Homeರಾಜಕೀಯ‘ಉದ್ಧವ್ ಠಾಕ್ರೆ ರಾಜೀನಾಮೆ ಬೇಡ; ಬಿಜೆಪಿ ಜೊತೆಗೆ ಮೈತ್ರಿ ಮಾಡೋಣ’- ಶಿವಸೇನೆಯ ಬಂಡಾಯ ಶಾಸಕ

‘ಉದ್ಧವ್ ಠಾಕ್ರೆ ರಾಜೀನಾಮೆ ಬೇಡ; ಬಿಜೆಪಿ ಜೊತೆಗೆ ಮೈತ್ರಿ ಮಾಡೋಣ’- ಶಿವಸೇನೆಯ ಬಂಡಾಯ ಶಾಸಕ

- Advertisement -
- Advertisement -

ಮಹಾರಾಷ್ಟ್ರ ಸರ್ಕಾರದಲ್ಲಿ ಎದ್ದಿರುವ ಬಂಡಾಯಕ್ಕೆ ಗುರುವಾರ ಬೆಳಿಗ್ಗೆ ಹೊಸ ತಿರುವು ಸಿಕ್ಕಿದೆ. ಸಚಿವ ಏಕನಾಥ್‌ ಶಿಂಧೆ ನೇತೃತ್ವದ ಬಂಡಾಯ ಪಾಳಯಕ್ಕೆ ಹೊಸದಾಗಿ ಸೇರ್ಪಡೆಯಾದ ಶಿವಸೇನೆ ಶಾಸಕ ದೀಪಕ್ ಕೇಸರ್ಕರ್ ಅವರು, ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವುದನ್ನು ತಮ್ಮ ಪಾಳಯ ಬಯಸುತ್ತಿಲ್ಲ ಎಂದು ಇಂದು ಬೆಳಿಗ್ಗೆ ಹೇಳಿದ್ದಾರೆ. ರಾಜೀನಾಮೆಗೆ ಬದಲಾಗಿದೆ, ಶಿವಸೇನೆಯೂ ಬಿಜೆಪಿಯೊಂದಿಗೆ ಮೈತ್ರಿ ಮಾಡಿ, ಹೊಸ ಸರ್ಕಾರವನ್ನು ರಚಿಸಬೇಕೆಂದು ನಾವು ಬಯಸುತ್ತೇವೆ ಎಂದು ಅವರು ಎನ್‌ಡಿಟಿವಿಗೆ ತಿಳಿಸಿದ್ದಾರೆ.

ಕೇಸರ್ಕರ್ ಅವರು ಶಿಂಧೆ ಪಾಳಯವನ್ನು ಸೇರಲು ಇಂದು ಮುಂಜಾನೆ ಬಿಜೆಪಿ ಆಡಳಿತದ ಅಸ್ಸಾಂನ ಗುವಾಹಟಿಗೆ ತೆರಳಿದರು. ಕಳೆದ ಎರಡು ದಿನಗಳ ಹಿಂದಿನವರೆಗೂ ಅವರು ಉದ್ಧವ್‌ ಠಾಕ್ರೆಯೊಂದಿಗೆ ಕಾಣಿಸಿಕೊಂಡಿದ್ದರು.
₹100 ₹200 ₹500 ₹1000 Others

ದೂರವಾಣಿ ಮೂಲಕ ಎನ್‌ಡಿಟಿವಿಯೊಂದಿಗೆ ಮಾತನಾಡಿದ ಅವರು, ತಮ್ಮೊಂದಿಗೆ ವಿಮಾನದಲ್ಲಿ ಮೂವರು ಶಿವಸೇನೆ ಶಾಸಕರು ಮತ್ತು ಕನಿಷ್ಠ ಒಬ್ಬ ಪಕ್ಷೇತರ ಶಾಸಕ ಇದ್ದರು ಎಂದು ಹೇಳಿದ್ದಾರೆ. ಸೈದ್ಧಾಂತಿಕ ಸಾಮ್ಯತೆಗಳಿಂದಾಗಿ ಬಿಜೆಪಿಯೊಂದಿಗೆ ಮೈತ್ರಿ ಮಾಡಲು ಮತ್ತು ಕಾಂಗ್ರೆಸ್-ಎನ್‌ಸಿಪಿಯ ಮೈತ್ರಿಯನ್ನು ಬಿಡಲು ಹಲವಾರು ಶಾಸಕರು ಉದ್ಧವ್‌ ಠಾಕ್ರೆಗೆ ಹೇಳಿದ್ದಾರೆ ಎಂದು ಕೇಸರ್ಕರ್ ಈ ಹಿಂದೆಯೂ ಹೇಳಿದ್ದರು.

ಇದನ್ನೂ ಓದಿ: ಮಹಾರಾಷ್ಟ್ರ ಸರ್ಕಾರ ಅತಂತ್ರ: ಇಲ್ಲಿವರೆಗೆ ಏನಾಯಿತು? ಸಂಕ್ಷಿಪ್ತ ವರದಿ ಇಲ್ಲಿದೆ

ಯಾವುದೇ ವಿಳಂಬಕ್ಕೆ ಸಮಯವಿಲ್ಲ ಎಂದು ಕೇಸರ್ಕರ್‌‌ ಪ್ರತಿಪಾದಿಸಿದ್ದು, “ಜನರು ಶಿವಸೇನೆ ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಳ್ಳಬೇಕೆಂದು ಬಯಸುತ್ತಾರೆ. ಎಲ್ಲಾ ಪ್ರಮುಖ ಸಚಿವಾಲಯಗಳು ಎನ್‌ಸಿಪಿ ಅಥವಾ ಕಾಂಗ್ರೆಸ್‌ನೊಂದಿಗೆ ಇವೆ. ನಮ್ಮಲ್ಲಿ ಕೇವಲ ಕೈಗಾರಿಕೆಗಳು ಮತ್ತು ನಗರಾಭಿವೃದ್ಧಿ ಸಚಿವಾಲಯ ಇದೆ. ಗ್ರಾಮೀಣ ಮಹಾರಾಷ್ಟ್ರಕ್ಕೆ ಸಂಬಂಧಿಸಿದ ಇಲಾಖೆಗಳು ಎನ್‌ಸಿಪಿ ಅಥವಾ ಕಾಂಗ್ರೆಸ್ ಕೈಯಲ್ಲಿ ಇದೆ” ಎಂದು ಅವರು ಹೇಳಿದ್ದಾರೆ.

“ನಮಗೆ ಮುಖ್ಯಮಂತ್ರಿ ಮೇಲೆ ಕೋಪವಿಲ್ಲ. ಮೈತ್ರಿ ಸರ್ಕಾರದಲ್ಲಿ ಇರುವ ಇತರರ ಮೇಲೆ ನಮಗೆ ಕೋಪವಿದೆ” ಎಂದು ಅವರು ಹೇಳಿದ್ದಾರೆ.

ತಮ್ಮ ಸಿದ್ಧಾಂತದ ಭಾಗವಾಗಿ ಹಿಂದುತ್ವವನ್ನು ಪ್ರತಿಪಾದಿಸುವ ಶಿವಸೇನೆ ಮತ್ತು ಬಿಜೆಪಿ ಎರಡೂ 2019 ರ ವಿಧಾನಸಭಾ ಚುನಾವಣೆಯಲ್ಲಿ ಒಟ್ಟಿಗೆ ಹೋರಾಡಿದ್ದವು. ಆದರೆ ನಾಯಕತ್ವದ ಸ್ಥಾನಗಳ ಬಗ್ಗೆ ಭಿನ್ನಾಭಿಪ್ರಾಯಗಳು ಉಂಟಾದ ನಂತರ ಸರ್ಕಾರ ರಚಿಸಲು ಶಿವಸೇನೆಯು ಎನ್‌ಸಿಪಿ ಮತ್ತು ಕಾಂಗ್ರೆಸ್‌ನೊಂದಿಗೆ ಮೈತ್ರಿ ಮಾಡಿಕೊಂಡಿತ್ತು.

ಕೇಸರ್ಕರ್ ಅವರು ಶಿವಸೇನೆ-ಬಿಜೆಪಿ ಮೈತ್ರಿ 25 ವರ್ಷಗಳಿಂದ ಅಸ್ತಿತ್ವದಲ್ಲಿದೆ ಎಂದು ಒತ್ತಿ ಹೇಳಿದ್ದಾರೆ. ಮಹಾರಾಷ್ಟ್ರ ಸರ್ಕಾರದ ಬಿಕ್ಕಟ್ಟಿಗೂ ತಮಗೂ ಯಾವುದೇ ಸಂಬಂಧವಿಲ್ಲ ಎಂದು ಬಿಜೆಪಿ ಇಲ್ಲಿಯವರೆಗೆ ಪ್ರತಿಪಾದಿಸುತ್ತಲೆ ಬಂದಿದೆ. ಆದರೆ ಶಿವಸೇನೆಯ ಬಂಡಾಯ ಶಾಸಕರು ಗುಜರಾತಿನಿಂದ ಅಸ್ಸಾಂನ ಗುವಾಹಟಿಗೆ ತೆರಳಿದಾಗ, ಅಲ್ಲಿನ ಹೋಟೆಲ್‌ನಲ್ಲಿ ಅವರಿಗಿಂತ ಮುಂಚೆಯೆ ಅಸ್ಸಾಂ ಮುಖ್ಯಮಂತ್ರಿ ಕಾಣಿಸಿಕೊಂಡಿದ್ದರು. ಅದೇ ಹೋಟೆಲ್‌ನಲ್ಲಿ ಬಂಡಾಯ ಶಾಸಕರು ಉಳಿದುಕೊಂಡಿದ್ದಾರೆ.

ಇದನ್ನೂ ಓದಿ: ಮಹಾರಾಷ್ಟ್ರ: ಸಿಎಂ ಗೃಹ ಕಚೇರಿ ಬಿಟ್ಟು ಸ್ವಂತ ಮನೆಗೆ ತೆರಳಿದ ಮುಖ್ಯಮಂತ್ರಿ ಉದ್ಧವ್ ಠಾಕ್ರೆ

ಶಿವಸೇನೆಯ ಬಹುತೇಕ ಶಾಸಕರು ಈಗ ಏಕನಾಥ್ ಶಿಂಧೆ ಅವರೊಂದಿಗಿದ್ದಾರೆ ಎಂದು ಕೇಸರ್ಕರ್ ಹೇಳಿದ್ದಾರೆ. ಉದ್ಧವ್ ಠಾಕ್ರೆ ಮತ್ತು ಏಕನಾಥ್ ಶಿಂಧೆ ನಡುವೆ ಪಕ್ಷದ ನಾಯಕ ಯಾರೆಂದು ಪರಿಗಣಿಸಲಾಗಿದೆ ಎಂಬ ಪ್ರಶ್ನೆಗೆ ಉತ್ತರಿಸಿರುವ ಕೇಸರ್ಕರ್‌, “ನಾವು ಮುಖ್ಯಮಂತ್ರಿಯೊಂದಿಗೆ ಹಲವಾರು ಬಾರಿ ಮಾತನಾಡಿದ್ದೇವೆ. ಈಗ ಅವರು ರಾಜೀನಾಮೆ ನೀಡಲು ಸಿದ್ಧ ಎಂದು ಹೇಳುತ್ತಿದ್ದಾರೆ. ಆದರೆ ನಮಗೆ ಅವರ ರಾಜೀನಾಮೆ ಬೇಡ. ನಮಗೆ ನಮಗೆ ಬೇಕಾಗಿದ್ದು, ರಾಜ್ಯ ಮತ್ತು ಕೇಂದ್ರದಲ್ಲಿ ಒಂದೇ ಆಡಳಿತ. ಇದರಿಂದ ಮಹಾರಾಷ್ಟ್ರ ಪ್ರಗತಿಯಾಗಬೇಕು” ಎಂದು ತಿಳಿಸಿದ್ದಾರೆ.

ಶಿಂಧೆ ಪಾಳಯವು ಈಗ ಸ್ಪಷ್ಟವಾಗಿ ಪಕ್ಷದ 55 ಶಾಸಕರಲ್ಲಿ 40 ಮಂದಿಯನ್ನು ಹೊಂದಿದೆ, ಅಂದರೆ ಪಕ್ಷಾಂತರ ವಿರೋಧಿ ಕಾನೂನಿನಡಿಯಲ್ಲಿ ಅಗತ್ಯವಿರುವ ಮೂರನೇ ಎರಡರಷ್ಟು ಶಾಸಕ ಬಲವನ್ನು ಹೊಂದಿರುವುದರಿಂದ ಅದು ನಿಜವಾದ ಶಿವಸೇನೆ ಎಂದು ಹೇಳ ಬಹುದಾಗಿದೆ.

ವೈಯಕ್ತಿಕ ಮಹತ್ವಾಕಾಂಕ್ಷೆಗಳ ಬಗ್ಗೆ ಮಾತನಾಡಿದ ಕೇಸರ್ಕರ್‌‌, ತನಗೆ ಬಿಜೆಪಿಯಿಂದ ಆಫರ್ ಮಾಡಲಾಗಿದೆ ಎಂದು ಹೇಳಿದ್ದಾರೆ. “ಆದರೂ, ನಾನು ಠಾಕ್ರೆ ಕುಟುಂಬವನ್ನು ಗೌರವಿಸುವ ಕಾರಣ ನಾನು ಶಿವಸೇನೆಯೊಂದಿಗೆ ಉಳಿದಿದ್ದೇನೆ. ಹಿಂದಿನ ದೇವೇಂದ್ರ ಫಡ್ನವೀಸ್ ನೇತೃತ್ವದ ಬಿಜೆಪಿ-ಶಿವಸೇನ ಆಡಳಿತದಲ್ಲಿ ರಾಜ್ಯದ ಸಚಿವನಾಗಿ ಅತ್ಯುತ್ತಮ ಖಾತೆಯನ್ನು ಹೊಂದಿದ್ದೆ. ಆದರೆ ಈ ಬಾರಿ ನನಗೆ ಮಂತ್ರಿ ಪದವಿ ನೀಡದ್ದಕ್ಕೆ ನಾನು ಅಸಮಾಧಾನಗೊಂಡಿಲ್ಲ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಮಹಾರಾಷ್ಟ್ರ: ಒಂದೇ ಕುಟುಂಬದ 9 ಜನರ ಆತ್ಮಹತ್ಯೆ ಪ್ರಕರಣ- ಸಾವಿಗೆ ಕಾರಣರಾದ 13 ಮಂದಿಯ ಬಂಧನ

ಈ ಮಧ್ಯೆ, ಉದ್ಧವ್ ಠಾಕ್ರೆ ಅವರ ಆಪ್ತ ಮತ್ತು ಶಿವಸೇನೆ ಸಂಸದ ಸಂಜಯ್ ರಾವತ್ ಅವರು ಪಕ್ಷವು ಇನ್ನೂ ಪ್ರಬಲವಾಗಿದೆ. ಬಂಡಾಯ ಶಾಸಕರು ಪಕ್ಷದ ದಿವಂಗತ ಸ್ಥಾಪಕ ಬಾಳ್ ಠಾಕ್ರೆ ಅವರ ನಿಜವಾದ ‘ಭಕ್ತರು’ ಅಲ್ಲ ಎಂದು ಹೇಳಿದ್ದು, “ಬಂಡಾಯ ಶಾಸಕರು ಬೇಕಾದರೆ ಬಿಜೆಪಿ ಜೊತೆಗೆ ಹೋಗಿ ಸರ್ಕಾರ ಕಟ್ಟಲಿ, ನಾವು ಶಿವಸೇನೆಯನ್ನು ಹೊಸದಾಗಿ ಮತ್ತೇ ಕಟ್ಟುತ್ತೇವೆ” ಎಂದು ಅವರು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...