Homeಅಂತರಾಷ್ಟ್ರೀಯಅಮೆರಿಕಾ: ಟ್ರ್ಯಾಕ್ಟರ್ ಟ್ರೇಲರ್‌ನಲ್ಲಿ 46 ಅಕ್ರಮ ವಲಸಿಗರ ಮೃತದೇಹ ಪತ್ತೆ, 16 ಮಂದಿ ಗಂಭೀರ

ಅಮೆರಿಕಾ: ಟ್ರ್ಯಾಕ್ಟರ್ ಟ್ರೇಲರ್‌ನಲ್ಲಿ 46 ಅಕ್ರಮ ವಲಸಿಗರ ಮೃತದೇಹ ಪತ್ತೆ, 16 ಮಂದಿ ಗಂಭೀರ

- Advertisement -
- Advertisement -

ಟೆಕ್ಸಾಸ್‌ನ ಸ್ಯಾನ್ ಆಂಟೋನಿಯೊದಲ್ಲಿ ಸೋಮವಾರ ಅಕ್ರಮ ವಲಸಿಗರನ್ನು ಸಾಗಿಸುತ್ತಿದ್ದ ಟ್ರ್ಯಾಕ್ಟರ್-ಟ್ರೇಲರ್‌ನಲ್ಲಿ 46 ವಲಸಿಗರ ಮೃತದೇಹಗಳು ಪತ್ತೆಯಾಗಿವೆ. 16 ಜನರು ಗಂಭೀರ ಸ್ಥಿತಿಯಲ್ಲಿದ್ದು, ಅವರನ್ನು ಆಸ್ಪತ್ರೆಗಳಿಗೆ ಕರೆದೊಯ್ಯಲಾಗಿದೆ  ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಯುಎಸ್-ಮೆಕ್ಸಿಕೊ ಗಡಿಯಲ್ಲಿ ಮಾನವ ಕಳ್ಳಸಾಗಣೆ ಹೆಚ್ಚಾಗಿ ನಡೆಯುತ್ತಿದೆ ಎನ್ನಲಾಗಿದೆ. ಪೊಲೀಸರು ಟ್ರಕ್‌ ಕಂಡು ಹಿಡಿಯುವ ಸ್ವಲ್ಪ ಸಮಯದಲ್ಲಿ ಚಾಲಕ ಅಲ್ಲಿಂದ ಪರಾರಿಯಾಗಿರಬಹುದು ಎಂದು, ಚಾಲಕನ ಹುಡುಕಾಟವನ್ನು ನಡೆಸಲಾಗುತ್ತಿದೆ.

ಟ್ರೈಲರ್‌ನಲ್ಲಿಮೃತದೇಹಗಳ ಜೊತೆಗೆ ಪತ್ತೆಯಾದದ ಇತರ ಹದಿನಾರು ಜನರು ವಿಪರೀತ ಉಷ್ಣಾಂಶ ಮತ್ತು ಬಳಲಿಕೆಯಿಂದ ಅಸ್ವಸ್ಥರಾಗಿದ್ದು, ಅವರನ್ನು ಆಸ್ಪತ್ರೆಗಳಿಗೆ ಸಾಗಿಸಲಾಗಿದೆ. ಇದರಲ್ಲಿ ನಾಲ್ಕು ಮಂದಿ ಅಪ್ರಾಪ್ತ ವಯಸ್ಕರು ಇದ್ದಾರೆ. ಮೃತರಲ್ಲಿ ಅಪ್ರಾಪ್ತರಿಲ್ಲ ಎಂದು ಪೊಲೀಸ್‌ ಇಲಾಖೆ ತಿಳಿಸಿದೆ.

ಇದನ್ನೂ ಓದಿ: ಧಾರ್ಮಿಕ ಭಾವನೆಗಳನ್ನು ಘಾಸಿಗೊಳಿಸಿ ಗಲಭೆಗಳಿಗೆ ಪ್ರಚೋದನೆ ಆರೋಪ: ಆಲ್ಟ್‌ನ್ಯೂಸ್‌ ಸಹಸಂಸ್ಥಾಪಕ ಮೊಹಮ್ಮದ್ ಜುಬೇರ್‌ ಬಂಧನ

ಮೆಕ್ಸಿಕನ್ ಗಡಿಯಿಂದ ಸುಮಾರು 250 ಕಿಮೀ ದೂರದಲ್ಲಿರುವ ಸ್ಯಾನ್ ಆಂಟೋನಿಯೊದಲ್ಲಿನ ಜೂನ್ ತಿಂಗಳಲ್ಲಿ ಹೆಚ್ಚಿನ ಉಷ್ಣ ವಾತಾವರಣವಿರುತ್ತದೆ. ಸೋಮವಾರ 39.4 ಡಿಗ್ರಿ ಸೆಲ್ಸಿಯಸ್‌ ಉಷ್ಣ ವಾತಾವರಣವಿತ್ತು ಎಂದು ವರದಿಯಾಗಿದೆ.

ಆದರೂ 46 ಮಂದಿಯ ಸಾವಿಗೆ ಸ್ಪಷ್ಟ ಕಾರಣವಿನ್ನು ಸಿಕ್ಕಿಲ್ಲ. ಈ ರೀತಿ ಅಕ್ರಮ ವಲಸಿಗರು ಮೃತಪಟ್ಟಿರುವುದು ಅತಿದೊಡ್ಡ ಘಟನೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇಂಹದ್ದೆ ಪ್ರಕರಣಗಳಲ್ಲಿ ಈವರೆಗೆ ಮೂರು ಮಂದಿ ಬಂಧನದಲ್ಲಿದ್ದಾರೆ. ಆದರೆ, ಅವರಿಗೂ ಈ ಪ್ರಕರಣಕ್ಕೂ ಸಂಬಂಧವಿದೆಯೇ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

 

ಹೋಮ್‌ಲ್ಯಾಂಡ್ ಸೆಕ್ಯುರಿಟಿ ಇನ್ವೆಸ್ಟಿಗೇಷನ್ಸ್ ವಿಭಾಗವು ಸ್ಥಳೀಯ ಪೋಲೀಸ್‌ನೊಂದಿಗೆ ಸಮನ್ವಯ ಸಾಧಿಸಿ “ಅಕ್ರಮ ಮಾನವ ಕಳ್ಳಸಾಗಣೆ ಘಟನೆ” ಯನ್ನು ತನಿಖೆ ನಡೆಸುತ್ತಿದೆ ಎಂದು ಯುಎಸ್‌ ವಲಸೆ ಮತ್ತು ಕಸ್ಟಮ್ಸ್ ಎನ್‌ಫೋರ್ಸ್‌ಮೆಂಟ್ (ICE) ವಕ್ತಾರರು ತಿಳಿಸಿದ್ದಾರೆ.

ಜುಲೈ 2017 ರಲ್ಲಿ, 10 ವಲಸಿಗರು ಟ್ರ್ಯಾಕ್ಟರ್-ಟ್ರೇಲರ್‌ನಲ್ಲಿ ಸಾಗಿಸುತ್ತಿದ್ದಾಗ ಸಾವನ್ನಪ್ಪಿದರು, ಇದನ್ನು ಸ್ಯಾನ್ ಆಂಟೋನಿಯೊ ಪೊಲೀಸರು ಪಾರ್ಕಿಂಗ್ ಸ್ಥಳದಲ್ಲಿ ಪತ್ತೆ ಮಾಡಿದ್ದರು. ಪ್ರಕರಣದಲ್ಲಿ ಟ್ರಕ್ ಚಾಲಕನಿಗೆ ಮಾನವ ಕಳ್ಳಸಾಗಣೆ ಅಪರಾಧಕ್ಕಾಗಿ ಜೀವಾವಧಿ ಶಿಕ್ಷೆ ನೀಡಲಾಗಿತ್ತು.


ಇದನ್ನೂ ಓದಿ: ಗುಜರಾತ್‌: NEP ಮೂಲಕ 1ನೇ ತರಗತಿಯಿಂದಲೇ ಸಂಸ್ಕೃತ ಕಡ್ಡಾಯಕ್ಕೆ ಪ್ರಯತ್ನಿಸುತ್ತಿರುವ ಆರೆಸ್ಸೆಸ್‌‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...