ಮಹಾರಾಷ್ಟ್ರ ವಿಧಾನ ಪರಿಷತ್ ಚುನಾವಣೆ ಫಲಿತಾಂಶದ ಬೆನ್ನಲ್ಲೇ ಮಹಾ ವಿಕಾಸ್ ಅಘಾಡಿ ಸರ್ಕಾರಕ್ಕೆ ಆಪರೇಷನ್ ಕಮಲದ ಆತಂಕ ಶುರುವಾಗಿದೆ. ಪರಿಸ್ಥಿತಿ ನಿಯಂತ್ರಣದಲ್ಲಿದೆ. ಈ ದಿನ ಕಳೆಯುವುದರೊಳಗೆ ಎಲ್ಲವೂ ಬಗೆಹರಿಯಲಿದೆ ಎಂದು ಸಂಸದ ಸಂಜಯ್ ರಾವತ್ ಹೇಳುತ್ತಿದ್ದಾರೆ.
ಶಿವಸೇನಾ ನಾಯಕರು ಮೇಲ್ಮಾತಿಗೆ ಈ ರೀತಿ ಭರವಸೆ ನೀಡುತ್ತಿರುವಂತೆ ತೋರುತ್ತಿದೆ. ಏಕೆಂದರೆ 13 ಮಂದಿ ಶಾಸಕರು ಗುಜರಾತ್‌ನಲ್ಲಿದ್ದಾರೆ ಎನ್ನಲಾಗಿತ್ತು. ಆದರೆ, ಶಿವಸೇನೆಯ ಹಿರಿಯ ಸಚಿವ ಏಕನಾಥ್ ಶಿಂಧೆ ಸೂರತ್‌ಗೆ 21 ಶಾಸಕರನ್ನು ಕರೆದುಕೊಂಡು ಹೋಗಿರುವುದು ಬೆಳಕಿಗೆ ಬಂದಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others
ಸಚಿವ ಏಕನಾಥ್ ಶಿಂದೆ ಅವರು ಬಿಜೆಪಿ ಆಡಳಿತದ ಗುಜರಾತ್‌ನ ಸೂರತ್‌ನ ಹೋಟೆಲ್‌ನಲ್ಲಿ ಆಶ್ರಯ ಪಡೆಯುತ್ತಿದ್ದಾರೆ. ಇಂದು ಮಧ್ಯಾಹ್ನ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ ಎಂಬ ಮಾಹಿತಿ ಹೊರ ಬಂದಿದೆ. ಜೊತೆಗೆ ಬಿಜೆಪಿಯು ಏಕನಾಥ್ ಶಿಂದೆ ಅವರಿಗೆ ಉಪಮುಖ್ಯಮಂತ್ರಿ ಸ್ಥಾನದ ಭರವಸೆ ನೀಡಿದೆ ಎಂದು ಬಿಜೆಪಿ ಮೂಲಗಳು ತಿಳಿಸಿವೆ.
ಇದನ್ನೂ ಓದಿ: ಅಗ್ನಿಪಥ ಯೋಜನೆ: ನಿರ್ಧಾರ ಕೈಗೊಳ್ಳುವ ಮೊದಲು ನಮ್ಮ ಮಾತನ್ನೂ ಕೇಳಿ- ಸುಪ್ರೀಂಗೆ ಕೇಂದ್ರದ ಮನವಿ
“ಏಕನಾಥ್ ಶಿಂಧೆ ಅವರನ್ನು ಬಳಸಿಕೊಂಡು ರಾಜ್ಯ ಸರ್ಕಾರವನ್ನು ಬೀಳಿಸುವ ಪ್ರಯತ್ನಗಳು ಯಶಸ್ವಿಯಾಗುವುದಿಲ್ಲ. ಶಿಂಧೆ ಅವರು ಪಕ್ಷದ ನಿಷ್ಠಾವಂತ ಕಾರ್ಯಕರ್ತರಾಗಿದ್ದಾರೆ, ಅವರು ನಮ್ಮೊಂದಿಗೆ ಹಲವಾರು ಬಾರಿ ಆಂದೋಲನಗಳಲ್ಲಿ ಭಾಗವಹಿಸಿದ್ದಾರೆ. ಅವರು ಬಾಳಾ ಸಾಹೇಬ್ ಅವರ ಸೈನಿಕ (ನಿಷ್ಠಾವಂತ)” ಎಂದು ಶಿವಸೇನೆಯ ಸಂಜಯ್ ರಾವುತ್ ಹೇಳಿದ್ದಾರೆ. ಜೊತೆಗೆ ಏಕನಾಥ್ ಶಿಂಧೆ ಅವರೊಂದಿಗೆ ಮಾತುಕತೆ ನಡೆಯುತ್ತಿದೆ ಎಂದು ಮಾಹಿತಿ ನೀಡಿದ್ದಾರೆ.
ಉದ್ಧವ್ ಠಾಕ್ರೆ ಅವರ ಸರ್ಕಾರ ಮಹಾ ವಿಕಾಸ್ ಅಘಾಡಿಯಲ್ಲಿ ಅವರ ಸ್ವಂತ ಪಕ್ಷ ಶಿವಸೇನೆ, ಶರದ್ ಪವಾರ್ ಅವರ ಎನ್‌ಸಿಪಿ ಮತ್ತು ಕಾಂಗ್ರೆಸ್ ಸೇರಿವೆ. ಕಳೆದ ಸಂಜೆ, ವಿಧಾನ ಪರಿಷತ್ತಿನ ಚುನಾವಣೆಗಳಲ್ಲಿ, ಶಿವಸೇನೆ ಮತ್ತು ಕಾಂಗ್ರೆಸ್ ಸದಸ್ಯರು ಅಡ್ಡ ಮತದಾನ ಮಾಡಿದ್ದರಿಂದ ಬಿಜೆಪಿಯು 10 ಸ್ಥಾನಗಳಲ್ಲಿ ಐದು ಸ್ಥಾನಗಳನ್ನು ಗೆಲ್ಲುವಂತೆ ಮಾಡಿದೆ. ಈ ಅಡ್ಡ ಮತದಾನದ ಬಗ್ಗೆ ಇಂದು ಉದ್ಧವ್ ಠಾಕ್ರೆ ತುರ್ತು ಸಭೆ ಕರೆದಿದ್ದಾರೆ.
ಸಚಿವ ಏಕನಾಥ್ ಶಿಂಧೆ ನಿನ್ನೆ ತಡರಾತ್ರಿ ಗುಜರಾತ್‌ಗೆ ತೆರಳಿದ್ದಾರೆ. ಇತ್ತ ಬಿಜೆಪಿ ನಾಯಕ ದೇವೇಂದ್ರ ಫಡ್ನವಿಸ್ ಅವರು ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಲು ದೆಹಲಿಯಲ್ಲಿದ್ದಾರೆ. ಅಡ್ಡ ಮತದಾನದಿಂದಾದ ಸೋಲಿನ ನಂತರ ಕಾಂಗ್ರೆಸ್ ತನ್ನ ಶಾಸಕರನ್ನು ದೆಹಲಿಗೆ ಕರೆಸಿದೆ.
ಇದನ್ನೂ ಓದಿ: ಮಹಾರಾಷ್ಟ್ರ: ಆಪರೇಷನ್ ಕಮಲದ ಶಂಕೆ- ಉದ್ಧವ್ ಠಾಕ್ರೆ ಸರ್ಕಾರದ ಸಚಿವ, 13 ಶಾಸಕರು ಗುಜರಾತ್‌ಗೆ


