ವ್ಯಕ್ತಿಯೊಬ್ಬ ಪೊಲೀಸ್ ಠಾಣೆಯೊಳಗೆ ನುಗ್ಗಿ ಐವರು ಪೊಲೀಸರು ಮತ್ತು ಗೃಹ ರಕ್ಷಕನಿಗೆ ವ್ಯಕ್ತಿಯೊಬ್ಬ ಚಾಕುವಿನಿಂದ ಇರಿದಿರುವ ಘಟನೆ ಪೂರ್ವ ದೆಹಲಿಯ ಶಹದಾರಾದಲ್ಲಿ ಬುಧವಾರ ನಡೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಸೈಬರ್ ಪೊಲೀಸ್ ಠಾಣೆಯ ಮೂರನೇ ಮಹಡಿಯಲ್ಲಿ ಈ ಘಟನೆ ನಡೆದಿದೆ. ಆರೋಪಿ ವ್ಯಕ್ತಿಯನ್ನು ವಿಚಾರಣೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ವ್ಯಕ್ತಿಯೊಬ್ಬ ಪೊಲೀಸ್ ಠಾಣೆಗೆ ಪ್ರವೇಶಿಸಿ ವಿಡಿಯೋ ರೆಕಾರ್ಡ್ ಮಾಡಲು ಪ್ರಾರಂಭಿಸಿದನು. ಪೊಲೀಸರೊಬ್ಬರು ಅವರಿಗೆ ಅಡ್ಡಿಪಡಿಸಿದ್ದಾರೆ. ಯಾಕೆ ವೀಡಿಯೊ ರೆಕಾರ್ಡ್ ಮಾಡುತ್ತಿರುವುದು ಎಂದು ಕಾರಣವನ್ನು ಕೇಳಿದ್ದಾರೆ. ತಕ್ಷಣ ಆ ವ್ಯಕ್ತಿ ಚಾಕುವನ್ನು ತೆಗೆದುಕೊಂಡು ಸಿಬ್ಬಂದಿ ಮೇಲೆ ಒಬ್ಬರ ನಂತರ ಒಬ್ಬರಂತೆ ಚೂಕುವಿನಿಂದ ಹಲ್ಲೆ ಮಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಇದನ್ನೂ ಓದಿ: ನಾರಾಯಣ ಗುರುಗಳ ಪಠ್ಯಕ್ಕೆ ಕತ್ತರಿ: ‘ನನಗೆ ಅದು ನೆನಪಾಗುತ್ತಿಲ್ಲ’ ಎಂದ ಪಠ್ಯ ಪುಸ್ತಕ ಸಮಿತಿ ಸದಸ್ಯ ಡಾ. ಅನಂತಕೃಷ್ಣ ಭಟ್
ಗಾಯಗೊಂಡ ಎಲ್ಲಾ ಪೊಲೀಸರು ಮತ್ತು ಗೃಹ ರಕ್ಷಕರನ್ನು ಆಸ್ಪತ್ರೆಗೆ ಸಾಗಿಸಲಾಗಿದ್ದು, ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಪೊಲೀಸರಲ್ಲಿ ಒಬ್ಬರ ಎದೆಗೆ ತೀವ್ರ ಗಾಯಗಳಾಗಿದ್ದು, ಅವರ ಸ್ಥಿತಿ ಚಿಂತಾಜನಕವಾಗಿದೆ ಎಂದು ತಿಳಿಸಿದ್ದಾರೆ.
ಇತ್ತ ಹಲ್ಲೆ ಮಾಡಿರುವ ವ್ಯಕ್ತಿ ತಾನು ದೂರುದಾರನೆಂದು ಹೇಳಿಕೊಂಡಿದ್ದಾನೆ, ಆದರೆ ಆತನ ಬಳಿ ಯಾವುದೇ ದೂರಿನ ಪ್ರತಿ ಕಂಡುಬಂದಿಲ್ಲ. ಘಟನೆಯಲ್ಲಿ ಆತನ ತಲೆ ಗೋಡೆಗೆ ಬಡಿದು ಸಣ್ಣಪುಟ್ಟ ಗಾಯಗಳಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ.
“ಪ್ರಾಥಮಿಕ ವಿಚಾರಣೆಯ ಪ್ರಕಾರ, ಘಟನೆಯಲ್ಲಿ ಒಬ್ಬ ವ್ಯಕ್ತಿ ಮಾತ್ರ ಭಾಗಿಯಾಗಿರುವ ಶಂಕೆ ಇದೆ” ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಘಟನೆಯ ಕುರಿತು ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಹೇಳಿದ್ದಾರೆ.
ಇದನ್ನೂ ಓದಿ: ಮಂಡ್ಯ: ಬರ್ಬರವಾಗಿ ಕೊಲೆಯಾದ ಮಹಿಳೆಯರ ಸುಳಿವು ನೀಡಿದರೆ 1 ಲಕ್ಷ ಬಹುಮಾನ



should be punished but after investigation why he did it