Homeಕರ್ನಾಟಕಬೆಂಗಳೂರಿಗೆ ಪ್ರಧಾನಿ ಮೋದಿ ಭೇಟಿ: 24 ಕೋಟಿ ರೂಪಾಯಿ ವೆಚ್ಚ ಮಾಡಿದ ಬಿಬಿಎಂಪಿ

ಬೆಂಗಳೂರಿಗೆ ಪ್ರಧಾನಿ ಮೋದಿ ಭೇಟಿ: 24 ಕೋಟಿ ರೂಪಾಯಿ ವೆಚ್ಚ ಮಾಡಿದ ಬಿಬಿಎಂಪಿ

- Advertisement -
- Advertisement -

ಬೆಂಗಳೂರಿಗೆ ಪ್ರಧಾನಿ ನರೇಂದ್ರ ಮೋದಿಯವರ ಭೇಟಿ ಮತ್ತು ಭೇಟಿ ಹಿನ್ನೆಲೆ ಪ್ರಮುಖ ಮೂಲಸೌಕರ್ಯಗಳನ್ನು ಸರಿಪಡಿಸುವ ನಿಟ್ಟಿನಲ್ಲಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) 24 ಕೋಟಿ ರೂಪಾಯಿಗಳನ್ನು ಖರ್ಚು ಮಾಡಿದೆ.

ಈ 24 ಕೋಟಿ ರೂಪಾಯಿ ವೆಚ್ಚದಲ್ಲಿ ರಸ್ತೆಗಳಿಗೆ ಟಾರ್ ಹಾಕುವುದು, ರಸ್ತೆ ಗುಂಡಿಗಳನ್ನು ಮುಚ್ಚುವುದು, ಹೊಸದಾಗಿ ಟಾರ್‍ ಹಾಕಿರುವ ರಸ್ತೆಗಳಿಗೆ ಬಿಳಿ ಪಟ್ಟಿಗಳನ್ನು ಎಳೆಯುವುದು, ಚರಂಡಿ ಸರಿಪಡಿಸುವುದು ಸೇರಿದಂತೆ ಬಹಳ ವರ್ಷಗಳಿಂದ ಹಾಗೆ ಉಳಿದಿದ್ದ ಇನ್ನಿತರ ಕೆಲಸಗಳು ಸೇರಿವೆ.

ಈ ಬಗ್ಗೆ ಮಾಹಿತಿ ನೀಡಿರುವ ಬಿಬಿಎಂಪಿ ವಿಶೇಷ ಆಯುಕ್ತ ರವೀಂದ್ರ ಮಾತನಾಡಿ, ‘ಕೋಮಘಟ್ಟ ಮತ್ತು ಹೆಬ್ಬಾಳ ಸುತ್ತಮುತ್ತಲಿನ ರಸ್ತೆಗಳನ್ನು ಸರಿಪಡಿಸಲು 14 ಕೋಟಿ ರೂಪಾಯಿ ವೆಚ್ಚವಾಗಿದೆ’ ಎಂದಿದ್ದಾರೆ.

ಇದನ್ನೂ ಓದಿ: ‘ಎಷ್ಟು ಮಾಜಿ ಸೈನಿಕರಿಗೆ ಕೆಲಸ ಕೊಟ್ಟಿದ್ದೀರಿ?’: ಅನಂದ್‌ ಮಹೀಂದ್ರಾಗೆ ಮಾಜಿ ಸೈನಿಕರ ಗಂಭೀರ ಪ್ರಶ್ನೆ

ಈಗಿರುವ ಬೀದಿ ದೀಪಗಳನ್ನು ಸರಿಪಡಿಸಲು, ಹೊಸದಾಗಿ ಬೀದಿ ದೀಪಗಳನ್ನು ಅಳವಡಿಸಲು, ಪಾದಚಾರಿ ಮಾರ್ಗಗಳನ್ನು ನಿರ್ಮಿಸಲು ಮತ್ತು ಕಾಂಕ್ರೀಟ್ ಚಪ್ಪಡಿಗಳನ್ನು ಹಾಕಿ ಚರಂಡಿಗಳನ್ನು ಸರಿಪಡಿಸಲು 10 ಕೋಟಿ ರೂಪಾಯ ವೆಚ್ಚವಾಗಿ ಎಂದು ಮಾಹಿತಿ ನೀಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಮಾಹಿತಿಯ ಪ್ರಕಾರ ತುರ್ತು ಸಂದರ್ಭದಲ್ಲಿ ಅನುದಾನ ಬಳಸಬಹುದಾದ ʻವಿವೇಚನ ಅನುದಾನದಡಿʼ ಈ ವೆಚ್ಚವನ್ನು ಭರಿಸಲಾಗಿದೆ. ಆದರೆ, ಕಳೆದ 1.5 ವರ್ಷಗಳಿಂದ ನಾಗರಿಕ ಸಂಸ್ಥೆಗಳು ಇಲ್ಲಿನ ರಸ್ತೆಗಳು, ರಸ್ತೆ ಗುಂಡಿಗಳು, ಚರಂಡಿಯನ್ನ ಸರಿಪಡಿಸಲು ಹಲವು ಬಾರಿ ಮನವಿ ಮಾಡಿದ್ದರೂ ಏನಾಗಿರಲಿಲ್ಲ. ಆದರೆ, ಪ್ರಧಾನಿಯವರ ಭೇಟಿ ಹಿನ್ನೆಲೆ ಕೇವಲ 4 ದಿನಗಳಲ್ಲಿ ಎಲ್ಲಾ ಕೆಲಸವಾಗಿದೆ.

PC: Murali Kumar K.

ಇನ್ನು ತಮ್ಮ ಭೇಟಿಯ ಸಮಯದಲ್ಲಿ, ಪ್ರಧಾನಮಂತ್ರಿಯವರು ಐಐಎಸ್‌ಸಿಯಲ್ಲಿ ಬ್ರೈನ್ ಸೆಲ್ ರಿಸರ್ಚ್ ಸೆಂಟರ್ ಮತ್ತು 800ಕ್ಕೂ ಹೆಚ್ಚು ಹಾಸಿಗೆ ಸಾಮರ್ಥ್ಯವಿರುವ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯನ್ನು ಉದ್ಘಾಟಿಸಿದ್ದಾರೆ. 15 ಸಾವಿರ ಕೋಟಿ ವೆಚ್ಚದ ಸಬ್ ಅರ್ಬನ್ ರೈಲು ಯೋಜನೆ ಮತ್ತು 35 ಸಾವಿರ ಕೋಟಿ ವೆಚ್ಚದ ಬೆಂಗಳೂರು ಮತ್ತು ಹೊರ ವರ್ತುಲ ರಸ್ತೆ (ರಿಂಗ್ ರೋಡ್) ಅಭಿವೃದ್ಧಿ ಯೋಜನೆಗೆ ಅಡಿಪಾಯ ಹಾಕಿದ್ದಾರೆ.


ಇದನ್ನೂ ಓದಿ: ಹಿಂದೆ ಇದ್ದಂತೆ ಎಲ್ಲ ಕನ್ನಡ ಸಿನಿಮಾಗಳಿಗೂ ತೆರಿಗೆ ವಿನಾಯಿತಿ ನೀಡಿ: ಸಿಎಂಗೆ ನಿರ್ದೇಶಕ ಮಂಸೋರೆ ಆಗ್ರಹ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಆಟೋ ಚಾಲಕನಾಗಿ ಕೆಲಸ ಮಾಡುವ ತಂದೆಯೊಬ್ಬರು ಕೈಯಲ್ಲಿ ಸಿಹಿ ತಿಂಡಿಯ ಪೆಟ್ಟಿಗೆಯೊಂದಿಗೆ ಮನೆಗೆ ಹೆಜ್ಜೆ ಹಾಕುತ್ತಾರೆ. ಅದನ್ನು ನೋಡಿದ ಮಗಳು, "ಏನಪ್ಪಾ ವಿಶೇಷ, ಇವತ್ತು ಹುಟ್ಟುಹಬ್ಬನಾ, ಹಬ್ಬನಾ ಅಥವಾ ಕುಟುಂಬದ ಸಂಭ್ರಮನಾ?" ಎಂದು...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...