Homeಮುಖಪುಟಹಿಡಿತವಿಲ್ಲದ ನಾಲಿಗೆಯಿಂದ ರಾಷ್ಟ್ರಕ್ಕೆ ಬೆಂಕಿ ಹಚ್ಚಿದೆ: ನೂಪುರ್ ಶರ್ಮಾ ಇಡೀ ದೇಶದ ಎದುರು ಕ್ಷಮೆ ಕೇಳಬೇಕು-...

ಹಿಡಿತವಿಲ್ಲದ ನಾಲಿಗೆಯಿಂದ ರಾಷ್ಟ್ರಕ್ಕೆ ಬೆಂಕಿ ಹಚ್ಚಿದೆ: ನೂಪುರ್ ಶರ್ಮಾ ಇಡೀ ದೇಶದ ಎದುರು ಕ್ಷಮೆ ಕೇಳಬೇಕು- ಸುಪ್ರೀಂ

ಟಿವಿ ಚಾನೆಲ್‌ ಡಿಬೇಟ್‌ನಲ್ಲಿನ ಅವರ ಹೇಳಿಕೆಗಳು ಅವರ ಹಠಮಾರಿ ಮತ್ತು ಸೊಕ್ಕಿನ ಸ್ವಭಾವವನ್ನು ತೋರಿಸುತ್ತವೆ ಎಂದು ನ್ಯಾಯಾಲಯ ಹೇಳಿದೆ.

- Advertisement -
- Advertisement -

ಪ್ರವಾದಿ ಮೊಹಮ್ಮದ್‌ರವರನ್ನು ನಿಂದಿಸಿದ್ದ ಬಿಜೆಪಿಯ ಉಚ್ಛಾಟಿತ ನಾಯಕಿ ನೂಪುರ್ ಶರ್ಮಾ ಇಡೀ ರಾಷ್ಟ್ರದ ಎದುರು ಕ್ಷಮೆ ಕೇಳಬೇಕೆಂದು ಸುಪ್ರೀಂ ಕೋರ್ಟ್ ತಾಕೀತು ಮಾಡಿದೆ.

ತನ್ನ ಮೇಲೆ ದೇಶಾದ್ಯಂತ ದಾಖಲಾಗಿರುವ ಪ್ರಕರಣಗಳನ್ನು ಒಂದೇ ಎಫ್‌ಐಆರ್‌ಗೆ ವರ್ಗಾಹಿಸುವಂತೆ ಆರೋಪಿ ನೂಪುರ್ ಶರ್ಮಾ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್‌ “ದೇಶದಲ್ಲಿ ಉಂಟಾದ ಉದ್ವಿಗ್ನ ವಾತಾವರಣಕ್ಕೆ ನೂಪುರ್ ಶರ್ಮಾ ಒಬ್ಬರೆ ಕಾರಣವಾಗಿದ್ದಾರೆ” ಎಂದು ಅಭಿಪ್ರಾಯಪಟ್ಟಿದೆ.

“ಅವರು ಹಾಗೆ ಮಾತನಾಡಲು ಹೇಗೆ ಪ್ರಚೋದಿಸಲಾಯಿತು ಎಂಬ ಚರ್ಚೆ ನಡೆಯುತ್ತಿದೆ. ಆದರೆ ಅವರು ಇದನ್ನೆಲ್ಲ ಹೇಳಿದ ರೀತಿ ಮತ್ತು ನಂತರ ತಾನು ವಕೀಲೆ ಎಂದು ಹೇಳುವುದು ನಾಚಿಕೆಗೇಡಿನ ಸಂಗತಿಯಾಗಿದೆ. ಅವರು ಇಡೀ ದೇಶದ ಕ್ಷಮೆಯಾಚಿಸಬೇಕು” ಎಂದು ನ್ಯಾಯಮೂರ್ತಿಗಳಾದ ಸೂರ್ಯ ಕಾಂತ್ ಹೇಳಿದ್ದಾರೆ.

ಅರ್ಜಿದಾರರು ಬೆದರಿಕೆಗಳನ್ನು ಎದುರಿಸುತ್ತಿದ್ದಾರೆ ಎಂದು ವಕೀಲರು ವಾದಿಸಿದಾಗ, “ಅವರಿಗೆ ಬೆದರಿಕೆ ಇದೆಯೊ ಅಥವಾ ಅವರಿಂದ ದೇಶದ ಭದ್ರತೆಗೆ ಬೆದರಿಕೆಯಿದೆಯೊ? ಅವರು ದೇಶದಾದ್ಯಂತ ಶಾಂತಿ ಸುರಕ್ಷತೆಗೆ ಧಕ್ಕೆ ತಂದಿದ್ದಾರೆ. ಇಂದು ದೇಶದಲ್ಲಿ ಏನಾಗುತ್ತಿದೆಯೊ ಅದಕ್ಕೆ ಈ ಮಹಿಳೆ ಏಕಾಂಗಿಯಾಗಿ ಜವಾಬ್ದಾರಳು” ಎಂದು ಸೂರ್ಯ ಕಾಂತ್ ಹೇಳಿದ್ದಾರೆ.

ಟಿವಿ ಚಾನೆಲ್‌ ಡಿಬೇಟ್‌ನಲ್ಲಿನ ಅವರ ಹೇಳಿಕೆಗಳು ಅವರ ಹಠಮಾರಿ ಮತ್ತು ಸೊಕ್ಕಿನ ಸ್ವಭಾವವನ್ನು ತೋರಿಸುತ್ತವೆ ಎಂದು ನ್ಯಾಯಾಲಯ ಹೇಳಿದೆ. ಅವರು ಒಂದು ಪಕ್ಷದ ವಕ್ತಾರರಾದರೆ ಮಾತ್ರಕ್ಕೆ ತನಗೆ ಅಧಿಕಾರವಿದೆ ಎಂದು ಭಾವಿಸಿ ದೇಶದ ಕಾನೂನನ್ನು ಗೌರವಿಸದೆ ಯಾವುದೇ ಹೇಳಿಕೆ ನೀಡಬಹುದೇ? ಎಂದು ನ್ಯಾಯಮೂರ್ತಿ ಸೂರ್ಯ ಕಾಂತ್ ಪ್ರಶ್ನಿಸಿದ್ದಾರೆ.

ಚಾನೆಲ್ ನಿರೂಪಕರ ಪ್ರಶ್ನೆಗಳಿಗೆ ಅವರು ಹಾಗೆ ಉತ್ತರಿಸಿದ್ದಾರೆ ಎಂಬ ವಕೀಲರ ವಾದಕ್ಕೆ ಉತ್ತರಿಸಿದ ನ್ಯಾಯಮೂರ್ತಿಗಳು ಹಾಗಾದರೆ ಚಾನೆಲ್ ನಿರೂಪಕರ ಮೇಲೂ ಪ್ರಕರಣ ದಾಖಲಿಸಿ ಎಂದಿದ್ದಾರೆ.

ದೆಹಲಿ ಪೊಲೀಸರು ಮತ್ತು ಚರ್ಚೆ ನಡೆಸುತ್ತಿದ್ದ ಟಿವಿ ಚಾನೆಲ್ ಅನ್ನು ತರಾಟೆಗೆ ತೆಗೆದುಕೊಂಡ ಪೀಠವು “ದೆಹಲಿ ಪೊಲೀಸರು ಏನು ಮಾಡಿದ್ದಾರೆ? ನಮ್ಮನ್ನು ಬಾಯಿ ತೆರೆಯುವಂತೆ ಮಾಡಬೇಡಿ, ಟಿವಿ ಚರ್ಚೆ ಏನು? ಕೇವಲ ಅಜೆಂಡಾವನ್ನು ರೂಪಿಸಲು ನಡೆಸಲಾಗುತ್ತದೆ ಎಂದು ಕಿಡಿಕಾರಿದೆ.

ಇದನ್ನೂ ಓದಿ; ಫಡ್ನವೀಸ್‌ಗೆ ದಕ್ಕದ ಸಿಎಂ ಪಟ್ಟ: ಬಿಜೆಪಿ ಹೈಕಮಾಂಡ್ ಎದುರು ಮಂಡಿಯೂರಿದ್ದೇಕೆ?

ಪ್ರಕರಣದಲ್ಲಿ ಪೊಲೀಸರ ಕ್ರಮವನ್ನು ಪ್ರಶ್ನಿಸಿದ ನ್ಯಾಯಾಲಯ, “ನೀವು ಇತರರ ವಿರುದ್ಧ ಎಫ್‌ಐಆರ್‌ಗಳನ್ನು ದಾಖಲಿಸಿದಾಗ, ಅವರನ್ನು ತಕ್ಷಣವೇ ಬಂಧಿಸಲಾಗುತ್ತದೆ ಆದರೆ ಅದು ನಿಮ್ಮ ವಿರುದ್ಧವೇ ಪ್ರಕರಣ ದಾಖಲಾದರೆ ಯಾರೂ ನಿಮ್ಮನ್ನು ಮುಟ್ಟಲು ಧೈರ್ಯ ಮಾಡಿಲ್ಲ ಅಲ್ಲವೇ” ಎಂದಿದೆ.

ಎಲ್ಲಾ ಎಫ್‌ಐಆರ್‌ಗಳನ್ನು ಒಂದೇ ಎಂದು ಪರಿಗಣಸಬೇಕೆಂಬ ನೂಪರ್ ಶರ್ಮಾ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...

ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ : ಮೊದಲ ಬೀದಿ ಹೋರಾಟಕ್ಕೆ ಸಜ್ಜಾದ ಕಾಕ್ರೋಚ್ ಜನತಾ ಪಾರ್ಟಿ

ಸಾಮಾಜಿಕ ಜಾಲತಾಣಗಳಲ್ಲಿ ಹೊಸ ಅಲೆಯನ್ನು ಸೃಷ್ಟಿಸಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ತನ್ನ ಮೊದಲ ಬೀದಿ ಹೋರಾಟಕ್ಕೆ ಸಜ್ಜಾಗಿದೆ. ಜೂನ್ 6, 2026ರಂದು ನವದೆಹಲಿಯ ಜಂತರ್ ಮಂತರ್‌ನಲ್ಲಿ ಸಿಜೆಪಿ ಪ್ರತಿಭಟನೆ ಆಯೋಜಿಸಿದ್ದು, ಇದರ...

ದೆಹಲಿ: ‘ಮಾಳವೀಯ ನಗರ’ ಅಗ್ನಿ ದುರಂತಕ್ಕೆ 21 ಜನರು ಬಲಿ: ವ್ಯವಸ್ಥೆಯ ವೈಫಲ್ಯದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿರುವ ನಾಗರೀಕರು 

ದೆಹಲಿಯ ಅತ್ಯಂತ ಜನನಿಬಿಡ ಮತ್ತು ವಾಣಿಜ್ಯ ಪ್ರದೇಶವಾದ ಮಾಳವೀಯ ನಗರದಲ್ಲಿ 2026 ಜೂನ್ 3, ಬುಧವಾರ ನಸುಕಿನ ಜಾವ ಸಂಭವಿಸಿದ ಭೀಕರ ಅಗ್ನಿ ದುರಂತವು ಇಡೀ ದೇಶವನ್ನು ಬೆಚ್ಚಿಬೀಳಿಸಿದೆ. 'ಫ್ಲೋರಿಶ್ ಸ್ಟೇ ಬಿ...

“ವಿಷ ಕಾರದೆ ಮಾತನಾಡಿ”: ಕಲ್ಲಡ್ಕ ಪ್ರಭಾಕರ ಭಟ್‌ಗೆ ಹೈಕೋರ್ಟ್ ತಾಕೀತು

ಹೆಚ್ಚು ಮಕ್ಕಳನ್ನು ಹೆರುವ ಮುಸ್ಲಿಂ ಮಹಿಳೆಯರನ್ನು ಲೇವಡಿ ಮಾಡುವ ಮೂಲಕ ಕೋಮು ದ್ವೇಷ ಹರಡಿದ್ದಾರೆ ಎಂಬ ಆರೋಪ ಎದುರಿಸುತ್ತಿರುವ ಹಿಂದುತ್ವ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಕಲ್ಲಡ್ಕ ಅವರಿಗೆ ತಮ್ಮ ಮುಂದಿನ ಭಾಷಣಗಳಲ್ಲಿ...

ಪತ್ರಕರ್ತ- ಚಿತ್ರ ನಿರ್ಮಾಪಕ ಸೇರಿದಂತೆ ಹಲವು ಕ್ಷೇತ್ರಗಳ ಪ್ರಮುಖರನ್ನು ವಕ್ತಾರರನ್ನಾಗಿ ನೇಮಿಸಿದ ಸಿಜೆಪಿ

ಆನ್‌ಲೈನ್ ಸೆನ್ಸೇಷನ್ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ)ಯು ಶಿಕ್ಷಣ ವ್ಯವಸ್ಥೆಯಲ್ಲಿನ ವೈಫಲ್ಯಗಳ ವಿರುದ್ಧ ಪ್ರಸ್ತಾಪಿಸಿದ ಪ್ರತಿಭಟನೆಗೆ ಮುಂಚಿತವಾಗಿ ತನ್ನ ವ್ಯಾಪ್ತಿಯನ್ನು ವಿಸ್ತರಿಸುವ ಸಲುವಾಗಿ ಮೂವರು ವಕ್ತಾರರ ಹೆಸರನ್ನು ಘೋಷಿಸಿದೆ. ಎಕ್ಸ್‌ನಲ್ಲಿನ ಪೋಸ್ಟ್‌ ಮಾಡಿರುವ ಅಭಿಜೀತ್...

CBSE ಪರೀಕ್ಷೆಯಲ್ಲಿ OSM ವಿವಾದ | ಸಂಸದೀಯ ಸಮಿತಿಯ ಮುಂದೆ ಹಾಜರಾದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್

ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (ಸಿಬಿಎಸ್‌ಸಿ) ಆನ್-ಸ್ಕ್ರೀನ್ ಮಾರ್ಕಿಂಗ್ (ಒಎಸ್‌ಎಂ) ಮೌಲ್ಯಮಾಪನ ವ್ಯವಸ್ಥೆಯಲ್ಲಿನ ಗಂಭೀರ ಲೋಪಗಳ ಕುರಿತು ವಿವಾದ ಭುಗಿಲೆದ್ದಿರುವ ನಡುವೆ, 17 ವರ್ಷದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್ ನವದೆಹಲಿಯ ಸಂಸತ್ ಭವನದಲ್ಲಿ...