Homeಕರ್ನಾಟಕಮಂಗಳೂರು: ಪಠ್ಯಪರಿಷ್ಕರಣೆ ಸಮಿತಿಯ ವಿವಾದಾತ್ಮಕ ಮಾಜಿ ಅಧ್ಯಕ್ಷ ರೋಹಿತ್ ಚಕ್ರತೀರ್ಥ ‘ಸನ್ಮಾನ ಕಾರ್ಯಕ್ರಮ’ ರದ್ದು

ಮಂಗಳೂರು: ಪಠ್ಯಪರಿಷ್ಕರಣೆ ಸಮಿತಿಯ ವಿವಾದಾತ್ಮಕ ಮಾಜಿ ಅಧ್ಯಕ್ಷ ರೋಹಿತ್ ಚಕ್ರತೀರ್ಥ ‘ಸನ್ಮಾನ ಕಾರ್ಯಕ್ರಮ’ ರದ್ದು

- Advertisement -
- Advertisement -

ರಾಷ್ಟ್ರಕವಿ ಕುವೆಂಪುರವರಿಗೆ ಅವಮಾನಿಸಿ, ನಾಡಗೀತೆ ತಿರುಚಿದ ಆರೋಪ ಎದುರಿಸುತ್ತಿರುವ, ವಿವಾದಾತ್ಮಕ ಪಠ್ಯ ಪರಿಷ್ಕರಣೆ ಸಮಿತಿಯ ಮಾಜಿ ಅಧ್ಯಕ್ಷರಾದ ರೋಹಿತ್ ಚಕ್ರತೀರ್ಥ ಅವರನ್ನು, ಮಂಗಳೂರು ವಿಶ್ವ ವಿದ್ಯಾಲಯದ ಉಪ ಕುಲಪತಿಗಳು ಸನ್ಮಾನಿಸುವ ಕಾರ್ಯಕ್ರಮವನ್ನು ರದ್ದು ಮಾಡಲಾಗಿದೆ. ನಾಡಿನ ಮಹಾತ್ಮರಿಗೆ ಅವಮಾನ ಎಸಗಿರುವ ವ್ಯಕ್ತಿಗೆ ಕುಲಪತಿಯೊಬ್ಬರು ಸನ್ಮಾನ ಮಾಡುವುದನ್ನು ವಿರೋಧಿಸಿ ಎಡಪಂಥೀಯ ಮತ್ತು ಜನಪರ ಸಂಘಟನೆಗಳು ಪ್ರತಿಭಟನೆ ನಡೆಸುವುದಾಗಿ ಮತ್ತು ಕಾರ್ಯಕ್ರಮದ ಸ್ಥಳಕ್ಕೆ ಮುತ್ತಿಗೆ ಹಾಕುವುದಾಗಿ ಎಚ್ಚರಿಕೆ ನೀಡಿದ್ದವು. ಈ ಹಿನ್ನಲೆಯಲ್ಲಿ ಕಾರ್ಯಕ್ರಮ ರದ್ದಾಗಿದೆ.

ಚಿಂತನಗಂಗಾ ಮತ್ತು ಸೇವಾಂಜಲಿ ಚಾರಿಟೇಬಲ್ ಟ್ರಸ್ಟ್ ಸಹಯೋಗದಲ್ಲಿ ಜೂನ್ 25ರ ಶನಿವಾರ ಸಂಜೆ 5 ಗಂಟೆಗೆ ಮಂಗಳೂರಿನ ಡೊಂಗರಕೇರಿ ಕೆನರಾ ಹೈಸ್ಕೂಲ್‌ನ ಭುವನೇಂದ್ರ ಸಭಾಂಗಣದಲ್ಲಿ ರೋಹಿತ್ ಚಕ್ರತೀರ್ಥ ಅವರಿಗೆ ‘ನಾಗರಿಕ ಸನ್ಮಾನ’ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದಲ್ಲಿ ‘ಭರತಖಂಡದ ಗತವೈಭವ ಮತ್ತು ಅಳಿಸಿಹೋದ ಇತಿಹಾಸ’ ಎಂಬ ವಿಷಯದ ಬಗ್ಗೆ ಚಕ್ರತೀರ್ಥ ಅವರು ವಿಷಯ ಮಂಡಿಸಲಿದ್ದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಕಾರ್ಯಕ್ರಮದ ಸಭಾಧ್ಯಕ್ಷತೆಯನ್ನು ಮಂಗಳೂರು ವಿಶ್ವವಿದ್ಯಾನಿಲಯದ ಉಪ ಕುಲಪತಿ ಪ್ರೊಫೆಸರ್‌ ಪಿ. ಸುಬ್ರಹ್ಮಣ್ಯ ಯಡಪಡಿತ್ತಾಯರು ವಹಿಸಲಿದ್ದರು. ಆದರೆ ಈ ಕಾರ್ಯಕ್ರಮದ ವಿರುದ್ಧ ರಾಜ್ಯದಾದ್ಯಂತ ಭಾರಿ ಆಕ್ರೋಶ ವ್ಯಕ್ತವಾಗಿತ್ತು.

ಇದನ್ನೂ ಓದಿ: ಪಠ್ಯ ಪರಿಷ್ಕರಣೆಯಲ್ಲಿ ಸರ್ಕಾರ ಸುಳ್ಳು ಹೇಳುತ್ತಿದೆ: 35 ಅಂಶಗಳನ್ನು ಪಟ್ಟಿ ಮಾಡಿದ ಸಿದ್ದರಾಮಯ್ಯ

ಕಾರ್ಯಕ್ರಮದ ರದ್ದಾಗ ಕುರಿತು ಸಂಘಟಕ ನಾಗೇಶ್ ಶೆಣೈ ಅವರು ಮಾತನಾಡಿ, “ಶಾಂತಿ ಸುವ್ಯವಸ್ಥೆಗೆ ಭಂಗ ಬರುವ ಬಗ್ಗೆ ನಮಗೆ ಮಾಹಿತಿ ಬಂತು. ಅಲ್ಲದೇ, ಸಾಮಾಜಿಕ ಮಾಧ್ಯಮಗಳಲ್ಲಿ ಕಾರ್ಯಕ್ರಮಕ್ಕೆ ಮುತ್ತಿಗೆ ಹಾಕುವ ಬಗ್ಗೆ ಕೆಲವರು ಪೋಸ್ಟ್ ಹಾಕಿದ್ದರು. ನಮ್ಮ ಕಾರ್ಯಕ್ರಮದಿಂದ ಮಂಗಳೂರಿನ ಶಾಂತಿ-ಸುವ್ಯವಸ್ಥೆಗೆ ಭಂಗ ಬರುವುದು ಬೇಡ ಎಂದು ಕಾರ್ಯಕ್ರಮ ರದ್ದು ಮಾಡಿದ್ದೇವೆ” ಎಂದು ಹೇಳಿದ್ದಾಗಿ ಈದಿನ.ಕಾಂ ವರಿದ ಮಾಡಿದೆ.

ಕಾರ್ಯಕಮ್ರದ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ್ದ ಡಿವೈಎಫ್‌ಐ ರಾಜ್ಯಾಧ್ಯಕ್ಷ ಮುನೀರ್‌ ಕಾಟಿಪಳ್ಳ, “ಪಠ್ಯ ಪುಸ್ತಕ ಪರಿಷ್ಕರಣೆಯಲ್ಲಿ ನಾಡಿನ ಖ್ಯಾತನಾಮರು, ಮಹಾನ್ ಚೇತನಗಳಿಗೆ ಅವಮಾನ ಎಸಗಿರುವ, ನಾಡಗೀತೆಗೆ ಅಪಮಾನ ಎಸಗಿರುವ, ರಾಜ್ಯದಲ್ಲಿ ಸಾರ್ವತ್ರಿಕ ಆಕ್ರೋಶಕ್ಕೆ ಗುರಿಯಾಗಿರುವ ರೋಹಿತ್ ಚಕ್ರತೀರ್ಥ ಗೆ ಮಂಗಳೂರಿನ ಬಲಪಂಥೀಯ ವೇದಿಕೆಯೊಂದು ಶನಿವಾರ (ಜೂನ್ 25) ನಾಗರಿಕ ಸನ್ಮಾನ ನಡೆಸುತ್ತಿದೆ ಎಂಬ ಮಾಹಿತಿ ತಿಳಿದು ಆಘಾತವಾಯಿತು” ಎಂದು ಹೇಳಿದ್ದರು.

“ಇಡೀ ಕರ್ನಾಟಕ ಈ ವ್ಯಕ್ತಿಯ ವಿರುದ್ದ ಆಕ್ರೋಶಗೊಂಡಿರುವಾಗ, ಬಸವಣ್ಣ, ಕುವೆಂಪು, ನಾರಾಯಣ ಗುರುಗಳ ಅನುಯಾಯಿಗಳು ಪ್ರತಿಭಟನೆ ನಿರತರಾಗಿರುವ ಸಂದರ್ಭದಲ್ಲಿ ಮಂಗಳೂರಿನಂತಹ ವಿದ್ಯಾವಂತ ಜನರಿರುವ ನಗರದಲ್ಲಿ ಇದು ಘಟಿಸಬಾರದಿತ್ತು. ಅದರಲ್ಲಿಯೂ ನಾಗರಿಕ ಸನ್ಮಾನದ ಸಭಾಧ್ಯಕ್ಷತೆಯನ್ನು ಮಂಗಳೂರು ವಿವಿಯ ಕುಲಪತಿಗಳಾದ ಮಾನ್ಯ ಯಡಪಡಿತ್ತಾಯರು ವಹಿಸಲಿರುವುದು ಕಂಡು ಮನಸ್ಸು ವಿಷಣ್ಣವಾಯಿತು” ಎಂದು  ಮುನೀರ್ ಕಾಟಿಪಳ್ಳ ಬೇಸರ ವ್ಯಕ್ತಪಡಿಸಿದ್ದರು.

ಇದನ್ನೂ ಓದಿ: ಪಠ್ಯದಲ್ಲಿ ಸೂಲಿಬೆಲೆ ಪಾಠದ ಕುರಿತು ಮಾತನಾಡಲು ಆರ್ ಅಶೋಕ್ ಹಿಂದೇಟು: ಚಕ್ರವರ್ತಿಯ ಈ ಸುಳ್ಳುಗಳು ಕಾರಣವೇ?

ಕಾರ್ಯಕ್ರಮ ರದ್ದು ಪಡಿಸುವಂತೆ ಕಾರ್ಯಕ್ರಮ ನಡೆಸುವ ಸ್ಥಳಕ್ಕೆ ಮುತ್ತಿಗೆ ಹಾಕುವುದಾಗಿ, ಡಿವೈಎಫ್ಐ ದಕ್ಷಿಣ ಕನ್ನಡ ಜಿಲ್ಲಾ ಸಮಿತಿ, ಯುವ ಕಾಂಗ್ರೆಸ್ ದಕ್ಷಿಣ ಕನ್ನಡ ಜಿಲ್ಲೆ, ದಲಿತ ಸಂಘರ್ಷ ಸಮಿತಿ ದಕ್ಷಿಣ ಕನ್ನಡ, ಸಿಐಟಿಯು ದ ಕ ಜಿಲ್ಲೆ, ಸಾಮರಸ್ಯ ಮಂಗಳೂರು, ದಕ ಜಿಲ್ಲಾ ಕಾಂಗ್ರೆಸ್, ದಕ ಜಿಲ್ಲಾ ಜಾತ್ಯಾತೀತ ಜನತಾ ದಳ, ದಕ ಜಿಲ್ಲಾ ಸಿಪಿಐಎಂ, SFI,NSUI, ಮಾನವತಾ ವೇದಿಕೆ, ಅಖಿಲ ವಕೀಲರ ಭಾರತ ಸಂಘ ದಕ ಜಿಲ್ಲೆ, ಪ್ರಗತಿಪರ ಚಿಂತಕರ ವೇದಿಕೆ, ಜನವಾದಿ ಮಹಿಳಾ ಸಂಘ (JMS), ಸಿಪಿಐ ದಕ್ಷಿಣ ಕನ್ನಡ ಜಿಲ್ಲೆ, ನಾರಾಯಣ ಗುರು ಅಭಿಮಾನಿ ಬಳಗ ಮಂಗಳೂರು, AITUC ದಕ ಜಿಲ್ಲೆ, AIYF ದ ಕ ಜಿಲ್ಲಾ ಸಮಿತಿ, ಭಗತ್ ಸಿಂಗ್ ಕ್ರಾಂತಿ ಬಳಗ, INTUC ದಕ್ಷಿಣ ಕನ್ನಡ ಸೇರಿದಂತೆ ಹಲವಾರು ಸಂಘಟನೆಗಳು ಎಚ್ಚರಿಕೆ ನೀಡಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಆ ಅಯ್ಯೊಗ್ಯ ಉಪಕುಲಪತಿ ಮತ್ತು ಸಮಾರಂಭದ ಅಯೋಜಕರಿಗೆ ಕಡೆಗಾದರು ಬುದ್ದಿಬಂತಲ್ಲಾ, ಇಲ್ಲ ಅಂದರೆ ಸಾರ್ವಜನಿಕರು ಸರಿಯಾಗಿ ಪೂಜೆ ಮಾಡುತ್ತಿದ್ದರು.

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...