Homeಮುಖಪುಟಗೋವಾ ಕಾಂಗ್ರೆಸ್ ಶಾಸಕರ ಪಕ್ಷಾಂತರಕ್ಕೆ ತಾತ್ಕಾಲಿಕ ತಡೆ: ಬಿಜೆಪಿ ಸೇರಲು ತಲಾ 20 ಕೋಟಿ ರೂ...

ಗೋವಾ ಕಾಂಗ್ರೆಸ್ ಶಾಸಕರ ಪಕ್ಷಾಂತರಕ್ಕೆ ತಾತ್ಕಾಲಿಕ ತಡೆ: ಬಿಜೆಪಿ ಸೇರಲು ತಲಾ 20 ಕೋಟಿ ರೂ ಆಮಿಷದ ಆರೋಪ

- Advertisement -
- Advertisement -

ಮಹಾರಾಷ್ಟ್ರದ ಶಿವಸೇನೆ ಅತೃಪ್ತ ಶಾಸಕರ ಮಾದರಿಯಲ್ಲಿ ಗೋವಾದಲ್ಲಿ ಕಾಂಗ್ರೆಸ್ ತೊರೆದು ಬಿಜೆಪಿ ಸೇರಲು ಮುಂದಾಗಿದ್ದ ಕಾಂಗ್ರೆಸ್ ಶಾಸಕರ ಪ್ರಯತ್ನಕ್ಕೆ ತಾತ್ಕಾಲಿಕ ತಡೆಬಿದ್ದಿದೆ. ಪಕ್ಷಾಂತರ ನಿಷೇದ ಕಾಯ್ದೆಯಿಂದ ತಪ್ಪಿಸಿಕೊಳ್ಳಲು ಒಟ್ಟು ಶಾಸಕರ ಮೂರನೇ ಎರಡರಷ್ಟು ಬಹುಮತ ಇಲ್ಲದ ಕಾರಣಕ್ಕೆ ಪಕ್ಷಾಂತರಕ್ಕೆ ತಡೆ ಬಿದ್ದಿದೆ. ಆದರೆ ಈಗಲೂ ಶಾಸಕರು ಬಿಜೆಪಿ ಸಂಪರ್ಕದಲ್ಲಿದ್ದಾರೆ ಎಂದು ಮೂಲಗಳನ್ನು ಉಲ್ಲೇಖಿಸಿ ಎನ್‌ಡಿಟಿವಿ ವರದಿ ಮಾಡಿದೆ.

ಗೋವಾದಲ್ಲಿ 11 ಕಾಂಗ್ರೆಸ್ ಶಾಸಕರಿದ್ದು, ಕಾನೂನು ಬದ್ದ ಸಾಮೂಹಿಕ ಪಕ್ಷಾಂತಕ್ಕೆ ಕನಿಷ್ಠ 8 ಶಾಸಕರ ಅಗತ್ಯವಿದೆ. ಅದನ್ನು ಸಾಧಿಸುವುದಕ್ಕಾಗಿ ಮಾಜಿ ಮುಖ್ಯಮಂತ್ರಿ, ಹಾಲಿ ಶಾಸಕ ದಿಗಂಬರ್ ಕಾಮತ್ ಬಿಜೆಪಿ ಸಂಪರ್ಕದಲ್ಲಿದ್ದಾರೆ ಎನ್ನಲಾಗಿದೆ.

ಸಂಭಾವ್ಯ ಬಂಡಾಯವನ್ನು ತಡೆಯಲು ಕಾಂಗ್ರೆಸ್ ಪಕ್ಷವು ನಿನ್ನೆ ಸಂಜೆ ಶಾಸಕರ ಸಭೆ ಕರೆದಿತ್ತು. ಪಕ್ಷದ ಮುಖಂಡ ಮುಕುಲ್ ವಾಸ್ನಿಕ್ ಮತ್ತು ಉಸ್ತುವಾರಿ ದಿನೇಶ್ ಗುಂಡೂರಾವ್ ರವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ದಿಗಂಬರ್ ಕಾಮತ್, ಮೈಕಲ್ ಲೋಬೊ ಹೊರತುಪಡಿಸಿ ಉಳಿದ 09 ಸದಸ್ಯರು ಭಾಗವಹಿಸಿದ್ದಾರೆ. ಆ ಚಿತ್ರವನ್ನು ಪೋಸ್ಟ್ ಮಾಡಿರುವ ಕಾಂಗ್ರೆಸ್ ಇದು ಬಿಜೆಪಿಯ ವಿಫಲ ಯತ್ನ ಎಂದು ಕರೆದಿದೆ.

ಬಿಜೆಪಿಯು ತನ್ನ ಆರು ಶಾಸಕರನ್ನು ಗೋವಾದಿಂದ ಹೊರಗೆ ಸ್ಥಳಾಂತರಿಸಲು ಚಾರ್ಟರ್ಡ್ ಫ್ಲೈಟ್ ಅನ್ನು ಸಿದ್ಧಪಡಿಸಿದೆ. ಬಿಜೆಪಿಯ ಉನ್ನತ ನಾಯಕರೊಬ್ಬರು ಶಾಸಕರೊಂದಿಗೆ ವೈಯಕ್ತಿಕವಾಗಿ ಸಂಪರ್ಕದಲ್ಲಿದ್ದು, ಅವರು ಪಕ್ಷಕ್ಕೆ ಸೇರಿದರೆ ತಲಾ ₹ 15 ಕೋಟಿಯಿಂದ ₹ 20 ಕೋಟಿ ನೀಡುವುದಾಗಿ ಆಮಿಷ ತೋರಿಸಿದ್ದಾರೆ. ಶಾಸಕರ ಸಂಖ್ಯೆ ಕಡಿಮೆಯಾದಾಗ ಅವರ ಯೋಜನೆ ಸ್ಥಗಿತಗೊಂಡಿದೆ ಎಂದು ಕಾಂಗ್ರೆಸ್ ಮೂಲಗಳು ಹೇಳಿವೆ.

ಭಾನುವಾರ ಕಾಂಗ್ರೆಸ್ ಪಕ್ಷದ ಐವರು ಶಾಸಕರು ನಾಪತ್ತೆಯಾಗಿದ್ದರು. ಅವರು ದಿಂಗಂಬರ್ ಕಾಮತ್ ನೇತೃತ್ವದಲ್ಲಿ ಸಿಎಂ ಪ್ರಮೋದ್ ಸಾವಂತ್‌ರನ್ನು ಭೇಟಿಯಾಗಿದ್ದಾರೆ ಎಂದು ಕಾಂಗ್ರೆಸ್ ಹೇಳಿದೆ. ಇದು ಪಕ್ಷದ ವರಿಷ್ಟರನ್ನು ಚಿಂತೆಗೆ ದೂಡಿತ್ತು. ಸೋಮವಾರ ಅವರೆಲ್ಲರೂ ಮತ್ತೆ ಪ್ರತ್ಯಕ್ಷರಾಗಿದ್ದಾರೆ ಮತ್ತು ಕಾಂಗ್ರೆಸ್ ಸಭೆಯಲ್ಲಿ ಭಾಗವಹಿಸಿದ್ದಾರೆ. ಆದರೂ ಕಾಂಗ್ರೆಸ್ ಪಕ್ಷದ ಶಾಸಕರು ಪಕ್ಷಾಂತರವಾಗದಂತೆ ತಡೆಯಲು ಕಾವಲು ಕಾಯುತ್ತಿದೆ.

ಕಾಣೆಯಾಗಿದ್ದ ವಿರೋಧ ಪಕ್ಷದ ನಾಯಕ ಮೈಕಲ್ ಲೊಬೋರನ್ನು ಆ ಸ್ಥಾನದಿಂದ ತೆಗೆದುಹಾಕುವಂತೆ ಕಾಂಗ್ರೆಸ್ ಸ್ಪೀಕರ್‌ ಅವರಲ್ಲಿ ಮನವಿ ಮಾಡಿದೆ. ಅವರು ದಿಗಂಬರ್ ಕಾಮತ್ ಜೊತೆಗೆ ನಿರಂತರ ಸಂಪರ್ಕದಲ್ಲಿದ್ದು, ಪಕ್ಷಾಂತರಕ್ಕೆ ಯೋಜನೆ ರೂಪಿಸಿದವರಲ್ಲಿ ಒಬ್ಬರಾಗಿದ್ದಾರೆ ಎನ್ನಲಾಗಿದೆ.

ಗೋವಾ ಸಿಎಂ ಪ್ರಮೋದ್ ಸಾವಂತ್ ಮಾಧ್ಯಮಗಳೊಂದಿಗೆ ಮಾತನಾಡಿ ನನಗೂ ಕಾಂಗ್ರೆಸ್ ಬಿಕ್ಕಟ್ಟಿಗೂ ಸಂಬಂಧವಿಲ್ಲ ಎಂದಿದ್ದಾರೆ.

ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ದಿಗಂಬರ್ ಕಾಮತ್ ನೇತೃತ್ವದಲ್ಲಿ ಚುನಾವಣೆ ಎದುರಿಸಿತ್ತು. ಆದರೆ 11 ಸ್ಥಾನಗಳಿಗೆ ತೃಪ್ತಿಪಟ್ಟುಕೊಂಡಿತ್ತು. ಆನಂತರ ದಿಗಂಬರ್ ಕಾಮತ್ ಬದಲಿಗೆ ಮೈಕಲ್ ಲೋಬೊರನ್ನು ವಿರೋಧ ಪಕ್ಷದ ಮುಖಂಡರನ್ನಾಗಿ ನೇಮಿಸಿತ್ತು. ಇದರಿಂದ ದಿಗಂಬರ್ ಕಾಮತ್ ಬಂಡಾಯವೆದ್ದಿದ್ದಾರೆ ಎನ್ನಲಾಗಿತ್ತು. ಆಶ್ಚರ್ಯಕರ ರೀತಿಯಲ್ಲಿ ವಿಪಕ್ಷ ನಾಯಕ ಮೈಕಲ್ ಲೋಬೊ ಕೂಡ ಅವರ ಜೊತೆಗೂಡಿದ್ದಾರೆ.

ಇದನ್ನೂ ಓದಿ: ಉದ್ಧವ್ ಠಾಕ್ರೆಗೆ ಮತ್ತೆ ಸಂಕಷ್ಟ: ದ್ರೌಪದಿ ಮುರ್ಮು ಬೆಂಬಲಿಸುವಂತೆ 16 ಸಂಸದರ ಒತ್ತಡ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...