Homeರಾಷ್ಟ್ರೀಯಆರೆಸ್ಸೆಸ್‌‌ನಂತೆ ಪಿಎಫ್‌‌ಐ ಕೂಡಾ ದೈಹಿಕ ಶಿಕ್ಷಣದ ನೆಪದಲ್ಲಿ ಯುವಕರ ಬ್ರೈನ್ ವಾಶ್‌ ಮಾಡುತ್ತಿದೆ: ಬಿಹಾರದ ಹಿರಿಯ...

ಆರೆಸ್ಸೆಸ್‌‌ನಂತೆ ಪಿಎಫ್‌‌ಐ ಕೂಡಾ ದೈಹಿಕ ಶಿಕ್ಷಣದ ನೆಪದಲ್ಲಿ ಯುವಕರ ಬ್ರೈನ್ ವಾಶ್‌ ಮಾಡುತ್ತಿದೆ: ಬಿಹಾರದ ಹಿರಿಯ ಪೊಲೀಸ್ ವರಿಷ್ಠಾಧಿಕಾರಿ

- Advertisement -
- Advertisement -

ಬಿಹಾರ ಪೊಲೀಸ್‌ನ ಹಿರಿಯ ಅಧಿಕಾರಿಯೊಬ್ಬರು ತಾವು ಪತ್ತೆ ಹಚ್ಚಿದ ಭಯೋತ್ಪಾದನಾ ಘಟಕದ ಕುರಿತು ಹೇಳಿಕೆ ನೀಡಿ ವಿವಾದಕ್ಕೆ ನಾಂದಿ ಹಾಡಿದ್ದಾರೆ. ಅವರು ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ(ಪಿಎಫ್‌ಐ)ವನ್ನು ರಾಷ್ಟ್ರೀಯ ಸ್ವಯಂಸೇವಕ ಸಂಘ(ಆರ್‌ಎಸ್‌ಎಸ್‌)ದೊಂದಿಗೆ ಹೋಲಿಸಿ ವಿವಾದಕ್ಕೆ ಗುರಿಯಾಗಿದ್ದಾರೆ. ರಾಜ್ಯ ಪೊಲೀಸರು ಬುಧವಾರ ಪಾಟ್ನಾದಲ್ಲಿ ಶಂಕಿತ ಭಯೋತ್ಪಾದನಾ ಘಟಕವನ್ನು ಭೇದಿಸಿ, ಪಿಎಫ್‌ಐ ಜೊತೆ ಸಂಪರ್ಕ ಹೊಂದಿರುವ ಇಬ್ಬರನ್ನು ಬಂಧಿಸಿದ್ದಾರೆ.

“ಆರ್‌ಎಸ್‌ಎಸ್‌‌ನ ಶಾಖೆಗಳು ಮತ್ತು ತರಬೇತಿ ಇರುವಂತೆಯೇ, ದೈಹಿಕ ಶಿಕ್ಷಣದ ನೆಪದಲ್ಲಿ ಪಿಎಫ್‌ಐ ಯುವಕರನ್ನು ತಮ್ಮ ಕೇಂದ್ರಕ್ಕೆ ಕರೆದು ಅವರ ಸಿದ್ಧಾಂತವನ್ನು ಪ್ರಚಾರ ಮಾಡುತ್ತಿದೆ ಮತ್ತು ಅವರ ಬ್ರೈನ್‌ವಾಶ್ ಮಾಡಲು ಪ್ರಯತ್ನಿಸುತ್ತಿದೆ” ಎಂದು ಪಾಟ್ನಾದ ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ಮಾನವಜೀತ್ ಸಿಂಗ್ ಧಿಲ್ಲೋನ್ ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಅವರ ಹೇಳಿಕೆಯನ್ನು ವಿರೋಧಿಸಿ ಬಿಜೆಪಿ ನಾಯಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಮುಂದಿನ 48 ಗಂಟೆಗಳ ಒಳಗೆ ಧಿಲ್ಲೋನ್ ಅವರಿಂದ ವಿವರಣೆಯನ್ನು ಪಡೆಯುವಂತೆ ಉನ್ನತ ಪೊಲೀಸ್ ಅಧಿಕಾರಿಗಳನ್ನು ಕೇಳಿದ್ದಾರೆ ಎಂದು ಮೂಲಗಳನ್ನು ಉಲ್ಲೇಖಿಸಿ ಎನ್‌ಡಿಟಿವಿ ವರದಿ ಮಾಡಿದೆ.

“ಪಾಟ್ನಾ ಎಸ್‌ಎಸ್‌ಪಿ ಇಂತಹ ಹೇಳಿಕೆಯನ್ನು ತಕ್ಷಣವೇ ಹಿಂಪಡೆದು, ಅದಕ್ಕಾಗಿ ಕ್ಷಮೆಯಾಚಿಸಬೇಕು” ಎಂದು ರಾಜ್ಯಸಭಾ ಸದಸ್ಯ, ಬಿಹಾರದ ಮಾಜಿ ಉಪಮುಖ್ಯಮಂತ್ರಿ ಸುಶೀಲ್ ಮೋದಿ ಟ್ವೀಟ್ ಮಾಡಿದ್ದಾರೆ.

“ಇದು ಎಸ್‌ಎಸ್‌ಪಿ ತನ್ನ ಮಾನಸಿಕ ಸಮತೋಲನವನ್ನು ಕಳೆದುಕೊಂಡಿದೆ ಎಂದು ತೋರಿಸುತ್ತದೆ. ಆರ್‌ಎಸ್‌ಎಸ್‌ನಂತಹ ರಾಷ್ಟ್ರೀಯತಾವಾದಿ ಸಂಘಟನೆಯನ್ನು ನೀವು ಪಿಎಫ್‌ಐ ಜೊತೆ ಹೇಗೆ ಹೋಲಿಸುತ್ತೀರಿ?” ಎಂದು ಬಿಜೆಪಿ ಶಾಸಕ ಹರಿಭೂಷಣ್ ಠಾಕೂರ್ ಬಚೌಲ್ ಹೇಳಿದ್ದಾರೆ.

ಇದನ್ನೂ ಓದಿ: ಪಿಎಫ್‌ಐ ರ‍್ಯಾಲಿಯಲ್ಲಿ ‘ದ್ವೇಷ ಘೋಷಣೆ’ ಕೂಗಿದ ಅಪ್ರಾಪ್ತ ಬಾಲಕನ ತಂದೆ ವಶಕ್ಕೆ

ಆದರೆ ಜೀತನ್ ರಾಮ್ ಮಾಂಝಿ ಅವರ ಹಿಂದೂಸ್ತಾನ್ ಅವಾಮ್ ಮೋರ್ಚಾ ಪಕ್ಷವೂ ಪೊಲೀಸ್‌ ಅಧಿಕಾರಿಯನ್ನು ಬೆಂಬಲಿಸಿದ್ದು, ಅವರ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದಾರೆ.

ಹಿಂದೂಸ್ತಾನಿ ಅವಾಮ್ ಮೋರ್ಚಾದ ಮುಖ್ಯ ವಕ್ತಾರ ಡ್ಯಾನಿಶ್ ರಿಜ್ವಾನ್, ಅಧಿಕಾರಿಯ ವಿರುದ್ಧ ಆಕ್ರೋಶ ವ್ಯಕ್ತಪಡಿಸುವುದು ಸರಿಯಲ್ಲ ಎಂದು ಹೇಳಿದ್ದಾರೆ. “ಅವರು ಹೇಳಿದ್ದು, ಆರ್‌ಎಸ್‌ಎಸ್‌ನ ಶಾಖೆಗಳ ರೀತಿಯಲ್ಲಿ ಪಿಎಫ್‌ಐ ಕೂಡಾ ಮಾಡುತ್ತಿದೆ ಎಂದಾಗಿದೆ. ಅವರು ಆರ್‌ಎಸ್‌ಎಸ್ ಅನ್ನು ಭಯೋತ್ಪಾದಕ ಸಂಘಟನೆ ಎಂದು ಕರೆದಿಲ್ಲ” ಎಂದು ಹೇಳಿದ್ದಾರೆ.

ಪಿಎಫ್‌ಐ ಜೊತೆಗೆ ಸಂಪರ್ಕ ಹೊಂದಿರುವ ‘ಸಂಭಾವ್ಯ ಭಯೋತ್ಪಾದನಾ ಘಟಕ’ದ ಪತ್ತೆಯ ಕುರಿತು ಮಾಧ್ಯಮದೊಂದಿಗಿನ ಸಂವಾದದ ಸಂದರ್ಭದಲ್ಲಿ ಪೊಲೀಸ್ ಅಧಿಕಾರಿಯು ಈ ಹೇಳಿಕೆಯನ್ನು ನೀಡಿದ್ದಾರೆ. ಮಂಗಳವಾರದಂದು ಪ್ರಧಾನಿ ನರೇಂದ್ರ ಮೋದಿ ಪ್ರವಾಸದಲ್ಲಿದ್ದ ಪಾಟ್ನಾದಿಂದ ಇಬ್ಬರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿ: ಗುಜರಾತ್‌: NEP ಮೂಲಕ 1ನೇ ತರಗತಿಯಿಂದಲೇ ಸಂಸ್ಕೃತ ಕಡ್ಡಾಯಕ್ಕೆ ಪ್ರಯತ್ನಿಸುತ್ತಿರುವ ಆರೆಸ್ಸೆಸ್‌‌

ಗುಂಪಿನ ಚಟುವಟಿಕೆಗಳು ಪ್ರಧಾನಿಯವರ ಭೇಟಿಯನ್ನು ಯಾವುದೇ ರೀತಿಯಲ್ಲಿ ಗುರಿಯಾಗಿಸಿಕೊಂಡಿವೆಯೇ ಎಂಬ ಪ್ರಶ್ನೆಗಳಿಗೆ ಉತ್ತರಿಸಿದ ಅವರು, “ಈ ಬಂಧನಗಳಿಗೂ ಪ್ರಧಾನಿ ಭೇಟಿಗೂ ಯಾವುದೇ ಸಂಬಂಧವಿಲ್ಲ. ಭೇಟಿಯ ಸಮಯದಲ್ಲಿ ಹೆಚ್ಚಿನ ಜಾಗರೂಕತೆಗಾಗಿ, ಸಾಮಾಜಿಕ ಮಾಧ್ಯಮಗಳ ಹೆಚ್ಚಿನ ನಿಗಾ ಸೇರಿದಂತೆ, ನಾವು PFI ಚಟುವಟಿಕೆಗಳನ್ನು ನೋಡಿದೆವು. ಅವರು ಭಾರತದ ಏಕತೆ ಮತ್ತು ಸಾರ್ವಭೌಮತೆಗೆ ವಿರುದ್ಧವಾದ ಮಾಹಿತಿಯನ್ನು ಹರಡುತ್ತಿದ್ದಾರೆ ಎಂದು ನಾವು ಕಂಡುಕೊಂಡಿದ್ದೇವೆ” ಎಂದು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನರಿಗೆ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿ

ಹಿರಿಯ ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನ ಹಿರಿಯ ಸಾಧಕರು 2026ನೇ ಸಾಲಿನ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿಗೆ ಭಾಜನರಾಗಿದ್ದಾರೆ. ರಾಯಚೂರು ಜಿಲ್ಲೆಯ ಹಿರಿಯ ದಲಿತ ಹೋರಾಟಗಾರ...

ಗಾಜಾ; ಗೊಂಬೆಯೊಂದಿಗೆ ‘ಅಂತ್ಯಕ್ರಿಯೆ’ ಆಟ ಆಡುವ ಎಳೆಯ ಮಕ್ಕಳ ವಿಡಿಯೋ ವೈರಲ್; ಸುತ್ತಲಿನ ಘಟನೆಯನ್ನು ಪುನರಾವರ್ತಿಸುವ ಮಕ್ಕಳು

ಅಕ್ಟೋಬರ್ 2023 ರಲ್ಲಿ ಇಸ್ರೇಲಿ ಮಿಲಿಟರಿ ದಾಳಿಯನ್ನು ಪ್ರಾರಂಭಿಸಿದ ನಂತರ ಗಾಜಾದಿಂದ ದುಃಖಕರ ದೃಶ್ಯಗಳು ಹೊರಹೊಮ್ಮುತ್ತಿವೆ. ಇತ್ತೀಚಿನ ಒಂದು ಘಟನೆಯಲ್ಲಿ, ಚಿಕ್ಕ ಮಕ್ಕಳು ಅಂತ್ಯಕ್ರಿಯೆಗಾಗಿ ಗೊಂಬೆಯನ್ನು ಹೊತ್ತುಕೊಂಡು ಹೋಗುವುದನ್ನು ಕಾಣಬಹುದು - ಇದು ಅವರು...

ದೆಹಲಿ| ಆಳವಾದ ಚರಂಡಿಗೆ ಬಿದ್ದು ನೈರ್ಮಲ್ಯ ಕಾರ್ಮಿಕ ಸಾವು; ನ್ಯಾಯಕ್ಕೆ ಆಗ್ರಹಿಸಿದ ಮೃತನ ಕುಟುಂಬ

ಮಾರ್ಚ್ 30 ರಂದು ಪೂರ್ವ ದೆಹಲಿಯ ದಿಲ್ಶಾದ್ ಗಾರ್ಡನ್ ಪ್ರದೇಶದಲ್ಲಿ ಸುರಕ್ಷತಾ ಸಾಧನಗಳಿಲ್ಲದೆ ಆಳವಾದ ಚರಂಡಿ ಸ್ವಚ್ಛಗೊಳಿಸುವ ಸಮಯದಲ್ಲಿ ಯುವ ನೈರ್ಮಲ್ಯ ಕಾರ್ಮಿಕ ರಾಹುಲ್ ಎಂಬುವವರು ಸಾವನ್ನಪ್ಪಿದ್ದಾರೆ. ಮಧ್ಯಾಹ್ನ 2:00 ರ ಸುಮಾರಿಗೆ...

ನಿವೃತ್ತ ನ್ಯಾಯಮೂರ್ತಿ ಸಂತೋಷ್‌ ಹೆಗ್ಡೆ ಆಸ್ಪತ್ರೆಗೆ ದಾಖಲು; ಕಾರ್ಯಕ್ರಮದಲ್ಲಿ ಏಕಾಏಕಿ ಕುಸಿದು ಬಿದ್ದು ಅಸ್ವಸ್ಥ

ಬೆಂಗಳೂರು: ಕರ್ನಾಟಕದ ನಿವೃತ್ತ ಲೋಕಾಯುಕ್ತ ಎನ್‌.ಸಂತೋಷ್‌ ಹೆಗ್ಡೆ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಭಾಷಣದ ವೇಳೆ ಕುಸಿದು ಬಿದ್ದು ಅಸ್ವಸ್ಥರಾಗಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಏಪ್ರಿಲ್ 4ರ, ಶುಕ್ರವಾರ ಬೆಂಗಳೂರಿನ ಕೊಂಡಜಿ ಬಸಪ್ಪ ಸಭಾಂಗಣದಲ್ಲಿ...

ಎಸ್‌ಎಸ್‌ಎಲ್‌ಸಿಯಲ್ಲಿ ತೃತೀಯ ಭಾಷೆಗೆ ಗ್ರೇಡ್: ನಿರ್ಧಾರ ಪರಿಶೀಲಿಸುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿದ ರಾಜ್ಯಪಾಲ ಗೆಹ್ಲೋಟ್ 

ಬೆಂಗಳೂರು: 10ನೇ ತರಗತಿ ಪರೀಕ್ಷೆಯಲ್ಲಿ ತೃತೀಯ ಭಾಷೆಯ ವಿಷಯಕ್ಕೆ ಅಂಕಗಳನ್ನು ಬದಲಿಸುವ ನಿರ್ಧಾರವನ್ನು ಮರುಪರಿಶೀಲಿಸುವಂತೆ ಕರ್ನಾಟಕ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ರಾಜ್ಯ ಸರ್ಕಾರವನ್ನು ಕೇಳಿದ್ದಾರೆ. ಸರ್ಕಾರವು ಈ ನಿರ್ಧಾರವನ್ನು "ಸಮಗ್ರವಾಗಿ ಪರಿಶೀಲಿಸಬೇಕು" ಎಂದು ಲೋಕಭವನವು...

ತಿರುಚ್ಚಿ ಪೂರ್ವದ ಪೆರಂಬೂರಿನಲ್ಲಿ ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಅಫಿಡವಿಟ್‌ಗಳಲ್ಲಿ ಹಲವು ವ್ಯತ್ಯಾಸಗಳಿರುವುದಾಗಿ ವರದಿ  

ಚೆನ್ನೈ: ನಟ ಮತ್ತು ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಎರಡು ಪ್ರತ್ಯೇಕ ಚುನಾವಣಾ ಅಫಿಡವಿಟ್‌ಗಳಲ್ಲಿ ವ್ಯತ್ಯಾಸಗಳು ಕಾಣಿಸಿಕೊಂಡಿದ್ದು, ವಿಧಾನಸಭಾ ಚುನಾವಣೆಗೆ ಮುನ್ನ ಕಾನೂನು ಮತ್ತು ರಾಜಕೀಯ ಪರಿಶೀಲನೆಗೆ ಅವಕಾಶ ನೀಡುವ ಸಾಧ್ಯತೆಯಿದೆ. ಪೆರಂಬೂರು ಮತ್ತು...

ಉತ್ತಮ್ ನಗರದಲ್ಲಿ ಶಾಂತಿ ಕಾಪಾಡುವಲ್ಲಿ ದೆಹಲಿ ಪೊಲೀಸರ ಪ್ರಯತ್ನಗಳನ್ನು ಶ್ಲಾಘಿಸಿದ ಎಪಿಸಿಆರ್

ಈದ್ ಅಲ್-ಫಿತರ್, ರಾಮ ನವಮಿ ಮತ್ತು ಹನುಮಾನ್ ಜಯಂತಿ ಸೇರಿದಂತೆ ಧಾರ್ಮಿಕ ಹಬ್ಬಗಳ ಆಚರಣೆಯ ಸಂದರ್ಭದಲ್ಲಿ ರಾಷ್ಟ್ರ ರಾಜಧಾನಿಯ ಉತ್ತಮ್ ನಗರ ಪ್ರದೇಶದಲ್ಲಿ ಶಾಂತಿ ಮತ್ತು ಭದ್ರತೆಯನ್ನು ಕಾಪಾಡಿದ್ದಕ್ಕಾಗಿ ನಾಗರಿಕ ಹಕ್ಕುಗಳ ರಕ್ಷಣಾ...

ದಲಿತ ಸಮುದಾಯಕ್ಕೆ ಕ್ಷಮೆಯಾಚಿಸಿದ ನೇಪಾಳದ ಹೊಸ ಸರ್ಕಾರ

ಪ್ರಧಾನಿ ಬಾಲೇಂದ್ರ ಶಾ ಅವರ ನೇಪಾಳದ ಹೊಸ ಸರ್ಕಾರದ 100 ಅಂಶಗಳ ಸುಧಾರಣಾ ಕಾರ್ಯಸೂಚಿಯಡಿಯಲ್ಲಿ, ಮುಂದಿನ 15 ದಿನಗಳ ಒಳಗೆ ದಲಿತರು ಮತ್ತು ಐತಿಹಾಸಿಕವಾಗಿ ಹೊರಗಿಡಲ್ಪಟ್ಟ ಇತರೆ ಸಮುದಾಯಗಳಿಗೆ 'ಔಪಚಾರಿಕ ಕ್ಷಮೆಯಾಚನೆ' ಕೇಳುವುದಾಗಿ...

‘ಯಾರು ಹೆದರುತ್ತಾನೋ ಅವನು ಸತ್ತಂತೆ’: ರಾಘವ್ ಛಡ್ಡಾಗೆ ತೀವ್ರವಾಗಿ ಪ್ರತಿಕ್ರಿಯೆ ನೀಡಿದ ಎಎಪಿ ನಾಯಕ ಸೌರಭ್ ಭಾರದ್ವಾಜ್ 

ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಮತ್ತು ದೆಹಲಿ ಘಟಕದ ಮುಖ್ಯಸ್ಥ ಸೌರಭ್ ಭಾರದ್ವಾಜ್ ಅವರು ವೀಡಿಯೊ ಸಂದೇಶದಲ್ಲಿ ಆಪ್ ಸಂಸದ ರಾಘವ್ ಛಡ್ಡಾ ಅವರು ಸಂಸತ್ತಿನಲ್ಲಿ "ಸಾಫ್ಟ್ ಪಿಆರ್" ನಲ್ಲಿ ತೊಡಗಿದ್ದಾರೆ...

ಚಂಡೀಗಢ ಬಿಜೆಪಿ ಕಚೇರಿ ಸ್ಫೋಟ: ಪಂಜಾಬ್ ಕೌಂಟರ್ ಇಂಟೆಲಿಜೆನ್ಸ್ ಪಡೆಯಿಂದ ಇಬ್ಬರು ಶಂಕಿತರ ಮನೆಗಳ ಮೇಲೆ ದಾಳಿ

ಚಂಡೀಗಢದಲ್ಲಿರುವ ಪಂಜಾಬ್ ಬಿಜೆಪಿ ಕಚೇರಿಯ ಹೊರಗೆ ಸ್ಫೋಟ ನಡೆಸಿದ ಆರೋಪದ ಮೇಲೆ ಇಬ್ಬರು ಶಂಕಿತರ ಮನೆಗಳ ಮೇಲೆ  ಪಂಜಾಬ್ ಪೊಲೀಸರ ಗುಪ್ತಚರ ನಿಗ್ರಹ ದಳವು ಇಂದು ಮುಂಜಾನೆ ದಾಳಿ ನಡೆಸಿದೆ.  ರೋಪರ್ ಜಿಲ್ಲೆಯ ಮೊರಿಂಡಾ ಪ್ರದೇಶದ...