Homeಮುಖಪುಟಎಐಎಡಿಎಂಕೆ ನಾಯಕತ್ವ ಸಮರ: ಕಾರ್ಯಕರ್ತರ ನಡುವೆ ಮಾರಾಮಾರಿ

ಎಐಎಡಿಎಂಕೆ ನಾಯಕತ್ವ ಸಮರ: ಕಾರ್ಯಕರ್ತರ ನಡುವೆ ಮಾರಾಮಾರಿ

- Advertisement -
- Advertisement -

ಅಖಿಲ ಭಾರತ ಅಣ್ಣಾ ದ್ರಾವಿಡ ಮುನ್ನೇತ್ರ ಕಾಳಗಂ (ಎಐಎಡಿಎಂಕೆ) ಒಳಗಿನ ಒಳ ಜಗಳದ ನಡುವೆ, ಮಾಜಿ ಮುಖ್ಯಮಂತ್ರಿ ಎಡಪ್ಪಾಡಿ ಪಳನಿಸ್ವಾಮಿ (ಇಪಿಎಸ್‌) ಅವರನ್ನು ಪಕ್ಷದ ಹಂಗಾಮಿ ಪ್ರಧಾನ ಕಾರ್ಯದರ್ಶಿಯಾಗಿ ಆಯ್ಕೆ ಮಾಡಲಾಯಿತು.

ಆಯ್ಕೆ ಘೋಷಣೆಯಾದ ಕೂಡಲೇ ಕಾರ್ಯಕಾರಿ ಮಂಡಳಿ ಸದಸ್ಯರು ನಿರ್ಣಯವನ್ನು ಅಂಗೀಕರಿಸಿ ಓ ಪನ್ನರ್‌ಸೆಲ್ವಂ (ಒಪಿಎಸ್‌) ಮತ್ತು ಅವರ ಬೆಂಬಲಿಗರನ್ನು ಪಕ್ಷದಿಂದ ಉಚ್ಚಾಟಿಸಿದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಎಐಎಡಿಎಂಕೆಯ ಟ್ವಿಟ್ಟರ್‌ ಪ್ರೊಫೈಲ್‌‌ ಚಿತ್ರವಾಗಿ ಪಳನಿಸ್ವಾಮಿ ಫೋಟೋವನ್ನು ಹಾಕಿಕೊಳ್ಳಲಾಯಿತು. ಇದಕ್ಕೂ ಮುನ್ನ ಬೆಳಿಗ್ಗೆ ಎಐಎಡಿಎಂಕೆ ಪಕ್ಷದ ಸಾಮಾನ್ಯ ಸಭೆಯನ್ನು ಬೆಳಗ್ಗೆ 9 ಗಂಟೆಗೆ ನಡೆಸಲು ಮದ್ರಾಸ್ ಹೈಕೋರ್ಟ್ ಅನುಮತಿ ನೀಡಿತ್ತು. ಓ ಪನ್ನೀರ ಸೆಲ್ವಂ ಮನವಿಯನ್ನು ಕೋರ್ಟ್ ತಿರಸ್ಕರಿಸಿ‌ತು. ಬಹುಮತದವರ ಇಚ್ಛೆ ಮೇಲುಗೈ ಸಾಧಿಸಬೇಕು. ಹೀಗಾಗಿ ಮಧ್ಯಪ್ರವೇಶಿಸುವುದಿಲ್ಲ ಎಂದು ನ್ಯಾಯಾಲಯ ಸ್ಪಷ್ಟಪಡಿಸಿತು.

ನಾಯಕತ್ವ ತಿಕ್ಕಾಟದಿಂದಾಗಿ ಎಐಎಡಿಎಂಕೆಯ ಎರಡು ಬಣಗಳ ನಡುವಿನ ಕಾರ್ಯಕರ್ತರ ನಡುವೆ ಘರ್ಷಣೆ ನಡೆದಿದೆ. ಪಕ್ಷದ ಪ್ರಧಾನ ಕಚೇರಿಯ ಹೊರಗೆ ಅಹಿತಕರ ಘಟನೆಗಳು ನಡೆದಿವೆ ಎಂದು ಪೊಲೀಸರು ತಿಳಿಸಿದ್ದಾರೆ.

ಮಾಜಿ ಸಂಯೋಜಕ ಓ ಪನ್ನೀರಸೆಲ್ವಂ ಬೆಂಬಲಿಗರೊಂದಿಗೆ ಪಕ್ಷದ ಕಚೇರಿಗೆ ಆಗಮಿಸಿದ್ದರು. ಜನರಲ್ ಕೌನ್ಸಿಲ್ ಸಭೆ ನಡೆಯಲಿರುವ ನಗರದ ಮದುವೆ ಮಂಟಪಕ್ಕೆ ಇಪಿಎಸ್ ಅವರು ತೆರಳುತ್ತಿದ್ದರು.

ಇಬ್ಬರು ನಾಯಕರ ಬೆಂಬಲಿಗರೆಂದು ಶಂಕಿಸಲಾದ ಮತ್ತು ಎಐಎಡಿಎಂಕೆ ಧ್ವಜಗಳನ್ನು ಹೊತ್ತ ಎರಡು ಗುಂಪುಗಳು ಪರಸ್ಪರ ಘರ್ಷಣೆಯಲ್ಲಿ ತೊಡಗಿದ್ದವು. ಕೆಲವು ವ್ಯಕ್ತಿಗಳು ಪರಸ್ಪರ ಕಲ್ಲು ತೂರಾಟ ನಡೆಸುತ್ತಿರುವುದನ್ನು, ಹತ್ತಿರದಲ್ಲಿ ನಿಲ್ಲಿಸಿದ ಕೆಲವು ವಾಹನಗಳು ಹಾನಿಗೊಳಿಸಿರುವುದನ್ನು ಸೆರೆಯಾದ ದೃಶ್ಯಗಳಲ್ಲಿ ಕಾಣಬಹುದಾಗಿದೆ. ಕೆಲವರಿಗೆ ಗಾಯಗಳಾಗಿವೆ ಎಂದು ವರದಿಯಾಗಿದೆ.

ಇದೇ ವೇಳೆ ಕೆಲವರು ಪಕ್ಷದ ಕಚೇರಿಯ ಬಾಗಿಲು ಮುರಿದು ಬಲವಂತವಾಗಿ ಒಳಗೆ ನುಗ್ಗಿದ್ದು ಕಂಡುಬಂದಿದೆ. ಪಕ್ಷದ ಕಚೇರಿಗೆ ಭದ್ರತೆಯನ್ನು ಹೆಚ್ಚಿಸಲಾಗಿದೆ.

ಘರ್ಷಣೆಯ ಕುರಿತು ಮಾತನಾಡಿದ ಪಳನಿಸ್ವಾಮಿ, “ಸಮಾಜ ವಿರೋಧಿಗಳು ಪಕ್ಷದ ಮುಖ್ಯ ಕಚೇರಿಗೆ ಪ್ರವೇಶಿಸಬಹುದು ಎಂದು ನಮ್ಮ ಪಕ್ಷದ ಕಾರ್ಯಕರ್ತರು ರಾಯಪೆಟ್ಟಾ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು, ರಕ್ಷಣೆ ನೀಡುವಂತೆ ಕೋರಿದ್ದರು. ನಮ್ಮ ಮಾಹಿತಿ ನಿಜವೆಂದು ಸಾಬೀತಾಗಿದೆ” ಎಂದಿದ್ದಾರೆ.

ಪಕ್ಷದ ಕೇಂದ್ರ ಕಚೇರಿಗೆ ಸೂಕ್ತ ಭದ್ರತೆ ಒದಗಿಸಲು ರಾಯಪೆಟ್ಟಾ ಪೊಲೀಸರು ಮತ್ತು ಆಯುಕ್ತರ ಕಚೇರಿ ಕ್ರಮ ಕೈಗೊಂಡಿಲ್ಲ ಎಂದು ಅವರು ಆರೋಪಿಸಿದ್ದಾರೆ.

ಪುಷ್ಪ ನಮನ

ಎಐಎಡಿಎಂಕೆ ನಾಯಕ ಮತ್ತು ಮಾಜಿ ಸಿಎಂ ಎಡಪ್ಪಾಡಿ ಕೆ ಪಳನಿಸ್ವಾಮಿ ಅವರು ಎಂಜಿಆರ್ ಹಾಗೂ ಜಯಲಲಿತಾ ಅವರಿಗೆ ಪುಷ್ಪ ನಮನ ಸಲ್ಲಿಸಿದರು.

‘ವೈಯಕ್ತಿಕ ಹಿತಾಸಕ್ತಿಯಿಂದ ಜನರಲ್ ಕೌನ್ಸಿಲ್ ಸಭೆ ನಡೆಸಲಾಗಿದೆ’: ವಿಕೆ ಶಶಿಕಲಾ

‘ವೈಯಕ್ತಿಕ ಹಿತಾಸಕ್ತಿಗಾಗಿ ಸೋಮವಾರದ ಸಾಮಾನ್ಯ ಸಭೆ ನಡೆಸಲಾಗಿದೆ’ ಎಂದು ಹೇಳಿದ ಎಐಎಡಿಎಂಕೆ ಉಚ್ಚಾಟಿತ ನಾಯಕಿ ವಿಕೆ ಶಶಿಕಲಾ, ‘ಹೈಕೋರ್ಟ್‌ನಲ್ಲಿ ನಾನು ಹೂಡಿರುವ ಪ್ರಕರಣ ಬಾಕಿ ಇರುವಾಗ ಇಂತಹ ಕಾರ್ಯಕ್ರಮಗಳನ್ನು ನಡೆಸಬಾರದು. ಇಂದು ನಡೆದ ಸಾಮಾನ್ಯ ಮಂಡಳಿ ಸಭೆ ಖಂಡಿತವಾಗಿಯೂ ಅಸಿಂಧು” ಎಂದಿದ್ದಾರೆ.

“ತಮಿಳುನಾಡಿನ ಮಾಜಿ ಸಿಎಂ ಎಂಜಿಆರ್ ಅವರು ಡಿಎಂಕೆಯಲ್ಲಿನ ತಪ್ಪುಗಳನ್ನು ಖಂಡಿಸಿ ಪ್ರತ್ಯೇಕ ಪಕ್ಷವನ್ನು ಪ್ರಾರಂಭಿಸಿದರು. ಅವರು ಪ್ರಾರಂಭಿಸಿದ ಪಕ್ಷದಲ್ಲಿ ಯಾರಿಗೂ ಈ ಪರಿಸ್ಥಿತಿ ಬರಬಾರದು. ಪ್ರಧಾನ ಕಾರ್ಯದರ್ಶಿಯನ್ನು ತಳಮಟ್ಟದ ಕಾರ್ಯಕರ್ತರಿಂದ ಆಯ್ಕೆ ಮಾಡಬೇಕಾದ ವ್ಯವಸ್ಥೆಯನ್ನು ಎಂಜಿಆರ್‌‌ ಸೃಷ್ಟಿಸಿದ್ದರು” ಎಂದು ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....