Homeರಾಷ್ಟ್ರೀಯಜಹಾಂಗೀರ್‌‌‌ಪುರಿ ಗಲಭೆ: 45 ಜನರ ವಿರುದ್ಧ ಚಾರ್ಜ್ ಶೀಟ್ ಸಲ್ಲಿಸಿದ ದೆಹಲಿ ಪೊಲೀಸ್‌‌

ಜಹಾಂಗೀರ್‌‌‌ಪುರಿ ಗಲಭೆ: 45 ಜನರ ವಿರುದ್ಧ ಚಾರ್ಜ್ ಶೀಟ್ ಸಲ್ಲಿಸಿದ ದೆಹಲಿ ಪೊಲೀಸ್‌‌

2020 ರ ಸಿಎಎ ಮತ್ತು ಎನ್‌ಆರ್‌ಸಿ ವಿರುದ್ಧ ಶಾಹೀನ್ ಬಾಗ್‌ನಲ್ಲಿ ನಡೆದ ಪ್ರತಿಭಟನೆ ಮತ್ತು ಫೆಬ್ರವರಿ 2020 ರ ಈಶಾನ್ಯ ದೆಹಲಿ ಗಲಭೆಗಳ ಮುಂದುವರಿಕೆ ಇದು ಎಂದು ಪೊಲೀಸರು ಆರೋಪಿಸಿದ್ದಾರೆ

- Advertisement -
- Advertisement -

ಜಹಾಂಗೀರ್‌‌‌ಪುರಿ ಹಿಂಸಾಚಾರದ ಕುರಿತು ದೆಹಲಿ ಪೊಲೀಸರು ಗುರುವಾರ ದೆಹಲಿ ನ್ಯಾಯಾಲಯದಲ್ಲಿ ಚಾರ್ಜ್ ಶೀಟ್ ಸಲ್ಲಿಸಿದ್ದಾರೆ. ಕ್ರಿಮಿನಲ್ ಪಿತೂರಿ ಮತ್ತು ಶಸ್ತ್ರಾಸ್ತ್ರ ಕಾಯ್ದೆಯಂತಹ ವಿವಿಧ ಆರೋಪಗಳ ಅಡಿಯಲ್ಲಿ 45 ಜನರ ಮೇಲೆ ಆರೋಪ ಹೊರಿಸಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ.

37 ಆರೋಪಿಗಳ ಪೈಕಿ 20 ವ್ಯಕ್ತಿಗಳನ್ನು ಸಿಸಿಟಿವಿ ಅಥವಾ ವೈರಲ್ ದೃಶ್ಯಗಳಲ್ಲಿ ನೋಡಿ ಬಂಧಿಸಲಾಗಿದೆ ಎಂದು ಪ್ರಾಸಿಕ್ಯೂಷನ್ ಹೇಳಿಕೊಂಡಿದೆ. ಆರೋಪಿಗಳನ್ನು ಗುರುತಿಸಲು ತಂತ್ರಜ್ಞಾನವನ್ನು ಬಳಸಲಾಗಿದೆ ಎಂದು ಅದು ಹೇಳಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಇದುವರೆಗೆ ನಡೆಸಲಾದ ತನಿಖೆಯಿಂದ ಮತ್ತು ದಾಖಲೆಯಲ್ಲಿರುವ ವಸ್ತುಗಳಿಂದ, ಪ್ರಸ್ತುತ ಘಟನೆಯು 2019 ಮತ್ತು 2020 ರ ಸಿಎಎ ಮತ್ತು ಎನ್‌ಆರ್‌ಸಿ ವಿರುದ್ಧ ಶಾಹೀನ್ ಬಾಗ್‌ನಲ್ಲಿ ನಡೆದ ಪ್ರತಿಭಟನೆ ಮತ್ತು ಫೆಬ್ರವರಿ 2020 ರ ಈಶಾನ್ಯ ದೆಹಲಿ ಗಲಭೆಗಳ ಮುಂದುವರಿಕೆಯಾಗಿದೆ ಎಂದು ದೃಢಪಡಿಸಲಾಗಿದೆ. ಇದು ಏಪ್ರಿಲ್ 10, 2022 ರಂದು ದೇಶದ ವಿವಿಧ ಭಾಗಗಳಲ್ಲಿ ರಾಮ ನವಮಿ ಘಟನೆಗಳ ನಂತರ ಉಲ್ಬಣಗೊಂಡಿದೆ” ಎಂದು ತನಿಖಾ ಸಂಸ್ಥೆ ಹೇಳಿಕೊಂಡಿದೆ.

ಇದನ್ನೂ ಓದಿ: ಜಹಾಂಗೀರ್‌ಪುರಿ ಹಿಂಸಾಚಾರದಲ್ಲಿ ಬಿಜೆಪಿ ಬೆಂಬಲಿತ ಸಂಘಟನೆ ವಿಎಚ್‌ಪಿ, ಬಜರಂಗದಳ ಭಾಗಿ ಎಂದ ದೆಹಲಿ ಪೊಲೀಸರು; ಕೆಲವೇ ಗಂಟೆಗಳಲ್ಲಿ ಹೇಳಿಕೆ ವಾಪಾಸ್

ವಿದ್ಯುನ್ಮಾನ ಮಾಧ್ಯಮದಿಂದ 34 ವೈರಲ್ ವೀಡಿಯೊಗಳು ಮತ್ತು 56 ವೀಡಿಯೊಗಳನ್ನು ಸಂಗ್ರಹಿಸಿ ಪರಿಶೀಲಿಸಲಾಗಿದೆ ಎಂದು ಅದು ಹೇಳಿದೆ. ಇದರಲ್ಲಿ ಕುಸಲ್ ಸಿನಿಮಾ ರಸ್ತೆಯ ಸುತ್ತ ಅಳವಡಿಸಲಾಗಿರುವ 28 ಪಿಡಬ್ಲ್ಯುಡಿ ಕ್ಯಾಮೆರಾಗಳು ಮತ್ತು ಜಹಾಂಗೀರ್‌ಪುರಿಯ ಸಿ-ಬ್ಲಾಕ್ ಸುತ್ತಲೂ ಅಳವಡಿಸಲಾಗಿರುವ 30 ಪಿಡಬ್ಲ್ಯುಡಿ ಕ್ಯಾಮೆರಾಗಳ ಸಿಸಿಟಿವಿ ದೃಶ್ಯಾವಳಿಗಳು ಸೇರಿವೆ ಎಂದು ತನಿಖಾ ಸಂಸ್ಥೆ ತಿಳಿಸಿದೆ.

ಸಂಸ್ಥೆಯು 85 ಪೊಲೀಸರು ಮತ್ತು 47 ಸಾರ್ವಜನಿಕ ವ್ಯಕ್ತಿಗಳು/ವೈದ್ಯರು ಮತ್ತು ಇತರರು ಸೇರಿದಂತೆ 132 ಸಾಕ್ಷಿಗಳನ್ನು ವಿಚಾರಣೆ ನಡೆಸಿತು. ಇಬ್ಬರು ಬಾಲಾಪರಾಧಿಗಳ ವಿರುದ್ಧ ಈಗಾಗಲೇ ಪ್ರಿನ್ಸಿಪಾಲ್ ಜುವೆನೈಲ್ ಜಸ್ಟಿಸ್ ಬೋರ್ಡ್ ಮುಂದೆ ಎಫ್ಐಆರ್ ದಾಖಲಿಸಲಾಗಿದೆ.

2063 ಪುಟದ ಚಾರ್ಜ್‌ಶೀಟ್‌‌ ಬಂಧಿತ 37 ಮತ್ತು ತಲೆಮರೆಸಿಕೊಂಡಿರುವ ಎಂಟು ಮಂದಿ ಆರೋಪಿಗಳನ್ನು ಹೆಸರಿಸಿದೆ. ಅವರ ವಿರುದ್ಧ ಕ್ರಿಮಿನಲ್ ಪಿತೂರಿ, 147 (ಗಲಭೆ), ಸಾರ್ವಜನಿಕ ನೌಕರನನ್ನು ಕೊಲೆ ಮಾಡುವ ಪ್ರಯತ್ನ ಮತ್ತು ಹಲ್ಲೆ ಮಾಡುವುದು ಮತ್ತು ಅವರ ಸಾರ್ವಜನಿಕ ಕಾರ್ಯಗಳನ್ನು ನಿರ್ವಹಿಸುವಲ್ಲಿ ತಡೆಯುವುದು ಮತ್ತು ಶಸ್ತ್ರಾಸ್ತ್ರ ಕಾಯಿದೆ ಅಡಿಯಲ್ಲಿ ಆರೋಪಗಳನ್ನು ಮಾಡಲಾಗಿದೆ.

ಇದನ್ನೂ ಓದಿ: ದೆಹಲಿ ಗಲಭೆ: ಅನುಮತಿಯಿಲ್ಲದ ಮೆರವಣಿಗೆ ತಡೆಯದೆ ಇದ್ದಿದ್ದು ‘ಸಂಪೂರ್ಣ ವಿಫಲತೆ’; ದೆಹಲಿ ಪೊಲೀಸರಿಗೆ ಕೋರ್ಟ್ ಛೀಮಾರಿ

ಒಟ್ಟು ಒಂಬತ್ತು ಬಂದೂಕುಗಳು, ಐದು ಜೀವಂತ ಕಾಟ್ರಿಡ್ಜ್‌ಗಳು, ಎರಡು ಖಾಲಿ ಕಾಟ್ರಿಡ್ಜ್‌ಗಳು, ಒಂಬತ್ತು ಕತ್ತಿಗಳು ಮತ್ತು ಘಟನೆಯ ಸಮಯದಲ್ಲಿ ಧರಿಸಿದ್ದ 11 ಆರೋಪಿಗಳ ಬಟ್ಟೆಗಳು ಮತ್ತು ವೀಡಿಯೊಗಳಲ್ಲಿ ಕಂಡುಬರುವ ಬಟ್ಟೆಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಚಾರ್ಜ್‌ಶೀಟ್ ಹೇಳಿದೆ. ಆರೋಪಿಗಳಿಂದ 21 ಮೊಬೈಲ್ ಫೋನ್ ಗಳನ್ನು ತನಿಖಾ ಸಂಸ್ಥೆ ವಶಪಡಿಸಿಕೊಂಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...