Homeಕರ್ನಾಟಕಕರ್ನಾಟಕ: ಭಾರೀ ಮಳೆಗೆ ಮೂವರು ನಿಧನ; 3 ಜಿಲ್ಲೆಗಳಲ್ಲಿ ರೆಡ್‌ ಅಲರ್ಟ್

ಕರ್ನಾಟಕ: ಭಾರೀ ಮಳೆಗೆ ಮೂವರು ನಿಧನ; 3 ಜಿಲ್ಲೆಗಳಲ್ಲಿ ರೆಡ್‌ ಅಲರ್ಟ್

- Advertisement -
- Advertisement -

ಕರ್ನಾಟಕದ ಕೆಲವು ಭಾಗಗಳಲ್ಲಿ ಭಾರೀ ಮಳೆಯಾಗುತ್ತಿದ್ದು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆಯಿಂದ ಉಂಟಾದ ಭೂಕುಸಿತದಿಂದ ಮೂವರು ಸಾವನ್ನಪ್ಪಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಪಂಜಿಕಲ್ಲು ಸಮೀಪದ ಕಜೆಬೈಲು ಗ್ರಾಮದಲ್ಲಿ ಬುಧವಾರ ತಡರಾತ್ರಿ ಸುರಿದ ಭಾರೀ ಮಳೆಗೆ ಗ್ರಾಮದ ಮನೆಯೊಂದರ ಮೇಲೆ ಭಾರೀ ಪ್ರಮಾಣದ ಮಣ್ಣು ಕುಸಿದಿದೆ. ನಿನ್ನೆ ರಾತ್ರಿ ಭೂಕುಸಿತ ಸಂಭವಿಸಿದ ನಂತರ ಜನರು ಮನೆಯೊಳಗೆ ಸಿಲುಕಿಕೊಂಡಿದ್ದರು. ನಾಲ್ವರಲ್ಲಿ ಒಬ್ಬರು ಸ್ಥಳದಲ್ಲೇ ಮೃತಪಟ್ಟರೆ, ಮೂವರನ್ನು ರಕ್ಷಿಸಿ ತುರ್ತು ಸೇವೆಗಳ ಮೂಲಕ ಸ್ಥಳೀಯ ಆಸ್ಪತ್ರೆಗೆ ಬುಧವಾರ ರಾತ್ರಿ ಸಾಗಿಸಲಾಯಿತು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಇಬ್ಬರು ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ಮೃತ ಮೂವರೂ ಕೇರಳದ ಕಾರ್ಮಿಕರು” ಎಂದು ದಕ್ಷಿಣ ಕನ್ನಡ ಎಸ್‌ಪಿ ರಿಷಿಕೇಶ್ ಸೋನವಾನೆ ತಿಳಿಸಿದ್ದಾರೆ. ಮೃತರನ್ನು ಪಾಲಕ್ಕಾಡ್‌ನ ಬಿಜು (45), ಅಲಪ್ಪುಳದ ಸಂತೋಷ್ (46) ಮತ್ತು ಕೊಟ್ಟಾಯಂನ ಬಾಬು ( 46) ಎಂದು ಗುರುತಿಸಲಾಗಿದೆ.

ಕಳೆದ ಕೆಲವು ದಿನಗಳಿಂದ ಕರ್ನಾಟಕದ ಕೆಲವು ಭಾಗಗಳಲ್ಲಿ – ವಿಶೇಷವಾಗಿ ಕರಾವಳಿಯಲ್ಲಿ ಭಾರೀ ಮಳೆಯಾಗಿದೆ. ಭಾರತೀಯ ಹವಾಮಾನ ಇಲಾಖೆಯು ಜುಲೈ 7ರಂದು ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಿಸಿದೆ. ಶಿವಮೊಗ್ಗ, ಬೆಳಗಾವಿ, ಚಿಕ್ಕಮಗಳೂರು, ಕೊಡಗಿನಲ್ಲಿ ಆರೆಂಜ್ ಅಲರ್ಟ್ ಜಾರಿಗೊಳಿಸಲಾಗಿದೆ. ಹಾಸನ, ಹಾವೇರಿ, ಧಾರವಾಡ, ಗದಗ ಮತ್ತು ಕಲಬುರಗಿಯಲ್ಲಿ ಎಲ್ಲೋ ಅಲರ್ಟ್ ಘೋಷಿಸಲಾಗಿದೆ.

ಹವಾಮಾನ ಇಲಾಖೆಯು ಜುಲೈ 6 ರಂದು ಎಲ್ಲಾ ಜಿಲ್ಲೆಗಳಲ್ಲಿ, ಕೆಲವು ಸ್ಥಳಗಳಲ್ಲಿ ಅತಿ ಹೆಚ್ಚು ಮಳೆಯಾಗುವ ಮುನ್ಸೂಚನೆಯನ್ನು ನೀಡಿತ್ತು. ಕರಾವಳಿ ಕರ್ನಾಟಕದಲ್ಲಿ ಭಾರೀ ಮಳೆಯಾಗುತ್ತಿದೆ. ಇದೇ ಪರಿಸ್ಥಿತಿ ಜುಲೈ 10ರವರೆಗೆ ಮುಂದುವರಿಯಬಹುದು ಎಂದು ಹವಾಮಾನ ನಿಗಾ ಸಂಸ್ಥೆ ತಿಳಿಸಿದೆ. ಮುಂದಿನ ಕೆಲವು ದಿನಗಳಲ್ಲಿ ಧಾರವಾಡ, ಗದಗ, ಹಾವೇರಿ, ಕಲಬುರ್ಗಿ, ಬೆಳಗಾವಿ, ಚಿಕ್ಕಮಗಳೂರು, ಕೊಡಗು ಮತ್ತು ಶಿವಮೊಗ್ಗ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ.

ಇದನ್ನೂ ಓದಿರಿ: ದ್ವೇಷ ಭಾಷಣ: ಬಿಜೆಪಿ ಬೆಂಬಲಿತ ಸಂಘಟನೆ ಹೆಚ್‌ಜೆವಿ ರಾಜ್ಯ ಸಂಚಾಲಕ ಕೇಶವ ಮೂರ್ತಿ ವಿರುದ್ಧ ಎಫ್‌ಐಆರ್‌

ಪರಿಸ್ಥಿತಿಯ ಹಿನ್ನೆಲೆಯಲ್ಲಿ ಕೊಡಗು, ಕಾರವಾರ ಮತ್ತು ಉಡುಪಿಯಲ್ಲಿ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ ಮತ್ತು ರಾಜ್ಯ ವಿಪತ್ತು ನಿರ್ವಹಣಾ ಪಡೆ (ಎಸ್‌ಡಿಆರ್‌ಎಫ್) ತಂಡಗಳನ್ನು ನಿಯೋಜಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

“ಸಾಮಾನ್ಯ ಭೂಕುಸಿತ ಸಂಭವಿಸುವ ತಗ್ಗು ಪ್ರದೇಶಗಳಲ್ಲಿ ವಾಸಿಸುವ ಜನರನ್ನು ಸ್ಥಳಾಂತರಿಸಲು ಮತ್ತು ರಸ್ತೆಗಳನ್ನು ತೆರವುಗೊಳಿಸಲು ಸೂಚನೆಗಳನ್ನು ನೀಡಲಾಗಿದೆ. ನಮ್ಮ ತಂಡಗಳು ಎಲ್ಲಾ ಸಲಕರಣೆಗಳೊಂದಿಗೆ ಸನ್ನದ್ಧವಾಗಿವೆ” ಎಂದು ಸಿಎಂ ಹೇಳಿದ್ದಾರೆ.

ನೈಋತ್ಯ ಮಾನ್ಸೂನ್ ಪ್ರಾರಂಭವಾಗುವುದರೊಂದಿಗೆ, ರಾಜ್ಯದ ಹೆಚ್ಚಿನ ಸ್ಥಳಗಳಲ್ಲಿ ಮಳೆ ಬೀಳುತ್ತಿದೆ. ವಿಶೇಷವಾಗಿ ಉತ್ತರ ಒಳಭಾಗ, ಕರಾವಳಿ ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಮಳೆಯ ತೀವ್ರತೆ ಹೆಚ್ಚಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...