Homeರಾಷ್ಟ್ರೀಯರಾಹುಲ್ ಗಾಂಧಿ ವಿರುದ್ಧ ಸುಳ್ಳು ಸುದ್ದಿ ಪ್ರಸಾರ; ಕ್ಷಮೆಯಾಚಿಸಿ, ಇಬ್ಬರು ಸಿಬ್ಬಂದಿಗಳನ್ನು ವಜಾ ಮಾಡಿದ್ದೇವೆಂದ ‘ಝೀ...

ರಾಹುಲ್ ಗಾಂಧಿ ವಿರುದ್ಧ ಸುಳ್ಳು ಸುದ್ದಿ ಪ್ರಸಾರ; ಕ್ಷಮೆಯಾಚಿಸಿ, ಇಬ್ಬರು ಸಿಬ್ಬಂದಿಗಳನ್ನು ವಜಾ ಮಾಡಿದ್ದೇವೆಂದ ‘ಝೀ ನ್ಯೂಸ್’

- Advertisement -
- Advertisement -

ರಾಜಸ್ಥಾನದ ಉದಯಪುರದಲ್ಲಿ ನಡೆದ ಹತ್ಯೆಯನ್ನು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕ್ಷಮಿಸಿದ್ದು, ಹಂತಕರನ್ನು ‘ಮಕ್ಕಳು’ ಎಂದು ಹೇಳಿದ್ದಾರೆ ಎಂದು ತಿರುಚಿದ ಸುಳ್ಳು ಸುದ್ದಿಯನ್ನು ಪ್ರಸಾರ ಮಾಡಿದ್ದ ಹಿಂದಿ ಸುದ್ದಿ ಮಾಧ್ಯಮ ಝೀ ನ್ಯೂಸ್‌ ತಮ್ಮ ತಪ್ಪಿಗೆ ಸಾರ್ವಜನಿಕವಾಗಿ ಕ್ಷಮೆ ಕೇಳಿದ್ದು, ತಪ್ಪಿಗೆ ಕಾರಣರಾದ ಇಬ್ಬರು ಸಿಬ್ಬಂದಿಗಳನ್ನು ಹುದ್ದೆಯಿಂದ ವಜಾ ಮಾಡಿದ್ದೇವೆ ಎಂದು ಹೇಳಿದೆ.

ಝೀ ನ್ಯೂಸ್‌ನ ಡಿಎನ್‌ಎ ಎನ್ನುವ ಕಾರ್ಯಕ್ರಮದಲ್ಲಿ ನಿರೂಪಕ ರೋಹಿತ್ ರಂಜನ್ ‘ರಾಹುಲ್ ಗಾಂಧಿಯ ಪೂರ್ವಗ್ರಹವನ್ನು ಮತ್ತೊಮ್ಮೆ ನೋಡಿ. ಉದಯಪುರದ ಆರೋಪಿಗಳನ್ನು ಅವರು ಮಕ್ಕಳು ಎಂದು ಕರೆದಿದ್ದಾರೆ. ಅವರು ಮಕ್ಕಳೊ ಅಥವಾ ಆತಂಕವಾದಿಗಳೊ’ ಎಂದು ಹೇಳಿ ದುರುದ್ದೇಶಪೂರಿತವಾಗಿ ಉದಯಪುರ ಸುದ್ದಿಯನ್ನು ಲಿಂಕ್ ಮಾಡಿ ಮಾಧ್ಯಮದಲ್ಲಿ ತಪ್ಪಾಗಿ ವರದಿ ಮಾಡಿದ್ದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ರಾಹುಲ್ ಗಾಂಧಿಯ ಕ್ಷೇತ್ರ ಕೇರಳದ ವಯನಾಡ್‌ನ ಅವರ ಕಚೇರಿಯಲ್ಲಿ ಜೂನ್ 24 ರಂದು ಎಸ್‌ಎಫ್‌ಐ ವಿದ್ಯಾರ್ಥಿಗಳು ದ್ವಂಸ ಮಾಡಿದ್ದರು. ಈ ಕುರಿತು ಪತ್ರಕರ್ತರು ಕೇಳೀದ್ದ ಪ್ರಶ್ನೆಗೆ ಉತ್ತರಿಸಿದ್ದ ರಾಹುಲ್ ಗಾಂಧಿ, “ಇದು ನನ್ನ ಕಚೇರಿ. ಆದರೆ ಅದಕ್ಕೂ ಮುನ್ನ ಇದು ವಯನಾಡಿನ ಜನರ ಕಚೇರಿ. ಇದು ವಯನಾಡಿನ ಜನರ ಧ್ವನಿ. ದುರಾದೃಷ್ಟವಶಾತ್ ಕೆಲವು ಜನರು ಹಿಂಸೆಗಿಳಿದಿದ್ದಾರೆ. ಆದರೆ ಯಾವುದೇ ಸಮಸ್ಯೆಗೆ ಪರಿಹಾರವಾಗುವುದಿಲ್ಲ ಎಂಬುದನ್ನು ಅವರು ಅರ್ಥ ಮಾಡಿಕೊಳ್ಳಬೇಕು” ಎಂದು ಹೇಳಿದ್ದರು.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ಉದಯಪುರ ಹತ್ಯೆ ಆರೋಪಿಗಳನ್ನು ರಾಹುಲ್ ಗಾಂಧಿ ಕ್ಷಮಿಸಿದ್ದಾರೆ ಎಂದು ಸುಳ್ಳು ಹಬ್ಬಿಸಿದ ಝೀ ನ್ಯೂಸ್

“ಈ ರೀತಿ ಮಾಡಿದ ಮಕ್ಕಳು ಬೇಜವಾಬ್ದಾರಿಯಿಂದ ನಡೆದುಕೊಂಡಿದ್ದಾರೆ. ಆದರೆ ಅವರ  ಮೇಲೆ ನನಗೆ ಯಾವುದೇ ಕೋಪ ಅಥವಾ ದ್ವೇಷವಿಲ್ಲ. ಅವರನ್ನು ಕ್ಷಮಿಸಿದ್ದೇನೆ’’ ಎಂದು ಹೇಳಿದ್ದರು.

ರಾಹುಲ್ ಗಾಂಧಿ ಅವರ ಮಾತನ್ನು ಝೀ ನ್ಯೂಸ್ ಉದಯಪುರ ಹತ್ಯೆಯ ಬಗ್ಗೆ ರಾಹುಲ್ ಗಾಂಧಿ ಅವರ ಪ್ರತಿಕ್ರಿಯೆ ಎಂಬಂತೆ ತಪ್ಪಾಗಿ ವರದಿ ಮಾಡಿತ್ತು. ರೋಹಿತ್ ರಂಜನ್ ನಿರೂಪಿಸಿದ್ದ, ಚಾನೆಲ್‌ನ ಪ್ರೈಮ್‌ಟೈಮ್ ಕಾರ್ಯಕ್ರಮದಲ್ಲಿ ಇದು ಪ್ರಸಾರವಾಗಿತ್ತು. ಭೀಕರ ಹತ್ಯೆಯ ಬಗ್ಗೆ ಹಿರಿಯ ಕಾಂಗ್ರೆಸ್ ನಾಯಕ ‘ಆಘಾತಕಾರಿ’ ಹೇಳಿಕೆಗಳನ್ನು ನೀಡಿದ್ದಾರೆ ಎಂದು ವೀಕ್ಷಕರನ್ನು ತಪ್ಪುದಾರಿಗೆ ಎಳೆದಿದ್ದರು.

ಚಾನೆಲ್ ಪ್ರಸಾರ ಮಾಡಿದ್ದ ಈ ಸುದ್ದಿಯ ವಿಡಿಯೊ ಕ್ಲಿಪ್ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್‌ ಆಗಿದ್ದು ವ್ಯಾಪಕವಾಗಿ ಹಂಚಿಕೊಳ್ಳಲಾಗಿತ್ತು. ಹಲವಾರು ಜನರು ಇದನ್ನು ನಿಜವೆಂದೇ ನಂಬಿ ರಾಹುಲ್ ಗಾಂಧಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದರು. ಬಿಜೆಪಿ ಕೂಡಾ ಇದನ್ನು ಬಿರುಸಿನಿಂದ ಹಂಚಿಕೊಂಡಿತ್ತು. ಕನೌಜ್‌ನ ಬಿಜೆಪಿ ಸಂಸದ ಸುಬ್ರತಾ ಪಾಠಕ್, ಮಾಜಿ ಕೇಂದ್ರ ಸಚಿವ ಮತ್ತು ಬಿಜೆಪಿ ನಾಯಕ ರಾಜವರ್ಧನ್ ರಾಥೋಡ್, ಬಿಜ್ನೋರ್‌ನ ಚಂದ್‌ಪುರ ವಿಧಾನಸಭೆಯ ಶಾಸಕ ಕಮಲೇಶ್ ಸೈನಿ ಸೇರಿದಂತೆ ಹಲವರು ಈ ವಿಡಿಯೋವನ್ನು ಹಂಚಿಕೊಂಡಿದ್ದರು.

ಇದನ್ನೂ ಓದಿ: ಉದಯಪುರ ಟೈಲರ್‌ ಹತ್ಯೆ: BJP-RSS ಅಂಗಸಂಸ್ಥೆ ಎಂಆರ್‌ಎಂ ನಾಯಕನ ಸಂಪರ್ಕದಲ್ಲಿದ್ದ ಕೊಲೆ ಆರೋಪಿ?

ಇದರ ನಂತರ ಕಾಂಗ್ರೆಸ್‌ ಪಕ್ಷದ ನಾಯಕರು ಮತ್ತು ಸಮಾಜಿಕ ಮಾಧ್ಯಮಗಳ ಬಳಕೆದಾರರು ಝೀ ನ್ಯೂಸ್ ತಪ್ಪಾಗಿ ವರದಿ ಮಾಡಿರುವುದರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದರು. ಅಷ್ಟೆ ಅಲ್ಲದೆ, ಛತ್ತೀಸ್‌ಗಡದ ರಾಯಪುರದಲ್ಲಿ ಝೀ ನ್ಯೂಸ್ ಮತ್ತು ನಿರೂಪಕ ರೋಹಿತ್ ರಂಜನ್ ವಿರುದ್ಧ ಎಫ್‌ಐಆರ್‌ ಕೂಡಾ ದಾಖಲಾಗಿತ್ತು.

ಇದರ ನಂತರ ಎಚ್ಚೆತ್ತ ಝೀ ನ್ಯೂಸ್ ಟ್ವಿಟರ್‌ನಲ್ಲಿ ಇರುವ ವಿಡಿಯೊವನ್ನು ಡಿಲೀಟ್ ಮಾಡಿದ್ದು, “ಮಾನವ ಸಹಜ ತಪ್ಪು” ಎಂದು ಹೇಳಿ ಕ್ಷಮೆಯಾಚಿಸಿದೆ. “ನಿನ್ನೆ ರಾಹುಲ್ ಗಾಂಧಿ ಅವರು ನೀಡಿದ್ದ ಹೇಳಿಕೆಯನ್ನು ನಮ್ಮ ಕಾರ್ಯಕ್ರಮ ಡಿಎನ್‌ಎನಲ್ಲಿ ತಪ್ಪಾಗಿ ಪ್ರಸಾರವಾಗಿದೆ. ಆ ಬಗ್ಗೆ ನಮಗೆ ವಿಷಾದವಿದೆ” ಎಂದು ಕ್ಷಮೆ ಯಾಚಿಸಿತ್ತು.

ಅದೇ ರೀತಿ ಶನಿವಾರ ರಾತ್ರಿ 9 ಗಂಟೆಗೆ ಪ್ರಸಾರವಾದ ಡಿಎನ್‌ಎ ಕಾರ್ಯಕ್ರಮದಲ್ಲಿ ಸ್ವತಃ ನಿರೂಪಕ ರೋಹಿತ್ ರಂಜನ್ ಸುಳ್ಳು ಸುದ್ದಿ ಬಗ್ಗೆ ಕ್ಷಮೆಯಾಚಿಸಿದ್ದು, “ರಾಹುಲ್ ಗಾಂಧಿ ಅವರು ವಯನಾಡಿನ ಸನ್ಮಾನ್ಯ ಸಂಸದರಾಗಿದ್ದು, ಕಾಂಗ್ರೆಸ್ ನಾಯಕರು. ಅವರ ಘನತೆಗೆ ಧಕ್ಕೆ ತರುವ ಯಾವುದೇ ಚೇಷ್ಟೆ ಮಾಡಿಲ್ಲ. ಈ ಬಗ್ಗೆ ತಪ್ಪನ್ನು ನಾವು ಗಂಭೀರವಾಗಿ ಪರಿಗಣಿಸಿದ್ದು, ಡಿಎನ್‌ಎ ಕಠಿಣ ಕ್ರಮಗಳನ್ನು ಕೈಗೊಂಡಿದೆ. ಈ ತಪ್ಪಿಗೆ ಕಾರಣರಾದ ಇಬ್ಬರನ್ನು ಅವರ ಹುದ್ದೆಯಿಂದ ತೆಗೆದುಹಾಕಿದ್ದೇವೆ” ಎಂದು ಹೇಳಿಕೆ ನೀಡಿದ್ದಾರೆ.

ಈ ನಡುವೆ ಸುಳ್ಳು ಸುದ್ದಿಯನ್ನು ಹಂಚಿದ ಬಿಜೆಪಿ ಬಗ್ಗೆಯೂ ಕಾಂಗ್ರೆಸ್‌ ನಾಯಕ ಜೈರಾಂ ರಮೇಶ್ ಅವರು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ ಪಿ ನಡ್ಡಾ ಅವರಿಗೆ ಪತ್ರ ಮೂಲಕ ಬರೆದು ಆಕ್ಷೇಪ ವ್ಯಕ್ತಪಡಿಸಿದ್ದು, ತಿರುಚಿದ ವೀಡಿಯೋವನ್ನು ಹಂಚಿಕೊಂಡಿದ್ದರ ಸಂಬಂಧ ಕ್ಷಮೆಯಾಚಿಸುವಂತೆ ಕೇಳಿಕೊಂಡಿದ್ದಾರೆ.

ಇದನ್ನೂ ಓದಿ: ತೆಲಂಗಾಣಕ್ಕೆ ಮೋದಿ: ಬರಮಾಡಿಕೊಳ್ಳದ ಕೆಸಿಆರ್‌; ಧಮ್‌ ಬಿರಿಯಾನಿ ತಿಂದು ಹೋಗಿ ಎಂದ ಕೆಟಿಆರ್‌‌!

ಸಂರಕ್ಷಿತ ಅರಣ್ಯ ಪ್ರದೇಶದ ವ್ಯಾಪ್ತಿಗೆ ಒಳಪಡುವ ಇಡುಕ್ಕಿ, ವಯನಾಡ್, ಕೊಟ್ಟಾಯಂ ಮತ್ತು ಪತ್ತನಂತಿಟ್ಟ ಅರಣ್ಯ ಸುತ್ತಲಿನ ಬಫರ್ ಝೋನ್‌ಗಳ ಅಳವಡಿಕೆಗೆ ಸುಪ್ರೀಂ ಕೋರ್ಟ್ ಜೂನ್-03 ರಂದು ಆದೇಶ ಮಾಡಿತ್ತು. ಇದರಿಂದ ಲಕ್ಷಾಂತರ ಸಂಖ್ಯೆಯ ರೈತರ ಉಳುಮೆ ಭೂಮಿ ಮತ್ತು ಕೃಷಿ ಚಟುವಟಿಕೆಗಳು ಸ್ಥಗಿತಗೊಳ್ಳಲಿದೆ ಎಂದು ಆರೋಪಿಸಿ ಕೇರಳದ ರೈತ ಸಂಘಟನೆಗಳು, ರಾಜಕೀಯ ಪಕ್ಷಗಳು ಹೋರಾಟ ತೀವ್ರಗೊಳಿಸಿತ್ತು.

ಆದರೆ ಈ ವಿಷಯದಲ್ಲಿ ಕೇಂದ್ರ ಸರ್ಕಾರದ ಮೇಲೆ ಒತ್ತಡ ತರುವಲ್ಲಿ ಈ ಭಾಗದ ವಯನಾಡ್ ಸಂಸದರಾಗಿರುವ ರಾಹುಲ್ ಗಾಂಧಿಯವರು ಪ್ರತಿಕ್ರಿಯಿಸಿಲ್ಲ ಹಾಗೂ ಮಧ್ಯಪ್ರವೇಶಿಸಿಲ್ಲ ಎಂದು ಎಸ್‌ಎಫ್‌ಐ ಕಾರ್ಯಕರ್ತರು ಧರಣಿ ಸತ್ಯಾಗ್ರಹ ಹಮ್ಮಿಕೊಂಡಿದ್ದರು. ಈ ವೇಳೆ ಕಾಂಗ್ರೆಸ್ ವಿದ್ಯಾರ್ಥಿ ಸಂಘಟನೆ ಎನ್ಎಸ್‌ಯೂಐ ಕಾರ್ಯಕರ್ತರು ಮತ್ತು ಎಸ್ಎಫ್ಐನ ಪ್ರತಿಭಟನಾ ನಿರತರ ನಡುವೆ ವಾಗ್ವಾದ ಘರ್ಷಣೆ ನಡೆದಿತ್ತು. ವೇಳೆ ಎಸ್‌ಎಫ್‌ಐ ವಿದ್ಯಾರ್ಥಿಗಳು ರಾಹುಲ್ ಗಾಂಧಿ ಅವರ ಕಚೇರಿಗೆ ಹಾನಿ ಮಾಡಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...

‘ವೆಟ್ಟುವಂ’ ಪಾ.ರಂಜಿತ್ ಅವರ ಅದ್ಭುತ ಅಪೋಕಲಿಪ್ಟಿಕ್ ಆಕ್ಷನ್ ಸಿನಿಮಾ: ರಂಗನಾಥ್ ಆರ್. ವಿ

ತಮಿಳಿನ ಖ್ಯಾತ ನಿರ್ದೇಶಕ ಪಾ.ರಂಜಿತ್ ಅವರ ನಿರ್ದೇಶನದಲ್ಲಿ ಮೂಡಿಬರುತ್ತಿರುವ 'ವೆಟ್ಟುವಂ' ಚಿತ್ರವನ್ನು 'ಲರ್ನ್ ಆಂಡ್ ಟೀಚ್ ಪ್ರೊಡಕ್ಷನ್' ಸಂಸ್ಥೆಯ ಸಹಯೋಗದೊಂದಿಗೆ, ಪಾ.ರಂಜಿತ್ ಅವರ 'ನೀಲಂ ಪ್ರೊಡಕ್ಷನ್ಸ್' ನಿರ್ಮಿಸಿದೆ. ಈ ಚಿತ್ರದ ಜಗತ್ತನ್ನು ಪರಿಚಯಿಸುವ...

SIR ಮೋಸ: ಅಗತ್ಯಬಿದ್ದರೆ ಕಾಂಗ್ರೆಸ್‌ನಿಂದ ಕಾನೂನು ಹೋರಾಟ ಬಿ.ಕೆ. ಹರಿಪ್ರಸಾದ್ ಎಚ್ಚರಿಕೆ

ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ 2026ರ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರಿ ಪ್ರಮಾಣದ ತಾಂತ್ರಿಕ ಲೋಪಗಳು, ಅಂಕಿಅಂಶಗಳ ವ್ಯತ್ಯಾಸ ಹಾಗೂ ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ಸ್ಪಷ್ಟತೆಯ ಕೊರತೆ ಎದ್ದುಕಾಣುತ್ತಿದೆ ಎಂದು...

ವಿಚಾರಣೆಯಿಲ್ಲದೆ ಆರು ವರ್ಷ ಜೈಲುವಾಸ: ಉಮರ್ ಖಾಲಿದ್ ಹೋರಾಟದ ಹಾದಿ

ಸೆಪ್ಟೆಂಬರ್ 13, 2020 ರಂದು, ಮಾನವ ಹಕ್ಕುಗಳ ಯುವ ಕಾರ್ಯಕರ್ತ ಉಮರ್ ಖಾಲಿದ್ ಅವರನ್ನು ದೇಶದ ರಾಜಧಾನಿಯಲ್ಲಿ ಗುರಿಯಾಗಿಸಿಕೊಳ್ಳಲಾಯಿತು. ವಿಚಾರಣೆಯೇ ಇಲ್ಲದೆ ಅವರು ಜೈಲಿನಲ್ಲಿ ಆರು ವರ್ಷಗಳನ್ನು ಪೂರೈಸಿದ್ದಾರೆ. ಸರ್ಕಾರದ ವಿರುದ್ಧದ ರಾಜಕೀಯ...