Homeರಾಜಕೀಯ‘ಮತ್ತೆ ಗಬ್ಬರ್‌ ಸಿಂಗ್ ಸ್ಟ್ರೈಕ್‌’: ಜಿಎಸ್‌ಟಿ ಏರಿಕೆಯ ಬಗ್ಗೆ ಮೋದಿ ವಿರುದ್ಧ ರಾಹುಲ್ ಗಾಂಧಿ ಆಕ್ರೋಶ

‘ಮತ್ತೆ ಗಬ್ಬರ್‌ ಸಿಂಗ್ ಸ್ಟ್ರೈಕ್‌’: ಜಿಎಸ್‌ಟಿ ಏರಿಕೆಯ ಬಗ್ಗೆ ಮೋದಿ ವಿರುದ್ಧ ರಾಹುಲ್ ಗಾಂಧಿ ಆಕ್ರೋಶ

- Advertisement -
- Advertisement -

ಆದಾಯ ಹೆಚ್ಚಿಸುವ ಸಲುವಾಗಿ ಘೋಷಿಸಿದ ಜಿಎಸ್‌ಟಿ ದರಗಳ ಪರಿಷ್ಕರಣೆ ಕುರಿತು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಕಾಂಗ್ರೆಸ್‌ನ ಹಿರಿಯ ನಾಯಕ ರಾಹುಲ್ ಗಾಂಧಿ ಸೋಮವಾರ ವಾಗ್ದಾಳಿ ನಡೆಸಿದ್ದು, ಇದು ವಿಶ್ವದ ವೇಗವಾಗಿ ಬೆಳೆಯುತ್ತಿರುವ ಆರ್ಥಿಕತೆಯನ್ನು ನಾಶಪಡಿಸುತ್ತಿದೆ ಎಂದು ಆರೋಪಿಸಿದ್ದಾರೆ.

ಟ್ವಿಟರ್‌ನಲ್ಲಿ ದರ ಏರಿಕೆಯಿಂದಾಗಿ ದುಬಾರಿಯಾಗಲಿರುವ ವಸ್ತುಗಳ ಪಟ್ಟಿಯನ್ನು ಹಂಚಿಕೊಂಡಿರುವ ರಾಹುಲ್ ಗಾಂಧಿ, ಪ್ರಧಾನಿ ಮೋದಿಯನ್ನು ಪರೋಕ್ಷವಾಗಿ ಗಬ್ಬರ್‌ ಸಿಂಗ್‌ ಎಂದು ಹೇಳಿದ್ದಾರೆ. “ಮತ್ತೆ ಗಬ್ಬರ್ ಸಿಂಗ್ ಸ್ಟ್ರೈಕ್‌” ಎಂದು ಅವರು ಮೋದಿಯನ್ನು ವ್ಯಂಗ್ಯವಾಡಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಹೆಚ್ಚಿನ ತೆರಿಗೆಗಳು, ಆದರೆ ಯಾವುದೇ ಉದ್ಯೋಗಗಳಿಲ್ಲ” ಎಂದು ಅವರು ಹೇಳಿದ್ದು, ಒಂದು ಕಾಲದಲ್ಲಿ ವಿಶ್ವದ ಅತ್ಯಂತ ವೇಗವಾಗಿ ಬೆಳೆಯುತ್ತಿರುವ ಆರ್ಥಿಕತೆಯನ್ನು ನಾಶಪಡಿಸುವುದು ಹೇಗೆ ಎಂಬುದರ ಕುರಿತು ಬಿಜೆಪಿಯ ಮಾಸ್ಟರ್‌ಕ್ಲಾಸ್ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ನೇತೃತ್ವದ ಜಿಎಸ್‌ಟಿ ಕೌನ್ಸಿಲ್, ಹಾಲು, ಮೊಸರು ಮತ್ತು ಪನೀರ್‌ನಂತಹ ಪ್ಯಾಕ್ ಮಾಡಿದ ಆಹಾರಗಳ ಮೇಲೆ ತರಲು ಜಿಎಸ್‌ಟಿ ಹೇರಲು ನಿರ್ಧರಿಸಿದೆ.

ಜಿಎಸ್‌ಟಿ ಹೆಚ್ಚಳವನ್ನು, “ಉಸಿರುಗಟ್ಟಿರುವಂತಹ ಬೇಜವಾಬ್ದಾರಿ” ಎಂದು ಕರೆದಿರುವ ಹಿರಿಯ ಕಾಂಗ್ರೆಸ್ ನಾಯಕ ಶಶಿ ತರೂರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಹೊಸ GST ದರ ಜಾರಿ: ಯಾವುದು ದುಬಾರಿಯಾಗಲಿವೆ? | ಸಂಕ್ಷಿಪ್ತ ವಿವರಣೆ

“ಭಾರತೀಯರಿಗೆ ಆರ್ಥಿಕ ತೊಂದರೆಗಳು ಹೆಚ್ಚಾಗುತ್ತಿರುವ ಸಮಯದಲ್ಲಿ ಈ ಜಿಎಸ್‌ಟಿ ದರದ ಏರಿಕೆಯು ಉಸಿರುಗಟ್ಟಿಸುವಂಹ ಬೇಜವಾಬ್ದಾರಿತನದ ನಡೆಯಾಗಿದೆ. ಹಣದುಬ್ಬರವು ತನ್ನ ಗಳಿಕೆಯನ್ನು ತಿನ್ನುತ್ತಿದ್ದರೂ ಸಹ ಸಾಮಾನ್ಯ ಜನತೆ ಹೊರೆಯ ಭಾರವನ್ನು ಹೊತ್ತುಕೊಳ್ಳುತ್ತದೆ” ಎಂದು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....