Homeಕರ್ನಾಟಕಮುಸ್ಲಿಂ ಪ್ರಧಾನ ಕಥೆ ಹೊಂದಿದೆ ಎಂದು ನಾಟಕಕ್ಕೆ ಅಡ್ಡಿಪಡಿಸಿದ RSS-ಬಜರಂಗದಳದ ದುಷ್ಕರ್ಮಿಗಳು

ಮುಸ್ಲಿಂ ಪ್ರಧಾನ ಕಥೆ ಹೊಂದಿದೆ ಎಂದು ನಾಟಕಕ್ಕೆ ಅಡ್ಡಿಪಡಿಸಿದ RSS-ಬಜರಂಗದಳದ ದುಷ್ಕರ್ಮಿಗಳು

- Advertisement -
- Advertisement -

ಶಿವಮೊಗ್ಗದ ‘ರಂಗ ಬೆಳಕು ತಂಡ’ ಸೊರಬ ತಾಲ್ಲೂಕಿನ ಆನವಟ್ಟಿಯಲ್ಲಿ ಭಾನುವಾರ ಹಮ್ಮಿಕೊಂಡಿದ್ದ ‘ಜತೆಗಿರುವನು ಚಂದಿರ’ ನಾಟಕವು ಮುಸ್ಲಿಂ ಪ್ರಧಾನ ಕಥೆ ಹೊಂದಿದೆ ಎಂದು ಅರೋಪಿಸಿ ಬಿಜೆಪಿಯ ಸಹ ಸಂಘಟನೆಯಾದ ಬಜರಂಗಳ ಮತ್ತು ಆರೆಸ್ಸೆಸ್ಸಿನ ದುಷ್ಕರ್ಮಿಗಳು ನಾಟಕಕ್ಕೆ ಅಡ್ಡಿ ಪಡಿಸಿದ್ದು, ಇದರಿಂದಾಗಿ ಸಂಘಟಕರು ನಾಟಕವನ್ನು ಅರ್ಧದಲ್ಲೇ ನಿಲ್ಲಿಸಿದ ಘಟನೆ ನಡೆದಿದೆ.

ನಾಟಕ ನಡೆಯುತ್ತಿದ್ದ ಸಭಾಂಗಣಕ್ಕೆ ನುಗ್ಗಿದ ದುಷ್ಕರ್ಮಿಗಳು, ವೀರಶೈವ ಕಲ್ಯಾಣ ಮಂದಿರದಲ್ಲಿ ಮುಸ್ಲಿಂ ಪ್ರಧಾನ ಕಥಾಹಂದರ ಇರುವ ನಾಟಕ ನಡೆಯಬಾರದು ಎಂದು ಆಗ್ರಹಿಸಿ, ಬಲವಂತವಾಗಿ ನಾಟಕ ಸ್ಥಗಿತಗೊಳಿಸಿ, ಜನರನ್ನು ಹೊರ ಕಳುಹಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ನಾಟಕವೂ ಜೋಸೆಫ್‌ ಸ್ಟೀನ್‌‌ ಅವರ ‘ಪಿಡ್ಲರ್‌ ಆನ್‌ ದಿ ರೂಫ್‌’‌ನ ಕನ್ನಡ ರೂಪಾಂತರವಾಗಿದ್ದು, ಅದನ್ನು ಹಿರಿಯ ಸಾಹಿತಿ ಜಯಂತ ಕಾಯ್ಕಿಣಿ ಅವರು ಬರೆದಿದ್ದರು. ಈ ನಾಟಕವನ್ನು ಶಿವಮೊಗ್ಗದ ರಂಗಬೆಳಕು ತಂಡ ರಂಗ ಪ್ರಯೋಗಕ್ಕೆ ತಂದಿತ್ತು.

ಇದನ್ನೂ ಓದಿ: ಕರ್ನಾಟಕ ವಿಧಾನಸಭಾ ಕ್ಷೇತ್ರ ಸಮೀಕ್ಷೆ; ಮಂಗಳೂರು: ಕೇಸರಿ-ಹಸಿರು ಚಕ್ರವ್ಯೂಹ ಬೇಧಿಸಿ ಬರುವರೆ ಸೆಕ್ಯುಲರ್ ಖಾದರ್?

ಮೊದಲೇ ನಿಗದಿಯಾಗಿರುವಂತೆ ರಾತ್ರಿ 7.45ಕ್ಕೆ ನಾಟಕ ಆರಂಭವಾಗಿತ್ತು. ಆದರೆ 9.30ರ ಹೊತ್ತಿಗೆ ಆರೆಸ್ಸೆಸ್‌‌ನ ಶ್ರೀಧರ ಆಚಾರ್‌, ಬಜರಂಗದಳದ ಮಂಜಣ್ಣ ಸಭಾಂಗಣದ ಒಳಗೆ ಬಂದಿದ್ದು, ಸಂಜಯ್‌ ಡೊಂಗ್ರೆ ಎಂಬುವವರು ಹೊರಗಡೆ ನಿಂತಿದ್ದರು ಎಂದು ಪ್ರಜಾವಾಣಿ ವರದಿ ಮಾಡಿದೆ.

ಘೋಷಣೆಗಳನ್ನು ಕೂಗಿದ ದುಷ್ಕರ್ಮಿಗಳು ನಾಟಕವನ್ನು ನಿಲ್ಲಿಸುವಂತೆ ಆಗ್ರಹಿಸಿ, ಪ್ರೇಕ್ಷಕರನ್ನು ಒತ್ತಾಯಪೂರ್ವಕವಾಗಿ ಹೊರಗೆ ಕಳುಹಿಸಿದ್ದಾರೆ. ಈ ಎಲ್ಲಾ ಗೊಂದಲದಿಂದಾಗಿ ಸಂಘಟಕರು ನಾಟಕವನ್ನು ಅರ್ಧದಲ್ಲಿಯೇ ನಿಲ್ಲಿಸಿದ್ದಾರೆ.

“ದೇಶದಲ್ಲಿ ಹಿಂದೂ–ಮುಸ್ಲಿಂ ಗಲಾಟೆ ನಡೆಯುತ್ತಿರುವಾಗ ಮುಸ್ಲಿಮರೇ ಪ್ರಧಾನವಾಗಿರುವ ಕಥಾವಸ್ತು ಇಟ್ಟುಕೊಂಡು ನಾಟಕ ಮಾಡಿರುವುದು ಬೇಸರದ ಸಂಗತಿ. ಹೀಗಾಗಿ ನಾಟಕವನ್ನು ಅರ್ಧಕ್ಕೆ ನಿಲ್ಲಿಸಬೇಕಾಯಿತು” ಎಂದು ಶ್ರೀಧರ ಆಚಾರ್ ಹಾಗೂ ಮಂಜಣ್ಣ ಸಮರ್ಥಿಸಿಕೊಂಡಿದ್ದಾರೆ ಎಂದು ಪ್ರಜಾವಾಣಿ ವರದಿ ಮಾಡಿದೆ.

ಇದನ್ನೂ ಓದಿ: ಕರ್ನಾಟಕ ವಿಧಾನಸಭಾ ಕ್ಷೇತ್ರ ಸಮೀಕ್ಷೆ; ಮಂಗಳೂರು ನಗರ ಉತ್ತರ: ಹಿಂದುತ್ವದ ಫ್ರಿಂಜ್ ಅಖಾಡದಲ್ಲಿ ಕಾಂಗ್ರೆಸ್ ಕ್ಯಾಂಡಿಡೇಟ್ ಯಾರು?

‘‘ನಾಟಕದಲ್ಲಿ ಆಕ್ಷೇಪಾರ್ಹ ಅಂತಹ ಸನ್ನಿವೇಶಗಳು ಇರಲಿಲ್ಲ. ನಾವು ಭಾರತೀಯರು ಒಂದೇ ಎಂದು ಸಾರುವ ಐಕ್ಯಭಾವ ನಾಟಕದಲ್ಲಿತ್ತು. ನಾಟಕವನ್ನು ನೋಡಿ ವಿಮರ್ಶಿಸಬೇಕಿತ್ತು. ಅರ್ಧಕ್ಕೆ ನಿಲ್ಲಿಸಿದ್ದು ಸರಿಯಲ್ಲ’’ ಕಾರ್ಯಕ್ರಮದ ಆಯೋಜಕರಲ್ಲಿ ಒಬ್ಬರಾದ ಕೊಟ್ರಪ್ಪ ಹಿರೇಮಾಗಡಿ ಹೇಳಿದ್ದಾರೆ ಎಂದು ಪ್ರಜಾವಾಣಿ ವರದಿ ಹೇಳಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...