಂದಿರದಲ್ಲಿ ಸಿನಿಮಾ ನೋಡುವ ಅನುಭವವೇ ಬೇರೆ. ಇಂದು ಚಿತ್ರಮಂದಿರಗಳು ಉಳಿಯಬೇಕಾದರೆ ತೆರಿಗೆ ವಿನಾಯಿತಿ ಅಗತ್ಯವಿದೆ. ಚಾರ್ಲಿಗೆ ಎಸ್‌ಜಿಎಸ್‌ಟಿ ವಿನಾಯಿತಿ ನೀಡಿದ್ದು ಖುಷಿ ತಂದಿದೆ. ಇದೇ ಕ್ರಮವನ್ನು ಎಲ್ಲ ಸಿನಿಮಾಗಳಿಗೆ ಅನ್ವಯಿಸುವ ಅಗತ್ಯವಿದೆ” ಎಂದು ಮನವಿ ಮಾಡಿದರು.

ತೆರಿಗೆ ವಿನಾಯಿತಿ ವಿಸ್ತರಿಸಿ: ಮಂಸೋರೆ

‘ನಾನುಗೌರಿ.ಕಾಂ’ ಜೊತೆ ಮಾತನಾಡಿದ ಮಂಸೋರೆಯವರು, “ತೆರಿಗೆ ವಿನಾಯಿತಿ ನೀಡಿದರೆ ಮಧ್ಯಮ ಹಾಗೂ ಕಡಿಮೆ ಬಜೆಟ್ ಸಿನಿಮಾ ಮೇಕರ್ಸ್‌‌ಗಳಿಗೆ ಬಹಳ ಅನುಕೂಲವಾಗುತ್ತದೆ. ಚಾರ್ಲಿಗೆ ಕೊಟ್ಟಿರುವ ವಿನಾಯಿತಿಯನ್ನು ಎಲ್ಲ ಸಿನಿಮಾಗಳಿಗೆ ವಿಸ್ತರಿಸಬೇಕು” ಎಂದು ಆಗ್ರಹಿಸಿದರು.

“ಜಿಎಸ್‌ಟಿ ಬಂದ ಮೇಲೆ ಕೇಂದ್ರದ ಹಿಡಿತಕ್ಕೆ ಸಿಲುಕಿ ರಾಜ್ಯ ಸರ್ಕಾರಗಳ ಕೈಕಾಲು ಕತ್ತರಿಸಿದಂತಾಗಿದೆ. ಒಟ್ಟಾಗಿ ಕೂತು ಮಾತನಾಡಿ, ವಿನಾಯಿತಿ ನೀಡಬೇಕಾಗಿದೆ. ಒಳ್ಳೆಯ ಸಿನಿಮಾ ಯಾವುದೆಂದು ವಾರ್ತಾ ಇಲಾಖೆ ನಿರ್ಧರಿಸಬೇಕಿದೆ. ಹಳೆಯ ಪದ್ಧತಿಯನ್ನು ಜಾರಿಗೆ ತರಬೇಕಾಗಿದೆ” ಎಂದು ಹೇಳಿದರು.

ನಿರ್ದೇಶಕ ಮಂಸೋರೆ

ಅಭಿಪ್ರಾಯ ನೀಡಲು ನಿರಾಕರಿಸಿದ ರಾಕ್‌ಲೈನ್‌

ಕನ್ನಡ ಚಿತ್ರರಂಗದ ನಟ, ನಿರ್ಮಾಪಕ ರಾಕ್‌ಲೈನ್‌ ವೆಂಕಟೇಶ್ ಅವರು ಈ ಕುರಿತು ಪ್ರತಿಕ್ರಿಯೆ ನೀಡಲು ನಿರಾಕರಿಸಿದರು. “ತೆರಿಗೆ ವಿನಾಯಿತಿ ಬಗ್ಗೆ ಕಮೆಂಟ್‌ ಮಾಡಲು ಹೋಗಲ್ಲ” ಎಂದು ಹೇಳಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....