Homeದಲಿತ್ ಫೈಲ್ಸ್‘ನೀನು ಕೂಲಿ ಕೆಲಸ ಮಾಡಬೇಕು, ಶಾಲೆಯಲ್ಲಿ ಅಡುಗೆಯನ್ನಲ್ಲ’: 6 ತಿಂಗಳಾದರೂ ದಲಿತ ಮಹಿಳೆಗೆ ನಿಲ್ಲದ ಕಿರುಕುಳ

‘ನೀನು ಕೂಲಿ ಕೆಲಸ ಮಾಡಬೇಕು, ಶಾಲೆಯಲ್ಲಿ ಅಡುಗೆಯನ್ನಲ್ಲ’: 6 ತಿಂಗಳಾದರೂ ದಲಿತ ಮಹಿಳೆಗೆ ನಿಲ್ಲದ ಕಿರುಕುಳ

ದಲಿತ ಮಹಿಳೆ ಸುನೀತಾ ಅವರು ದಾಖಲಿಸಿರುವ ಪ್ರಕರಣವನ್ನು ವಾಪಸ್‌ ಪಡೆಯುವಂತೆ ಒತ್ತಡ ಹೇರಲು ಸಂಬಳ ನೀಡದೆ ತೊಂದರೆ ನೀಡಲಾಗುತ್ತಿದೆ.

- Advertisement -
- Advertisement -

ದಲಿತ ಭೋಜನ್ಮಾತಾ (ಬಿಸಿಯೂಟದ ಸಿಬ್ಬಂದಿ) ಸುನಿತಾ ದೇವಿ ಅವರು ಬೇಯಿಸಿದ ಮಧ್ಯಾಹ್ನದ ಊಟವನ್ನು ಕೆಲವು ಮೇಲ್ಜಾತಿಯ ವಿದ್ಯಾರ್ಥಿಗಳು ನಿರಾಕರಿಸಿದ ಪ್ರಕರಣ ನಡೆದು ಆರು ತಿಂಗಳಾಯಿತು. ಆದರೆ ಇಷ್ಟು ದಿನದ ನಂತರವೂ ಚಂಪಾವತ್‌ನ ಸುಖಿದಂಗ್ ಸರ್ಕಾರಿ ಅಂತರ ಕಾಲೇಜಿನಲ್ಲಿ ಯಾವುದೇ ಬದಲಾವಣೆಯಾಗಿಲ್ಲ. ಸವರ್ಣೀಯ ಜಾತಿಯ ಮಕ್ಕಳು ಅಸ್ಪೃಶ್ಯತೆ ಆಚರಿಸುವುದನ್ನು ಮುಂದುರಿಸಿದ್ದಾರೆ.

“ವಿದ್ಯಾರ್ಥಿಗಳು ನಾನು ಬೇಯಿಸಿದ ಊಟವನ್ನು ತಿನ್ನಲು ನಿರಾಕರಿಸುತ್ತಿದ್ದಾರೆ ಮಾತ್ರವಲ್ಲ, ಮಧ್ಯಾಹ್ನದ ಬಿಸಿಯೂಟ ಕಾರ್ಯಕ್ರಮದಡಿಯಲ್ಲಿ ನೀಡಲಾಗುವ ಹಾಲನ್ನೂ ಬೇಡ ಎನ್ನುತ್ತಿದ್ದಾರೆ” ಎಂದು ಸುನೀತಾ ಶನಿವಾರ ಆರೋಪಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಚಂಪಾವತ್‌ನ ಡಿಎಂ ನರೇಂದರ್ ಸಿಂಗ್ ಭಂಡಾರಿ ಅವರು ಇತ್ತೀಚೆಗೆ ಶಾಲೆಗೆ ಭೇಟಿ ನೀಡಿದ ಸಂದರ್ಭದಲ್ಲಿ ವಿದ್ಯಾರ್ಥಿಗಳು ಮತ್ತು ಪೋಷಕರಿಗೆ ಸೂಚನೆಯನ್ನೂ ನೀಡಿ, “ಜಾತಿ ತಾರತಮ್ಯದಿಂದ ಹೊರಬರಬೇಕು” ಎಂದು ತಿಳಿಸಿದ್ದಾರೆ.

ಕೆಲವು ಮೇಲ್ವರ್ಗದ ವಿದ್ಯಾರ್ಥಿಗಳ ಪೋಷಕರು, “ದಲಿತ ಮಹಿಳೆ ಮಾಡಿದ ಊಟವನ್ನು ಬಲವಂತವಾಗಿ ನಮ್ಮ ಮಕ್ಕಳಿಗೆ ನೀಡಬಾರದು” ಎಂದು ಆಗ್ರಹಿಸಿದ್ದಾರೆ.

ಶಾಲೆಯಲ್ಲಿ 57 ವಿದ್ಯಾರ್ಥಿಗಳಿದ್ದಾರೆ. ಸಾಮಾನ್ಯ ವರ್ಗದ 37 ವಿದ್ಯಾರ್ಥಿಗಳು, ಎಸ್‌ಸಿ ಸಮುದಾಯದಿಂದ 20 ವಿದ್ಯಾರ್ಥಿಗಳು ಇಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ.

“ನಾನು ಅಡುಗೆ ಕೆಲಸ ಬಿಟ್ಟು ಕೂಲಿ ಕೆಲಸ ಮಾಡಬೇಕೆಂದು ಮಕ್ಕಳು ಬಯಸುತ್ತಾರೆ” ಎನ್ನುತ್ತಾರೆ ಸುನಿತಾ. ಇಲ್ಲಿ ಇಬ್ಬರು ಅಡುಗೆಯವರು ಇದ್ದು, ಸಾಮಾನ್ಯ ವರ್ಗದ ವಿಮಲಾ ಉಪ್ರೇತಿ 2016ರಲ್ಲಿ ನೇಮಕವಾಗಿದ್ದಾರೆ. ದಲಿತರಾದ ಸುನಿತಾ ದೇವಿ ಅವರು ಈ ವರ್ಷದ ಜನವರಿಯಲ್ಲಿ ಮರುಸೇರ್ಪಡೆಯಾಗಿದ್ದಾರೆ.

‘ಟೈಮ್ಸ್ ಆಫ್‌ ಇಂಡಿಯಾ’ ಜೊತೆ ಮಾತನಾಡಿರುವ ಸುನೀತಾ, “ನಾನು ತಯಾರಿಸಿದ ಊಟವನ್ನು ಡಿಎಂ ಕೋರಿಕೆಯ ನಂತರವೂ ಅವರು ತಿನ್ನಲು ಸಿದ್ಧರಿಲ್ಲ. ಆದರೆ, ಇತರ ಭೋಜನ್ಮಾತಾ ವಿಷಯದಲ್ಲಿ ಹೀಗಾಗಿಲ್ಲ. ನನ್ನ ಬಗೆಗೆ ಇರುವ ತಾರತಮ್ಯದ ಮನೋಭಾವವನ್ನು ಅಧಿಕಾರಿಗಳಿಂದ ಬದಲಾಯಿಸಲು ಸಾಧ್ಯವಾಗದಿದ್ದಾಗ, ಇನ್ಯಾರೂ ಸರಿಪಡಿಸಬಲ್ಲರು?” ಎಂದು ಪ್ರಶ್ನಿಸಿದ್ದಾರೆ.

“ಶಾಲೆಯ ಪೋಷಕರು-ಶಿಕ್ಷಕರ ಸಂಘದ ಅಧ್ಯಕ್ಷರು ನನ್ನ ವೇತನವನ್ನು (ಮೇ ತಿಂಗಳಿಗೆ) ಒಂದು ತಿಂಗಳಿನಿಂದ ತಡೆಹಿಡಿದಿದ್ದಾರೆ. ನಾನು ಶಾಲೆಯ ಕೆಲಸವನ್ನು ಬಿಟ್ಟು ಕೂಲಿ ಕೆಲಸ ಮಾಡಬೇಕೆಂದು ಗ್ರಾಮದ ಕೆಲವು ಸವರ್ಣೀಯರು ಬಯಸುತ್ತಿದ್ದಾರೆ” ಎಂದು ಸುನೀತಾ ಆರೋಪಿಸಿದ್ದಾರೆ.

“ಅಧ್ಯಕ್ಷರು ನನ್ನ ವೇತನದ ಚೆಕ್‌ಗೆ ಸಹಿ ಹಾಕಲು ನಿರಾಕರಿಸುತ್ತಿದ್ದಾರೆ. ಈ ವರ್ಷದ ಆರಂಭದಲ್ಲಿ ನಾನು ನೀಡಿದ ದೂರಿನ ಆಧಾರದಲ್ಲಿ ಅಧ್ಯಕ್ಷರು ಮತ್ತು ಇತರರ ವಿರುದ್ಧ ದಾಖಲಾಗಿರುವ ಪ್ರಕರಣವನ್ನು ಹಿಂಪಡೆಯುವಂತೆ ಈ ಮೂಲಕ ಒತ್ತಡ ಹಾಕಲಾಗುತ್ತಿದೆ. ಆದರೆ ನಾನು ಪ್ರಕರಣವನ್ನು ಹಿಂಪಡೆಯುವುದಿಲ್ಲ, ಅದು ನನ್ನ ಘನತೆಯ ವಿಷಯ” ಎಂದಿದ್ದಾರೆ ಸುನೀತಾ.

ಹಲವು ಬಾರಿ ಪ್ರಯತ್ನಿಸಿದರೂ ಶಾಲೆಯ ಪ್ರಾಂಶುಪಾಲರನ್ನು ಸಂಪರ್ಕಿಸಲು ಸಾಧ್ಯವಾಗಲಿಲ್ಲ ಎಂದು ಟೈಮ್ಸ್‌ ಆಫ್‌ ಇಂಡಿಯಾ ವರದಿ ಮಾಡಿದೆ. ಅಲ್ಲದೆ ಈಗ ಆಗುತ್ತಿರುವ ಬೆಳವಣಿಗೆಗಳು ನಿಜವೆಂದು ಶಾಲೆಯ ನಿರ್ವಹಣಾ ಅಧಿಕಾರಿಯೊಬ್ಬರು ಖಚಿತಪಡಿಸಿದ್ದಾರೆ ಎಂದು ಪತ್ರಿಕೆ ಸ್ಪಷ್ಟಪಡಿಸಿದೆ.

ಇದನ್ನೂ ಓದಿರಿ: ಉತ್ತರಾಖಾಂಡ್‌: ದಲಿತ ಮಹಿಳೆ ಬೇಯಿಸಿದ ಆಹಾರ ಸೇವಿಸಲು ಮತ್ತೆ ನಿರಾಕರಿಸಿದ ಸವರ್ಣೀಯ ವಿದ್ಯಾರ್ಥಿಗಳು

ಇದೇ ವೇಳೆ ಮಾತನಾಡಿರುವ ಜಿಲ್ಲಾ ಮುಖ್ಯ ಶಿಕ್ಷಣಾಧಿಕಾರಿ ಜಿತೇಂದ್ರ ಸಕ್ಸೇನಾ, “ಸಂಬಳದ ವಿಚಾರ ನನ್ನ ಅರಿವಿಗೆ ಬಂದಿರಲಿಲ್ಲ. ಸಂಬಳ ಸಿಗುವಂತೆ ಕ್ರಮಕೈಗೊಳ್ಳುತ್ತೇವೆ. ಸುನೀತಾ ಅವರು ತಯಾರಿಸಿದ ಊಟವನ್ನು ತಿನ್ನಲು ವಿದ್ಯಾರ್ಥಿಗಳು ನಿರಾಕರಿಸುತ್ತಲೇ ಇದ್ದಾರೆ. ಈ ತಾರತಮ್ಯವನ್ನು ಬದಲಾಯಿಸಲು ಎಲ್ಲಾ ಪ್ರಯತ್ನಗಳನ್ನು ಮಾಡಲಾಗಿದೆ. ಆದರೆ ಯಾವುದೇ ಪ್ರಯೋಜನವಾಗಲಿಲ್ಲ. ಸುನೀತಾ ದೇವಿ ಅವರನ್ನು ಸರಿಯಾದ ಕಾರ್ಯವಿಧಾನದ ಪ್ರಕಾರ ನೇಮಕ ಮಾಡಿರುವುದರಿಂದ ಅವರನ್ನು ಕೆಲಸದಿಂದ ತೆಗೆಯಲು ಸಾಧ್ಯವಿಲ್ಲ” ಎಂದಿದ್ದಾರೆ.

ಕಳೆದ ವರ್ಷ ಈ ಘಟನೆಯ ಬಗ್ಗೆ ವರದಿ ಮಾಡಿದಾಗ ಸುನೀತಾ ಅವರಿಗೆ ಆಗಿರುವ ತಾರತಮ್ಯ ಬೆಳಕಿಗೆ ಬಂದಿತು. ದಲಿತ ಮಹಿಳೆಯ ನೇಮಕಾತಿಯನ್ನು ಜಿಲ್ಲೆಯ ಮುಖ್ಯ ಶಿಕ್ಷಣಾಧಿಕಾರಿ ರದ್ದು ಮಾಡಿದ್ದರು. ಕೆಲವು ದಿನಗಳ ನಂತರ, ಚಂಪಾವತ್ ಜಿಲ್ಲಾಡಳಿತವು ಸುನೀತಾ ಅವರನ್ನು ಮರು ನೇಮಕ ಮಾಡಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...