ಭಾರತದ ಉಪ ರಾಷ್ಟ್ರಪತಿ ಹುದ್ದೆಗೆ ಆಡಳಿತಾರೂಢ ಎನ್‌ಡಿಎ ಅಭ್ಯರ್ಥಿಯಾಗಿ ಪಶ್ಚಿಮ ಬಂಗಾಳದ ರಾಜ್ಯಪಾಲ ಜಗದೀಪ್ ಧಂಖರ್ ಅವರು ಆಯ್ಕೆಯಾಗಿದ್ದಾಗಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಶನಿವಾರ ಘೋಷಿಸಿದ್ದಾರೆ.
“ಎಲ್ಲಾ ಪರಿಗಣನೆಗಳು ಮತ್ತು ಸಮಾಲೋಚನೆಗಳ ನಂತರ, ರೈತರ ಮಗ ಜಗದೀಪ್ ಧಂಖರ್ ಅವರನ್ನು ಉಪರಾಷ್ಟ್ರಪತಿ ಹುದ್ದೆಗೆ ಬಿಜೆಪಿ ಮತ್ತು ಎನ್‌ಡಿಎ ಅಭ್ಯರ್ಥಿಯಾಗಿ ಘೋಷಿಸಲು ನಾವು ನಿರ್ಧರಿಸಿದ್ದೇವೆ” ಎಂದು ಅವರು ಪತ್ರಿಕಾಗೋಷ್ಠಿಯಲ್ಲಿ ಹೇಳಿದ್ದಾರೆ. ಅವರು ಧಂಖರ್ ಅವರನ್ನು ‘ಜನರ ರಾಜ್ಯಪಾಲ’ ಎಂದು ಬಣ್ಣಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others
ಜಾಟ್ ಸಮುದಾಯಕ್ಕೆ ಸೇರಿರುವ ಧಂಖರ್ ಅವರ ಆಯ್ಕೆಯೂ ಅವರ ಸಮುದಾಯಕ್ಕೆ ದೊಡ್ಡ ಸಂದೇಶವನ್ನು ನೀಡಲಿದೆ ಎಂದು ಮೂಲಗಳನ್ನು ಉಲ್ಲೇಖಿಸಿ ಎನ್‌ಡಿಟಿವಿ ವರದಿ ಮಾಡಿದೆ. ಕೃಷಿ ಕಾನೂನುಗಳ ವಿರುದ್ಧ ರೈತರು ಬೃಹತ್ ಪ್ರತಿಭಟನೆಗಳನ್ನು ನಡೆಸಿದ ನಂತರವೂ ಪಶ್ಚಿಮ ಉತ್ತರ ಪ್ರದೇಶದ ಜಾಟ್ ಸಮುದಾಯವು ಬಿಜೆಪಿಯನ್ನು ಬೆಂಬಲಿಸಿತ್ತು.
ಇದನ್ನೂ ಓದಿ: ರಾಜಕೀಯ ವಿರೋಧ ಹಗೆತನವಾಗಿ ಪರಿವರ್ತನೆ; ಆರೋಗ್ಯಕರ ಪ್ರಜಾಪ್ರಭುತ್ವದ ಲಕ್ಷಣವಲ್ಲ: ಮುಖ್ಯ ನ್ಯಾಯಮೂರ್ತಿ
ಮುಂದಿನ ವರ್ಷ ನಡೆಯಲಿರುವ ರಾಜಸ್ಥಾನ ಚುನಾವಣೆಯಲ್ಲಿ ಜಾಟ್ ಮತದಾರರು ದೊಡ್ಡ ಪಾತ್ರ ವಹಿಸಲಿದ್ದಾರೆ.
ಧಂಖರ್ ಕಳೆದ ಎರಡು ದಶಕಗಳಿಂದ ಬಿಜೆಪಿಯೊಂದಿಗೆ ಸಂಬಂಧ ಹೊಂದಿದ್ದಾರೆ. ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಪರವಾಗಿ ಅಲ್ಲಿನ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯೊಂದಿಗೆ ಘರ್ಷಣೆ ನಡೆಸಿದ್ದಕ್ಕಾಗಿ ಪಕ್ಷವೂ ಅವರಿಗೆ ‘ಬಹುಮಾನ’ ನೀಡಿದೆ ಎಂದು ಅನೇಕ ರಾಜಕೀಯ ವೀಕ್ಷಕರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
Attending the press conference at BJP HQ. https://t.co/NeTblHSlVF
— Jagat Prakash Nadda (@JPNadda) July 16, 2022
ದೆಹಲಿಯ ಪ್ರಧಾನ ಕಛೇರಿಯಲ್ಲಿ ನಡೆದ ಬಿಜೆಪಿ ಸಂಸದೀಯ ಮಂಡಳಿ ಸಭೆಯಲ್ಲಿ ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ. ಪ್ರಧಾನಿ ನರೇಂದ್ರ ಮೋದಿ, ಒಕ್ಕೂಟ ಸರ್ಕಾರದ ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್, ಸಚಿವ ನಿತಿನ್ ಗಡ್ಕರಿ ಮತ್ತು ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರಂತಹ ಹಲವಾರು ಉನ್ನತ ನಾಯಕರು ಈ ಸಭೆಯಲ್ಲಿ ಉಪಸ್ಥಿತರಿದ್ದರು.
ಇದನ್ನೂ ಓದಿ: ಸಂಸತ್ತಿನ ಮುಂಗಾರು ಅಧಿವೇಶನದಲ್ಲಿ 24 ಹೊಸ ಮಸೂದೆಗಳನ್ನು ಮಂಡಿಸಲಿರುವ ಮೋದಿ ಸರ್ಕಾರ
ಧಂಕರ್ ಅವರಿಗೆ ಸಂವಿಧಾನದ ಬಗ್ಗೆ ‘ಅತ್ಯುತ್ತಮ ಜ್ಞಾನ’ ಇದ್ದು, ಶಾಸಕಾಂಗ ವ್ಯವಹಾರಗಳ ಬಗ್ಗೆಯೂ ಅವರು ಚೆನ್ನಾಗಿ ತಿಳಿದಿದ್ದಾರೆ ಎಂದು ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದಾರೆ.
“ಜಗದೀಪ್ ಧಂಖರ್ ಅವರು ನಮ್ಮ ಸಂವಿಧಾನದ ಬಗ್ಗೆ ಅತ್ಯುತ್ತಮ ಜ್ಞಾನವನ್ನು ಹೊಂದಿದ್ದಾರೆ. ಅವರು ಶಾಸಕಾಂಗ ವ್ಯವಹಾರಗಳ ಬಗ್ಗೆ ಚೆನ್ನಾಗಿ ತಿಳಿದಿದ್ದಾರೆ. ಅವರು ರಾಜ್ಯಸಭೆಯಲ್ಲಿ ಮಹೋನ್ನತ ಅಧ್ಯಕ್ಷರಾಗುತ್ತಾರೆ ಮತ್ತು ರಾಷ್ಟ್ರೀಯ ಪ್ರಗತಿಯನ್ನು ಹೆಚ್ಚಿಸುವ ಉದ್ದೇಶದಿಂದ ಸದನದ ನಡಾವಳಿಗಳಿಗೆ ಮಾರ್ಗದರ್ಶನ ನೀಡುತ್ತಾರೆ ಎಂದು ನನಗೆ ಖಾತ್ರಿಯಿದೆ” ಎಂದು ಮೋದಿ ಹೇಳಿದ್ದಾರೆ.
Shri Jagdeep Dhankhar Ji has excellent knowledge of our Constitution. He is also well-versed with legislative affairs. I am sure that he will be an outstanding Chair in the Rajya Sabha & guide the proceedings of the House with the aim of furthering national progress. @jdhankhar1 pic.twitter.com/Ibfsp1fgDt
— Narendra Modi (@narendramodi) July 16, 2022
2017 ರಲ್ಲಿ ಬಿಜೆಪಿಯು ಪಕ್ಷದ ಮಾಜಿ ಅಧ್ಯಕ್ಷ ಮತ್ತು ಹಿರಿಯ ಸಂಸದರಾಗಿದ್ದ ಅಂದಿನ ಕ್ಯಾಬಿನೆಟ್ ಸಚಿವ ಎಂ ವೆಂಕಯ್ಯ ನಾಯ್ಡು ಅವರನ್ನು ಉಪರಾಷ್ಟ್ರಪತಿ ಅಭ್ಯರ್ಥಿಯಾಗಿ ಹೆಸರಿಸಿತ್ತು. ಅವರು ಆರಾಮವಾಗಿ ಚುನಾವಣೆಯಲ್ಲಿ ಗೆದ್ದು ದೇಶದ ಎರಡನೇ ಅತ್ಯುನ್ನತ ಸಾಂವಿಧಾನಿಕ ಹುದ್ದೆಯನ್ನು ಅಲಂಕರಿಸಿದ್ದರು. ಅವರ ಪ್ರಸ್ತುತ ಅವಧಿ ಆಗಸ್ಟ್ 10 ರಂದು ಕೊನೆಗೊಳ್ಳುತ್ತದೆ.
2019 ರ ಜುಲೈ ತಿಂಗಳಲ್ಲಿ ರಾಜ್ಯಪಾಲರಾಗಿ ಅಧಿಕಾರ ವಹಿಸಿಕೊಂಡ ನಂತರ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರೊಂದಿಗಿನ ಅವರು ನಿರಂತರ ಸಂಘರ್ಷ ನಡೆಸುತ್ತಲೇ ಬಂದಿದ್ದಾರೆ. ಅವರು ‘‘ರಾಜ್ಯ ಸರ್ಕಾರವು, ಕೋಮುವಾದಿಗಳಿಗೆ ಪ್ರೋತ್ಸಾಹ ನೀಡುತ್ತಿದೆ ಮತ್ತು ಮಾಫಿಯಾ ಸಿಂಡಿಕೇಟ್ ಸುಲಿಗೆ ಮಾಡುತ್ತಿದೆ” ಎಂದು ಆರೋಪಿಸಿದ್ದರು. ತೃಣಮೂಲ ಕಾಂಗ್ರೆಸ್ ನಾಯಕರು ಧಂಖರ್ ಅವರನ್ನು ‘‘ಕೋಮುವಾದಿ” ಎಂದು ಕರೆದಿದ್ದಾರೆ.
ಇದನ್ನೂ ಓದಿ: ನಾನಕ್ ಚಂದ್ ರತ್ತುರವರ ’ಬಾಬಾ ಸಾಹೇಬರ ಕೊನೆದಿನಗಳು’
ಬಿಜೆಪಿ ನೇತೃತ್ವದ ಎನ್‌ಡಿಎ ತನ್ನ ಉಪರಾಷ್ಟ್ರಪತಿ ಅಭ್ಯರ್ಥಿಯಾಗಿ ಗವರ್ನರ್ ಧಂಖರ್ ಅವರನ್ನು ಘೋಷಿಸುತ್ತಿದ್ದಂತೆ, ಆಗಸ್ಟ್ 06 ರಂದು ನಡೆಯಲಿರುವ ಚುನಾವಣೆಗೆ ಸಂಬಂಧಿಸಿದಂತೆ ತನ್ನ ಪಕ್ಷದ ಕಾರ್ಯತಂತ್ರವನ್ನು ಚರ್ಚಿಸಲು ಮತ್ತು ಅಂತಿಮಗೊಳಿಸಲು ಮಮತಾ ಬ್ಯಾನರ್ಜಿ ಕೋಲ್ಕತ್ತಾದಲ್ಲಿ ತೃಣಮೂಲ ಕಾಂಗ್ರೆಸ್‌ನ ಲೋಕಸಭೆ ಮತ್ತು ರಾಜ್ಯಸಭೆ ಸಂಸದರ ಸಭೆಯನ್ನು ಕರೆದಿದ್ದಾರೆ. ಜುಲೈ 21 ರಂದು ಸಂಜೆ 4 ಗಂಟೆಗೆ ಕೋಲ್ಕತ್ತಾದಲ್ಲಿರುವ ಮಮತಾ ಅವರ ನಿವಾಸದಲ್ಲಿ ಈ ಸಭೆ ನಡೆಯಲಿದೆ.
ಉಪ ರಾಷ್ಟ್ರಪತಿ ಚುನಾವಣೆಗೆ ನಾಮಪತ್ರ ಸಲ್ಲಿಸಲು ಜುಲೈ 19 ಕೊನೆಯ ದಿನವಾಗಿದ್ದು, ಆಗಸ್ಟ್ 6 ರಂದು ಚುನಾವಣೆ ನಿಗದಿಯಾಗಿದೆ.


