Homeಮುಖಪುಟಅಸ್ಸಾಂ ಪ್ರವಾಹ: ನೀರಿನಿಂದ ಹೊರಬರದ ಸಿಲ್ಚಾರ್, ಸಾವಿನ ಸಂಖ್ಯೆ 108ಕ್ಕೆ ಏರಿಕೆ

ಅಸ್ಸಾಂ ಪ್ರವಾಹ: ನೀರಿನಿಂದ ಹೊರಬರದ ಸಿಲ್ಚಾರ್, ಸಾವಿನ ಸಂಖ್ಯೆ 108ಕ್ಕೆ ಏರಿಕೆ

- Advertisement -
- Advertisement -

ಶುಕ್ರವಾರ ಅಸ್ಸಾಂನಲ್ಲಿ ಪ್ರವಾಹ ಪರಿಸ್ಥಿತಿ ಗಂಭೀರವಾಗಿದ್ದು, 45.34 ಲಕ್ಷ ಜನರು ಪ್ರವಾಹದಲ್ಲಿ ತತ್ತರಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಕಳೆದ 24 ಗಂಟೆಗಳಲ್ಲಿ ಪ್ರವಾಹ ಮತ್ತು ಭೂಕುಸಿತದಿಂದ ಏಳು ಸಾವುಗಳು ವರದಿಯಾಗಿವೆ.

ಭಾರಿ ಪ್ರವಾಹಕ್ಕೆ ಮೇ ತಿಂಗಳಿನಿಂದ 108 ಜನರು ಬಲಿಯಾಗಿದ್ದಾರೆ. ಬ್ರಹ್ಮಪುತ್ರ ಮತ್ತು ಬರಾಕ್ ನದಿಗಳು ಮತ್ತು ಅವುಗಳ ಉಪನದಿಗಳು ಉಕ್ಕಿ ಹರಿಯುತ್ತಿವೆ. ಆದರೆ, ಕೆಲವು ಪ್ರದೇಶಗಳಲ್ಲಿ ಪ್ರವಾಹವು ಕಡಿಮೆಯಾಗಲು ಪ್ರಾರಂಭಿಸಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಬರಾಕ್ ಕಣಿವೆಯ ಸಿಲ್ಚಾರ್ ಪಟ್ಟಣವು ಹೆಚ್ಚು ಬಾಧಿತವಾಗಿದ್ದು, ಇಲ್ಲಿ ನಾಲ್ಕು ದಿನಗಳಿಂದ ಪರಿಸ್ಥಿತಿ ಅತ್ಯಂತ ಕಠಿಣವಾಗಿದೆ. ಉಕ್ಕಿ ಹರಿಯುತ್ತಿರುವ ಬರಾಕ್ ನದಿಯು ದಕ್ಷಿಣ ಅಸ್ಸಾಂನ ಪ್ರಮುಖ ಪಟ್ಟಣವನ್ನು ಮುಳುಗಿಸಿದೆ. ಇದರಿಂದ ಸುಮಾರು ಮೂರು ಲಕ್ಷ ಜನರು ತೊಂದರೆಗೀಡಾಗಿದ್ದು, 71,000 ಕ್ಕೂ ಹೆಚ್ಚು ಜನರನ್ನು ಪರಿಹಾರ ಶಿಬಿರಗಳಿಗೆ ಸ್ಥಳಾಂತರಿಸಲಾಗಿದೆ.

ಇದನ್ನೂ ಓದಿ: ಈಶಾನ್ಯ ಪ್ರವಾಹಕ್ಕೆ ಕುರುಡಾಗಿರುವ ಬಿಜೆಪಿಗೆ ಅಧಿಕಾರದಲ್ಲಿ ಮಾತ್ರ ಆಸಕ್ತಿ: ಕಾಂಗ್ರೆಸ್

ಆಹಾರ, ವಿದ್ಯುತ್ ಮತ್ತು ಕುಡಿಯುವ ನೀರಿನ ತೀವ್ರ ಕೊರತೆಯಿಂದಾಗಿ ಸಿಲ್ಚಾರ್‌ ಪಟ್ಟಣವು ಈಗ ಕೇಂದ್ರ ಮತ್ತು ರಾಜ್ಯ ವಿಪತ್ತು ಪಡೆಗಳು, ಸೈನ್ಯ ಮತ್ತು ವಾಯುಪಡೆಯ ವಾಯುಪಡೆಯಿಂದ ನೀಡಲಾಗುವ ಆಹಾರ ಮತ್ತು ಅಗತ್ಯ ವಸ್ತುಗಳ ಮೇಲೆ ಅವಲಂಬಿತವಾಗಿದೆ. ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ನಿನ್ನೆ ಸಿಲ್ಚಾರ್‌ನ ಪ್ರವಾಹ ಪೀಡಿತ ಪ್ರದೇಶಗಳ ವೈಮಾನಿಕ ಸಮೀಕ್ಷೆ ನಡೆಸಿದ್ದಾರೆ.

“ಹೆಚ್ಚಿನ ಸೇನೆ ರಕ್ಷಣಾ ಕಾರ್ಯಾಚರಣೆಗೆ ಸೇರುತ್ತಿವೆ. ನಾವು ಗುವಾಹಟಿಯಿಂದ ಸಿಲ್ಚಾರ್‌ಗೆ ಪ್ರತಿದಿನ ಒಂದು ಲಕ್ಷ ಕುಡಿಯುವ ನೀರಿನ ಬಾಟಲ್‌ಗಳನ್ನು ಏರ್‌ಲಿಫ್ಟ್ ಮಾಡುತ್ತಿದ್ದೇವೆ. ವಿದ್ಯುತ್ ಟ್ರಾನ್ಸ್‌ಫಾರ್ಮರ್‌ಗಳನ್ನು ಸರಿಪಡಿಸಲು ವಿದ್ಯುತ್ ಇಲಾಖೆಯ ಎಂಜಿನಿಯರ್‌ಗಳು ಮತ್ತು ತಂತ್ರಜ್ಞರನ್ನು ಅಲ್ಲಿಗೆ ಕಳುಹಿಸುತ್ತಿದ್ದೇವೆ” ಎಂದು ಹೇಳಿದ್ದಾರೆ.

ಇನ್ನು ಅಸ್ಸಾಂನ ಪ್ರವಾಹ ಪರಿಸ್ಥಿತಿಯನ್ನು ಕೇಂದ್ರ ಸರ್ಕಾರ ಗಮನಿಸುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಪರಿಸ್ಥಿತಿಯನ್ನು ಸರಿಪಡಿಸಲು ಸಾಧ್ಯವಿರುವ ಎಲ್ಲ ನೆರವು ನೀಡಲು ಸರ್ಕಾರವು ರಾಜ್ಯದೊಂದಿಗೆ ನಿಕಟವಾಗಿ ಕಾರ್ಯನಿರ್ವಹಿಸುತ್ತಿದೆ ಎಂದು ಭರವಸೆ ನೀಡಿದ್ದಾರೆ.


ಇದನ್ನೂ ಓದಿ: ಅಸ್ಸಾಂ ಪ್ರವಾಹದಲ್ಲಿ ಮುಳುಗಿದೆ: ಅಲ್ಲಿನ ಸಿಎಂ ಕುದುರೆ ವ್ಯಾಪಾರದಲ್ಲಿ ನಿರತರಾಗಿದ್ದಾರೆ – ಟೀಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೀಘ್ರವೇ ಪೌರಕಾರ್ಮಿಕರ ಉಪಹಾರ ಭತ್ಯೆ ₹70 ಕ್ಕೆ ಹೆಚ್ಚಿಸುವೆ: ಸಿಎಂ ಡಿ.ಕೆ. ಶಿವಕುಮಾರ್

ಪೌರಕಾರ್ಮಿಕರ ದೀರ್ಘಕಾಲದ ಬೇಡಿಕೆಗಳನ್ನು ಈಡೇರಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದ್ದು, ಪೌರಕಾರ್ಮಿಕರ ಉಪಹಾರ ಭತ್ಯೆಯನ್ನು ₹35 ರಿಂದ ₹70 ಕ್ಕೆ ಏರಿಕೆ ಮಾಡಿ ಶೀಘ್ರದಲ್ಲೇ ಅಧಿಕೃತ ಆದೇಶ ಹೊರಡಿಸಲಾಗುವುದು ಎಂದು...

ಎಸ್ಐಆರ್ ಬಡವರ ಪಾಲಿನ ಕೊಲ್ಲುವ ಕತ್ತಿಯಾಗಿದೆ : ಪ್ರಕಾಶ್ ರಾಜ್

ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್ ಐಆರ್) ಬಡವರ ಪಾಲಿನ ಕೊಲ್ಲುವ ಕತ್ತಿಯಾಗಿದೆ ಎಂದು ಬಹುಭಾಷಾ ನಟ ಪ್ರಕಾಶ್ ರಾಜ್ ಹೇಳಿದರು. ಎಸ್ಐಆರ್ ಪರಿಶೋಧನೆ ಮತ್ತು ಪ್ರತಿರೋಧ ಜಾಥಾದ ಭಾಗವಾಗಿ ಶುಕ್ರವಾರ (ಸೆ.25)...

ದಲಿತರ ಮೇಲಿನ ದೌರ್ಜನ್ಯ ಹೆಚ್ಚಳ: ದಲಿತ ಸಂಘಟನೆಗಳ ಒಕ್ಕೂಟ ಖಂಡನೆ

ರಾಜ್ಯದಲ್ಲಿ ಗಣನೀಯವಾಗಿ ಹೆಚ್ಚಾಗುತ್ತಿರುವ ದಲಿತರ ಮೇಲಿನ ದೌರ್ಜನ್ಯ, ಹಲ್ಲೆ, ಅತ್ಯಾಚಾರ ಮತ್ತು ಕೊಲೆ ಪ್ರಕರಣಗಳನ್ನು ತಡೆಯುವಲ್ಲಿ ಸರ್ಕಾರದ ವೈಫಲ್ಯವನ್ನು ಖಂಡಿಸಿ ಇಂದ ಬೆಂಗಳೂರಿನ ಪ್ರೆಸ್‌ ಕ್ಲಬ್‌ ನಲ್ಲಿ ಪತ್ರಿಕಾಗೋಷ್ಠಿ ನಡೆಸಿದ ದಲಿತ ಸಂಘಟನೆಗಳ...

ಮುರ್ಷಿದಾಬಾದ್‌: ಎಸ್ಐಆರ್ ಪ್ರಕ್ರಿಯೆಯಲ್ಲಿ ಹೆಸರುಗಳು ಉಳಿದರೂ ‘ಬಾಂಗ್ಲಾದೇಶಿ’ ಎಂದು ಅನುಮಾನಿಸಿ 60 ವರ್ಷದ ತಂದೆ, ಮೂವರು ಪುತ್ರರ ಗಡಿಪಾರು ಆರೋಪ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಮುರ್ಷಿದಾಬಾದ್ ಜಿಲ್ಲೆಯಲ್ಲಿ ಬಂಗಾಳಿ ಮುಸ್ಲಿಂ ಕುಟುಂಬವೊಂದರ ನಾಲ್ವರು ಸದಸ್ಯರನ್ನು ಪೊಲೀಸರು ಮನೆಯಿಂದ ಕರೆದೊಯ್ದು, ಅವರು ಬಾಂಗ್ಲಾದೇಶಿ ಪ್ರಜೆಗಳು ಎಂದು ಆರೋಪಿಸಿ ಬಿಎಸ್‌ಎಫ್‌ಗೆ ಹಸ್ತಾಂತರಿಸಿ ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ ಎಂದು ಪೊಲೀಸರು...

ಗ್ಯಾನೇಶ್ ಕುಮಾರ್‌ನನ್ನು ಬಂಧಿಸುವಂತೆ ಬಿ.ಕೆ. ಹರಿಪ್ರಸಾದ್ ಆಗ್ರಹ: ನಾಳೆ ಕಾಂಗ್ರೆಸ್‌ನಿಂದ ಪ್ರತಿಭಟನೆ

ಕೇಂದ್ರ ಚುನಾವಣಾ ಆಯೋಗದ ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರು ಕಳೆದ 10 ತಿಂಗಳಲ್ಲಿ ಕನಿಷ್ಠ 14 ಬಾರಿ ಇನ್ನುಳಿದ ಇಬ್ಬರು ಆಯುಕ್ತರ ಭಿನ್ನಮತವನ್ನು ಸಂಪೂರ್ಣವಾಗಿ ತಳ್ಳಿಹಾಕಿ ಗೌಪ್ಯವಾಗಿ 'ಎಸ್‌ಐಆರ್'...

‘ಪೆನ್ಶನ್ ಹೋಗಲ್ಲ, SIR ಹೋಗುತ್ತೆ, ಹೆದರಬೇಡಿ’: ತುಮಕೂರಿನಲ್ಲಿ ಸಂತ್ರಸ್ತ ಮಹಿಳೆಗೆ ಪ್ರಕಾಶ್ ರಾಜ್ ಭರವಸೆ

ತುಮಕೂರು: ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಗೆ ಸಂಬಂಧಿಸಿದ ನೋಟಿಸ್‌ಗಳಿಂದ ಆತಂಕಕ್ಕೊಳಗಾಗಿರುವ ತುಮಕೂರಿನ ಎನ್‌ಆರ್ ಕಾಲೊನಿಯ ನಿವಾಸಿಗಳ ಮನೆಗಳಿಗೆ ನಟ ಹಾಗೂ ಹೋರಾಟಗಾರ ಪ್ರಕಾಶ್ ರಾಜ್ ಭೇಟಿ ನೀಡಿ, ಅವರ ಸಮಸ್ಯೆಗಳನ್ನು...

SIR ಅಕ್ರಮ: ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ವಿರುದ್ಧ ಕ್ರಮಕ್ಕೆ ಸುಪ್ರೀಂ ಕೋರ್ಟ್‌ನಲ್ಲಿ PIL

ಮತದಾರರ ಪಟ್ಟಿಯ ‘ವಿಶೇಷ ತೀವ್ರ ಪರಿಷ್ಕರಣೆ’ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ಸಾಂವಿಧಾನಿಕ ನಿಯಮಗಳನ್ನು ಗಾಳಿಗೆ ತೂರಲಾಗಿದೆ ಎಂದು ಆರೋಪಿಸಿ, ಮುಖ್ಯ ಚುನಾವಣಾ ಆಯುಕ್ತ (CEC) ಗ್ಯಾನೇಶ್ ಕುಮಾರ್ ಅವರ ವಿರುದ್ಧ ಶಿಸ್ತು ಹಾಗೂ...

ಜೆನ್ ಝಿ ಮತದಾರರ ನೋಂದಣಿ ಸ್ಥಗಿತದ ಹಿಂದೆ ಮೋದಿ-ಸಿಇಸಿ ಸಂಚು: ಕಾಂಗ್ರೆಸ್ ಆರೋಪ

18 ವರ್ಷ ತುಂಬಿದ ಯುವಜನರನ್ನು (Gen Z) ಮತದಾರರ ಪಟ್ಟಿಗೆ ಸೇರ್ಪಡೆಗೊಳಿಸುವ 'ವಿಶೇಷ ಸಂಕ್ಷಿಪ್ತ ಪರಿಷ್ಕರಣೆ' (SSR) ಪ್ರಕ್ರಿಯೆಯು 2024 ರಿಂದ ತಡೆಹಿಡಿಯಲ್ಪಟ್ಟಿರುವುದು ಹಾಗೂ ಈ ವಿಷಯವಾಗಿ ಕೇಂದ್ರ ಚುನಾವಣಾ ಆಯೋಗದಲ್ಲಿ (ECI)...

ತುಮಕೂರಿನ ಎನ್.ಆರ್. ಕಾಲೋನಿ ಕೋತಿ ತೋಪಿನಲ್ಲಿ ಎಸ್ಐಆರ್ ಪರಿಶೋಧನೆ: ಸಂತ್ರಸ್ತರ ಅಹವಾಲು ಆಲಿಸಿದ ಪ್ರಕಾಶ್ ರಾಜ್: ಸೆ.26ಕ್ಕೆ ಬೆಂಗಳೂರಿನಲ್ಲಿ ಪ್ರತಿಭಟನೆ

ತುಮಕೂರು: ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಿಂದ ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ಎದುರಾಗಿರುವ ಸಮಸ್ಯೆಗಳನ್ನು ನೇರವಾಗಿ ಪರಿಶೀಲಿಸುವ ಉದ್ದೇಶದಿಂದ ನಟ ಹಾಗೂ ಹೋರಾಟಗಾರ ಪ್ರಕಾಶ್ ರಾಜ್ ಅವರು ತುಮಕೂರು ನಗರದ ಎನ್‌ಆರ್‌ ಕಾಲೊನಿ...

SIR ವಿವಾದ ಮತ್ತು ಆಂತರಿಕ ಬಿಕ್ಕಟ್ಟು: ಮೀರತ್, ವಾರಾಣಸಿ ಪ್ರವಾಸ ದಿಢೀರ್ ರದ್ದುಗೊಳಿಸಿದ ಗ್ಯಾನೇಶ್‌ ಕುಮಾರ್! Gen-Z ಆಕ್ರೋಶಕ್ಕೆ ಬೆದರಿತೇ ಆಯೋಗ?

ದೇಶಾದ್ಯಂತ ವ್ಯಾಪಕ ಸಾರ್ವಜನಿಕ ಆಕ್ರೋಶಕ್ಕೆ ಕಾರಣವಾಗಿರುವ 'ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ' (SIR) ವಿವಾದ, ಸ್ಥಗಿತಗೊಂಡಿರುವ ವಾರ್ಷಿಕ ಮತದಾರರ ಪಟ್ಟಿ ಪರಿಷ್ಕರಣೆ (SSR) ಹಾಗೂ ಚುನಾವಣಾ ಆಯೋಗದ ಉನ್ನತ ಹಂತದ ಶೀತಲ...