‘ಅಗ್ನಿಪಥ’ ಸೇನಾ ನೇಮಕಾತಿ ಯೋಜನೆಯನ್ನು ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿಗಳ ಕುರಿತು ಯಾವುದೇ ನಿರ್ಧಾರ ಕೈಗೊಳ್ಳುವ ಮುನ್ನ ನ್ಯಾಯಾಲಯವು ತಮ್ಮ ಮಾತನ್ನು ಆಲಿಸಬೇಕು ಎಂದು ಒತ್ತಾಯಿಸಿ ಒಕ್ಕೂಟ ಸರ್ಕಾರವು ಸುಪ್ರೀಂ ಕೋರ್ಟ್‌ಗೆ ಮನವಿ ಸಲ್ಲಿಸಿದೆ.
ಈವರೆಗೆ, ಒಕ್ಕೂಟ ಸರ್ಕಾರ ಸಶಸ್ತ್ರ ಪಡೆಗಳಿಗೆ ಅಲ್ಪಾವಧಿಯ ನೇಮಕಾತಿ ಯೋಜನೆಯಾದ ‘ಅಗ್ನಿಪಥ’ ವಿರುದ್ಧ ಸುಪ್ರೀಂ ಕೋರ್ಟ್‌ನಲ್ಲಿ ಮೂರು ಅರ್ಜಿಗಳನ್ನು ಸಲ್ಲಿಸಲಾಗಿದೆ. ಆದರೆ ಕೇಂದ್ರ ಸರ್ಕಾರ ಸಲ್ಲಿಸಿರುವ ಮನವಿ ನಿರ್ದಿಷ್ಟವಾಗಿ ಯಾವುದೇ ಅರ್ಜಿಯನ್ನು ಉಲ್ಲೇಖಿಸಿಲ್ಲ.
‘ಅಗ್ನಿಪಥ’ ನೇಮಕಾತಿ ಯೋಜನೆಯನ್ನು ಮರುಪರಿಶೀಲಿಸುವಂತೆ ಕೇಂದ್ರಕ್ಕೆ ನಿರ್ದೇಶನಗಳನ್ನು ನೀಡುವಂತೆ ವಕೀಲ ಹರ್ಷ್ ಅಜಯ್ ಸಿಂಗ್ ಸೋಮವಾರ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ಯೋಜನೆ ಘೋಷಣೆಯಾದ ನಂತರ ದೇಶದ ಹಲವಾರು ಭಾಗಗಳಲ್ಲಿ ಪ್ರತಿಭಟನೆಗೆ ಕಾರಣವಾಗಿದೆ ಎಂದು ಅರ್ಜಿಯಲ್ಲಿ ಉಲ್ಲೇಖಿಸಲಾಗಿದೆ.
ಇದನ್ನೂ ಓದಿ: ಅಗ್ನಿಪಥ ಯೋಜನೆ: ’ಮೋದಿ ಹಿಟ್ಲರ್ ಮಾರ್ಗವನ್ನು ಅನುಸರಿಸಿದರೆ ಹಿಟ್ಲರ್‌ನಂತೆ ಸಾಯುತ್ತಾರೆ’- ಕಾಂಗ್ರೆಸ್ ನಾಯಕ
ವಕೀಲ ಹರ್ಷ್ ಅಜಯ್ ಸಿಂಗ್ ಅರ್ಜಿ ಸಲ್ಲಿಸುವ ಮೊದಲು ಈ ಯೋಜನೆಯ ವಿರುದ್ಧ ವಕೀಲರಾದ ಎಂ.ಎಲ್. ಶರ್ಮಾ ಮತ್ತು ವಿಶಾಲ್ ತಿವಾರಿ ಅವರು ಸುಪ್ರೀಂ ಕೋರ್ಟ್‌ನಲ್ಲಿ ಎರಡು ಪ್ರತ್ಯೇಕ ಅರ್ಜಿಗಳನ್ನು ಸಲ್ಲಿಸಿದ್ದರು.
ಸಂವಿಧಾನಾತ್ಮಕ ನಿಬಂಧನೆಗಳಿಗೆ ವಿರುದ್ಧವಾದ ಮತ್ತು ಸಂಸತ್ತಿನ ಅನುಮೋದನೆಯಿಲ್ಲದೆಯೇ, ಒಕ್ಕೂಟ ಸರ್ಕಾರ ಸಶಸ್ತ್ರ ಪಡೆಗಳಿಗೆ ಶತಮಾನಗಳಷ್ಟು ಹಳೆಯದಾದ ಆಯ್ಕೆ ಪ್ರಕ್ರಿಯೆಯನ್ನು ರದ್ದುಗೊಳಿಸಿದೆ ಎಂದು ವಕೀಲ ಎಂಎಲ್ ಶರ್ಮಾ ಸಲ್ಲಿಸಿದ ಅರ್ಜಿಯಲ್ಲಿ ಆರೋಪಿಸಲಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others
ಕಳೆದ ವಾರ, ವಕೀಲ ವಿಶಾಲ್ ತಿವಾರಿ ಅವರು ತಮ್ಮ ಅರ್ಜಿಯಲ್ಲಿ, ರಾಷ್ಟ್ರೀಯ ಭದ್ರತೆ ಮತ್ತು ಸೇನೆಯ ಮೇಲೆ ಈ ಯೋಜನೆಯ ಪ್ರಭಾವವನ್ನು ಪರಿಶೀಲಿಸಲು ಸಮಿತಿಯನ್ನು ರಚಿಸುವಂತೆ ಸುಪ್ರೀಂ ಕೋರ್ಟ್‌ಗೆ ಒತ್ತಾಯಿಸಿದ್ದರು. ಸಾರ್ವಜನಿಕ ಆಸ್ತಿ ನಾಶಕ್ಕೆ ಕಾರಣವಾದ ಯೋಜನೆಯ ವಿರುದ್ಧ ನಡೆದ ದೊಡ್ಡ ಪ್ರಮಾಣದ ಹಿಂಸಾಚಾರದ ತನಿಖೆಗೆ ವಿಶೇಷ ತನಿಖಾ ತಂಡವನ್ನು (ಎಸ್‌ಐಟಿ) ರಚಿಸುವಂತೆ ಉನ್ನತ ನ್ಯಾಯಾಲಯದಿಂದ ನಿರ್ದೇಶನವನ್ನು ಕೋರಿದ್ದಾರೆ.
ಜೂನ್ 14 ರಂದು ಕೇಂದ್ರವು ‘ಅಗ್ನಿಪಥ’ ಯೋಜನೆಯನ್ನು ಅನಾವರಣಗೊಳಿಸಿದ ನಂತರ ಹಲವಾರು ರಾಜ್ಯಗಳಲ್ಲಿ ಪ್ರತಿಭಟನೆಗಳು ಭುಗಿಲೆದ್ದವು. ಈ ಯೋಜನೆಯಡಿಯಲ್ಲಿ, 17.5 ರಿಂದ 21 ವರ್ಷಗಳ ನಡುವಿನ ಯುವ ಜನರನ್ನು ನಾಲ್ಕು ವರ್ಷಗಳ ಅವಧಿಗೆ ಸಶಸ್ತ್ರ ಪಡೆಗಳಲ್ಲಿ ನೇಮಿಸಿಕೊಳ್ಳಲಾಗುವುದು. ಪ್ರತಿಭಟನಾಕಾರರನ್ನು ಸಮಾಧಾನಪಡಿಸುವ ಪ್ರಯತ್ನದಲ್ಲಿ ಸರ್ಕಾರವು ನೇಮಕಾತಿಗಾಗಿ ಗರಿಷ್ಠ ವಯಸ್ಸಿನ ಮಿತಿಯನ್ನು 23 ವರ್ಷಗಳಿಗೆ ವಿಸ್ತರಿಸಿತು.
ಇದನ್ನೂ ಓದಿ: ಪ್ರಧಾನಿ ಮೋದಿ ಬಾಲ್ಯದಲ್ಲಿ ‘ಭಾರಿ ಧೈರ್ಯವಂತ’ ಆಗಿದ್ದರು: 1ನೇ ತರಗತಿ ಪಠ್ಯಪುಸ್ತಕ ಸೇರಿದ ‘ಮೊಸಳೆ ಕತೆ’!



ನಮ್ಮ ಸೈನಿಕರು ಗುತ್ತಿಗೆ ಕಾರ್ಮಿಕರಲ್ಲ.