Homeಕರ್ನಾಟಕಸರಳವಾಸ್ತು ಜ್ಯೋತಿಷಿ ಚಂದ್ರಶೇಖರ ಗುರೂಜಿ ಕೊಲೆ: ಆಪ್ತರೇ ಕಾರಣವೇ?

ಸರಳವಾಸ್ತು ಜ್ಯೋತಿಷಿ ಚಂದ್ರಶೇಖರ ಗುರೂಜಿ ಕೊಲೆ: ಆಪ್ತರೇ ಕಾರಣವೇ?

- Advertisement -
- Advertisement -

ಸರಳವಾಸ್ತು ಜ್ಯೋತಿಷಿ ಚಂದ್ರಶೇಖರ್‌ ಗುರೂಜಿ ಅವರನ್ನು ಹುಬ್ಬಳ್ಳಿಯ ಖಾಸಗಿ ಹೋಟೆಲ್‌ನಲ್ಲಿ ಬರ್ಬರವಾಗಿ ಹತ್ಯೆ ನಡೆದಿದೆ. ಭಕ್ತರ ಸೋಗಿನಲ್ಲಿ ಬಂದು, ಚಾಕು ಇರಿದು ಕೊಲೆ ಮಾಡಲಾಗಿದೆ.

ಸರಳ ವಾಸ್ತು ಹೆಸರಿನಲ್ಲಿಯೇ ಟಿವಿ ಕಾರ್ಯಕ್ರಮ ನಡೆಸುತ್ತಿದ್ದರು. ಹೋಟೆಲ್‌ನ ರಿಸೆಕ್ಷನ್‌‌ನಲ್ಲೆ ಚಾಕುವಿನಿಂದ ಇರಿದು ಹತ್ಯೆ ಮಾಡಲಾಗಿದೆ. ಅವರ ಮೃತ ದೇಹವನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ರವಾನಿಸಲಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಚಂದ್ರಶೇಖರ ಅವರನ್ನು ಅವರ ಆಪ್ತ ಕಾರ್ಯದರ್ಶಿ ಮಹಾಂತೇಶ ಶಿರೂರ ಮತ್ತು ಆತನ ಸಹಚರ ಸೇರಿ ಕೊಲೆ ಮಾಡಿದ್ದಾರೆ ಎಂದು ಹೇಳಲಾಗುತ್ತಿದೆ. ಕಲಘಟಗಿ ತಾಲೂಕು ಧುಮ್ಮವಾಡ ಗ್ರಾಮದ ಮಹಾಂತೇಶನು ಬೇನಾಮಿ ಆಸ್ತಿ ವಿಚಾರವಾಗಿ ಕೊಲೆ ಮಾಡಿದ್ದು, ಆತನ ಹೆಂಡತಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆಂದು ವರದಿಯಾಗಿದೆ.

ಚಂದ್ರಶೇಖರ್‌ ಜು. 2ರಂದು ಹೋಟೆಲ್‌‌ ನಲ್ಲಿ ರೂಮ್ ನಂ. 220 ಬುಕ್ ಮಾಡಿದ್ದರು. ಜು. 6ರಂದು ರೂಮ್ ಖಾಲಿ ಮಾಡುವವರಿದ್ದರು. ಈ ವೇಳೆ ಕೊಲೆ ಮಾಡಲಾಗಿದೆ.

ರಾಜಕಾರಣಿಗಳಿಂದ ಸಂತಾಪ

ಜ್ಯೋತಿಷಿ ಚಂದ್ರಶೇಖರ್‌ ಅವರ ಕೊಲೆಯನ್ನು ಖಂಡಿಸಿ ರಾಜಕಾರಣಿಗಳು ಸಂತಾಪ ಸೂಚಿಸಿದ್ದಾರೆ.

“ಡಾ. ಚಂದ್ರಶೇಖರ ಗುರೂಜಿ ಅವರನ್ನು ಬರ್ಬರವಾಗಿ ಹತ್ಯೆ ಮಾಡಿರುವುದು ಆಘಾತ ತರಿಸಿದೆ. ಈ ದುರ್ಘಟನೆಯನ್ನು ಖಂಡಿಸುತ್ತೇನೆ. ರಾಕ್ಷಸೀಯ ಕೃತ್ಯವೆಸಗಿದವರನ್ನು ಪತ್ತೆ ಹಚ್ಚಿ ಉಗ್ರ ಶಿಕ್ಷೆ ಕೊಡಿಸಬೇಕು. ಮೃತರ ಆತ್ಮಕ್ಕೆ ಸದ್ಗತಿ ದೊರಕಲಿ. ಕುಟುಂಬಸ್ಥರಿಗೆ ಅಭಿಮಾನಿಗಳಿಗೆ ದುಃಖ ಭರಿಸುವ ಶಕ್ತಿಯನ್ನು ಪರಮಾತ್ಮ ದಯಪಾಲಿಸಲಿ” ಎಂದು ಮಾಜಿ ಸಚಿವ ಎಂ.ಬಿ.ಪಾಟೀಲ ಸಂತಾಪ ಸೂಚಿಸಿದ್ದಾರೆ.

“ಇಂದು ಹುಬ್ಬಳ್ಳಿಯಲ್ಲಿ ಚಂದ್ರಶೇಖರ್ ಗುರೂಜಿ ಅವರನ್ನು ದುಷ್ಕರ್ಮಿಗಳು ಅಮಾನುಷವಾಗಿ ಹತ್ಯೆಗೈದಿರುವ ಸುದ್ದಿ ಕೇಳಿ ಆಘಾತವಾಯಿತು. ಇದನ್ನು ತೀವ್ರವಾಗಿ ಖಂಡಿಸುತ್ತೇನೆ. ಅವರ ಆತ್ಮಕ್ಕೆ ಸದ್ಗತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ. ಶೀಘ್ರ ತನಿಖೆಯಾಗಿ ಆರೋಪಿಗಳಿಗೆ ಕಾನೂನಿನಡಿ ಶಿಕ್ಷೆಯಾಗಲಿ” ಎಂದು ಸಚಿವ ಬಿ.ಸಿ.ಪಾಟೀಲ್ ಆಗ್ರಹಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪೆಟ್ರೋಲ್‌ನಲ್ಲಿ ಎಥನಾಲ್ ಪ್ರಮಾಣ ಬಹಿರಂಗಪಡಿಸುವಂತೆ ಕೋರಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಪೆಟ್ರೋಲ್‌ನಲ್ಲಿ ಬೆರೆಸಲಾಗುವ ಎಥನಾಲ್ ಪ್ರಮಾಣವನ್ನು ಕಡ್ಡಾಯವಾಗಿ ನಮೂದಿಸಬೇಕು ಮತ್ತು ವಾಹನಗಳಿಗೆ ಎಥನಾಲ್ ಮಿಶ್ರಿತ ಇಂಧನದ ಹೊಂದಾಣಿಕೆಯ ಬಗ್ಗೆ ಹೆಚ್ಚಿನ ಪಾರದರ್ಶಕತೆ ತರಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆ...

ದೆಹಲಿ| ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ಒತ್ತುವರಿ ತೆರವು ಕಾರ್ಯಾಚರಣೆ ಆರಂಭಿಸಿದ ಎಂಸಿಡಿ

ದೆಹಲಿ ಹೈಕೋರ್ಟ್ ನಿರ್ದೇಶನದಂತೆ, ಮೊಘಲರ ಕಾಲದ ಐತಿಹಾಸಿಕ ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ನಿರ್ಮಾಣಗಳನ್ನು ಸಮೀಕ್ಷೆ ಮಾಡಿ, ಒತ್ತುವರಿಯನ್ನು ತೆರವುಗೊಳಿಸುವ ಬೃಹತ್ ಕಾರ್ಯಾಚರಣೆಯನ್ನು ದೆಹಲಿ ಮಹಾನಗರ ಪಾಲಿಕೆ (ಎಂಸಿಡಿ) ಸೋಮವಾರ (ಆ.31) ಪ್ರಾರಂಭಿಸಿದೆ...

ವೆನೆಜುವೆಲಾ ಮತ್ತೆ ಎದ್ದು ನಿಲ್ಲಲಿದೆ: ಬಂಧನದಲ್ಲಿರುವ ವೆನೆಜುವೆಲಾ ಮಾಜಿ ಅಧ್ಯಕ್ಷ ಮಡುರೊ ಮೊದಲ ಫೋಟೋ ಹಂಚಿಕೆ

ಜನವರಿಯಲ್ಲಿ ಅಮೆರಿಕ ಪಡೆಗಳಿಂದ ಬಂಧನಕ್ಕೊಳಗಾಗಿದ್ದ ವೆನೆಜುವೆಲಾದ ಮಾಜಿ ಅಧ್ಯಕ್ಷ ನಿಕೋಲಸ್ ಮಡುರೊ, ಅಮೆರಿಕದ ಬಂಧನ ಕೇಂದ್ರದಿಂದ ತಮ್ಮ ಎರಡು ಛಾಯಾಚಿತ್ರಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ. ಬಂಧನದ ಬಳಿಕ ಮಡುರೊ ಅವರ ಫೋಟೋಗಳು ಹೊರಬಂದಿರುವುದು...

‘ಮಹಿಳೆಯರು ಆಭರಣದಂತೆ ಮನೆಯಲ್ಲೇ ಇರಬೇಕು’ ಮುಸ್ಲಿಂ ಧರ್ಮಗುರು ವಿವಾದಾತ್ಮಕ ಹೇಳಿಕೆ

ಮಹಿಳೆಯರು ಮನೆಯಲ್ಲೇ ಇರಬೇಕು ಮತ್ತು ಸಾರ್ವಜನಿಕ ಕ್ಷೇತ್ರಕ್ಕೆ ಪ್ರವೇಶಿಸಬಾರದು ಎಂದು ಕೇರಳದ ಪ್ರಭಾವಿ ಮುಸ್ಲಿಂ ಧರ್ಮಗುರು ಶೇಖ್ ಅಬೂಬಕರ್ ಅಹ್ಮದ್ ನೀಡಿದ ಹೇಳಿಕೆ ಸಾಮಾಜಿಕ ಮಾಧ್ಯಮಗಳಲ್ಲಿ ಹಾಗೂ ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆ...

ಹಲ್ದ್ವಾನಿ ‘ಶುದ್ಧೀಕರಣ’ ವಿವಾದ : ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್

ಉತ್ತರಾಖಂಡದ ಹಲ್ದ್ವಾನಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ರ್‍ಯಾಲಿ ನಡೆದ ಸ್ಥಳದಲ್ಲಿ ಬಿಜೆಪಿ ಬೆಂಬಲಿಗರು 'ಶುದ್ಧೀಕರಣ' ನಡೆಸಿದ ವಿವಾದ ಹೊಸ ರಾಜಕೀಯ ಮತ್ತು ಕಾನೂನು ತಿರುವು ಪಡೆದುಕೊಂಡಿದೆ. ಜಾತಿ ನಿಂದನೆಗೆ ಸಂಬಂಧಿಸಿದಂತೆ...

ಜೈಲಿನಲ್ಲಿದ್ದ KPSC ಅಧ್ಯಕ್ಷರ ಭೇಟಿಯಾಗಿದ್ದೇಕೆ HDK? ಪ್ರಿಯಾಂಕ್ ಖರ್ಗೆ ಪ್ರಶ್ನೆ

ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ನೇಮಕಾತಿ ವಿಚಾರವಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಕೇಳಿಬಂದಿರುವ ಗಂಭೀರ ಆರೋಪಗಳಿಗೆ ಅವರು ತಾರ್ಕಿಕ ಸ್ಪಷ್ಟನೆ ನೀಡುವ ಬದಲು, ಜಾರಿಕೊಳ್ಳುವ ರೀತಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದಾರೆ ಎಂದು...

ನೇಪಾಳ: ಶಿಕ್ಷಕನ ಸಮಯಪ್ರಜ್ಞೆಯಿಂದ ಉಳಿಯಿತು 1643 ಮಕ್ಕಳ ಪ್ರಾಣ

ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಜಲಪ್ರಳಯಕ್ಕೆ ಬಲಿಯಾದವರ ಸಂಖ್ಯೆ 700ರ ಗಡಿ ದಾಟಿದೆ. 2,000ಕ್ಕೂ ಹೆಚ್ಚು ಜನರು ಇಂದಿಗೂ ನಾಪತ್ತೆಯಾಗಿದ್ದು, ರಕ್ಷಣಾ ಪಡೆಗಳು ಅವಿಶ್ರಾಂತವಾಗಿ ಶೋಧ ಕಾರ್ಯ ನಡೆಸುತ್ತಿವೆ. ಪ್ರಕೃತಿ ತನ್ನ...

ಬಾಕಿ ಇರುವ ಕ್ರಿಮಿನಲ್ ಪ್ರಕರಣಗಳ ಹಿಂಪಡೆಯುವಿಕೆ ಪರಿಶೀಲನೆ: ಪ್ರಿಯಾಂಕ್ ಖರ್ಗೆ ನೇತೃತ್ವದಲ್ಲಿ ಸಂಪುಟ ಉಪಸಮಿತಿ ರಚನೆ

ರಾಜ್ಯದ ವಿವಿಧ ನ್ಯಾಯಾಲಯಗಳಲ್ಲಿ ವಿಚಾರಣೆಗೆ ಬಾಕಿ ಇರುವ ಕ್ರಿಮಿನಲ್ ಪ್ರಕರಣಗಳನ್ನು ಪರಿಶೀಲಿಸಿ, ಅವುಗಳನ್ನು ಹಿಂಪಡೆಯುವ ಕುರಿತು ಸರ್ಕಾರಕ್ಕೆ ಶಿಫಾರಸು ಮಾಡಲು ಕರ್ನಾಟಕ ಸರ್ಕಾರವು ಆರು ಮಂದಿ ಸಚಿವರನ್ನೊಳಗೊಂಡ ಸಂಪುಟ ಉಪಸಮಿತಿಯನ್ನು ರಚಿಸಿದೆ. ಸರ್ಕಾರದ ಅಧಿಕೃತ...

ಉದ್ಯಾನವನ ನುಂಗುವ ಕಾಯ್ದೆ ತಿದ್ದುಪಡಿ : ಸರ್ಕಾರದ ವಿರುದ್ಧ ಸಿಡಿದೆದ್ದ ಬೆಂಗಳೂರಿಗರು

ಕರ್ನಾಟಕ ವಿಧಾನಮಂಡಲವು ಸರ್ಕಾರಿ ಉದ್ಯಾನವನಗಳು ಮತ್ತು ತೋಟಗಳ ಕೆಲವು ಭಾಗಗಳನ್ನು ಸಾರ್ವಜನಿಕ ಮೂಲಸೌಕರ್ಯ ಯೋಜನೆಗಳಿಗಾಗಿ ಬಳಸಲು ಅನುಮತಿಸುವ ಕಾಯ್ದೆ ತಿದ್ದುಪಡಿಯನ್ನು ಅಂಗೀಕರಿಸಿದ ನಂತರ, ಬೆಂಗಳೂರಿನ ಉದ್ಯಾನವನಗಳು ಹೊಸ ರಾಜಕೀಯ ಮತ್ತು ಪರಿಸರ ವಿವಾದದ...

ನೇಪಾಳ–ಟಿಬೆಟ್ ಭೀಕರ ಪ್ರವಾಹ: ನೇಪಾಳದಲ್ಲಿ 734 ಸಾವು, 2,498 ಮಂದಿ ನಾಪತ್ತೆ; ಒಟ್ಟು ಸಾವಿನ ಸಂಖ್ಯೆ 750ಕ್ಕೆ ಏರಿಕೆ!

ನೇಪಾಳ–ಚೀನಾ ಗಡಿ ಪ್ರದೇಶದಲ್ಲಿ ಹಿಮನದಿ ಕುಸಿತದಿಂದ ಉಂಟಾದ ಭೀಕರ ಪ್ರವಾಹ ಮತ್ತು ಅವಶೇಷ ಪ್ರವಾಹದಲ್ಲಿ ನೇಪಾಳದಲ್ಲಿ ಇದುವರೆಗೆ 734 ಮಂದಿ ಮೃತಪಟ್ಟಿದ್ದು, 2,498 ಮಂದಿ ನಾಪತ್ತೆಯಾಗಿದ್ದಾರೆ. ಚೀನಾದ ಟಿಬೆಟ್ ಪ್ರದೇಶದಲ್ಲಿ 16 ಮಂದಿ...