Homeರಾಷ್ಟ್ರೀಯನ್ಯಾಷನಲ್ ಹೆರಾಲ್ಡ್ ಪ್ರಕರಣ: 5ನೇ ದಿನವೂ ರಾಹುಲ್ ಗಾಂಧಿಯ ವಿಚಾರಣೆ ನಡೆಸಲಿರುವ ‘ಇಡಿ’!

ನ್ಯಾಷನಲ್ ಹೆರಾಲ್ಡ್ ಪ್ರಕರಣ: 5ನೇ ದಿನವೂ ರಾಹುಲ್ ಗಾಂಧಿಯ ವಿಚಾರಣೆ ನಡೆಸಲಿರುವ ‘ಇಡಿ’!

- Advertisement -
- Advertisement -

ನ್ಯಾಷನಲ್‌ ಹೆರಾಲ್ಡ್‌ ಪ್ರಕರಣದಲ್ಲಿ ಸೋಮವಾರದಂದು ಜಾರಿ ನಿರ್ದೇಶನಾಲಯ (ಇಡಿ)ದ ವಿಚಾರಣೆಗೆ ಒಳಗಾಗಿದ್ದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಮಂಗಳವಾರ(ಇಂದು) ಕೂಡಾ ವಿಚಾರಣೆಗೆ ಹಾಜರಾಗುವಂತೆ ತಿಳಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಸೋಮವಾರದ ವಿಚಾರಣೆಯು ರಾತ್ರಿ 9 ಗಂಟೆಯ ತನಕವೂ ನಡೆದಿತ್ತು ಎಂದು ಅವರು ಹೇಳಿದ್ದಾರೆ. ಪ್ರಕರಣದಲ್ಲಿ ರಾಹುಲ್ ಗಾಂಧಿ ಅವರನ್ನು ಕಳೆದ ನಾಲ್ಕು ದಿನಗಳಲ್ಲಿ 40 ಗಂಟೆಗಳ ಕಾಲ ವಿಚಾರಣೆ ನಡೆಸಲಾಗಿದೆ.

ರಾಹುಲ್ ಗಾಂಧಿ ಅವರು ಸೋಮವಾರ ವಿಚಾರಣೆ ಪುನರಾರಂಭಗೊಳ್ಳುವ ಮೊದಲು ಆಸ್ಪತ್ರೆಗೆ ದಾಖಲಾಗಿರುವ ತಮ್ಮ ತಾಯಿ, ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ಭೇಟಿಯಾಗಲು ಅವಕಾಶ ನೀಡಲಾಗಿತ್ತು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಈ ಮಧ್ಯೆ, ಸೋನಿಯಾ ಗಾಂಧಿ ಅವರು ಕೊರೊನಾ ಸೋಂಕಿಗೆ ಚಿಕಿತ್ಸೆ ಪಡೆದು ಸೋಮವಾರ ಡಿಸ್ಚಾರ್ಜ್ ಆಗಿದ್ದಾರೆ. ಅವರಿಗೂ ಇಡಿ ಸಮನ್ಸ್ ನೀಡಿತ್ತಾದರೂ, ಅನಾರೋಗ್ಯದ ಕಾರಣ ಜೂನ್ 23 ರವರೆಗೆ ಅವರಿಗೆ ಕಾಲಾವಕಾಶ ನೀಡಲಾಗಿದೆ.

ಇದನ್ನೂ ಓದಿ: ಅಗ್ನಿಪಥ ಯೋಜನೆ: ದೇಶದ ಜನರಿಗೆ ಏನು ಬೇಕೆಂದು ಪ್ರಧಾನಿಗೆ ಅರ್ಥವಾಗುತ್ತಿಲ್ಲ – ರಾಹುಲ್ ಗಾಂಧಿ

ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಸೋನಿಯಾ ಗಾಂಧಿ ಪಾತ್ರದ ಬಗ್ಗೆ ಇಡಿ ತನಿಖೆ ನಡೆಸುತ್ತಿದೆ. ಪ್ರಕರಣವು ಕಾಂಗ್ರೆಸ್ ಮುಖವಾಣಿಯಾದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಯನ್ನು ನಡೆಸುತ್ತಿದ್ದ AJL (ಅಸೋಸಿಯೇಟೆಡ್ ಜರ್ನಲ್ಸ್ ಲಿಮಿಟೆಡ್) ಅನ್ನು ಯಂಗ್ ಇಂಡಿಯನ್ಸ್ ಸ್ವಾಧೀನಪಡಿಸಿಕೊಂಡಿರುವನ್ನು ಒಳಗೊಂಡಿದೆ. ಪ್ರಸ್ತುತ ನ್ಯಾಶನಲ್ ಹೆರಾಲ್ಡ್‌‌ ಆನ್‌ಲೈನ್‌ನಲ್ಲಿ ಮಾತ್ರ ಇದೆ.

“ಎಜೆಎಲ್‌ನ 800 ಕೋಟಿ ರೂ. ಆಸ್ತಿಯನ್ನು ಯಂಗ್ ಇಂಡಿಯನ್ ಪಡೆದುಕೊಂಡಿದ್ದು, ಇದನ್ನು ಯಂಗ್‌ ಇಂಡಿಯನ್‌ ಷೇರುದಾರರಾದ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿಯವರ ಆಸ್ತಿ ಎಂದು ಪರಿಗಣಿಸಬೇಕು, ಇದಕ್ಕಾಗಿ ಅವರು ತೆರಿಗೆ ಪಾವತಿಸಬೇಕಾಗಿದೆ” ಎಂದು ಆದಾಯ ತೆರಿಗೆ ಇಲಾಖೆ ಹೇಳಿದೆ. ಇದಕ್ಕೆ ಪ್ರತಿಕ್ರಿಯಿಸಿರುವ ಕಾಂಗ್ರೆಸ್‌, ಯಂಗ್ ಇಂಡಿಯನ್ ಒಂದು ಲಾಭರಹಿತ ಸಂಸ್ಥೆಯಾಗಿದ್ದು, ಆದ್ದರಿಂದ ಷೇರುದಾರರು ಅದರ ಆಸ್ತಿಯಿಂದ ಯಾವುದೇ ಹಣವನ್ನು ಗಳಿಸಲು ಸಾಧ್ಯವಿಲ್ಲ ಎಂದು ಹೇಳಿಕೊಂಡಿದೆ.

ಅದಾಗ್ಯೂ ಯಂಗ್ ಇಂಡಿಯನ್ ಯಾವುದೇ ದತ್ತಿ ಕೆಲಸ ಮಾಡಿಲ್ಲ ಎಂದು ಜಾರಿ ನಿರ್ದೇಶನಾಲಯ ವಾದಿಸಿದ್ದು, ಅದರ ಏಕೈಕ ವಹಿವಾಟು AJL ನ ಸಾಲದ ವರ್ಗಾವಣೆಯಾಗಿತ್ತು ಎಂದು ತಿಳಿಸಿದೆ. ಆದರೆ ಕಾಂಗ್ರೆಸ್‌ ‘ಪತ್ರಿಕೆ’ ಕೂಡಾ ದತ್ತಿ ಕೆಲಸವೇ ಆಗಿದೆ ಎಂದು ತಿರುಗೇಟು ನೀಡಿದೆ. ಆದಾಯ ತೆರಿಗೆ ಇಲಾಖೆ ಆದೇಶವನ್ನು ನ್ಯಾಯಾಲಯದಲ್ಲಿ ಪ್ರಶ್ನಿಸಲಾಗಿದ್ದು, ಸುಪ್ರೀಂ ಕೋರ್ಟ್‌ನಲ್ಲಿ ವಿಚಾರಣೆ ನಡೆಯುತ್ತಿದೆ.

ಇದನ್ನೂ ಓದಿ: ನ್ಯಾಷನಲ್ ಹೆರಾಲ್ಡ್ ಪ್ರಕರಣ: ನಾಲ್ಕನೇ ದಿನ ಇಡಿ ವಿಚಾರಣೆಗೆ ಹಾಜರಾದ ರಾಹುಲ್ ಗಾಂಧಿ

ಕಳೆದ ವಾರ, ಕೇಂದ್ರ ದೆಹಲಿಯಲ್ಲಿರುವ ಇಡಿ ಕಚೇರಿಯಲ್ಲಿ ರಾಹುಲ್ ಗಾಂಧಿಯನ್ನು ಪ್ರಶ್ನಿಸುತ್ತಿದ್ದಂತೆ, ಕಾಂಗ್ರೆಸ್ ನಾಯಕರು ಮತ್ತು ಕಾರ್ಯಕರ್ತರು ದೇಶದಾದ್ಯಂತ ಭಾರಿ ಪ್ರತಿಭಟನೆ ನಡೆಸಿದ್ದರು. ಇದು ಆಡಳಿತಾರೂಢ ಬಿಜೆಪಿಯ ‘ಸೇಡಿನ ರಾಜಕೀಯ’ ಎಂದು ಅವರು ಆರೋಪಿಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...