Homeಮುಖಪುಟರಾಷ್ಟ್ರಪತಿ ಚುನಾವಣೆ: ವಿಪಕ್ಷಗಳ ಅಭ್ಯರ್ಥಿಯಾಗಿ ಮಾಜಿ ಕೇಂದ್ರ ಸಚಿವ ಯಶವಂತ್ ಸಿನ್ಹಾ ಘೋಷಣೆ

ರಾಷ್ಟ್ರಪತಿ ಚುನಾವಣೆ: ವಿಪಕ್ಷಗಳ ಅಭ್ಯರ್ಥಿಯಾಗಿ ಮಾಜಿ ಕೇಂದ್ರ ಸಚಿವ ಯಶವಂತ್ ಸಿನ್ಹಾ ಘೋಷಣೆ

- Advertisement -
- Advertisement -

ಜುಲೈ 18 ರಂದು ನಡೆಯಲಿರುವ ರಾಷ್ಟ್ರಪತಿ ಚುನಾವಣೆಯಲ್ಲಿ ಪ್ರತಿಪಕ್ಷಗಳ ಜಂಟಿ ಅಭ್ಯರ್ಥಿಯಾಗಿ ತೃಣಮೂಲ ಕಾಂಗ್ರೆಸ್ ನಾಯಕ ಮತ್ತು ಮಾಜಿ ಸಚಿವ ಯಶವಂತ್ ಸಿನ್ಹಾ ಅವರನ್ನು ಆಯ್ಕೆ ಮಾಡಲಾಗಿದೆ. ಬಿಜೆಪಿಯಿಂದ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಅಭ್ಯರ್ಥಿಯಾಗುವ ಸಾಧ್ಯತೆಯಿದೆ ಎನ್ನಲಾಗಿದೆ.

“ಮುಂಬರುವ ರಾಷ್ಟ್ರಪತಿ ಚುನಾವಣೆಯಲ್ಲಿ ನಾವು ಒಮ್ಮತದ ಅಭ್ಯರ್ಥಿಯನ್ನು ಆಯ್ಕೆ ಮಾಡಲು ನಿರ್ಧರಿಸಿದ್ದೇವೆ. ಮೋದಿ ಸರ್ಕಾರ ಮತ್ತಷ್ಟು ಹಾನಿ ಮಾಡದಂತೆ ತಡೆಯಲು ನಿರ್ಧರಿಸಿದ್ದೇವೆ. ಇಂದು ನಡೆದ ಸಭೆಯಲ್ಲಿ ನಾವು ಯಶವಂತ್ ಸಿನ್ಹಾ ಅವರನ್ನು ಪ್ರತಿಪಕ್ಷಗಳ ಒಮ್ಮತದ ಅಭ್ಯರ್ಥಿಯಾಗಿ ಆಯ್ಕೆ ಮಾಡಿದ್ದೇವೆ. ಎಲ್ಲಾ ರಾಜಕೀಯ ಪಕ್ಷಗಳಲ್ಲಿ ಯಶವಂತ್ ಸಿನ್ಹಾ ಅವರಿಗೆ ಮತ ನೀಡುವಂತೆ ಮನವಿ ಮಾಡುತ್ತೇವೆ” ಎಂದು ಪ್ರತಿಪಕ್ಷಗಳ ಜಂಟಿ ಹೇಳಿಕೆಯನ್ನು ಓದಿದ ಕಾಂಗ್ರೆಸ್‌ನ ನಾಯಕ ಜೈರಾಮ್ ರಮೇಶ್ ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಇದನ್ನೂ ಓದಿ: Explained: ಭಾರತದ ರಾಷ್ಟ್ರಪತಿ ಆಯ್ಕೆಯನ್ನು ಹೇಗೆ ಮಾಡಲಾಗುತ್ತದೆ?

ಜಂಟಿ ಹೇಳಿಕೆಯಲ್ಲಿ ಬಿಜೆಪಿ ಮತ್ತು ಅದರ ಮಿತ್ರಪಕ್ಷಗಳಿಗೆ ಯಶವಂತ್‌ ಸಿನ್ಹಾ ಅವರನ್ನು ಬೆಂಬಲಿಸುವಂತೆ ಮನವಿ ಮಾಡಿದೆ. ಇದರಿಂದಾಗಿ “ಅರ್ಹ ರಾಷ್ಟ್ರಪತಿಯನ್ನು ಅವಿರೋಧವಾಗಿ ಆಯ್ಕೆ ಮಾಡಬಹುದಾಗಿದೆ” ಎಂದು ಹೇಳಲಾಗಿದೆ. ರಾಷ್ಟ್ರಪತಿ ಅಭ್ಯರ್ಥಿ ಸಿನ್ಹಾ ಅವರ ಪ್ರಚಾರಕ್ಕೆ ಸಮಿತಿ ರಚಿಸಲಾಗಿದೆ.

ರಾಷ್ಟ್ರಪತಿ ಚುನಾವಣೆಗೆ ಜೂನ್ 27ರಂದು ಬೆಳಗ್ಗೆ 11.30ಕ್ಕೆ ನಾಮಪತ್ರ ಸಲ್ಲಿಸಲಿದ್ದೇವೆ ಎಂದು ಎನ್‌ಸಿಪಿ ನಾಯಕ ಶರದ್‌ ಪವಾರ್ ತಿಳಿಸಿದ್ದಾರೆ.

ರಾಷ್ಟ್ರಪತಿ ಚುನಾವಣೆಯಲ್ಲಿ ವಿಪಕ್ಷಗಳ ಜಂಟಿ ಅಭ್ಯರ್ಥಿಯಾಗಿ ಸ್ಪರ್ಧಿಸುವ ಮನವಿಯನ್ನು ಪಶ್ಚಿಮ ಬಂಗಾಳದ ಮಾಜಿ ರಾಜ್ಯಪಾಲ ಗೋಪಾಲಕೃಷ್ಣ ಗಾಂಧಿ ಸೋಮವಾರ ತಿರಸ್ಕರಿಸಿದ್ದರು. ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷದ ಮುಖ್ಯಸ್ಥ ಶರದ್ ಪವಾರ್ ಮತ್ತು ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಫಾರೂಕ್ ಅಬ್ದುಲ್ಲಾ ಅವರು ಕೂಡಾ ವಿರೋಧ ಪಕ್ಷಗಳ ಅಭ್ಯರ್ಥಿಯಾಗಿ ತಾವು ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ನಿರ್ಧಾರ ಪ್ರಕಟಿಸಿದ್ದರು.

ಗೋಪಾಲಕೃಷ್ಣ ಗಾಂಧಿ ಅವರು ತಮ್ಮ ಪ್ರಸ್ತಾಪವನ್ನು ತಿರಸ್ಕರಿಸಿದ ನಂತರ ಸೋಮವಾರ ಯಶವಂತ್ ಸಿನ್ಹಾ ಅವರ ಹೆಸರನ್ನು ವಿರೋಧ ಪಕ್ಷಗಳು ಚರ್ಚಿಸಿದ್ದವು ಎಂದು ವರದಿಗಳು ತಿಳಿಸಿವೆ. ಈ ಬಗ್ಗೆ ಟ್ವೀಟ್‌ನಲ್ಲಿ ಸುಳಿವು ನೀಡಿದ್ದ  ಯಶವಂತ್‌ ಸಿನ್ಹಾ ಅವರು ತಮ್ಮ ತೃಣಮೂಲ ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿದ್ದರು.


ಇದನ್ನೂ ಓದಿ: ಮಹಾರಾಷ್ಟ್ರ: ಅಧಿಕಾರಕ್ಕಾಗಿ ನಾನು ಎಂದಿಗೂ ಮೋಸ ಮಾಡುವುದಿಲ್ಲ ಎಂದ ಏಕನಾಥ್‌ ಶಿಂಧೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....