Homeಮುಖಪುಟಬುಲ್ಡೋಜರ್‌‌, ಹಿಜಾಬ್‌, ಬಾಬ್ರಿ ಮಸೀದಿ ಪ್ರಕರಣ: ಲಂಡನ್‌ನಲ್ಲಿ ಜಸ್ಟೀಸ್ ಚಂದ್ರಚೂಡ್‌ ಹೇಳಿದ್ದೇನು?

ಬುಲ್ಡೋಜರ್‌‌, ಹಿಜಾಬ್‌, ಬಾಬ್ರಿ ಮಸೀದಿ ಪ್ರಕರಣ: ಲಂಡನ್‌ನಲ್ಲಿ ಜಸ್ಟೀಸ್ ಚಂದ್ರಚೂಡ್‌ ಹೇಳಿದ್ದೇನು?

- Advertisement -
- Advertisement -

ಸೋಮವಾರ ಲಂಡನ್‌ನ ಕಿಂಗ್ಸ್ ಕಾಲೇಜ್‌ನಲ್ಲಿ ನಡೆದ ‘ಮಾನವ ಹಕ್ಕುಗಳ ರಕ್ಷಣೆ, ನಾಗರಿಕ ಸ್ವಾತಂತ್ರ್ಯದ ರಕ್ಷಣೆ: ಪ್ರಜಾಪ್ರಭುತ್ವದಲ್ಲಿ ನ್ಯಾಯಾಲಯಗಳ ಪಾತ್ರ’ ಕುರಿತ ವಿಚಾರಸಂಕಿರಣದಲ್ಲಿ ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್‌ ಅವರು ಕೆಲವು ಕಠಿಣ ಪ್ರಶ್ನೆಗಳನ್ನು ಎದುರಿಸಿದ್ದಾರೆ.

ಬುಲ್ಡೋಜರ್‌ಗಳ ಮೂಲಕ ಮುಸ್ಲಿಮರ ಮನೆಗಳ ಧ್ವಂಸ, ಹಿಜಾಬ್ ವಿವಾದ, ಬಾಬರಿ ಮಸೀದಿ ತೀರ್ಪುಗಳಿಗೆ ಸಂಬಂಧಿಸಿದಂತೆ ಭಾರತದ ಸುಪ್ರೀಂ ಕೋರ್ಟ್‌ ಮುಸ್ಲಿಂ ಅಲ್ಪಸಂಖ್ಯಾತರಿಗೆ ನೀಡಿರುವ ನ್ಯಾಯದ ಕುರಿತು ಪ್ರಶ್ನಿಸಲಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ನ್ಯಾಯಮೂರ್ತಿ ಚಂದ್ರಚೂಡ್‌ ಮಾತನಾಡಿ, “ಬಹುತೇಕ ಪ್ರಕರಣಗಳು ಪ್ರಸ್ತುತ ನ್ಯಾಯಾಲಯದಲ್ಲಿವೆ. ಅವುಗಳ ಬಗ್ಗೆ ಹೆಚ್ಚಿನ ಪ್ರತಿಕ್ರಿಯೆ ನೀಡಲು ಸಾಧ್ಯವಾಗುವುದಿಲ್ಲ. ನ್ಯಾಯಾಧೀಶರಾದ ಬಳಿಕ ಕೆಲವು ನಿರ್ಬಂಧಗಳಿವೆ” ಎಂದಿದ್ದಾರೆ.

ಬಾಬರಿ ಮಸೀದಿ ಪ್ರಕರಣದಲ್ಲಿ ರಾಮ ಜನ್ಮಭೂಮಿ ಪರವಾಗಿ ತೀರ್ಪು ಹೊರಬಿದ್ದಿತು. “ತೀರ್ಪು ನೀಡಿದ ಪೀಠದ ಭಾಗವಾಗಿರುವುದರಿಂದ ಪ್ರತಿಕ್ರಿಯಿಸಲು ಸಾಧ್ಯವಿಲ್ಲ” ಎಂದು ಅವರು ತಿಳಿಸಿದ್ದಾರೆ.

ಮುಸ್ಲಿಮರು ಅಥವಾ ಇತರ ಅಲ್ಪಸಂಖ್ಯಾತರ ವಿರುದ್ಧದ ತಾರತಮ್ಯದ ಪ್ರಕರಣಗಳನ್ನು ನ್ಯಾಯಾಲಯಗಳು ವ್ಯವಹರಿಸುವುದಿಲ್ಲ ಎಂಬ ಅನಿಸಿಕೆಗಳಿವೆ ಎಂದ ಅವರು, “ಧ್ವಂಸ ಕಾರ್ಯಾಚರಣೆಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಗಮನ ಹರಿಸಿದ್ದು, ಈ ವಿಷಯದ ಬಗ್ಗೆ ನೋಟಿಸ್ ನೀಡಿದೆ” ಎಂದು ಸ್ಪಷ್ಟಪಡಿಸಿದ್ದಾರೆ.

ಸುಪ್ರೀಂ ಕೋರ್ಟ್ ಸಾಮಾನ್ಯವಾಗಿ ರಕ್ಷಣೆಯ ಮೊದಲ ಅಸ್ತ್ರವಾಗಿದೆ. ಧಾರ್ಮಿಕ ಸ್ವಾತಂತ್ರ್ಯದ ವಿಷಯಗಳಲ್ಲಿ ನ್ಯಾಯಾಲಯವು ಧಾರ್ಮಿಕ ಪಂಥಗಳು ಮತ್ತು ನ್ಯಾಯಶಾಸ್ತ್ರದ ಪ್ರತಿಪಾದನೆಗಳನ್ನು ಎತ್ತಿಹಿಡಿದಿದೆ. ಶಿಕ್ಷಣ ಕೇಂದ್ರಗಳನ್ನು ಸ್ಥಾಪಿಸುವ ಅಲ್ಪಸಂಖ್ಯಾತರ ಹಕ್ಕನ್ನು ನಾವು ಎತ್ತಿ ಹಿಡಿದಿದ್ದೇವೆ ಎಂದಿದ್ದಾರೆ.

ಇದನ್ನೂ ಓದಿರಿ: ಪಠ್ಯಪುಸ್ತಕ ರಚನೆಯಲ್ಲಿ ಸಮಿತಿ ಸದಸ್ಯರ ಅಭಿಪ್ರಾಯ ತಿರಸ್ಕರಿಸಿ ಏಕಪಕ್ಷೀಯ ಪಠ್ಯ ರಚಿಸಿದ ಚಕ್ರತೀರ್ಥ!

ವೆಬ್‌ನಲ್ಲಿಯೂ ನ್ಯಾಯಮೂರ್ತಿ ಚಂದ್ರಚೂಡ್ ಅವರ ಭಾಷಣ ಪ್ರಸಾರವಾಗಿದ್ದು, ಸುಪ್ರೀಂ ಕೋರ್ಟ್‌ನಿಂದ ನಿರ್ಣಯಿಸಲಾದ ಹಲವಾರು ಪ್ರಮುಖ ಮಾನವ ಹಕ್ಕುಗಳ ಪ್ರಕರಣಗಳ ಕುರಿತು ಅವರು ಮಾತನಾಡಿರುವುದನ್ನು ಕಾಣಬಹುದು.

ಮಹಿಳೆಯರಿಂದ ಹಿಡಿದು LGBTQ+ ಸಮುದಾಯದವರೆಗೆ ಭಾರತದ ವಿವಿಧ ವಿಭಾಗದ ಜನರ ಮಾನವ ಹಕ್ಕುಗಳ ರಕ್ಷಣೆಯಲ್ಲಿ ಸುಪ್ರೀಂ ಕೋರ್ಟ್ ವಹಿಸಿರುವ ಮಹತ್ವದ ಪಾತ್ರದ ಕುರಿತು ವಿವರಿಸಿದ್ದಾರೆ.

ಸಂವಿಧಾನದ 142 ನೇ ವಿಧಿಯ ಅಡಿಯಲ್ಲಿ “ಸಂಪೂರ್ಣ ನ್ಯಾಯ” ನೀಡಲು ಸುಪ್ರೀಂ ಕೋರ್ಟ್‌ ಮುಂದಿರುವ ಸವಾಲುಗಳ ಕುರಿತು ಅವರು ಪ್ರಸ್ತಾಪಿಸಿದ್ದರೆ. “ನ್ಯಾಯಾಧೀಶರೂ ತಪ್ಪು ಮಾಡಬಹುದು. ಒಮ್ಮೆ ಅಂತಿಮ ಎಂದು ಭಾವಿಸಿದ ನಿರ್ಧಾರಗಳನ್ನು ನಂತರದ ಪೀಳಿಗೆಯಿಂದ ಪರಿಶೀಲಿಸಲಾಗುತ್ತದೆ” ಎಂದು ತಿಳಿಸಿದ್ದಾರೆ.

(ಭಾಷಣದ ಪೂರ್ಣ ಪಠ್ಯವನ್ನು ‘ಇಲ್ಲಿ’ ಓದಬಹುದು)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...